ವಿಡಿಯೋ ನೋಡಿ.. ಜನ ಸಾಮಾನ್ಯರಂತೆ ಬಾಡಿಗೆ ಟ್ಯಾಕ್ಸಿಯಲ್ಲಿ ವಿರಾಟ್ ದಂಪತಿ, ಎಲ್ಲಿ ಗೊತ್ತಾ?
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಸೋಮವಾರವಷ್ಟೇ ಟೆಸ್ಟ್ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ. 36 ವರ್ಷದ ಕೊಹ್ಲಿ, ಟೆಸ್ಟ್ ಕ್ರಿಕೆಟ್‌ನಲ್ಲಿ 123 ಮ್ಯಾಚ್‌ಗಳನ್ನು ಆಡಿದ್ದಾರೆ. 46.85ರ ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಅವರು, 9,230 ರನ್‌ಗಳನ್ನು ಕಲೆ ಹಾಕಿದ್ದಾರೆ. ಒಟ್ಟು 210 ಇನ್ನಿಂಗ್ಸ್‌ಗಳಲ್ಲಿ 30 ಶತಕಗಳು ಹಾಗೂ 31 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಟೆಸ್ಟ್‌ನಲ್ಲಿ 254 ರನ್ ವಿರಾಟ್ ಕೊಹ್ಲಿರ ಬೆಸ್ಟ್ ಸ್ಕೋರ್ ಆಗಿದೆ.
ನಿನ್ನೆ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿ ಉತ್ತರ ಪ್ರದೇಶದ ಮಥುರಾದ ವೃಂದಾವನ ಧಾಮಕ್ಕೆ ತೆರಳಿ, ಧರ್ಮಗುರು ಪ್ರೇಮಾನಂದ ಮಹಾರಾಜ್ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದಿದ್ದರು. ಈ ವೇಳೆ, ಸಾಮಾನ್ಯರಂತೆ ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಟ್ಯಾಕ್ಸಿಯಲ್ಲಿ ಪ್ರಯಾಣಿಸಿದ್ದರು. ಸದ್ಯ, ಅದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.

ಟೊಯೊಟಾ ಇನ್ನೋವಾ ಕ್ರಿಸ್ಟಾ ವಿಶೇಷತೆಗಳೇನು..
ಇದೊಂದು ಎಂಪಿವಿಯಾಗಿದೆ. ರೂ.19.99 ಲಕ್ಷದಿಂದ ರೂ.26.82 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರು 7/ 8 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 300 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂಪಿವಿ ಹೆಚ್ಚು ಶಕ್ತಿಯುತವಾದ 2.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಹೊರಭಾಗದಲ್ಲಿ ಕೂಡ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್ & ಸಿಲ್ವರ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಟೊಯೊಟಾ ಇನ್ನೋವಾ ಕ್ರಿಸ್ಟಾ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳನ್ನು ಹೊಂದಿದೆ. ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
ಹಲವು ಐಷಾರಾಮಿ ಕಾರುಗಳ ಒಡೆಯ ವಿರಾಟ್ ಕೊಹ್ಲಿ..
ವಿರಾಟ್ ಕೊಹ್ಲಿ ಹಲವು ದುಬಾರಿ ಬೆಲೆಯ ಐಷಾರಾಮಿ ಕಾರುಗಳ ಮಾಲೀಕರಾಗಿದ್ದಾರೆ. ಅವರ ಗ್ಯಾರೇಜ್‌ನಲ್ಲಿ ಅಡಿ ಕ್ಯೂ8 (Audi Q8) ಎಸ್‌ಯುವಿಯಿದೆ. ಈ ಕಾರನ್ನು 2020ರಲ್ಲಿ ಖರೀದಿ ಮಾಡಿದ್ದರು. ಇದು ರೂ.1.17 ಕೋಟಿ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 3-ಲೀಟರ್ ವಿ6 ಮೈಲ್ಡ್-ಹೈಬ್ರಿಡ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದ್ದು, 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 4-ಜೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ವಿರಾಟ್ ಕೊಹ್ಲಿ ಅವರು ಬೆಂಟ್ಲಿ ಫ್ಲೈಯಿಂಗ್ ಸ್ಪರ್ (Bentley Flying Spur) ಕಾರಿನ ಒಡೆಯರು ಆಗಿದ್ದಾರೆ. ಇದೊಂದು ಸೆಡಾನ್ ಆಗಿದೆ. ರೂ.5.25 ಕೋಟಿಯಿಂದ ರೂ.7.60 ಕೋಟಿ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದು ಮಾತ್ರವಲ್ಲದೆ, ಕೊಹ್ಲಿ ಅವರ ಬಳಿ ಆಡಿ ಆರ್8 ವಿ10 ಪ್ಲಸ್, ಬೆಂಟ್ಲಿ ಕಾಂಟಿನೆಂಟಲ್ ಜಿಟಿ ಮುಲ್ಲಿನರ್ ಮತ್ತು ರೇಂಜ್ ರೋವರ್ ಕಾರುಗಳು ಕೂಡ ಇವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








