ಥಾರ್‌ನಲ್ಲಿ ಮಿಂಚು ಹರಿಸಿದ ವಿಶ್ವವಿಖ್ಯಾತ ತಾರೆ, ಆನಂದ್ ಮಹೀಂದ್ರಾ ಮೆಚ್ಚುಗೆ
ಇಂಗ್ಲೀಷ್, ಅರೇಬಿಯನ್ ಪಾಪ್ ಗಾಯಕಿ ದುವಾ ಲಿಪಾ (Dua Lipa) ತಮ್ಮ ಅದ್ಭುತ ಗಾಯನದ ಮೂಲಕ ವಿಶ್ವದಾದ್ಯಂತ ದೊಡ್ಡಮಟ್ಟದಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇತ್ತೀಚೆಗೆ, ದುವಾ ಮತ್ತು ಅವರ ಕುಟುಂಬ ಸದಸ್ಯರು ಭಾರತ ಪ್ರವಾಸಕ್ಕೆ ಬಂದಿದ್ದು, ರಾಜಸ್ಥಾನ, ದೆಹಲಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದರು.
ಈ ವೇಳೆ, ಮಹೀಂದ್ರಾ ಥಾರ್‌ನಲ್ಲಿ ಜಗಲ್ ಸಫಾರಿಯನ್ನು ನಡೆಸಿದ್ದು, ಆ ಚಿತ್ರಗಳಲ್ಲಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ದುವಾ ಲಿಪಾ ಹಂಚಿಕೊಂಡಿದ್ದರು. ಇದು ಎಲ್ಲೆಡೆ ಹರಿದಾಡಿತ್ತು. ಉದ್ಯಮಿ ಆನಂದ್ ಮಹೀಂದ್ರಾ ಕೂಡ ಥಾರ್‌ನಲ್ಲಿ ಗಾಯಕಿಯಿರುವ ಫೋಟೋವನ್ನು ಶೇರ್ ಮಾಡಿ, 'ಪ್ರಖ್ಯಾತ ಪಾಪ್ ತಾರೆಯೊಬ್ಬಳು, ಭಾರತೀಯ ವಿಹಾರಕ್ಕೆ ಅಷ್ಟೇ ಜನಪ್ರಿಯವಾಗಿರುವ ವೀಲ್ ಸೆಟ್ (ವಾಹನ) ಆರಿಸಿಕೊಳ್ಳುವುದು ಸಹಜವೆಂದು ನಾನು ಭಾವಿಸುತ್ತೇನೆ' ಎಂದು ಬರೆದುಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಗಾಯಕಿ ದುವಾ ಲಿಪಾ ಹಂಚಿಕೊಂಡಿರುವ ಫೋಟೋಗಳಲ್ಲಿರುವ ಮಹೀಂದ್ರಾ ಥಾರ್ (Mahindra Thar) ಹಳೆಯ ತಲೆಮಾರಿಗೆ ಸೇರಿದಾಗಿದ್ದು, ದೇಶಾದ್ಯಂತ ಜಂಗಲ್ ಸಫಾರಿಗಳಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಕೇವಲ ಫೋಟೋಗೆ ಪೋಸ್ ನೀಡುವುದು ಬಿಟ್ಟರೆ, ಗಾಯಕಿಯೂ ಸೇರಿದಂತೆ ಆಕೆಯ ಕುಟುಂಬದ ಯಾವುದೇ ಸದಸ್ಯರು ಈ ಕಾರನ್ನು ಓಡಿಸಿಲ್ಲ.
ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಥಾರ್ 3 - ಡೋರ್ ಆಯ್ಕೆಯಲ್ಲಿ ಸಿಗಲಿದ್ದು, ರೂ.10.98 ಲಕ್ಷದಿಂದ ರೂ.16.94 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 4 ಆಸನ ವ್ಯವಸ್ಥೆಯನ್ನು ಪಡೆದಿದ್ದು, ಎಎಕ್ಸ್ (ಒ) ಹಾಗೂ ಎಲ್ಎಕ್ಸ್ ರೂಪಾಂತರ, ಎವರೆಸ್ಟ್ ವೈಟ್, ಅಕ್ವಾಮರೀನ್, ರೆಡ್ ರೇಜ್, ನಪೋಲಿ ಬ್ಲಾಕ್ ಸೇರಿದಂತೆ 6 ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

ಮಹೀಂದ್ರಾ ಥಾರ್ ವಿವಿಧ ಎಂಜಿನ್ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. 1.5 ಲೀಟರ್ ಡೀಸೆಲ್ ಎಂಜಿನ್, 117 hp ಗರಿಷ್ಠ ಪವರ್, 300 Nm ಪೀಕ್ ಟಾರ್ಕ್, 2.2 - ಲೀಟರ್ ಡೀಸೆಲ್ ಎಂಜಿನ್ 128 hp ಪವರ್, 300 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದೇ ಥಾರ್‌ನ 2.0 - ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 150 hp ಪವರ್, 320 Nm ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6 - ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದ್ದು, 15.2 kmpl ಮೈಲೇಜ್ ನೀಡುತ್ತದೆ. ಜೊತೆಗೆ 4WD (ಫೋರ್ ವೀಲ್ ಡ್ರೈವ್), RWD (ರೇರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.
ಮಹೀಂದ್ರಾ ಥಾರ್ ವಿನ್ಯಾಸದ ದೃಷ್ಟಿಯಿಂದಲ್ಲೂ ಅತ್ಯುತ್ತಮವಾಗಿದ್ದು, ಎಲ್‌ಇಡಿ ಡಿಆರ್‌ಎಲ್, ಹ್ಯಾಲೊಜೆನ್ ಹೆಡ್‌ಲೈಟ್ ಪಡೆದಿದೆ. ವೈಶಿಷ್ಟ್ಯದ ವಿಚಾರವಾಗಿ ಮಾತನಾಡುವುದಾದರೆ, 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಮ್ಯಾನುಯಲ್ ಎಸಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ ಸೇರಿದಂತೆ ಹತ್ತಾರು ಫೀಚರ್ಸ್ ಒಳಗೊಂಡಿದೆ.
ಸುರಕ್ಷತೆ ಸಲುವಾಗಿ ಮಹೀಂದ್ರಾ ಥಾರ್, ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಡಿಸೆಂಟ್ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್, ರೇರ್ ಪಾರ್ಕಿಂಗ್ ಸೆನ್ಸರ್ ಹಾಗೂ ಸೀಟ್ ಬೆಲ್ಟ್ ರಿಮೈಂಡರ್ ಅನ್ನು ಹೊಂದಿದೆ. ಈ ಕಾರಿಗೆ ಫೋರ್ಸ್ ಗೂರ್ಖಾ, ಮಾರುತಿ ಸುಜುಕಿ ಜಿಮ್ನಿ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications