ದೇಶದ ಮೊದಲ 'ನಾರ್ಡೊ ಗ್ರೇ' ಬಣ್ಣದ ದುಬಾರಿ 'Bmw X5' ಕಾರನ್ನು ಮನೆಗೆ ತಂದ ನಟ ಅರ್ಜುನ.. ಯಾರೀತ?
ಮಲಯಾಳಂ ಯುವ ನಟ ಅರ್ಜುನ್ ಅಶೋಕನ್ (Arjun Ashoka) ಸಾಲು-ಸಾಲು ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ತಂದೆ ಹರಿಶ್ರೀ ಅಶೋಕನ್ (Harisree Ashokan) ಕೂಡ ಜನಪ್ರಿಯ ಹಾಸ್ಯ ನಟರಾಗಿದ್ದಾರೆ. ಅರ್ಜುನ್ ತಮ್ಮ ಮನೋಜ್ಞ ಅಭಿನಯದ ಮೂಲಕವೇ ಹೆಸರುವಾಸಿಯಾಗಿದ್ದು, 2012ರಲ್ಲಿ 'ಆರ್ಕುಟ್ ಒರು ಒರ್ಮಕೂಟ್' ಸಿನಿಮಾ ಮೂಲಕ ನಟನ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. 30ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಅವರಿಗೆ 'ಬಿಟೆಕ್' ಮತ್ತು 'ಒನ್ಸ್ ಅಪಾನ್ ಎ ಟೈಮ್ ಇನ್ ಕೊಚ್ಚಿ' ಸಿನಿಮಾಗಳು ದೊಡ್ಡಮಟ್ಟದ ಖ್ಯಾತಿ ತಂದುಕೊಟ್ಟಿವೆ.
ಸದ್ಯ, ನಟ ಅರ್ಜುನ್ ಅಶೋಕನ್ ದೇಶದ ಮೊದಲ ಹೊಚ್ಚ ಹೊಸ ನಾರ್ಡೊ ಗ್ರೇ ಬಣ್ಣದ (ಕಲರ್) ಬಿಎಂಡಬ್ಲ್ಯೂ ಎಕ್ಸ್5 ಎಂ ಸ್ಪೋರ್ಟ್ (Bmw X5 M Sport) ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ನೂತನ ಕಾರಿನ ಎದುರಿಗೆ ಅವರು ನಿಂತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ನೆಟ್ಟಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಎಂಡಬ್ಲ್ಯೂ ಎಕ್ಸ್5 ಎಂಬುದು ಐಷಾರಾಮಿ ಎಸ್‌ಯುವಿಯಾಗಿದೆ. ನಟ ಅರ್ಜುನ್ ಅವರು, ಈ ಕಾರಿನ 'ಎಂ ಸ್ಪೋರ್ಟ್' ಎಂಬ ವಿಶೇಷ ರೂಪಾಂತರವನ್ನು (ವೇರಿಯೆಂಟ್) ಮನೆಗೆ ತಂದಿದ್ದಾರೆ. ಇದು ರೂ.1.07 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, ನವೀನ - ಶೈಲಿಯ ವಿನ್ಯಾಸ ಹಾಗೂ ಹತ್ತಾರು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ.
ದೇಶೀಯವಾಗಿ ನೂತನ ಬಿಎಂಡಬ್ಲ್ಯೂ ಎಕ್ಸ್5 ಎಸ್‌ಯುವಿ, ಎಂ ಸ್ಪೋರ್ಟ್ ಮತ್ತು ಎಕ್ಸ್ ಲೈನ್ ಎಂಬ ರೂಪಾಂತರದ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಕಾರಿನಲ್ಲಿ 5-ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಸ್ಟಾರ್ಮ್ ಬೇ ಮೆಟಾಲಿಕ್, ಸ್ಪೇಸ್ ಸಿಲ್ವರ್ ಮೆಟಾಲಿಕ್ & ಬ್ಲ್ಯಾಕ್ ಸಫೈರ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ನೂತನ ಬಿಎಂಡಬ್ಲ್ಯೂ ಎಕ್ಸ್5 ಎಸ್‌ಯುವಿ ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದರ 3-ಲೀಟರ್ ಟರ್ಬೊ 48ವಿ ಮೈಲ್ಡ್-ಹೈಬ್ರಿಡ್ ಪೆಟ್ರೋಲ್ ಎಂಜಿನ್, 381 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 520 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಹೊಂದಿದೆ.
ಡಿಸೇಲ್ ಚಾಲಿತ ರೂಪಾಂತರವು 3-ಲೀಟರ್ 48ವಿ ಮೈಲ್ಡ್-ಹೈಬ್ರಿಡ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 285 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 650 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರು 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 243 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಹೊಸ ಬಿಎಂಡಬ್ಲ್ಯೂ ಎಕ್ಸ್5 ಎಸ್‌ಯುವಿ, ಇನ್ಫೋಟೈನ್‌ಮೆಂಟ್ ಸಿಸ್ಟಮ್ (14.9-ಇಂಚು), ಇನ್‌ಸ್ಟ್ರುಮೆಂಟ್ ಕ್ಲಸ್ಟರ್ (12.3-ಇಂಚು), 4-ಜೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಡಿಎಸ್‌ಸಿ (ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಸಿಬಿಸಿ (ಕಾರ್ನರಿಂಗ್ ಬ್ರೇಕ್ ಕಂಟ್ರೋಲ್) ಅನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications