ಕೊನೆಗೂ ಉತ್ತರ ಕರ್ನಾಟಕ ಮಂದಿಗೆ ದೀಪಾವಳಿ ಗಿಫ್ಟ್: ಬೆಂಗಳೂರು - ಬೆಳಗಾವಿ ವಂದೇ ಭಾರತ್?
ವಂದೇ ಭಾರತ್ ರೈಲುಗಳು (Vande Bharat Train) ದೇಶದ ಅನೇಕ ಭಾಗಗಳಲ್ಲಿ ಸಂಚರಿಸುತ್ತಿದೆ. ಇತರ ರೈಲಿಗಳಿಗಿಂತ ಹೆಚ್ಚು ಸಮಯ ಉಳಿಸುವ ಮತ್ತು ಅತೀ ವೇಗವನ್ನು ಹೊಂದಿದೆ. ಇದು ಕೂಡ ಮೇಕ್ ಇನ್ ಇಂಡಿಯಾದ ಒಂದು ಭಾಗವಾಗಿದೆ. ರೈಲ್ವೆ ಇಲಾಖೆಯ ಹೊಸ ಹೊಸ ಯೋಜನೆಗಳು, ತಂತ್ರಜ್ಞಾನಗಳು, ಪ್ರಯಾಣಿಕರ ಅನುಕೂಲಕ್ಕೆ ಹೊಸ ಯೋಜನೆಗಳನ್ನು ತರುತ್ತಿದೆ.
ವರದಿಗಳ ಪ್ರಕಾರ, ವಂದೇ ಭಾರತ್' ರೈಲು ಸೇವೆಯನ್ನು ಬೆಳಗಾವಿಗೂ ವಿಸ್ತರಿನೆಯಾಗಬಹುದು. ಬೆಳಗಾವಿಯ ಭಾಗದ ಜನರ ಬಹು ದಿನಗಳ ಬೇಡಿಕೆ ಈಡೇರುವ ಹಂತದಲ್ಲಿದೆ. ಬೆಂಗಳೂರು - ಬೆಳಗಾವಿ ನಡುವೆ ಸದ್ಯದಲ್ಲೇ ಈ ರೈಲಿನ ಪ್ರಾಯೋಗಿಕ ಸಂಚಾರ ನಡೆಯಲಿದ್ದು, ಯಶಸ್ವಿಯಾದಲ್ಲಿ ಖಾಯಂ ಸಂಚಾರ ಪ್ರಾರಂಭಗೊಳ್ಳಬಹುದು ಎಂದು ಹೇಳಲಾಗುತ್ತಿದೆ. ಬೆಂಗಳೂರು - ಹುಬ್ಬಳ್ಳಿ - ಧಾರವಾಡ ನಡುವೆ ಜೂನ್ 27 ರಿಂದ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಗೊಂಡಿದೆ.

ಬೆಳಗಾವಿಯವರೆಗೆ ವಿಸ್ತರಣೆಯ ಬೇಡಿಕೆಗೆ ಸ್ಪಂದನೆ ಸಿಕ್ಕಿರಲಿಲ್ಲ. ಬೆಳಗಾವಿ ಜನರ ಬೇಡಿಕೆಗೆ ಮಣಿದ ರೈಲ್ವೇ ಇಲಾಖೆ ಕೊನೆಗೂ ಬೆಳಗಾವಿಗೆ ಸಂಚಾರ ಪ್ರಾರಂಭಿಸುವ ಚಿಂತನೆ ನಡೆಸಿದೆ. ಬೆಳಗಾವಿಗೆ ವಿಸ್ತರಿಸುವಂತೆ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಸಿದರು. ಅಲ್ಲದೇ ಈ ಭಾಗದ ಜನರು ಜನಪ್ರತಿನಿಧಿಗಳು, ಸಂಸದರು, ಸಾರ್ವಜನಿಕರು ಸತತ ಮನವಿ ಸಲ್ಲಿಸುತ್ತಲೇ ಇದ್ದರು. ಇನ್ನು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.
ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಜೊತೆಗೆ ಗಡಿ ಹಂಚಿಕೊಂಡಿರುವ ಜಿಲ್ಲೆ ಬೆಳಗಾವಿಯಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯ, ಹಲವು ಎಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳು ಬೆಳಗಾವಿಯಲ್ಲಿವೆ. 10 ಸಾವಿರಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇದು ಆಟೋಮೊಬೈಲ್ ಬಿಡಿ ಭಾಗಗಳ ತಯಾರಿಕೆಯಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಇದರಿಂದ ಬೆಂಗಳೂರು - ಬೆಳಗಾವಿ ನಡುವೆ ಪ್ರತಿ ನಿತ್ಯ ಸಾವಿರಾರು ಜನ ಪ್ರಯಾಣ ನಡೆಸುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯತನಕ ವಿಸ್ತರಣೆ ಮಾಡಿದರೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೂ ಉತ್ತಮ ಸಂಪರ್ಕ ಕಲ್ಪಿಸಲು ಅನುಕೂಲವಾಗುತ್ತದೆ. ಹೀಗಾಗಿ ವಂದೇ ಭಾರತ್ ರೈಲು ಸಂಪರ್ಕವನ್ನ ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಇನ್ನು ಮಂಗಳೂರಿನಿಂದ ಇವೆರೆಡು ಮಾರ್ಗಗಳಲ್ಲಿ ಈ ರೈಲು ಓಡಾಟ ನಡೆಸುವ ಕಾಲ ಹತ್ತಿರ ಬಂದಿದ್ದು, ಕರಾವಳಿ ಜನರ ಕನಸು ಈಡೇರುತ್ತಿದೆ. ಈ ಕುರಿತು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು, 'ಮಂಗಳೂರು - ಮಡಗಾಂ ನಡೆವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ' ಎಂದು ಹೇಳಿದ್ದಾರೆ.

ಮಂಗಳೂರು (Mangaluru) - ಬೆಂಗಳೂರು (Bengaluru) ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿಗಾಗಿ ಮಾಡಿದ ಮನವಿ ಕೂಡ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದು ನಳಿನ್ ಕುಮಾರ್ ಕಟೀಲ್ ಅವರು ಪೋಸ್ಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಈಗಾಗಲೇ ಮೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಾಟ ನಡೆಸುತ್ತಿದೆ. ಚೆನ್ನೈ (Chennai) - ಬೆಂಗಳೂರು (Bengaluru) - ಮೈಸೂರು (Mysuru) ಮಾರ್ಗವಾಗಿ ಒಂದು ರೈಲು ಕಾರ್ಯಚರಣೆ ನಡೆಸುತ್ತಿದೆ. ಮತ್ತೊಂದು, ಬೆಂಗಳೂರು (Bengaluru) - ಹುಬ್ಬಳ್ಳಿ (Hubballi) - ಧಾರವಾಡ (Dharwad), ಇನ್ನೊಂದು, ಬೆಂಗಳೂರು (Bengaluru) - ಹೈದರಾಬಾದ್ (Hyderabad) ಮಧ್ಯೆ ಓಡಾಟ ನಡೆಸುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications