ಬಿಡುಗಡೆಗಾಗಿ ಸಿದ್ಧವಾದ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ದೇಶಿಯ ಮಾರುಕಟ್ಟೆಗಾಗಿ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಮೋಟರ್ ಸೈಕಲ್‌ಗಳನ್ನು ಅಭಿವೃದ್ಧಿಗೊಳಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಸದ್ಯ ಬಿಡುಗಡೆಗಾಗಿ ಎದುರು ನೋಡುತ್ತಿದೆ.

By Praveen

Recommended Video

Tata Nexon Faces Its First Recorded Crash

ದೇಶಿಯ ಮಾರುಕಟ್ಟೆಗಾಗಿ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಮೋಟರ್ ಸೈಕಲ್‌ಗಳನ್ನು ಅಭಿವೃದ್ಧಿಗೊಳಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಸದ್ಯ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಮುಂಬರುವ ಏಪ್ರಿಲ್‌ನಿಂದ ಹೊಸ ಬೈಕ್ ಖರೀದಿಗಾಗಿ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಬಿಡುಗಡೆಗಾಗಿ ಸಿದ್ಧವಾದ ಇಂಟಸೆಪ್ಟರ್ 650 & ಕಾಂಟಿನೆಂಟಲ್ ಜಿಟಿ 650

ಇನ್ನು ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಮೋಟರ್ ಸೈಕಲ್‌ಗಳನ್ನು ಈ ಹಿಂದೆ 2017ರ ರೈಡರ್ ಮೆನಿಯಾ ಕಾರ್ಯಕ್ರಮದಲ್ಲಿ ಪ್ರದರ್ಶನಗೊಳಿಸಿದ್ದ ರಾಯಲ್ ಎನ್‌ಫೀಲ್ಡ್ ಇದೀಗ ತನ್ನ ನೆಚ್ಚಿನ ಗ್ರಾಹಕರಿಗಾಗಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತಿರುವುದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಬಿಡುಗಡೆಗಾಗಿ ಸಿದ್ಧವಾದ ಇಂಟಸೆಪ್ಟರ್ 650 & ಕಾಂಟಿನೆಂಟಲ್ ಜಿಟಿ 650

ಇದಲ್ಲದೇ 2017ರ ರೈಡರ್ ಮೆನಿಯಾ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದ್ದ ರಾಯಲ್ ಎನ್‌ಫೀಲ್ಡ್ ಹೊಸ ಮೋಟಾರ್ ಸೈಕಲ್‌ಗಳು ಕ್ರೋಮ್ ಬಣ್ಣದ ಯೋಜನೆಗಳನ್ನು ಹೊಂದಿದ್ದು, ರೆಟ್ರೊ ಕ್ಲಾಸಿಕ್ ಯುಗದ ಬೈಕುಗಳನ್ನು ನೆನಪಿಸುತ್ತವೆ.

ಬಿಡುಗಡೆಗಾಗಿ ಸಿದ್ಧವಾದ ಇಂಟಸೆಪ್ಟರ್ 650 & ಕಾಂಟಿನೆಂಟಲ್ ಜಿಟಿ 650

ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಮಧ್ಯಮ ಗಾತ್ರದ ಎಂಜಿನ್ ಹೊಂದಿರುವ ಮೋಟಾರ್‌ಸೈಕಲ್ ಬಿಡುಗಡೆಗೊಳಿಸುವ ಮುಖ್ಯ ಕಲ್ಪನೆಯನ್ನು ಕಂಪನಿ ಹೊಂದಿದ್ದು, ಸಾಮಾನ್ಯ ಜನರೂ ಸಹ ಈ ಬೈಕಿನ ಕಡೆ ಕಣ್ಣು ಆಡಿಸಬಹುದು.

ಬಿಡುಗಡೆಗಾಗಿ ಸಿದ್ಧವಾದ ಇಂಟಸೆಪ್ಟರ್ 650 & ಕಾಂಟಿನೆಂಟಲ್ ಜಿಟಿ 650

ಇದಕ್ಕೆ ಕಾರಣ ರೈಡರ್ ಮೆನಿಯಾ ಕಾರ್ಯಕ್ರಮದಲ್ಲಿ ಹೊಸ ಬೈಕ್‌ಗಳನ್ನು ಅನಾವರಣಗೊಳಿಸಿ ಮಾತನಾಡಿದ್ದ ರಾಯಲ್ ಎನ್‌ಫೀಲ್ಡ್ ಸಿಇಒ ಸಿಡ್ ಲಾಲ್ ಅವರು "ಜಗತ್ತಿನಾದ್ಯಂತ ಇರುವಂತಹ ಹೊರಸೂಸುವಿಕೆಯ ಮಾನದಂಡಗಳ ಗುಣಮಟ್ಟ ಮತ್ತು ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬೈಕುಗಳನ್ನು ಅಭಿವೃದ್ಧಿಪಡಿಸಲಾಗಿದೆ" ಎಂದಿದ್ದರು.

ಬಿಡುಗಡೆಗಾಗಿ ಸಿದ್ಧವಾದ ಇಂಟಸೆಪ್ಟರ್ 650 & ಕಾಂಟಿನೆಂಟಲ್ ಜಿಟಿ 650

ಹೀಗಾಗಿ ರಾಯಲ್ ಎನ್‌ಫೀಲ್ಡ್ ಅನಾವರಣಗೊಳಿಸಿರುವ ಹೊಸ ಬೈಕ್‌ಗಳು 650 ಸಿಸಿ ಪ್ಯಾರಲಲ್ ಏರ್/ ಆಯಿಲ್ ಎಂಜಿನ್ ಆಯ್ಕೆ ಪಡೆಯಲಿವೆ. ಈ ಎಂಜಿನ್, 46.3 ಬಿಎಚ್‌ಪಿ ಮತ್ತು 52 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು 6-ಸ್ಪೀಡ್ ಗೇರ್‌ಬಾಕ್ಸ್ ಸಂಯೋಜಿತವಾಗಿದೆ.

ಬಿಡುಗಡೆಗಾಗಿ ಸಿದ್ಧವಾದ ಇಂಟಸೆಪ್ಟರ್ 650 & ಕಾಂಟಿನೆಂಟಲ್ ಜಿಟಿ 650

ಈ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಅವಳಿ ಮೋಟರ್ ಸೈಕಲ್‌ಗಳು ಸಾಕಷ್ಟು ಭರವಸೆ ಹುಟ್ಟುಹಾಕಿದ್ದು, ಭವಿಷ್ಯದಲ್ಲಿ ಹೊಸ ಬೈಕ್‍‌ಗಳು ಗ್ರಾಹಕರನ್ನು ಯಾವ ರೀತಿ ಸೆಳೆಯುತ್ತವೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Most Read Articles

Kannada
English summary
Read in Kannada about Royal Enfield Interceptor 650 & Continental GT 650 Booking Details Revealed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X