ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಕೆಲವು ಯುವಕರು ರಸ್ತೆಯಲ್ಲಿ ನರ್ತಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಘಟನೆ ನಡೆದಿರುವುದು ಗುಜರಾತ್‌ನ ಅಹಮದಾಬಾದ್‌ನಲ್ಲಿ.

ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಈ ವೀಡಿಯೊದಲ್ಲಿ ಕೆಲ ಯುವಕರು ಜೋಶ್'ನಿಂದ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ಅವರ ಬಳಿ ನಿಲ್ಲಿಸಲಾಗಿರುವ ಮಹೀಂದ್ರಾ ಎಕ್ಸ್‌ಯು‌ವಿ 500 ರೂಫ್ ಮೇಲೆ ಯುವಕನೊಬ್ಬ ಡ್ಯಾನ್ಸ್ ಮಾಡಿದರೆ, ಉಳಿದವರು ರಸ್ತೆಯಲ್ಲಿ ನಿಂತು ಆತನ ಜೊತೆಗೆ ಹೆಜ್ಜೆ ಹಾಕಿದ್ದಾರೆ.

ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಮಹೀಂದ್ರಾ ಎಕ್ಸ್‌ಯು‌ವಿ 500 ಭಾರತದ ಜನಪ್ರಿಯ ಎಸ್‌ಯು‌ವಿಗಳಲ್ಲಿ ಒಂದಾಗಿದೆ. ಮಹೀಂದ್ರಾ ಎಕ್ಸ್‌ಯು‌ವಿ 500 ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್ ಹಾಗೂ ಜೀಪ್ ಕಂಪಾಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

MOST READ: ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಯುವಕರು ಜೋಶ್'ನಿಂದ ಡ್ಯಾನ್ಸ್ ಮಾಡಿರುವ ಈ ವೀಡಿಯೊ ಸಂಬಂಧಪಟ್ಟ ಪೊಲೀಸ್ ಠಾಣೆಗೆ ತಲುಪಿದೆ. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ನೃತ್ಯ ಮಾಡಿದ ಯುವಕರನ್ನು ಪತ್ತೆ ಹಚ್ಚಿ ಜೈಲಿಗಟ್ಟಲು ಪೊಲೀಸರು ಮುಂದಾಗಿದ್ದಾರೆ.

ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಈ ವೀಡಿಯೊದಲ್ಲಿ ಕಾಣುವ ಕಾರಿನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಯುವಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ಭಾಗಿಯಾಗಿದ್ದಾರೆ. ಈವೀಡಿಯೊದಲ್ಲಿ ಯುವಕರು ಹಾಡುತ್ತಾ ನೃತ್ಯ ಮಾಡುವುದನ್ನು ಕಾಣಬಹುದು.

MOST READ: ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ರಾತ್ರಿ ವೇಳೆಯಾದ ಕಾರಣ ಆ ಯುವಕರನ್ನು ಹೊರತುಪಡಿಸಿ ಅಲ್ಲಿ ಬೇರೆ ಯಾರೂ ಇರಲಿಲ್ಲ. ಪತ್ತೆಯಾದ ಕೂಡಲೇ ಯುವಕರನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಕರೋನಾ ವೈರಸ್ ಕಾರಣಕ್ಕೆ ಅಹಮದಾಬಾದ್‌ನಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಜನರು ಅನಗತ್ಯವಾಗಿ ಮನೆಗಳಿಂದ ಹೊರಬರುವುದನ್ನು ನಿಷೇಧಿಸಲಾಗಿದೆ. ಶುಭ ಸಮಾರಂಭಗಳನ್ನು ಅಧಿಕಾರಿಗಳ ಅನುಮತಿ ಪಡೆದು ನಡೆಸಬಹುದು.

MOST READ: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಇಂತಹ ಪರಿಸ್ಥಿತಿಯಲ್ಲಿ ಕೆಲ ಯುವಕರು ಸಾರ್ವಜನಿಕ ರಸ್ತೆಯಲ್ಲಿ ಸಾರ್ವಜನಿಕವಾಗಿ ನೃತ್ಯ ಮಾಡುತ್ತಿರುವುದು ನಿಜಕ್ಕೂ ಆಘಾತಕಾರಿ. ಭಾರತದ ವಿವಿಧ ಭಾಗಗಳಲ್ಲಿ ಜನರು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುತ್ತಲೇ ಇದ್ದಾರೆ.

ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುವವರ ವಾಹನಗಳನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಅನಗತ್ಯವಾಗಿ ಹೊರಗೆ ತಿರುಗಾಡುವವರಿಗೆ ದಂಡ ಸಹ ವಿಧಿಸಲಾಗುತ್ತಿದೆ.

MOST READ: ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್‌ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು

ಕರೋನಾ ವೈರಸ್ ಎರಡನೇ ಅಲೆಯ ಕಾರಣಕ್ಕೆ ಭಾರತದ ವಿವಿಧ ಭಾಗಗಳಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಕಳೆದ ವರ್ಷದಂತೆ ಈ ವರ್ಷವೂ ಸಹ ರಸ್ತೆಗಳು ನಿರ್ಜನವಾಗಿವೆ. ಈಗ ಕರೋನಾ ವೈರಸ್‌ ಎರಡನೇ ಅಲೆ ಭಾರತದಲ್ಲಿ ನಿಧಾನವಾಗಿ ಕಡಿಮೆಯಾಗುತ್ತಿದೆ.

ಲಾಕ್‌ಡೌನ್ ನಡುವೆಯೂ ಸಾರ್ವಜನಿಕ ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು

ಈ ಹಿನ್ನೆಲೆಯಲ್ಲಿ ವಿವಿಧ ನಗರಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಸಡಿಲಿಸಲಾಗುತ್ತಿದೆ. ಕರೋನಾ ಸೋಂಕಿತರ ಸಂಖ್ಯೆಯೂ ಸಹ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಲಾಕ್‌ಡೌನ್ ಸಡಿಲಗೊಂಡ ನಂತರ ವಾಹನ ದಟ್ಟಣೆ ಹೆಚ್ಚಾಗುವ ನಿರೀಕ್ಷೆಗಳಿವೆ.

Most Read Articles

Kannada
English summary
Youngsters dance in public road video goes viral. Read in Kannada.
Story first published: Tuesday, June 1, 2021, 19:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X