ವರ್ಷಾಂತ್ಯಕ್ಕೆ ಖರೀದಿಗೆ ಲಭ್ಯವಾಗಲಿವೆ ಮಹೀಂದ್ರಾ ಎಲೆಕ್ಟ್ರಿಕ್ ಸ್ಕೂಟರ್‌ಗಳು..!!

ಮಹೀಂದ್ರಾ ಸಂಸ್ಥೆಯು ಕೂಡಾ ತನ್ನ ಜನಪ್ರಿಯ ಸ್ಕೂಟರ್ ಆವೃತ್ತಿಗಳನ್ನು ಎಲೆಕ್ಟ್ರಿಕ್ ಎಂಜಿನ್ ಜೊತೆ ಅಭಿವೃದ್ಧಿಗೊಳಿಸುವ ಕುರಿತು ಮಹತ್ವದ ಯೋಜನೆ ರೂಪಿಸುತ್ತಿದೆ.

By Praveen

ಆಟೋ ಉದ್ಯಮದಲ್ಲಿ ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಮಹೀಂದ್ರಾ ಸಂಸ್ಥೆಯು ಕೂಡಾ ತನ್ನ ಜನಪ್ರಿಯ ಸ್ಕೂಟರ್ ಆವೃತ್ತಿಗಳನ್ನು ಎಲೆಕ್ಟ್ರಿಕ್ ಎಂಜಿನ್ ಜೊತೆ ಅಭಿವೃದ್ಧಿಗೊಳಿಸುವ ಕುರಿತು ಮಹತ್ವದ ಯೋಜನೆ ರೂಪಿಸುತ್ತಿದೆ.

ಮಹೀಂದ್ರಾದಿಂದ ಅಭಿವೃದ್ಧಿಯಾಗಲಿವೆ ವಿಶೇಷ ಎಲೆಕ್ಟ್ರಿಕ್ ಸ್ಕೂಟರ್‌‌ಗಳು

ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿನ ಇ2ಒ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯಲ್ಲಿ ಹಿಡಿತ ಸಾಧಿಸಿರುವ ಮಹೀಂದ್ರಾ ಸಂಸ್ಥೆಯು ಇದೀಗ ಮತ್ತೊಂದು ಮಹತ್ವದ ಬದಲಾವಣೆಗೆ ಹೆಜ್ಜೆ ಇರಿಸುತ್ತಿದ್ದು, ವರ್ಷಾಂತ್ಯಕ್ಕೆ ವಿನೂತನ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಆವೃತ್ತಿಗಳನ್ನು ಪರಿಚಯಿಸುವ ತವಕದಲ್ಲಿದೆ.

ಮಹೀಂದ್ರಾದಿಂದ ಅಭಿವೃದ್ಧಿಯಾಗಲಿವೆ ವಿಶೇಷ ಎಲೆಕ್ಟ್ರಿಕ್ ಸ್ಕೂಟರ್‌‌ಗಳು

ಈ ನಿಟ್ಟಿನಲ್ಲಿ ವಿನೂತನ ಪ್ರಯೋಗಗಳನ್ನು ಕೈಗೊಂಡಿರುವ ಮಹೀಂದ್ರಾ ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗವು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕ ವಿನ್ಯಾಸಗಳನ್ನು ಸಿದ್ಧಗೊಳಿಸಲಾಗುತ್ತಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಹೊರಹಾಕಿರುವ ಮಹೀಂದ್ರಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಹೊಸ ಯೋಜನೆ ಕುರಿತು ಸಾಕಷ್ಟು ನೀರಿಕ್ಷೆ ಹೊಂದಿದ್ದೇವೆ ಎಂದು ಟ್ವಿಟ್ ಮಾಡಿದ್ದಾರೆ.

ಮಹೀಂದ್ರಾದಿಂದ ಅಭಿವೃದ್ಧಿಯಾಗಲಿವೆ ವಿಶೇಷ ಎಲೆಕ್ಟ್ರಿಕ್ ಸ್ಕೂಟರ್‌‌ಗಳು

ಇದಲ್ಲದೇ ಹೊಸ ಯೋಜನೆ ಬಗ್ಗೆ ಭಾರೀ ಉತ್ಸುಕರಾಗಿರುವ ಆನಂದ್ ಮಹೀಂದ್ರಾ ಅವರು ಪುಣೆಯಲ್ಲಿರುವ ಆರ್.ಡಿ ಘಟಕಕ್ಕೆ ಭೇಟಿ ಕೂಡಾ ನೀಡಿದ್ದು, ಸಂಶೋಧನಾ ತಂಡದೊಂದಿಗೆ ಎಲೆಕ್ಟ್ರಿಕ್ ಸ್ಕೂಟರ್ ಯೋಜನೆಯ ಮಹತ್ವದ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಮಹೀಂದ್ರಾದಿಂದ ಅಭಿವೃದ್ಧಿಯಾಗಲಿವೆ ವಿಶೇಷ ಎಲೆಕ್ಟ್ರಿಕ್ ಸ್ಕೂಟರ್‌‌ಗಳು

