ಏಷ್ಯನ್ ಗೇಮ್ಸ್ ವಿಜೇತ ಭಾರತ ಹಾಕಿ ತಂಡಕ್ಕೆ ಹೀರೊ ಸನ್ಮಾನ
ಇತ್ತೀಚೆಗಷ್ಟೇ ದಕ್ಷಿಣ ಕೊರಿಯಾದ ಇಂಚಿಯಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್ ಹಾಕಿ ಟೂರ್ನಮೆಂಟ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಅಂತರದಿಂದ ಮಣಿಸಿದ್ದ ಭಾರತ ತಂಡವು ಚಿನ್ನದ ಪದಕ ಗೆದ್ದುಕೊಂಡಿತ್ತು.
ನಿಮಗೆಲ್ಲರಿಗೂ ತಿಳಿದಿರುವಂತೆಯೇ ದೇಶದಲ್ಲಿ ಹಾಕಿ ಕ್ರೀಡೆಯನ್ನು ದೀರ್ಫಾವಧಿ ಕಾಲದ ವರೆಗೆ ಪ್ರೋತ್ಸಾಹಿಸುವುದರಲ್ಲಿ ಬದ್ಧವಾಗಿರುವ ದೇಶದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಿಕ ಸಂಸ್ಥೆಯಾಗಿರುವ ಹೀರೊ ಮೊಟೊಕಾರ್ಪ್, ಹಾಕಿ ತಂಡಕ್ಕೆ ಪ್ರಾಯೋಜಕತ್ವ ವಹಿಸುತ್ತಿದೆ.

ಇದರಂತೆ 17ನೇ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿರುವ ದೇಶದ ಹಾಕಿ ತಂಡವನ್ನು ಹೀರೊ ಸನ್ಮಾನಿಸಿದೆ. ಈ ಮೂಲಕ ಭಾರತ ತಂಡವು 2016ರಲ್ಲಿ ಬ್ರೆಜಿಲ್‌ನಲ್ಲಿ ನಡೆಯಲಿರುವ ರಿಯೊ ಒಲಿಂಪಿಕ್ಸ್‌ಗೆ ನೇರ ಅರ್ಹತೆಯನ್ನು ಪಡೆದುಕೊಂಡಿದೆ.

ಭಾರತ ಹಾಕಿ ತಂಡದ ಪ್ರತಿಯೊಬ್ಬ ಆಟಗಾರನಿಗೂ ತಲಾ ಎರಡು ಲಕ್ಷ ರು.ಗಳ ಜೊತೆಗೆ ಅತ್ಯಾಕರ್ಷಕ ಹೀರೊ ಝಡ್‌ಎಂಆರ್ ಬೈಕನ್ನು ಉಡುಗೊರೆಯಾಗಿ ನೀಡಲಾಗಿದೆ. ಅದೇ ರೀತಿ ಸಹಾಯಕ ಸಿಬ್ಬಂದಿಗಳಿಗೆ ತಲಾ ಒಂದು ಲಕ್ಷ ನೀಡಲಾಗಿದೆ. ಅಂದ ಹಾಗೆ ಭಾರತ ಪುರುಷ ಹಾಕಿ ತಂಡವು 16 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿತ್ತು.


Click it and Unblock the Notifications








