18ರ ಹರೆಯದ ವಿಶ್ವ ಚೆಸ್ ಚಾಂಪಿಯನ್ ಗುಕೇಶ್ ದುಬಾರಿ ಮರ್ಸಿಡಿಸ್ ಕಾರಿನ ಒಡೆಯ.. ಬೆಲೆ ಕೇಳಿದ್ರೆ ಬೆಚ್ಚಿಬೀಳ್ತಿರಾ!

ವಿಶ್ವನಾಥ್ ಆನಂದ್ (Viswanathan Anand) ಬಳಿಕ, ವಿಶ್ವ ಚೆಸ್ ಚಾಂಪಿಯನ್ ಆದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಗುಕೇಶ್ (Gukesh) ಪಾತ್ರರಾಗಿದ್ದಾರೆ. ಇತ್ತೀಚೆಗೆ ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ 18 ವರ್ಷದ ಗುಕೇಶ್, ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ, ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಗುಕೇಶ್ ಅವರಿಗೆ ದೊಡ್ಡಮಟ್ಟದ ಬಹುಮಾನದ ಮೊತ್ತವು ಲಭಿಸಿದೆ.

ಗುಕೇಶ್ ಮೇ 29, 2006ರಲ್ಲಿ ಚೆನ್ನೈನಲ್ಲಿ ಜನಿಸಿದರು. ಸುಶಿಕ್ಷಿತ ತೆಲುಗು ಕುಟುಂಬದಿಂದ ಬಂದ ಅವರು, 7ನೇ ವಯಸ್ಸಿನಲ್ಲಿ ಚೆಸ್ ಆಡುವುದನ್ನು ಪ್ರಾರಂಭಿಸಿದರು. 'ವೆಲಮ್ಮಲ್ ವಿದ್ಯಾಲಯ' ಶಾಲೆಯಲ್ಲಿ ವ್ಯಾಸಂಗವನ್ನು ಮಾಡಿದ್ದಾರೆ. ಆಗಸ್ಟ್‌ನಲ್ಲಿ ಕಿರಿಯರ ವಿಶ್ವ ಚೆಸ್ ಚಾಂಪಿಯನ್ ಜಯಿಸಿದ ಅವರನ್ನು ಸನ್ಮಾನಿಸಲು ಇದೇ ಶಾಲಾ ಆಡಳಿತ ಮಂಡಳಿ ದುಬಾರಿ ಬೆಲೆಯ ಮರ್ಸಿಡಿಸ್ ಬೆಂಜ್ ಇ-ಕ್ಲಾಸ್ ಕಾರನ್ನು ಉಡುಗೊರೆಯಾಗಿ ನೀಡಿತ್ತು.

World Chess Champion Gukesh Owner Of Mercedes Benz Car Details

ತಮಿಳುನಾಡಿನಾದ್ಯಂತ ಹಲವೆಡೆ ವೇಲಮ್ಮಾಳ್ ವಿದ್ಯಾಲಯ (Velammal Vidyalaya) ಶಾಲೆಗಳಿದ್ದು, ವಿಶೇಷವಾಗಿ 'ಚೆಸ್' ಆಟಕ್ಕೆ ಹೆಚ್ಚು ಉತ್ತೇಜನ ನೀಡುತ್ತದೆ. ಗ್ರ್ಯಾಂಡ್‌ಮಾಸ್ಟರ್‌ ಪ್ರಗ್ನಾನಂದ (Praggnanandhaa) ಹಾಗೂ ವೈಶಾಲಿ ರಮೇಶ್‌ಬಾಬು (Vaishali Rameshbabu) ಸೇರಿದಂತೆ ಹಲವು ಚೆಸ್ ಪ್ರತಿಭೆಗಳು ಈ ಶಾಲೆಯಿಂದ ಹೊರಬಂದಿದ್ದಾರೆ.

ನೂತನ ಮರ್ಸಿಡಿಸ್ ಬೆಂಜ್ ಇ-ಕ್ಲಾಸ್ (Mercedes-Benz E-Class) ಸೆಡಾನ್, ರೂ.78.50 ಲಕ್ಷದಿಂದ ರೂ.92.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ 200, ಇ 220ಡಿ ಮತ್ತು ಇ 450 ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

World Chess Champion Gukesh Owner Of Mercedes Benz Car Details

ಈ ಕಾರು, ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 2-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ 197 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 320 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 2-ಲೀಟರ್ 4-ಸಿಲಿಂಡರ್ ಮೈಲ್ಡ್ ಹೈಬ್ರಿಡ್ ಡೀಸೆಲ್ ಎಂಜಿನ್ 200 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 440 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ನೂತನ ಮರ್ಸಿಡಿಸ್ ಬೆಂಜ್ ಇ-ಕ್ಲಾಸ್ ಸೆಡಾನ್ 9-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದ್ದು, 15 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹೈಟೆಕ್ ಸಿಲ್ವರ್, ಗ್ರ್ಯಾಫೈಟ್ ಗ್ರೇ, ಅಬ್ಸಿಡಿಯನ್ ಬ್ಲ್ಯಾಕ್ & ಪೋಲಾರ್ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. 12.3-ಇಂಚಿನ ಡೈವರ್ ಡಿಸ್‌ಪ್ಲೇ, 14.4-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 17-ಸ್ಪೀಕರ್ ಬರ್ಮೆಸ್ಟರ್ ಸೌಂಡ್ ಸಿಸ್ಟಮ್ ಮತ್ತು ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

World Chess Champion Gukesh Owner Of Mercedes Benz Car Details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 8 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, December 17, 2024, 10:15 [IST]
English summary
World chess champion gukesh owner of mercedes benz car details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+