ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಭಾರತದಲ್ಲಿ ಕರೋನಾ ವೈರಸ್ ಹರಡುವಿಕೆ ಪ್ರಮಾಣವು ಹೆಚ್ಚಾಗಿದೆ. ದೇಶದ ಆರ್ಥಿಕತೆಯನ್ನು ಸುಧಾರಿಸಲು ಹಾಗೂ ಜನರ ಜೀವನ ಸಾಗಲು ಸರ್ಕಾರಗಳು ಮತ್ತೆ ಲಾಕ್ ಡೌನ್ ಜಾರಿಗೊಳಿಸಿಲ್ಲ.

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಲಾಕ್ ಡೌನ್ ಜಾರಿಗೊಳಿಸುವ ಬದಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿವೆ. ಸರ್ಕಾರಗಳು ಜನರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಫೇಸ್ ಮಾಸ್ಕ್ ಧರಿಸುವುದು, ಸ್ಯಾನಿಟೈಜ್ ಬಳಕೆ ಸೇರಿದಂತೆ ಹಲವು ರೀತಿಯಲ್ಲಿ ಜಾಗೃತಿ ಮೂಡಿಸುತ್ತಿವೆ.

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಈಗ ಪಶ್ಚಿಮ ಬಂಗಾಳ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕ್ಯಾಬ್ ಕಂಪನಿ ಉಬರ್ ಜನರನ್ನು ವೈರಸ್‌ನಿಂದ ರಕ್ಷಿಸಲು ಹೊಸ ಒಪ್ಪಂದಕ್ಕೆ ಸಹಿ ಹಾಕಿವೆ. ವರದಿಗಳ ಪ್ರಕಾರ, ಜನರಿಗೆ ಸುರಕ್ಷಿತ ಪ್ರಯಾಣವನ್ನು ಒದಗಿಸಲು ಹೊಸ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ವೈರಸ್ ಹರಡುವಿಕೆಯು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಈ ಕಾರಣಕ್ಕೆ ಜನರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಿದರೆ ಸುಲಭವಾಗಿ ಸೋಂಕಿಗೆ ಒಳಗಾಗಬಹುದು ಎಂಬ ಭೀತಿಯಿಂದಾಗಿ ಸಾರ್ವಜನಿಕ ಸಾರಿಗೆಯಲ್ಲಿ ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ.

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಖಾಸಗಿ ಬಾಡಿಗೆ ವಾಹನಗಳು ಸರ್ಕಾರಿ ಸಾರ್ವಜನಿಕ ವಾಹನಗಳಿಗಿಂತ ಸುರಕ್ಷಿತವೆಂಬುದು ಕೆಲವರ ಅಭಿಪ್ರಾಯ. ಬಸ್ಸುಗಳಲ್ಲಿ ಗುಂಪಾಗಿ ಚಲಿಸುವ ಬದಲು ಕ್ಯಾಬ್ ಗಳಲ್ಲಿ ಪ್ರಯಾಣಿಸುವುದು ಸುರಕ್ಷಿತವೆಂದು ಜನರು ಭಾವಿಸಿದ್ದಾರೆ. ಇದರಿಂದಾಗಿ ಖಾಸಗಿ ಟ್ಯಾಕ್ಸಿಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಮೊದಲಿಗಿಂತ ಹೆಚ್ಚಿನ ಸಂಖ್ಯೆಯ ಜನರು ಬಾಡಿಗೆ ವಾಹನಗಳನ್ನು ಬಳಸುತ್ತಿರುವುದರಿಂದ ಸೋಂಕು ಹರಡುವ ಸಾಧ್ಯತೆಯು ಹೆಚ್ಚಿದೆ. ಈ ಕಾರಣಕ್ಕೆ ಉಬರ್ ಹಾಗೂ ಪಶ್ಚಿಮ ಬಂಗಾಳದ ಪಿಥಾನಗರ್ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಪಿಥಾನಗರ ಪೊಲೀಸ್ ಠಾಣೆ ಈ ರೀತಿಯ ವಿನೂತನ ಕಾರ್ಯಾಚರಣೆಯನ್ನು ಆರಂಭಿಸಿದ ಮೊದಲ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಒಪ್ಪಂದದನ್ವಯ ಪೊಲೀಸರು ಉಬರ್ ಚಾಲಕರಿಗೆ ಅಗತ್ಯವಾದ ಮೂಲಭೂತ ತರಬೇತಿ ನೀಡಲಿದ್ದಾರೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಇದರ ಜೊತೆಗೆ ಉಬರ್ ಚಾಲಕರಿಗೆ ಆರೋಗ್ಯ ನೀತಿಯ ಬಗ್ಗೆಯೂ ಅರಿವು ಮೂಡಿಸಲಾಗುವುದು. ಕೋವಿಡ್ -19 ತಡೆಗಟ್ಟಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೊರಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ ಪೊಲೀಸರು ಉಬರ್ ಚಾಲಕರಿಗೆ ತರಬೇತಿ ನೀಡಲಿದ್ದಾರೆ.

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ತರಬೇತಿ ಮುಗಿದ ನಂತರ ಎಲ್ಲಾ ಚಾಲಕರಿಗೂ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ. ಚಾಲಕರು ಇವುಗಳನ್ನು ತಮ್ಮ ಕಾರುಗಳಲ್ಲಿ ಅಂಟಿಸಬಹುದು. ಈ ಮೂಲಕ ಪ್ರಯಾಣಿಕರಿಗೆ ತಾವು ರೋಗನಿರೋಧಕ ವ್ಯವಸ್ಥೆಯಲ್ಲಿ ಪರಿಣಿತರು ಎಂಬುದನ್ನು ತೋರಿಸಬಹುದು.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ಮೊದಲ 100 ಚಾಲಕರಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಪ್ರಮಾಣ ಪತ್ರಗಳನ್ನು ಸಹ ನೀಡಲಾಗಿದೆ. ಲಾಕ್ ಡೌನ್ ನಂತರ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಪೊಲೀಸರು ಹಾಗೂ ಉಬರ್ ಚಾಲಕರು ಕೋವಿಡ್ -19 ಬಗ್ಗೆ ಕರಪತ್ರದ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ

ತರಬೇತಿ ಪಡೆಯುವ ಚಾಲಕರು ತಮ್ಮ ವಾಹನಗಳ ಪ್ರಯಾಣಿಕರನ್ನು ಮಾತ್ರವಲ್ಲದೇ ಬೇರೆ ವಾಹನಗಳ ಚಾಲಕರು ಹಾಗೂ ಪ್ರಯಾಣಿಕರ ಸುರಕ್ಷತೆಯ ಬಗೆಯೂ ಗಮನ ಹರಿಸುತ್ತಾರೆ ಎಂದು ನಂಬಲಾಗಿದೆ.

Most Read Articles

Kannada
English summary
West Bengal Police and Uber signs agreement for safer mobility. Read in Kannada.
Story first published: Thursday, October 8, 2020, 17:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X