Just In
- 9 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 11 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 11 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
- 12 hrs ago
ಎರಡನೇ ಬಾರಿ ರೋಲ್ಸ್ ರಾಯ್ಸ್ ಕುಲಿನನ್ ಕಾರು ಖರೀದಿಸಿದ ಮುಖೇಶ್ ಅಂಬಾನಿ
Don't Miss!
- Movies
ಪ್ರತಿಷ್ಟಿತ ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಕನ್ನಡದ ಸ್ಟಾರ್ ನಟ
- News
ರೈತರ ಪ್ರತಿಭಟನೆ: ಜನವರಿ 19ಕ್ಕೆ ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಸಭೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಳಪೆ ಹೆಲ್ಮೆಟ್ ಧರಿಸುವ ಸವಾರರೇ ಈ ಪೊಲೀಸಪ್ಪ ಮಾಡಿದ್ದೇನು ನೋಡಿ..!
ಪ್ರಪಂಚದಲ್ಲಿ ಹೆಚ್ಚು ಪ್ರಮಾಣದ ಅಪಘಾತವಾಗುವ ದೇಶಗಳಲ್ಲಿ ಭಾರತವೂ ಸಹ ಒಂದು. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ಚಲಾಯಿಸುವುದು ಇದಕ್ಕೆ ಮುಖ್ಯ ಕಾರಣ.

ಭಾರತದಲ್ಲಿ ಪ್ರತಿದಿನವೂ ಲಕ್ಷಾಂತರ ಸಂಖ್ಯೆಯಲ್ಲಿ ಹೊಸ ವಾಹನಗಳು ರಸ್ತೆಗಿಳಿಯುತ್ತವೆ. ಇದೂ ಸಹ ರಸ್ತೆ ಅಪಘಾತಕ್ಕೆ ಕಾರಣವಾಗುವ ಅಂಶಗಳಲ್ಲಿ ಒಂದು. ಇದರ ಜೊತೆಗೆ ಕುಡಿದು ವಾಹನ ಚಲಾಯಿಸುವವರೂ ಸಹ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ.

ಇವುಗಳಿಗೆ ಕಡಿವಾಣ ಹಾಕುವ ಕಾರಣಕ್ಕೆ ಕಳೆದ ಸೆಪ್ಟೆಂಬರ್ನಲ್ಲಿ ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೊಳಿಸಲಾಯಿತು. ಹೊಸ ಕಾಯ್ದೆಯನ್ವಯ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಯಿತು.

ಕೆಲವರು ಭಾರೀ ಪ್ರಮಾಣದ ದಂಡ ವಿಧಿಸಿದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದರು. ಹಲ್ಲೆ ನಡೆಸಿದವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಯಿತು. ಕೆಲವು ಕಡೆಗಳಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದವರಿಗೆ ಲಕ್ಷಕ್ಕೂ ಹೆಚ್ಚು ದಂಡ ವಿಧಿಸಲಾಯಿತು.

ಕೆಲವರು ಈ ದಂಡವನ್ನು ಬೆಂಬಲಿಸಿದರೆ, ಹಲವರು ಈ ಭಾರೀ ಪ್ರಮಾಣದ ದಂಡವನ್ನು ವಿರೋಧಿಸಿ ಪ್ರತಿಭಟನೆಯನ್ನು ನಡೆಸಿದರು. ಭಾರೀ ಪ್ರಮಾಣದ ದಂಡಕ್ಕೆ ಹೆದರಿ ಜನರು ನಿಯಮಗಳನ್ನು ಉಲ್ಲಂಘಿಸುವುದನ್ನು ಕಡಿಮೆ ಮಾಡಿದರು. ಇದರ ಜೊತೆಗೆ ವಾಹನಗಳ ಮೇಲೆ ಜಾತಿಗಳ ಹೆಸರುಗಳನ್ನು ಬರೆದವರಿಗೂ ದಂಡ ವಿಧಿಸಲಾಯಿತು.

