Just In
Don't Miss!
- Sports
ಐರ್ಲೆಂಡ್ನ ಹ್ಯಾರಿ ಟೆಕ್ಟರ್ಗೆ ಬ್ಯಾಟ್ ಗಿಫ್ಟ್ ನೀಡಿದ ಹಾರ್ದಿಕ್ ಪಾಂಡ್ಯ
- Movies
ಸಿಧು ಮೂಸೆವಾಲಾ ಹಾಡಿದ್ದ ಕೊನೆಯ ಹಾಡು ಬಿಡುಗಡೆ ಆದ ಮೂರೇ ದಿನಕ್ಕೆ ಡಿಲೀಟ್!
- News
Breaking; ತುರ್ತಾಗಿ ಬನ್ನಿ, ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಕರೆ
- Lifestyle
ನಿಮ್ಮಿಬ್ಬರ ಸಂಬಂಧ ಹೀಗಿದ್ದರೆ ಒಟ್ಟಿಗಿದ್ದು ಪಡುವ ನರಕಕ್ಕಿಂತ ಗುಡ್ಬೈ ಹೇಳುವುದೇ ಬೆಸ್ಟ್!
- Finance
ಜೂ.27ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Education
UAS Dharwad Recruitment 2022 : ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಜು.2ಕ್ಕೆ ನೇರ ಸಂದರ್ಶನ
- Technology
‘ಫಾಸ್ಟ್ಯಾಗ್' ನಲ್ಲಿರುವ ಹಣವನ್ನು ಕದಿಯಬಹುದಾ? ವೈರಲ್ ವೀಡಿಯೊದ ಅಸಲಿಯತೆ ಏನು?
- Travel
ನಾಡ ಹಬ್ಬ ಮೈಸೂರು ದಸರಾ - ನವರಾತ್ರಿ ಉತ್ಸವ 2022
ಕಟ್ಟುನಿಟ್ಟಿನ ಟ್ರಾಫಿಕ್ ರೂಲ್ಸ್: ಈ ನಗರದಲ್ಲಿ ನಿಯಮ ಉಲ್ಲಂಘಿಸಿದರೆ ಎಫ್‌ಐಆರ್
ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ ನಿತ್ಯ ವಾಹನ ದಟ್ಟಣೆಯಿಂದ ಜನರು ಪರದಾಡುತ್ತಿರುತ್ತಾರೆ. ಈ ನಡುವೆ ಹಲವು ಕಾರಣಗಳಿಂದ ಜನರು ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವುದು ಮುಂಬೈನಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮುಂಬೈನ ನೂತನ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಅವರು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.

ಸಂಚಾರ ನಿಯಮವನ್ನು ಉಲ್ಲಂಘಿಸುವವರಿಗೆ ಭಾರಿ ದಂಡದ ಜೊತೆಗೆ ಎಫ್‌ಐಆರ್ ಹಾಗೂ ಮೋಟಾರು ವಾಹನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಂಬೈನ ಹೊಸ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಅವರು ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ, ಮುಂಬೈ ಮಹಾನಗರದ ಕೆಲವು ಪ್ರಮುಖ ರಸ್ತೆಗಳು ಮತ್ತು ಫ್ಲೈಓವರ್‌ಗಳಲ್ಲಿ ಹೆಲ್ಮೆಟ್ ರಹಿತ ಚಾಲನೆ ಮಾಡಲಾಗುತ್ತಿದೆ.

ಫುಟ್‌ಪಾತ್ ಮೇಲೆ ಸಂಚರಿಸುವುದಲ್ಲದೇ ಪಾದಚಾರಿಗಳು ಮತ್ತು ಇತರ ವಾಹನ ಚಾಲಕರಿಗೆ ಬೆದರಿಕೆ ಒಡ್ಡುತ್ತಾರೆ ಎಂದು ದೂರುಗಳು ಬಂದಿರುವುದಾಗಿ ತಿಳಿಸಿದರು. ಇಂತಹ ಘಟನೆಗಳಲ್ಲಿ ಯಾರಾದರೂ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದರೆ ಅಂತವರ ವಿರುದ್ಧ ದೀರ್ಘ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಮುಂಬೈ ಸಂಚಾರಿ ವಿಭಾಗವು ಮಾರ್ಚ್ 7 ಮತ್ತು ಮಾರ್ಚ್ 8ರಲ್ಲಿ ರಾಂಗ್ ಸೈಡ್ ಡ್ರೈವಿಂಗ್ ಅಡಿಯಲ್ಲಿ ಒಟ್ಟು 107 ಎಫ್‌ಐಆರ್‌ಗಳು ದಾಖಲಾಗಿವೆ. ಇದಲ್ಲದೆ, ನಗರದ ಸಂಚಾರಿ ಪೊಲೀಸರು 14000ಕ್ಕೂ ಹೆಚ್ಚು ಇತರ ಉಲ್ಲಂಘನೆಗಳಿಗೆ ಚಲನ್‌ಗಳನ್ನು ಹೊರಡಿಸಿದ್ದಾರೆ. ಮುಂಬೈನಲ್ಲಿ ಹೆಚ್ಚಿನ ಸಂಖ್ಯೆಯ ನಾಗರಿಕರು ಒನ್ ವೇನಲ್ಲಿ ವಾಹನ ಚಲಾಯಿಸುತ್ತಿದ್ದಾರೆ ಎಂಬ ದೂರುಗಳು ಹೇಚ್ಚಾಗಿವೆ.