ಇನ್ನು ಮೂಲಗಳ ಪ್ರಕಾರ ಮಹೀಂದ್ರಾ ಸಂಸ್ಥೆಯ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನಾ ಯೋಜನೆಯು ಜಾವಾ ಬ್ರ್ಯಾಂಡ್‌ನ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ ಎಂಬ ಮಾಹಿತಿ ದೊರೆತಿದ್ದು, ಇದಕ್ಕಾಗಿಯೇ ಪಿಎಂಟಿಸಿ ಮತ್ತು ಕ್ಲಾಸಿಕ್ ಲೆಜೆಂಡ್ಸ್ ಸಂಸ್ಥೆಗಳ ಜೊತೆಗೂಡಿ ಮಹೀಂದ್ರಾ ಕಾರ್ಯನಿರ್ವಹಿಸಲಿದೆ.

ಮಹೀಂದ್ರಾದಿಂದ ಅಭಿವೃದ್ಧಿಯಾಗಲಿವೆ ವಿಶೇಷ ಎಲೆಕ್ಟ್ರಿಕ್ ಸ್ಕೂಟರ್‌‌ಗಳು

ಇದರಿಂದ ಸುಧಾರಿತ ತಂತ್ರಜ್ಞಾನಗಳ ಅಭಿವೃದ್ದಿಗೆ ಸಹಕಾರಿಯಾಗಲಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಗುಸ್ಟೊ ಸ್ಕೂಟರ್ ಆವೃತ್ತಿಯನ್ನೇ ಎಲೆಕ್ಟ್ರಿಕ್ ಎಂಜಿನ್ ಆವೃತ್ತಿಗಳನ್ನಾಗಿ ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ.

ಮಹೀಂದ್ರಾದಿಂದ ಅಭಿವೃದ್ಧಿಯಾಗಲಿವೆ ವಿಶೇಷ ಎಲೆಕ್ಟ್ರಿಕ್ ಸ್ಕೂಟರ್‌‌ಗಳು

ಸದ್ಯ ದ್ವಿಚಕ್ರ ಮಾರುಕಟ್ಟೆಯಲ್ಲಿ ಹೀರೊ ಮೋಟಾರ್ಸ್, ಟಿವಿಎಸ್, ಬಜಾಜ್ ಸಂಸ್ಥೆಗಳು ಕೂಡಾ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನಿರ್ಮಾಣ ಮಾಡುವ ಯೋಜನೆ ರೂಪಿಸುತ್ತಿದ್ದು, ಇದಕ್ಕೂ ಮೊದಲು ಮಹೀಂದ್ರಾ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ಹೊಸ ಯೋಜನೆಯನ್ನು ತ್ವರಿತಗೊಳಿಸಲಾಗುತ್ತಿದೆ.

ಮಹೀಂದ್ರಾದಿಂದ ಅಭಿವೃದ್ಧಿಯಾಗಲಿವೆ ವಿಶೇಷ ಎಲೆಕ್ಟ್ರಿಕ್ ಸ್ಕೂಟರ್‌‌ಗಳು

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಎಲೆಕ್ಟ್ರಿಕ್ ಎಂಜಿನ್ ಅಭಿವೃದ್ಧಿಯಲ್ಲಿ ಈಗಾಗಲೇ ತನ್ನದೇ ಬೇಡಿಕೆ ಹೊಂದಿರುವ ಮಹೀಂದ್ರಾ ಸಂಸ್ಥೆಯು ಇದೀಗ ಮತ್ತೊಂದು ಪ್ರಯೋಗಕ್ಕೆ ಕೈ ಹಾಕಿದ್ದು, ವರ್ಷಾಂತ್ಯಕ್ಕೆ ಇಲ್ಲವೇ 2018ರ ಮೊದಲ ತ್ರೈಮಾಸಿಕ ಅವಧಿಗೆ ಹೊಸ ಉತ್ಪನ್ನಗಳು ಖರೀದಿಗೆ ಲಭ್ಯವಾಗುದರಲ್ಲಿ ಯಾವುದೇ ಅನುಮಾನವಿಲ್ಲ.

Article Published On: Tuesday, September 26, 2017, 12:43 [IST]
English summary
Read in Kannada about Mahindra Working On Electric Scooter For India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+