ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

By Praveen Sannamani

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಪ್ರಮುಖ ಬೈಕ್ ಉತ್ಪಾದನಾ ಸಂಸ್ಥೆಗಳು ತಮ್ಮ ಬಹುನೀರಿಕ್ಷಿತ ಬೈಕ್‌ಗಳನ್ನು ಬಿಡುಗಡೆಗೊಳಿಸುತ್ತಿದ್ದು, ದೇಶಿಯ ಆಟೋ ಉದ್ಯಮದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿವೆ. ಮತ್ತೊಂದು ವಿಶೇಷ ಅಂದ್ರೆ ಬಿಡುಗಡೆಯಾಗುತ್ತಿರುವ ಈ ಟಾಪ್ 5 ಬೈಕ್‌ಗಳು ಕೈಗೆಟುವ ಬೆಲೆ ಮತ್ತು ಅತ್ಯುತ್ತಮ ಪರ್ಫಾಮೆನ್ಸ್ ಮಾದರಿಗಳಾಗಿದ್ದು, ಬೈಕ್ ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ರಾಯಲ್ ಎನ್‌ಫೀಲ್ಡ್ ಅವಳಿ ಬೈಕ್‌ಗಳು

ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ದೇಶಿಯ ಮಾರುಕಟ್ಟೆಗಾಗಿ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಮೋಟರ್ ಸೈಕಲ್‌ಗಳನ್ನು ಅಭಿವೃದ್ಧಿಗೊಳಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಸದ್ಯ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಹೊಸ ಬೈಕ್‌ಗಳನ್ನು ಮುಂಬರುವ ಜುಲೈ ಅಂತ್ಯಕ್ಕೆ ಇಲ್ಲವೇ ಆಗಸ್ಟ್ ಮೊದಲ ವಾರದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಮೊದಲ ಬಾರಿಗೆ ವಿನೂತನ ಸೌಲಭ್ಯವುಳ್ಳ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳನ್ನು ಬಿಡುಗಡೆ ಮಾಡುತ್ತಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ರೆಡ್ ಆ್ಯಂಡ್ ವೈಟ್ ಡ್ಯುಯಲ್ ಟೋನ್ ಹಾಗೂ ಸ್ಪೋರ್ಟಿ ಬ್ಲ್ಯಾಕ್ ಬಣ್ಣಗಳಲ್ಲಿ ಹೊಸ ಬೈಕ್‌ಗಳನ್ನು ಪರಿಚಯಿಸುತ್ತಿದೆ. ಇದಲ್ಲದೇ 2017ರ ರೈಡರ್ ಮೆನಿಯಾ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದ್ದ ಈ ಮೋಟಾರ್ ಸೈಕಲ್‌‌ಗಳು ಕ್ರೋಮ್ ಬಣ್ಣದ ಯೋಜನೆಗಳನ್ನು ಹೊಂದಿದ್ದು, ರೆಟ್ರೊ ಕ್ಲಾಸಿಕ್ ಯುಗದ ಬೈಕುಗಳನ್ನು ನೆನಪಿಸುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ರಾಯಲ್ ಎನ್‌ಫೀಲ್ಡ್ ಅನಾವರಣಗೊಳಿಸಲಿರುವ ಹೊಸ ಬೈಕ್‌ಗಳು 647 ಸಿಸಿ ಪ್ಯಾರಲಲ್ ಏರ್/ ಆಯಿಲ್ ಎಂಜಿನ್ ಆಯ್ಕೆ ಪಡೆಯಲಿವೆ. ಸ್ಟ್ಯಾಂಡರ್ಡ್ ಸ್ಲಿಪ್ಪರ್ ಕ್ಲಚ್‌ನೊಂದಿಗೆ 47 ಬಿಎಚ್‌ಪಿ ಮತ್ತು 52 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು 6-ಸ್ಪೀಡ್ ಗೇರ್‌ಬಾಕ್ಸ್ ಸಂಯೋಜಿತವಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಈ ಮಧ್ಯೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳು ಡೀಲರ್ಸ್ ಯಾರ್ಡ್‌ಗಳಲ್ಲಿ ಕಾಣಿಸಿಕೊಂಡಿದ್ದು, ಹೊಸ ಬೈಕ್‌ಗಳನ್ನು ಡ್ಯುಯಲ್ ಟೋನ್ ಬಣ್ಣದೊಂದಿಗೆ ಪ್ರಿಮಿಯಂ ಟಚ್ ನೀಡಲಾಗಿದೆ. ಹೀಗಾಗಿ ಇದೇ ಮಾದರಿಗಳು ಭಾರತದಲ್ಲೂ ಕೂಡಾ ಬಿಡುಗಡೆಯಾಗಲಿವೆ ಎನ್ನಲಾಗುತ್ತಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಬೆಲೆ (ಎಕ್ಸ್‌ಶೋರಂ ಪ್ರಕಾರ)