ಈ ಹಿನ್ನೆಲೆಯಲ್ಲಿ ಮುಂಬೈ ಸಂಚಾರ ಪೊಲೀಸರು ಹೊಸದಾಗಿ ನೇಮಕಗೊಂಡ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಅವರ ಮಾರ್ಗದರ್ಶನದಲ್ಲಿ ಮಾರ್ಚ್ 7ರ ಸೋಮವಾರ ಇಂತಹವರ ವಿರುದ್ಧ ಕ್ರಮ ಕೈಗೊಂಡು ಚಲನ್‌ಗಳನ್ನು ನೀಡಿದ್ದಾರೆ. ಅಲ್ಲದೇ ನಗರದಾದ್ಯಂತ ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಿದ್ದ 413 ವಾಹನಗಳ ಪೈಕಿ 226 ವಾಹನಗಳನ್ನು ಸೋಮವಾರ ಟೋವ್ ಮಾಡಲಾಗಿದೆ.

ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿದ್ದಕ್ಕಾಗಿ 35 ಜನರನ್ನು ಬಂಧಿಸಿದ್ದಾರೆ. ಸಂಚಾರ ಉಲ್ಲಂಘನೆಗಾಗಿ 6,401 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕೇಂದ್ರ ಸಾರಿಗೆ ಸಚಿವಾಲಯದ ವರದಿಯು ರಸ್ತೆ ಅಪಘಾತಗಳಿಗೆ ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿರುವುದು ಮುಖ್ಯ ಕಾರಣವಾಗಿದೆ ಎಂದು ಉಲ್ಲೇಖಿಸಿದೆ.

2020ರ ಅವಧಿಯಲ್ಲಿ ಭಾರತದಲ್ಲಿ ಒಟ್ಟು 3,66,138 ರಸ್ತೆ ಅಪಘಾತಗಳು ನಡೆದಿವೆ. 2020ರಲ್ಲಿ ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿದ್ದರಿಂದ 20,228 ಅಪಘಾತಗಳು ಸಂಭವಿಸಿವೆ. ರೆಡ್ ಲೈಟ್ ಉಲ್ಲಂಘನೆಯಿಂದಾಗಿ 2,721 ಪ್ರಕರಣಗಳು ದಾಖಲಾಗಿವೆ, ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಸಿ 6,753 ಪ್ರಕರಣಗಳು ದಾಖಲಾಗಿವೆ, ಇತರ ಕಾರಣಗಳಿಂದಾಗಿ ಒಟ್ಟು 62,738 ಅಪಘಾತಗಳು ವರದಿಯಾಗಿವೆ ಎಂದು ವರದಿ ಹೇಳಿದೆ.

ಇದಲ್ಲದೆ, ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ 56,204 ಚಲನ್‌ಗಳನ್ನು ನೀಡಲಾಗಿದೆ. ಸಂಚಾರ ನಿಯಮ ಉಲ್ಲಂಘನೆಯಲ್ಲಿ ಅತಿಹೆಚ್ಚು ದಂಡ ಸಂಗ್ರಹಿಸಿರುವ ರಾಜ್ಯಗಳೆಂದರೆ, ಉತ್ತರ ಪ್ರದೇಶ 447 ಕೋಟಿ ರೂ. ಸಂಗ್ರಹಿಸುವ ಮೂಲಕ ಮೊದಲ ಸ್ಥಾನದಲ್ಲಿದೆ , ಹರಿಯಾಣ 326 ಕೋಟಿ ರೂ., ರಾಜಸ್ಥಾನ267 ಕೋಟಿ ರೂ. ಮತ್ತು ಬಿಹಾರ 258 ಕೋಟಿ ರೂ.ಗಳನ್ನು ಸಂಗ್ರಹಿಸಿದೆ.