ಶ್ರೀಮಂತೆ ಏನು ಅಲ್ಲ.. ಮನೆ ಮಗಳಿಂದ ಪ್ರೀತಿಯ ಅಪ್ಪ, ಮಾವನಿಗೆ ಹೊಸ ಟಾಟಾ ಕಾರುಗಳ ಉಡುಗೊರೆ!

ಸುಗಮ ಸಂಸಾರದ ನಾವಿಕಳು ಗೃಹಿಣಿ.. ಮನೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ದೊಡ್ಡ ಜವಾಬ್ದಾರಿ ಆಕೆಯ ಮೇಲಿರುತ್ತದೆ. ಅಲ್ಲಿ ಸ್ವಲ್ಪ ಹೆಚ್ಚುಕಮ್ಮಿಯಾದರೂ ಇಡೀ ಕುಟುಂಬ ಸಮಸ್ಯೆಗೆ ಸಿಲುಕಿಕೊಳ್ಳುತ್ತದೆ. ಗೃಹಿಣಿಯಾದವಳು ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಸಂಸಾರದ ನೌಕೆಯನ್ನು ಎಳೆಯಬೇಕು. ಇದಕ್ಕೆ ಕುಟುಂಬದ ಸಹಕಾರವು ತುಂಬಾ ಅಗತ್ಯ.

ಇಲ್ಲೋರ್ವ ಮಹಿಳೆಯು ತನ್ನ ಕುಟುಂಬದ ಸದಸ್ಯರೊಳಗೆ ಯಾವುದೇ ಭೇದ-ಭಾವವನ್ನು ಮಾಡದೆ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದು, ಅಪ್ಪನೊಂದಿಗೆ ಮಾವನಿಗೂ ಹೊಚ್ಚ ಹೊಸ ಕಾರನ್ನು ಗಿಫ್ಟ್ ಮಾಡಿದ್ದಾರೆ. ಈ ಸಂಬಂಧ 'ರಿಂಪಿ ವೆರೋನಿಕಾ' ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದ್ದು, ಮಹಿಳೆಯ ತಂದೆ ಹಾಗೂ ಮಾವನಿಗೆ ಶೋರೂಂ ಸಿಬ್ಬಂದಿ ನೂತನ ಕಾರುಗಳ ಕೀಲಿಯನ್ನು ಹಸ್ತಾಂತರಿಸುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು.

Woman gifts Her Father amp amp Father-In-Law New Tata Nexon Suv Altroz Hatchback Details

ಈ ಪೋಸ್ಟ್‌ಗೆ ಮಹಿಳೆಯು 'ನನ್ನ ತಂದೆ ಮತ್ತು ಮಾವನ ಕನಸನ್ನು ನನಸಾಗಿಸಿದೆ. ಅವರಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಲಾಯಿತು. ಅವರಿಬ್ಬರು ಸಂತೋಷದಿಂದ ಆನಂದ ಭಾಷ್ಪವನ್ನು ಸುರಿಸಿದರು. ಇದು ಅವರುಗಳಿಗೆ ಇಲ್ಲಿಯವರೆಗಿನ ಬೆಸ್ಟ್ ಸರ್ಪ್ರೈಸ್ ಆಗಿತ್ತು' ಎಂದು ಶೀರ್ಷಿಕೆಯನ್ನು ಬರೆದಿದ್ದಾರೆ. ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ಮಹಿಳೆಯ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಮಹಿಳೆಯು ಅಪ್ಪ ಹಾಗೂ ಮಾವನಿಗೆ ಗಿಫ್ಟ್ ನೀಡುರುವ ಟಾಟಾ ನೆಕ್ಸಾನ್ ಮತ್ತು ಟಾಟಾ ಆಲ್ಟ್ರೋಜ್ ಕಾರುಗಳು ಸಾಕಷ್ಟು ವಿಶೇಷತೆಯನ್ನು ಹೊಂದಿವೆ. ಆದರೆ, ಯಾವ ರೂಪಾಂತರ (ವೇರಿಯೆಂಟ್)ವನ್ನು ಉಡುಗೊರೆಯಾಗಿ ನೀಡಲಾಗಿದೆ ಎನ್ನುವುದರ ಕುರಿತು ಹೆಚ್ಚಿನ ವಿವರಗಳಿಲ್ಲ. ದೇಶೀಯ ಮಾರುಕಟ್ಟೆಯಲ್ಲಿ ನೆಕ್ಸಾನ್ ಎಸ್‌ಯುವಿ ರೂ.8.15 ರಿಂದ ರೂ.15.80 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

Woman gifts Her Father amp amp Father-In-Law New Tata Nexon Suv Altroz Hatchback Details

ಈ ಟಾಟಾ ನೆಕ್ಸಾನ್ (Tata Nexon) 1.2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, 17.01 ರಿಂದ 24.08 ಕೆಎಂಪಿಎಲ್ ಮೈಲೇಜ್ ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ ಪಡೆದಿದೆ.

ಟಾಟಾ ಆಲ್ಟ್ರೋಜ್ (Tata Altroz) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು,ರೂ.6.65 ಲಕ್ಷದಿಂದ ರೂ.10.80 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಡೀಸೆಲ್ 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ಮಾದರಿಗಳು 18.50 - 19.33 ಕೆಎಂಪಿಎಲ್, ಡೀಸೆಲ್ ರೂಪಾಂತರಗಳು 23.64 ಕೆಎಂಪಿಎಲ್ ಹಾಗೂ ಸಿಎನ್‌ಜಿ ಆವೃತ್ತಿಗಳು 26.20 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ.

ಈ ಆಲ್ಟ್ರೋಜ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಕ್ರೂಸ್ ಕಂಟ್ರೋಲ್, ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್ಸ್, ಆಟೋ ಪಾರ್ಕ್ ಲಾಕ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, April 30, 2024, 12:10 [IST]
English summary
Woman gifts her father and father in law new tata nexon suv altroz hatchback details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+