ಮೊದಲ ಬಾರಿಗೆ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಪ್ರದರ್ಶಿಸಿದ ರಾಯಲ್ ಎನ್‌ಫೀಲ್ಡ್

ಎಲ್ಲಾ ವಾಹನ ಉತ್ಪಾದಕರು ಪ್ರಮುಖ ಯೋಜನೆಗಳನ್ನು ರೂಪಿಸುತ್ತಿದ್ದು, ಈ ಮಧ್ಯೆ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಪ್ರದರ್ಶನ ಮಾಡಿರುವ ಕ್ಲಾಸಿಕ್ ಎಲೆಕ್ಟ್ರಿಕ್ ಬೈಕ್ ಭಾರೀ ಚರ್ಚೆಗೆ ಕಾರಣವಾಗಿದೆ.

By Praveen

ಜಾಗತಿಕ ಮಟ್ಟದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಚಾಲಿತ ವಾಹನಗಳನ್ನು ಕಡಿಮೆಗೊಳಿಸಿ 2030ರ ಹೊತ್ತಿಗೆ ಪೂರ್ಣ ಪ್ರಮಾಣದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ವಾಹನ ಉತ್ಪಾದಕರು ಪ್ರಮುಖ ಯೋಜನೆಗಳನ್ನು ರೂಪಿಸುತ್ತಿದ್ದು, ಈ ಮಧ್ಯೆ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಪ್ರದರ್ಶನ ಮಾಡಿರುವ ಕ್ಲಾಸಿಕ್ ಎಲೆಕ್ಟ್ರಿಕ್ ಬೈಕ್ ಭಾರೀ ಚರ್ಚೆಗೆ ಕಾರಣವಾಗಿದೆ.

ಮೊದಲ ಬಾರಿಗೆ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಪ್ರದರ್ಶಿಸಿದ ರಾಯಲ್ ಎನ್‌ಫೀಲ್ಡ್

ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ಬೈಕ್‌ಗಳನ್ನು ಪರಿಚಯಿಸುವ ಬಗ್ಗೆ ಈ ಹಿಂದೆ ಸುಳಿವು ನೀಡಿದ್ದ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಇದೀಗ ಹೊಸ ಬೈಕ್ ಮಾದರಿಯನ್ನು ಪ್ರದರ್ಶನ ಮಾಡಿದ್ದು, ಎಲೆಕ್ಟ್ರಿಕ್ ಬೈಕ್ ವಿಭಾಗಕ್ಕೆ ಹೊಸ ಬೈಕ್ ಉತ್ಪನ್ನಗಳನ್ನು ಅಭಿವೃದ್ಧಿಗೊಳಿಸುತ್ತಿದೆ.

ಮೊದಲ ಬಾರಿಗೆ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಪ್ರದರ್ಶಿಸಿದ ರಾಯಲ್ ಎನ್‌ಫೀಲ್ಡ್

ಹೀಗಾಗಿ ಎಲೆಕ್ಟ್ರಿಕ್ ಬೈಕ್ ನಿರ್ಮಾಣದ ಮೇಲೆ ವಿಶೇಷ ಗಮನಹರಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು 2020ರ ವೇಳೆಗೆ ಎಲೆಕ್ಟ್ರಿಕ್ ಬೈಕ್ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಕ್ಲಾಸಿಕ್ ಬೈಕ್ ವಿಭಾಗದಲ್ಲಿ ಮತ್ತೊಮ್ಮೆ ಕಮಾಲ್ ಮಾಡುವ ತವಕದಲ್ಲಿದೆ.