ಬಿಡುಗಡೆಗೂ ಮುನ್ನವೇ ಭಾರೀ ನೀರಿಕ್ಷೆ ಹುಟ್ಟುಹಾಕಿರುವ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳು ಎಕ್ಸ್‌ಶೋರಂ ಪ್ರಕಾರ ರೂ.3 ಲಕ್ಷದಿಂದ ರೂ.3.25 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಹೀರೋ ಎಕ್ಸ್‌ಪಲ್ಸ್ 200

ದೇಶಿಯ ಮಾರುಕಟ್ಟೆಯ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಹೀರೋ ಮೊಟೊಕಾರ್ಪ್ ತನ್ನ ಮೊದಲ ಅಡ್ವೆಂಚರ್ ಬೈಕ್ ಮಾದರಿ ಎಕ್ಸ್ ಪಲ್ಸ್ 200 ಅನಾವರಣಗೊಳಿಸಿದ್ದು, ಥ್ರಿಲ್ಲಿಂಗ್ ರೈಡ್‌ಗೆ ಇದು ಹೇಳಿ ಮಾಡಿಸಿದ ಬೈಕ್ ಆವೃತ್ತಿಯಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಹೀರೋ ಎಕ್ಸ್‌ಪಲ್ಸ್ ಫುಲ್ 200 ಎಲ್ಇಡಿ ಹೆಡ್ ಲೈಟ್, ಲಗೆಜ್ ರಾಕ್, ಧೀರ್ಘ ಕಾಲದ ಸವಾರಿಗೆ ಅನೂಕಲವಾಗುವಂತಹ ನಾಕಲ್ ಗಾರ್ಡ್ಸ್ ಹೊಂದಿದ್ದು, ವಿಂಡ್ ಶೀಲ್ಡ್ ಅನ್ನು ಬಳಸಲಾಗಿದೆ. ಜೊತೆಗೆ ಎಕ್ಸ್‌ಪಲ್ಸ್ 200 ಸೆಗ್ಮೆಂಟ್ ನಲ್ಲಿ ಮೊದಲ ಬಾರಿಗೆ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸಿಸ್ಟಮ್ ಪಡೆದ ಮೊದಲ ಬೈಕ್ ಇದಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಎಕ್ಸ್ ಪಲ್ಸ್ 200 ಎಂಜಿನ್ ಸಾಮರ್ಥ್ಯ

ಹೊಸ ಬೈಕಿನಲ್ಲಿ 200-ಸಿಸಿ ಏರ್ ಕೂಲ್ಡ್, ಫ್ಯುಯಲ್ ಇಂಜೆಕ್ಟೆಡ್ ಎಂಜಿನ್ ಒದಗಿಸಲಾಗಿದ್ದು, 5-ಸ್ಪೀಡ್ ಗೇರ್ ಬಾಕ್ಸ್ ಸೇರಿಸಲಾಗಿದೆ. ಇದು 18.1-ಬಿಹೆಚ್ ಪಿ ಮತ್ತು 17.2-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಒಟ್ಟಾರೆ ಈ ಬೈಕಿನ ಡಿಸೈನ್ ಸರಳವಾಗಿದ್ದು, ಧೀರ್ಘ ಪ್ರಮಾಣದ ಸಸ್ಪೆಷನ್ ಸೆಟಪ್ ಅನ್ನು ಪಡೆದಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

2018 ಕೊನೆಯಲ್ಲಿ ಅಥವಾ 2019ರ ಆರಂಭದಲ್ಲಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದ್ದು, ಬೈಕಿನ ಬೆಲೆಯನ್ನು 1.20 ಲಕ್ಷದಿಂದ 1.30 ಲಕ್ಷದ ವರೆಗೆ ನಿಗದಿ ಮಾಡಲಿದ್ದಾರೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್

