World EV Day: ಪೆಟ್ರೋಲ್‌ಗೆ ಹೇಳಿ ಗುಡ್‌ಬೈ.. ಅಗ್ಗದ ದರಕ್ಕೆ ಲಭ್ಯವಿರುವ ಎಲೆಕ್ಟ್ರಿಕ್ ಕಾರುಗಳಿವು, ಬೆಲೆ ಎಷ್ಟು?

ಇಂದು (ಸೆ.9) ಜಗತ್ತಿನಾದ್ಯಂತ ವಿಶ್ವ ಇವಿ ದಿನ (World EV Day) ಆಚರಿಸಲಾಗುತ್ತಿದೆ. ಪರಿಸರ ಸ್ನೇಹಿ ಸಾರಿಗೆ ವಿಧಾನಗಳ ಕುರಿತು ಜಾಗೃತಿ ಮೂಡಿಸಲು ಈ ದಿನವನ್ನು ಮೀಸಲಿಡಲಾಗಿದ್ದು, ಜನರಿಗೆ ಎಲೆಕ್ಟ್ರಿಕ್ ವಾಹನಗಳ (ಇವಿ) ಪ್ರಯೋಜನಗಳ ಬಗ್ಗೆ ತಿಳಿ ಹೇಳಲಾಗುತ್ತದೆ. ಇದರೊಂದಿಗೆ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿಯಲ್ಲಿ ಸಾಧಿಸಿರುವ ಪ್ರಗತಿಯ ಕುರಿತು ಚರ್ಚಿಸಲಾಗುತ್ತದೆ. ಇವಿಗಳ ಬಳಕೆಯಿಂದ ಇಂಧನ ಚಾಲಿತ ವಾಹನಗಳ ಅವಲಂಬನೆಯು ಇಳಿಮುಖವಾಗಲಿದ್ದು, ಇಂಗಾಲದ ಹೊರಸೂಸುವಿಕೆಯು ಕಡಿಮೆಯಾಗಿ ವಾಯುಮಾಲಿನ್ಯದ ಪ್ರಮಾಣವು ಗಣನೀಯವಾಗಿ ತಗ್ಗಲಿದೆ.

ಎಲೆಕ್ಟ್ರಿಕ್ ಚಾಲಿತ ವಾಹನಗಳನ್ನು ಹೆಚ್ಚು-ಹೆಚ್ಚು ಖರೀದಿ ಮಾಡುವುದರಿಂದ ಪೆಟ್ರೋಲ್ & ಡೀಸೆಲ್ ಉಪಯೋಗವು ದಿನದಿಂದ ದಿನಕ್ಕೆ ಕಡಿಮೆಯಾಗಲಿದೆ. ನಿಧಾನವಾಗಿ ಸಾರಿಗೆ ಜಾಲವು ಕೂಡ ದೊಡ್ಡ ಮಟ್ಟದಲ್ಲಿ ಹಸಿರುಮಯವಾಗಲಿದ್ದು, ಆರೋಗ್ಯಕರ ಪರಿಸರ ನಿರ್ಮಾಣಕ್ಕೂ ತುಂಬಾ ಸಹಕಾರಿಯಾಗಲಿದೆ.

World EV Day Affordable Electric Cars For Buy Tata Tiago EV Mg Comet EV And Tata Punch EV

ದೇಶದಲ್ಲಿ ಕೇಂದ್ರ ಸರ್ಕಾರ ಸಹ 'ಇವಿ' ಬಳಕೆಯನ್ನು ಉತ್ತೇಜಿಸುತ್ತಿದೆ. ಇತ್ತೀಚೆಗೆ ಜಿಎಸ್‌ಟಿ (ಸರಕು & ಸೇವಾ ತೆರಿಗೆ) ಪರಿಷ್ಕರಿಸಿತ್ತು. ಆದರೂ ಎಲೆಕ್ಟ್ರಿಕ್ ವಾಹನಗಳ (ಇವಿ) ಖರೀದಿ ಮೇಲೆ ಹಾಕುತಿದ್ದ ತೆರಿಗೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಿಲ್ಲ. ಅದು ಹಿಂದಿನಂತೆ ಶೇಕಡ 5% ನಲ್ಲಿಯೇ ಮುಂದುವರಿದಿದೆ ಎಂದು ಘೋಷಣೆ ಮಾಡಿತ್ತು.

ನೀವು.. ಅಗ್ಗದ ದರದಲ್ಲಿ ಸಿಗುವ ಎಲೆಕ್ಟ್ರಿಕ್ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಟಾಟಾ ಟಿಯಾಗೊ ಇವಿ, ಎಂಜಿ, ಕಾಮೆಟ್ ಇವಿ ಹಾಗೂ ಟಾಟಾ ಪಂಚ್ ಇವಿಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಇವುಗಳು ಆಕರ್ಷಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ.

World EV Day Affordable Electric Cars For Buy Tata Tiago EV Mg Comet EV And Tata Punch EV

ಟಾಟಾ ಟಿಯಾಗೊ ಇವಿ (Tata Tiago EV):

ಇದೊಂದು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದೆ. ರೂ.7.99 ಲಕ್ಷದಿಂದ ರೂ.11.14 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 19.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 24 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ನೂತನ ಟಿಯಾಗೊ ಇವಿ 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 240 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌‍ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌, ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

World EV Day Affordable Electric Cars For Buy Tata Tiago EV Mg Comet EV And Tata Punch EV

ಎಂಜಿ ಕಾಮೆಟ್ ಇವಿ (MG Comet EV):

ಈ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ರೂ.7.50 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 17.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 230 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 4 ಆಸನಗಳನ್ನು ಹೊಂದಿದ್ದು, ನಗರ ಸಂಚಾರಕ್ಕೆ ಹೆಚ್ಚು ಯೋಗ್ಯವಾಗಿದೆ.

ಹೊಸ ಕಾಮೆಟ್ ಇವಿಯು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಸ್ಟಾರಿ ಬ್ಲ್ಯಾಕ್, ಅರೋರಾ ಸಿಲ್ವರ್ ಹಾಗೂ ಕ್ಯಾಂಡಿ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಸ್ಕ್ರೀನ್, 55ಕ್ಕೂ ಹೆಚ್ಚು ಕನೆಕ್ಟ್ಡ್ ಕಾರ್ ಟೆಕ್, ಕೀಲೆಸ್ ಎಂಟ್ರಿ, ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ ಹಾಗೂ ರೇರ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಟಾಟಾ ಪಂಚ್ ಇವಿ (Tata Punch EV):

ಇದು ರೂ.9.99 ಲಕ್ಷದಿಂದ ರೂ.14.44 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 25 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 35 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 315 ರಿಂದ 421 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಈ ಕಾರು 5 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ & ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಏರ್ ಪ್ಯೂರಿಫೈಯರ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Tuesday, September 9, 2025, 13:20 [IST]
English summary
World ev day affordable electric cars for buy tata tiago ev mg comet ev and tata punch ev
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+