Viral Video: ಟೊಯೊಟಾ ಇನ್ನೋವಾ ಕ್ರಿಸ್ಟಾದಲ್ಲಿ ತೆರಳುತ್ತಿದ್ದ ನಟ ವಿಜಯ್‌ಗೆ ದಂಡ

ಕಾಲಿವುಡ್ ನಟ ದಳಪತಿ ವಿಜಯ್ ಹಲವು ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ತಮಿಳುನಾಡು ಮಾತ್ರವಲ್ಲದೇ ದೇಶಾದ್ಯಂತ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಶೀಘ್ರವೇ ರಾಜಕಾರಣಕ್ಕೆ ಪ್ರವೇಶಿಸಲು ಸಿದ್ದತೆಯನ್ನು ನಡೆಸಿದ್ದಾರೆ. ಇದೀಗ, ಅವರಿಗೆ ಸಂಚಾರಿ ನಿಯಮ ಉಲ್ಲಂಘನೆ ಸಂಬಂಧ ಪೊಲೀಸರು ದಂಡ ವಿಧಿಸಿದ್ದಾರೆ.

ಮಂಗಳವಾರ, ಚೆನ್ನೈನ ಪನೈಯೂರಿನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ತೆರಳುವಾಗ ನಟ ವಿಜಯ್ ಪ್ರಯಾಣಿಸುತ್ತಿದ್ದ ಟೊಯೊಟಾ ಇನ್ನೋವಾ ಕ್ರಿಸ್ಟಾ ಕಾರು ಟ್ರಾಫಿಕ್ ರೋಲ್ಸ್ ಬ್ರೇಕ್ ಮಾಡಿದೆ ಎಂದು ವರದಿಯಾಗಿದೆ. ಇಲ್ಲಿನ ಅಕ್ಕರೈ ಜಂಕ್ಷನ್ ನಲ್ಲಿ ರೆಡ್ ಸಿಗ್ನಲ್ ಜಂಪ್ ಮಾಡುವ ಮೂಲಕ ನಟ ವಿಜಯ್ ಕಾರಿನ ಚಾಲಕ ಸಂಚಾರಿ ನಿಯಮವನ್ನು ಉಲ್ಲಂಘಿಸಿದ್ದಾರೆ.

Viral Video: ಟೊಯೊಟಾ ಇನ್ನೋವಾ ಕ್ರಿಸ್ಟಾದಲ್ಲಿ ತೆರಳುತ್ತಿದ್ದ ನಟ ವಿಜಯ್‌ಗೆ ದಂಡ

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಚೆನ್ನೈ ಪೋಲೀಸರ ಗಮನಕ್ಕೂ ಬಂದಿದೆ. ತಕ್ಷಣ ಕಾರ್ಯಪ್ರವೃತರಾಗಿ ಟ್ರಾಫಿಕ್ ರೋಲ್ಸ್ ಉಲ್ಲಂಘನೆ ಮಾಡಿದ್ದಕ್ಕಾಗಿ ನಟ ವಿಜಯ್ ಅವರ ಕಾರಿಗೆ ರೂ.500 ದಂಡ ಹಾಕಿದ್ದಾರೆ. ಈ ಮೂಲಕ ಎಲ್ಲರಿಗೂ ಒಂದೇ ಕಾನೂನು ಅನ್ವಯವಾಗುತ್ತದೆ ಎಂದು ಅಲ್ಲಿನ ಪೊಲೀಸರು ತೋರಿಸಿಕೊಟ್ಟಿದ್ದಾರೆ.

ಕಳೆದ ವರ್ಷವು ನಟ ವಿಜಯ್ ಅವರ ಇದೇ ಕಾರಿಗೆ ಪೊಲೀಸರು ದಂಡ ವಿಧಿಸಿದ್ದರು. ಚೆನ್ನೈ ನಗರದಲ್ಲಿ ಟಿಂಟೆಡ್ ಗ್ಲಾಸ್‌ಯಿರುವ ಟೊಯೊಟಾ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದ ನಟ ವಿಜಯ್ ಅವರನ್ನು ತಡೆದಿದ್ದ ಪೊಲೀಸರು, ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ರೂ.500 ಫೈನ್ ಹಾಕಿದ್ದರು. ಈಗ, ರೆಡ್ ಸಿಗ್ನಲ್ ಜಂಪ್ ಮಾಡಿದಕ್ಕಾಗಿ ದಂಡ ಬಿದ್ದಿದೆ.

ತಮಿಳುನಾಡು ರಾಜಕೀಯಕ್ಕೆ ಎಂಟ್ರಿ ಕೊಡಲು ನಟ ವಿಜಯ್, ಈಗಿನಿಂದಲೇ ರೆಡಿಯಾಗುತ್ತಿದ್ದು, ನಿನ್ನೆಯು 2026 ಚುನಾವಣೆ ಬಗ್ಗೆ ಚರ್ಚಿಸಲು ಅವರು, ತಮ್ಮ ಅಭಿಮಾನಿ ಸಂಘಟನೆಯಾದ 'ಮಕ್ಕಳ್ ಇಯಕ್ಕಂ' ಸದಸ್ಯರನ್ನು ಭೇಟಿ ಮಾಡಿದ್ದರು. ಇತ್ತೀಚೆಗೆ, ಆ ಸಂಘಟನೆ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಲ್ಲಿ ವಿಜಯ್ ಪಾಲಿಟಿಕ್ಸ್ ಗೆ ಬರುವ ಸುಳಿವನ್ನು ನೀಡಿದ್ದರು.

ವಿಜಯ್ ಸಿನಿಮಾ ವಿಚಾರಕ್ಕೆ ಬರುವುದಾದರೆ, ಅವರ ಮುಂಬರಲಿರುವ 'ಲಿಯೋ' ಸಿನಿಮಾದ ಶೂಟಿಂಗ್ ಈಚೆಗೆ ಮುಕ್ತಾಯಗೊಂಡಿದೆ. ಅಕ್ಟೋಬರ್ 19ರಂದು ವಿಶ್ವಾದ್ಯಂತ ಅದ್ದೂರಿಯಾಗಿ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಸಂಜಯ್ ದತ್ ಹಾಗೂ ತ್ರಿಶಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಮಿಸ್ಕಿನ್, ಗೌತಮ್ ಮೆನನ್, ಅನುರಾಗ್ ಕಶ್ಯಪ್, ಪ್ರಿಯಾ ಆನಂದ್, ಅರ್ಜುನ್ ಸರ್ಜಾ ಅವರಂತಹ ದೊಡ್ಡ ತಾರಾಗಣವೇ ಇದೆ.

ನಟ ವಿಜಯ್ ಸಂಚಾರಿ ನಿಯಮ ಉಲ್ಲಂಘನೆ ಬಗ್ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು, ಯಾರೇ ಆಗಲಿ ಅಪಘಾತವನ್ನು ತಪ್ಪಿಸಲು ಟ್ರಾಫಿಕ್ ರೋಲ್ಸ್ ಪಾಲಿಸುವುದು ಅತ್ಯಗತ್ಯ. ಪ್ರತಿಯೊಬ್ಬರು ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಿ. ಮಧ್ಯಪಾನ ಮಾಡಿ ಅಥವಾ ಫೋನ್ ನಲ್ಲಿ ಮಾತನಾಡಿಕೊಂಡು ಕಾರು ಅಥವಾ ಬೈಕ್ ಓಡಿಸಬೇಡಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, July 12, 2023, 16:03 [IST]
English summary
Viral video vijay fined rs 500 violating traffic rules details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+