2018ರ ದೆಹಲಿ ಆಟೋ ಮೇಳದಲ್ಲಿ 310 ಆರ್ ಸ್ಟ್ರೀಟ್ ಫೈಟರ್ ಮತ್ತು ಜಿ 310 ಜಿಎಸ್ ಬೈಕಿನ ಉತ್ಪಾದನಾ ಮಾದರಿಗಳನ್ನು ಅನಾವರಣಗೊಳಿಸಿದ್ದ ಬಿಎಂಡಬ್ಲ್ಯು ಮೊಟೊರಾಡ್ ಸಂಸ್ಥೆಯು ದೇಶದ ಜನಪ್ರಿಯ ಟಿವಿಎಸ್ ಮೋಟಾರ್ಸ್ ಜೊತೆಗೂಡಿ ತನ್ನ ಹೊಸ ಬೈಕ್‌ಗಳನ್ನು ಉತ್ಪಾದನೆ ಮಾಡುತ್ತಿದೆ. ಹೀಗಾಗಿ ಸ್ಥಳೀಯ ಉತ್ಪನ್ನಗಳ ಬಳಕೆ ಮಾಡುವ ಮೂಲಕ ಉತ್ಪಾದನಾ ವೆಚ್ಚವನ್ನು ಪರಿಣಾಮಕಾರಿಯಾಗಿ ತಗ್ಗಿಸಲಾಗಿದ್ದು, ಬೈಕಿನ ಬೆಲೆ ವಿಚಾರದಲ್ಲೂ ಬಿಎಂಡಬ್ಲ್ಯು ಸಂಸ್ಥೆಯು ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಚೆನ್ನೈನ ಹೊಸೂರುನಲ್ಲಿರುವ ಟಿವಿಎಸ್ ಮೋಟಾರು ಘಟಕದಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್‌ಗಳು ನಿರ್ಮಾಣವಾಗುತ್ತಿದ್ದು, ದೇಶಿಯ ಮಾರುಕಟ್ಟೆಗೆ ಅಷ್ಟೇ ಅಲ್ಲದೇ ಇಲ್ಲಿಂದಲೇ ವಿದೇಶಿ ಮಾರುಕಟ್ಟೆಗೂ ಬೃಹತ್ ಪ್ರಮಾಣ ಬೈಕ್ ಮಾದರಿಗಳನ್ನು ರಫ್ತುಗೊಳಿಸುವ ಯೋಜನೆ ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಮಾಹಿತಿಗಳ ಪ್ರಕಾರ ಬಿಎಂಡಬ್ಲ್ಯು ಸಂಸ್ಥೆಯು ಹೊಸ ಬೈಕ್‌ಗಳನ್ನು ಇದೇ ಅಂತ್ಯಕ್ಕೆ ಇಲ್ಲವೇ ಜುಲೈ ಮೊದಲ ವಾರದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದ್ದು, ಭಾರತೀಯ ಮಾರುಕಟ್ಟೆ ಹೊಸ ಬೈಕ್ ಉತ್ಪನ್ನಗಳು ಭಾರೀ ಸದ್ದು ಮಾಡುವ ನೀರಿಕ್ಷೆಯಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಬಿಎಂಡಬ್ಲ್ಯು ಶಕ್ತಿಶಾಲಿ ಆರ್ 1200 ಜಿಎಸ್ ಬೈಕ್ ನಿಂದ ಪ್ರೇರಣೆ ಪಡೆದುಕೊಂಡಿರುವ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗಳು ಆಫ್ ರೋಡ್ ಸ್ನೇಹಿ ಚಕ್ರಗಳನ್ನು ಪಡೆದುಕೊಂಡಿದೆ. ಜೊತೆಗೆ ನೂತನ ಬೈಕ್‌ಗಳು ಬೆಲೆಯನ್ನು ಎರಡೂವರಿ ಲಕ್ಷದಿಂದ ಮೂರು ಲಕ್ಷದೊಳಗೆ ಬಿಡುಗಡೆಯಾಗುವುದಾಗಿ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಇನ್ನು ಜಿ 310 ಜಿಎಸ್ ಬೈಕ್ ಮಾದರಿಯೂ ಅಡ್ವೆಂಚರ್ ವಿಭಾಗದಲ್ಲಿ ಅಭಿವೃದ್ದಿಗೊಂಡಿದ್ದು, 313 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಎಂಜಿನ್ ಪಡೆದುಕೊಂಡಿದೆ. ಈ ಮೂಲಕ 34 ಬಿಎಚ್‌ಪಿ ಮತ್ತು 28 ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿ ಹೊಂದಿದ್ದು, ಇದರ ಜೊತೆಗೆ ಅತ್ಯುತ್ತಮ ಹೊರ ವಿನ್ಯಾಸಗಳನ್ನು ತನ್ನದಾಗಿಸಿಕೊಂಡಿದೆ.

Most Read Articles

Kannada
Read more on top 5 bikes
English summary
5 most AWAITED motorcycle launches of 2018; Hero XPulse to Royal Enfield Interceptor.
Story first published: Tuesday, June 5, 2018, 13:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X