ಸಂಚಾರಿ ನಿಯಮಗಳನ್ನು ಪಾಲಿಸುವ ಹೆಸರಿನಲ್ಲಿ ಪೊಲೀಸರು ಹಲವು ವಾಹನ ಸವಾರರ ಮೇಲೆ ಹಲ್ಲೆ ನಡೆಸಿರುವ ಘಟನೆಗಳೂ ಸಹ ವರದಿಯಾಗಿವೆ. ಪೊಲೀಸರ ಈ ವರ್ತನೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇದರ ಜೊತೆಗೆ ಗುಣಮಟ್ಟದ ಹೆಲ್ಮೆಟ್ ಧರಿಸದ ಹಾಗೂ ಅರ್ಧ ಹೆಲ್ಮೆಟ್ ಧರಿಸುವ ಸವಾರರಿಗೂ ದಂಡ ವಿಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೂ ಸಾರ್ವಜನಿಕರು ಇದಕ್ಕೆ ಕ್ಯಾರೇ ಎನ್ನದೇ ಕಳಪೆ ಗುಣಮಟ್ಟದ ಹಾಗೂ ಅರ್ಧ ಹೆಲ್ಮೆಟ್ಗಳನ್ನು ಈಗಲೂ ವಾಹನ ಸವಾರಿ ವೇಳೆಯಲ್ಲಿ ಬಳಸುತ್ತಿದ್ದಾರೆ.
MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ಕೆಲವರು ಕಾಟಾಚಾರಕ್ಕೆ ಎಂಬಂತೆ ಟೋಪಿಯ ರೀತಿಯಲ್ಲಿರುವ ಹೆಲ್ಮೆಟ್ಗಳನ್ನು ಕೈಯಲ್ಲಿಡಿದು ವಾಹನ ಚಲಾಯಿಸುತ್ತಾರೆ. ಪೊಲೀಸರನ್ನು ಕಂಡ ತಕ್ಷಣ ಅವುಗಳನ್ನು ತಲೆಯ ಮೇಲೆ ಇಟ್ಟುಕೊಳ್ಳುತ್ತಾರೆ. ಈಗ ಈ ರೀತಿಯ ಹೆಲ್ಮೆಟ್ಗಳನ್ನು ಧರಿಸಿ ವಾಹನ ಚಲಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.
MOST READ: ಬೈಕುಗಳಲ್ಲಿ ಡೀಸೆಲ್ ಎಂಜಿನ್ ಏಕೆ ಬಳಸಲ್ಲ ಗೊತ್ತಾ?

ಸಂಚಾರಿ ಪೊಲೀಸರು ಕಳಪೆ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ. ಈ ಕಾರ್ಯಾಚರಣೆಯ ವೀಡಿಯೊವೊಂದು ವೈರಲ್ ಆಗಿದೆ. ಆ ವೀಡಿಯೊದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಚಾರಿ ಪೊಲೀಸರೊಬ್ಬರು ಕಳಪೆ ಹೆಲ್ಮೆಟ್ಗಳನ್ನು ಕಳಚಿ ತೆಂಗಿನಕಾಯಿ ಒಡೆಯುವಂತೆ ಹೊಡೆದು ಹಾಕುತ್ತಾರೆ.
MOST READ: ಕೈಕೊಟ್ಟ ದುಬಾರಿ ಬೆಲೆಯ ಕಾರಿನ ಬ್ರೇಕ್..!
ಕಳಪೆ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಆ ಪೊಲೀಸ್ ಅಧಿಕಾರಿ ಯಾವ ಮಟ್ಟಿಗೆ ರೋಸಿ ಹೋಗಿದ್ದರೆಂದರೆ ಆ ದಾರಿಯಲ್ಲಿ ಅರ್ಧ ಹೆಲ್ಮೆಟ್ ಧರಿಸಿ ಬರುವ ಪ್ರತಿಯೊಬ್ಬ ಸವಾರನ ತಲೆಯ ಮೇಲಿರುವ ಹೆಲ್ಮೆಟ್ ಅನ್ನು ಬಲವಂತವಾಗಿ ತೆಗೆದು ಹೊಡೆದು ಹಾಕುತ್ತಾರೆ.

ಬೇರೆ ವಾಹನಗಳಲ್ಲಿ ಸಂಚರಿಸುವವರಿಗಿಂತ ದ್ವಿಚಕ್ರವಾಹನಗಳಲ್ಲಿ ಸಂಚರಿಸುವವರ ತಲೆಗೆ ಹೆಚ್ಚು ಪೆಟ್ಟು ಬೀಳುತ್ತದೆ. ಅಪಘಾತದ ಸಂದರ್ಭದಲ್ಲಿ ಹೆಲ್ಮೆಟ್ನಿಂದ ಜೀವ ಉಳಿಯಲಿ ಎಂಬ ಕಾರಣಕ್ಕಾಗಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಅದರಲ್ಲೂ ಗುಣಮಟ್ಟದ ಹೆಲ್ಮೆಟ್ಗಳನ್ನು ಧರಿಸುವುದು ಹೆಚ್ಚು ಸುರಕ್ಷಿತ.