ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಸೆಲ್ಫಿ ತೆಗೆದು ಭಾರೀ ಪ್ರಮಾಣದ ದಂಡ ತೆತ್ತ ಯುವಕರು

ಚಲಿಸುತ್ತಿರುವ ಕಾರಿನಲ್ಲಿ ಸೆಲ್ಫಿ ತೆಗೆದುಕೊಂಡ ಯುವಕರಿಗೆ ಪೊಲೀಸರು ದಂಡ ವಿಧಿಸಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ನಡೆದಿದೆ. ಪೊಲೀಸರು ಯುವಕರ ವಿರುದ್ಧ ಪ್ರಕರಣ ದಾಖಲಿಸಿ ಅವರಿಗೆ ರೂ.7,500 ದಂಡ ವಿಧಿಸಿದ್ದಾರೆ.

ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಸೆಲ್ಫಿ ತೆಗೆದು ಭಾರೀ ಪ್ರಮಾಣದ ದಂಡ ತೆತ್ತ ಯುವಕರು

ಈ ಘಟನೆ ದೇಶಾದ್ಯಂತ ಭಾರೀ ಸಂಚಲನವನ್ನುಂಟು ಮಾಡಿದೆ. ಇತ್ತೀಚಿನ ದಿನಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವುದು ಸಾಮಾನ್ಯ ಸಂಗತಿಯಾಗಿದೆ. ಆದರೆ ಉತ್ತರ ಪ್ರದೇಶ ಪೊಲೀಸರು ಸೆಲ್ಫಿ ತೆಗೆದುಕೊಂಡ ಕಾರಣಕ್ಕೆ ದಂಡ ವಿಧಿಸಿಲ್ಲ. ದಂಡ ವಿಧಿಸಲು ಬೇರೆಯೇ ಕಾರಣವಿದೆ.

ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಸೆಲ್ಫಿ ತೆಗೆದು ಭಾರೀ ಪ್ರಮಾಣದ ದಂಡ ತೆತ್ತ ಯುವಕರು

ಯೂಟ್ಯೂಬ್'ನಲ್ಲಿ ರಾತ್ರೋರಾತ್ರಿ ಜನಪ್ರಿಯರಾಗಬೇಕೆಂಬ ಹುಚ್ಚು ಹೊಂದಿರುವ ಯುವಕರು ಚಾಲನೆಯಲ್ಲಿರುವ ಕಾರಿನ ಬಾನೆಟ್‌ ಮೇಲೆ ಕುಳಿತು ಸೆಲ್ಫಿಗಳನ್ನುತೆಗೆದುಕೊಂಡಿದ್ದಾರೆ. ಈ ಕಾರಣಕ್ಕಾಗಿಯೇ ಉತ್ತರ ಪ್ರದೇಶ ಪೊಲೀಸರು ಅವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಸೆಲ್ಫಿ ತೆಗೆದು ಭಾರೀ ಪ್ರಮಾಣದ ದಂಡ ತೆತ್ತ ಯುವಕರು

ಭಾರತೀಯ ಮೋಟಾರು ವಾಹನ ಕಾಯ್ದೆಯ ಪ್ರಕಾರ, ಸಾರ್ವಜನಿಕ ರಸ್ತೆಯಲ್ಲಿ ವಾಹನಗಳಲ್ಲಿ ಸ್ಟಂಟ್ ಮಾಡುವುದು ಶಿಕ್ಷಾರ್ಹ ಅಪರಾಧ. ಈ ರೀತಿಯ ಅಪರಾಧಗಳನ್ನು ಕಡಿಮೆ ಮಾಡಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಸೆಲ್ಫಿ ತೆಗೆದು ಭಾರೀ ಪ್ರಮಾಣದ ದಂಡ ತೆತ್ತ ಯುವಕರು

ಆದರೂ ಕೆಲವು ಯುವಕರು ಪೊಲೀಸರ ಕಣ್ಣು ತಪ್ಪಿಸಿ ಸ್ಟಂಟ್ ಮಾಡುತ್ತಲೇ ಇರುತ್ತಾರೆ. ಭಾರೀ ಪ್ರಮಾಣದ ದಂಡ ವಿಧಿಸುತ್ತಿದ್ದರೂ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಮುಂದುವರೆಯುತ್ತಲೇ ಇವೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಸೆಲ್ಫಿ ತೆಗೆದು ಭಾರೀ ಪ್ರಮಾಣದ ದಂಡ ತೆತ್ತ ಯುವಕರು

ಚಲಿಸುತ್ತಿರುವ ಕಾರಿನಲ್ಲಿ ಸೆಲ್ಫಿ ತೆಗೆದುಕೊಂಡ ಯುವಕರ ವೀಡಿಯೊ ಸಾಮಾಜಿಕ ಜಾಲತಾಣವೊಂದರಲ್ಲಿ ವೈರಲ್ ಆಗಿತ್ತು. ವೈರಲ್ ಆದ ವೀಡಿಯೊ ಆಧಾರದ ಮೇಲೆ ಉತ್ತರ ಪ್ರದೇಶ ಪೊಲೀಸರು ಯುವಕರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಸೆಲ್ಫಿ ತೆಗೆದು ಭಾರೀ ಪ್ರಮಾಣದ ದಂಡ ತೆತ್ತ ಯುವಕರು

ಸ್ಟಂಟ್ ಮಾಡಲು ಬಳಸಿದ ಕಾರನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರ ಜೊತೆಗೆ ಯುವಕರ ವಿರುದ್ಧ ಮೋಟಾರು ವಾಹನ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಯುವಕರು ಕಾಲೇಜಿಗೆ ಹೋಗುವ ಮಾರ್ಗದಲ್ಲಿ ಕಾರಿನ ಬಾನೆಟ್‌ ಮೇಲೆ ಕುಳಿತು ಸೆಲ್ಫಿ ತೆಗೆದಿದ್ದಾರೆ. ಒಬ್ಬ ಯುವಕ ಕಾರನ್ನು ಚಾಲನೆ ಮಾಡುತ್ತಿದ್ದರೆ, ಇತರ ಇಬ್ಬರು ಯುವಕರು ಕಾರಿನ ಬಾನೆಟ್ ಮೇಲೆ ಕುಳಿತು ವೀಡಿಯೊಗೆ ಪೋಸ್ ನೀಡುತ್ತಿದ್ದರು.

ಚಲಿಸುತ್ತಿರುವ ಕಾರಿನ ಮೇಲೆ ಕುಳಿತು ಸೆಲ್ಫಿ ತೆಗೆದು ಭಾರೀ ಪ್ರಮಾಣದ ದಂಡ ತೆತ್ತ ಯುವಕರು

ಈ ಯುವಕರು ಸಾರ್ವಜನಿಕ ರಸ್ತೆಯಲ್ಲಿ ಸ್ಟಂಟ್ ಮಾಡಲು ಮಾರುತಿ ಸುಜುಕಿ ಎರ್ಟಿಗಾ ಕಾರ್ ಅನ್ನು ಬಳಸಿದ್ದಾರೆ. ಎಂಪಿವಿ ಮಾದರಿಯ ಈ ಕಾರಿನ ಆರಂಭಿಕ ಬೆಲೆ ಭಾರತದ ಎಕ್ಸ್ ಶೋರೂಂ ದರದಂತೆ ರೂ.7.69 ಲಕ್ಷಗಳಾಗಿದೆ.

Most Read Articles

Kannada
English summary
Youngsters fined for taking selfie on moving car in Uttar Pradesh. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X