Recommended Video

EICMA 2017: Royal Enfield Interceptor And Continental GT Unveiled - DriveSpark
ಮೊದಲ ಬಾರಿಗೆ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಪ್ರದರ್ಶಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‌ಫೀಲ್ಡ್ ನಿರ್ಮಾಣ ಮಾಡಿರುವ ಎಲೆಕ್ಟ್ರಿಕ್ ಬೈಕ್ ಆವೃತ್ತಿಯನ್ನು ಥಾಯ್ಲೆಂಡ್ ಶೋರಂಗಳಲ್ಲಿ ಪ್ರದರ್ಶನಕ್ಕಿಡಲಾಗಿದ್ದು, ಸದ್ಯದಲ್ಲೇ ಭಾರತದಲ್ಲಿ ತನ್ನ ಅಧಿಕೃತ ಮಾರಾಟ ಮಳಿಗೆಗಳಲ್ಲಿ ಎಲೆಕ್ಟ್ರಿಕ್ ಬೈಕ್‌ಗಳನ್ನು ಅನಾವರಣ ಮಾಡಲಿದೆ.

ಮೊದಲ ಬಾರಿಗೆ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಪ್ರದರ್ಶಿಸಿದ ರಾಯಲ್ ಎನ್‌ಫೀಲ್ಡ್

ವರದಿಗಳ ಪ್ರಕಾರ ರಾಯಲ್ ಎನ್‌ಫೀಲ್ಡ್ ಯೋಜನೆಯಂತೆ ಕ್ಲಾಸಿಕ್ 350 ಮತ್ತು ಕ್ಲಾಸಿಕ್ 500 ಮಾದರಿಗಳನ್ನು ಎಲೆಕ್ಟ್ರಿಕ್ ಆವೃತ್ತಿಗಳಿಗಾಗಿ ಬಳಕೆ ಮಾಡಲಾಗುತ್ತಿದ್ದು, ಸುಧಾರಿತ ಮಾದರಿಯ ಲಿಥಿಯಂ ಅಯಾನ್ ಬ್ಯಾಟರಿಯನ್ನು ಬಳಕೆ ಮಾಡುವ ಸಾಧ್ಯತೆಗಳಿವೆ.

ಮೊದಲ ಬಾರಿಗೆ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಪ್ರದರ್ಶಿಸಿದ ರಾಯಲ್ ಎನ್‌ಫೀಲ್ಡ್

ಒಂದು ವೇಳೆ ಲಿಥಿಮಂ ಅಯಾನ್ ಬ್ಯಾಟರಿ ಮಾಡಿದಲ್ಲಿ ಉತ್ತಮ ಮೈಲೇಜ್ ದೊರೆಯಲಿದ್ದು, ಪ್ರತಿ ಚಾರ್ಜಿಂಗ್‌ಗೆ 100 ರಿಂದ 150 ಕಿಮಿ ಮೈಲೇಜ್ ಪಡೆಯಬಹುದಾಗಿದ್ದು, ಪ್ರಸ್ತುತ ಬೆಲೆಗಳಿಂತ ತುಸು ದುಬಾರಿಯಾಗಬಹುದು.

ಮೊದಲ ಬಾರಿಗೆ ಎಲೆಕ್ಟ್ರಿಕ್ ಕ್ಲಾಸಿಕ್ ಬೈಕ್ ಪ್ರದರ್ಶಿಸಿದ ರಾಯಲ್ ಎನ್‌ಫೀಲ್ಡ್

ಆದ್ರೆ ಎಲೆಕ್ಟ್ರಿಕ್ ಬೈಕ್ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದ ರಾಯಲ್ ಎನ್‌ಫೀಲ್ಡ್ ಸದ್ದಿಲ್ಲದೇ ತನ್ನ ಶೋರಂಗಳಲ್ಲಿ ಹೊಸ ಬೈಕ್ ಪ್ರದರ್ಶನ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಅಧಿಕೃತ ಮಾಹಿತಿಗಳನ್ನು ಹೊರಹಾಕುವ ಸಾಧ್ಯತೆಗಳಿವೆ.

Most Read Articles

Kannada
English summary
Royal Enfield Electric Motorcycle Showcased At Company's Thailand Showroom.
Story first published: Saturday, December 16, 2017, 19:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X