ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಬೆಲೆ ಏರಿಕೆ ವಿರುದ್ಧ ದೇಶದ ಹಲವೆಡೆ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಪ್ರತಿಭಟನೆಯ ಅಂಗವಾಗಿ ಅವರು ಎಲೆಕ್ಟ್ರಿಕ್ ಸ್ಕೂಟರಿನ ಹಿಂಭಾಗದಲ್ಲಿ ಕುಳಿತು ಸಚಿವಾಲಯಕ್ಕೆ ತೆರಳಿದ್ದಾರೆ. ಸಚಿವ ಫಿರ್ಹತ್ ಹಕೀಮ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹಿಂದೆ ಕೂರಿಸಿಕೊಂಡು ಎಲೆಕ್ಟ್ರಿಕ್ ಸ್ಕೂಟರ್ ಚಾಲನೆ ಮಾಡಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಮಮತಾ ಬ್ಯಾನರ್ಜಿ ಈ ಎಲೆಕ್ಟ್ರಿಕ್ ಸ್ಕೂಟರ್‌ನ ಹಿಂಭಾಗದಲ್ಲಿ ಕುಳಿತು ಹಜ್ರಾ ಮೋರ್ ಪ್ರದೇಶದಿಂದ ಸಚಿವಾಲಯದವರೆಗೆ ಸುಮಾರು 5 ಕಿ.ಮೀಗಳಷ್ಟು ದೂರ ಸಂಚರಿಸಿದ್ದಾರೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಈ ಸಂದರ್ಭದಲ್ಲಿ ಅವರು ರಸ್ತೆಯ ಎರಡೂ ಬದಿಗಳಲ್ಲಿ ನೆರೆದಿದ್ದ ಜನರತ್ತ ಕೈಬೀಸಿದ್ದಾರೆ. ಸ್ಕೂಟರಿನಲ್ಲಿ ಸಂಚರಿಸುವಾಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಘೋಷಣೆಗಳನ್ನು ಹೊಂದಿದ್ದ ಬ್ಯಾನರ್ ಧರಿಸಿದ್ದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಸಚಿವಾಲಯಕ್ಕೆ ತಲುಪಿದ ನಂತರ ಮಮತಾ ಬ್ಯಾನರ್ಜಿ ಸುದ್ದಿಗಾರರ ಜೊತೆ ಮಾತನಾಡಿದರು. ಈ ವೇಳೆ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ನಾವು ಇಂಧನ ಬೆಲೆ ಏರಿಕೆ ವಿರುದ್ಧ ಹೋರಾಡುತ್ತಿದ್ದೇವೆ. ಮೋದಿ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಇಂಧನ ಬೆಲೆಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಏನೂ ಮಾಡುತ್ತಿಲ್ಲ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಇದ್ದ ಬೆಲೆಯನ್ನು ಹಾಗೂ ಸದ್ಯ ಇರುವ ಬೆಲೆಯನ್ನು ನೋಡಬಹುದು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಮೋದಿ ಹಾಗೂ ಅಮಿತ್ ಶಾ ದೇಶವನ್ನು ಮಾರಾಟ ಮಾಡುತ್ತಿದ್ದಾರೆ. ಇದು ಜನರ ವಿರುದ್ಧವಿರುವ ಸರ್ಕಾರ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆಗಳಿಂದಾಗಿ ವಾಹನ ಸವಾರರು ತತ್ತರಿಸಿದ್ದಾರೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ, ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದೇ ಪ್ರಮುಖ ಕಾರಣವಾಗಿದೆ. ಇದರಿಂದಾಗಿ ಸಾಮಾನ್ಯ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂಧನ ಬೆಲೆಗಳು ಯಾವಾಗ ಇಳಿಯುತ್ತವೆ ಎಂಬುದು ಖಚಿತವಾಗಿಲ್ಲ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಶೀಘ್ರದಲ್ಲಿಯೇ ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಚುನಾವಣಾ ಆಯೋಗವು ಶೀಘ್ರದಲ್ಲಿಯೇ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆಗಳಿವೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಈ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತೈಲ ಕಂಪನಿಗಳು ತಾತ್ಕಾಲಿಕವಾಗಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಸುವ ಸಾಧ್ಯತೆಗಳಿವೆ. ಈ ಹಿಂದೆಯೂ ಚುನಾವಣೆ ನಡೆಯುವ ಸಂದರ್ಭಗಳಲ್ಲಿ ಈ ರೀತಿಯ ಘಟನೆಗಳು ನಡೆದಿದ್ದವು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಭಾರತದ ಹಲವು ಭಾಗಗಳಲ್ಲಿ ಪ್ರೀಮಿಯಂ ಪೆಟ್ರೋಲ್ ಬೆಲೆ ಈಗಾಗಲೇ ರೂ.100ರ ಗಡಿ ದಾಟಿದೆ. ಇಂಧನ ಬೆಲೆಗಳನ್ನು ಕಡಿಮೆ ಮಾಡುವಂತೆ ವಾಹನ ಸವಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸುತ್ತಿದ್ದಾರೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಸಂಚರಿಸಿದ ಮುಖ್ಯಮಂತ್ರಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುವ ಅಬಕಾರಿ ಸುಂಕ ಹಾಗೂ ಇನ್ನಿತರ ತೆರಿಗೆಗಳ ಕಾರಣಕ್ಕೆ ಇಂಧನಗಳ ಬೆಲೆಯಲ್ಲಿ ಏರಿಕೆಯಾಗುತ್ತಿದೆ. ತೆರಿಗೆಗಳ ಬೆಲೆಯನ್ನು ಇಳಿಸಿದರೆ ಸಹಜವಾಗಿಯೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತದೆ.

Most Read Articles

Kannada
English summary
West Bengal CM goes in electric scooter as a protest against fuel price hike. Read in Kannada.
Story first published: Thursday, February 25, 2021, 16:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X