ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಭೀಕರ ಅಪಘಾತದಲ್ಲಿ ಮೂವರು ದುರ್ಮರಣ

Written By:

ನಿಯಂತ್ರಣ ತಪ್ಪಿದ ಪರಿಣಾಮ ಮಾರುತಿ ಸುಜುಕಿ ಜೆನ್ ಕಾರೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಂಗೂರಿನಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಒಟ್ಟು ಐವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ.ಬಂಗಾಳ ರಾಜ್ಯ ಹೆದ್ದಾರಿಯಲ್ಲೇ ಈ ದುರಂತ ಸಂಭವಿಸಿದ್ದು, ರಸ್ತೆ ಪಕ್ಕಕ್ಕೆ ನಿಂತಿದ್ದ ಲಾರಿಗೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರು ಲಾರಿ ಅಡಿಗೆ ಸಿಲುಕಿಕೊಂಡಿದೆ.

ಸ್ಥಳೀಯ ನೆರವಿನೊಂದಿಗೆ ಲಾರಿ ಕೆಳಗೆ ಸಿಕ್ಕಿಕೊಂಡಿದ್ದ ಕಾರನ್ನು ಹೊರತೆಗೆಯಲಾಗಿದ್ದು, ಡ್ರೈವರ್ ಸೇರಿದಂತೆ ಮುಂಭಾಗದಲ್ಲಿ ಕುಳಿತಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ವೇಗದ ಕಾರು ಚಾಲನೆಯೇ ಘಟನೆಗೆ ಕಾರಣವೆನ್ನಲಾಗಿದ್ದು, ಘಟನೆಯ ನಂತರ ಲಾರಿ ಚಾಲಕ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

English summary
Read in Kannada about accident in west bengal.
Please Wait while comments are loading...

Latest Photos