ಟ್ರಯಂಪ್‌ನಿಂದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಪ್ರತ್ಯೇಕ ಚಾಲನೆ
ಬ್ರಿಟನ್‌ನ ಐಕಾನಿಕ್ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾಗಿರುವ ಟ್ರಯಂಪ್ ಕೆಲವು ತಿಂಗಳುಗಳ ಹಿಂದೆಯಷ್ಟೇ ಭಾರತ ಮಾರುಕಟ್ಟೆಗೆ ಅಧಿಕೃತ ಪ್ರವೇಶ ಪಡೆದಿತ್ತು.
ಅಲ್ಲದೆ ಭಾರತ ಮಾರುಕಟ್ಟೆಯಲ್ಲಿ ಉತ್ತಮ ಪ್ರತಿಕ್ರಿಯೆ ಗಿಟ್ಟಿಸಿಕೊಳ್ಳುವಲ್ಲಿ ಬ್ರಿಟನ್ ಮೂಲದ ಈ ವಾಹನ ತಯಾರಕ ಸಂಸ್ಥೆ ಯಶ ಕಂಡಿದೆ. ಈ ನಡುವೆ ಪ್ರಾಸ್ಟೇಟ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಚಾಲನಾ ಅಭಿಯಾನ ಕೈಗೊಂಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

ಸೆಪ್ಟೆಂಬರ್ 28ರಂದು ‘The Distinguished Gentleman's Ride' ಎಂಬ ಹೆಸರಿನಲ್ಲಿ ಪ್ರತ್ಯೇಕ ಚಾಲನಾ ಹಮ್ಮಿಕೊಳ್ಳಲಾಗಿತ್ತು. ಆಸ್ಟ್ರೇಲಿಯಾದಿಂದ ಆಗಮಿಸಿದ ವಿಶೇಷ ತಂಡ ಇದರಲ್ಲಿ ಭಾಗವಹಿಸಿತ್ತು.
ಅಂದ ಹಾಗೆ ಜಗತ್ತಿನಾದ್ಯಂತ ಒಟ್ಟು 254 ನಗರಗಳಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದ್ದು, ಇದರಂಗವಾಗಿ ಭಾರತ ಪ್ರವೇಶ ಪಡೆದಿತ್ತು.


Click it and Unblock the Notifications








