ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

By Praveen Sannamani

ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಎಂಜಿನ್ ಪ್ರೇರಿತ ವಾಹನಗಳಿಗಾಗಿ ಬೇಡಿಕೆ ಹೆಚ್ಚುತ್ತಿದ್ದು, ಬೆಂಗಳೂರು ಮೂಲದ ಪ್ರತಿಷ್ಠಿತ ಅಥೆರ್ ಎನರ್ಜಿ ಸಂಸ್ಥೆಯು ತನ್ನ ಮೊದಲ ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‍ ಮಾದರಿಗಳಾದ 340 ಮತ್ತು 450 ಎನ್ನುವ ಎರಡು ವಿಭಿನ್ನ ಸ್ಕೂಟರ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಕಳೆದ ಎರಡು ವರ್ಷಗಳಿಂದ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡು ಬಂದಿದ್ದ ಅಥೆರ್ ಎನರ್ಜಿ ಸಂಸ್ಥೆಯು ಕೊನೆಗೂ ತನ್ನ ಉತ್ಪನ್ನಗಳನ್ನು ಪ್ರಸ್ತುತ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ಅಭಿವೃದ್ಧಿಗೊಳಿಸಿ ಬಿಡುಗಡೆ ಮಾಡಿದ್ದು, 340 ಸ್ಕೂಟರ್ ಬೆಲೆಯನ್ನು ಆನ್ ರೋಡ್ ಪ್ರಕಾರ ರೂ.1.09 ಲಕ್ಷಕ್ಕೆ ಮತ್ತು 450 ಸ್ಕೂಟರಿನ ಬೆಲೆಯನ್ನು ಆನ್ ರೋಡ್ ಪ್ರಕಾರ ರೂ.1.24 ಲಕ್ಷಕ್ಕೆ ನಿಗದಿ ಮಾಡಿದೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಅಥೆರ್ ಎನರ್ಜಿ ಸಂಸ್ಥೆಯು ಬಿಡುಗಡೆ ಮಾಡಿರುವ 340 ಮತ್ತು 450 ಎಲೆಕ್ಟ್ರಿಕ್ ಸ್ಕೂಟರ್ ನೋಡಲು ಒಂದೇ ರೀತಿಯಲ್ಲಿದ್ದರೂ ತಾಂತ್ರಿಕ ವಿಚಾರವಾಗಿ ವಿಭಿನ್ನತೆ ಹೊಂದಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಬ್ರೂಸ್‌ಲೆಸ್ ಡಿಸಿ ಮೋಟಾರ್(ಬಿಎಲ್‌ಡಿಸಿ) ಬಳಕೆ ಮಾಡಿದೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಹೊಸ ಸ್ಕೂಟರ್‌ಗಳಲ್ಲಿ ಜೋಡಿಸಲಾಗಿರುವ ಬ್ಯಾಟರಿ ಮ್ಯಾನೆಜ್‌ಮೆಂಟ್ ಸಿಸ್ಟಂ ಮೇಲೆ ಬರೋಬ್ಬರಿ 3 ವರ್ಷಗಳ ವಾರಂಟಿ ಸಹ ನೀಡಲಾಗಿದ್ದು, ಎಂಜಿನ್ ಪರ್ಫಾಮೆನ್ಸ್ ವಿಚಾರ ಬಂದಲ್ಲಿ 180 ಸಿಸಿ ಬೈಕ್ ಮಾದರಿಯಲ್ಲೇ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು ಸಹ ರೈಡಿಂಗ್ ಅನುಭವ ನೀಡಲಿವೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಸ್ಕೂಟರ್ ಪರ್ಫಾಮೆನ್ಸ್

ಅಥೆರ್ 340 ಎಲೆಕ್ಟ್ರಿಕ್ ಸ್ಕೂಟರ್‌ಗಳು 20ಎನ್ಎಂ ಟಾರ್ಕ್ ಉತ್ಪಾದಿಸಿದಲ್ಲಿ, 450 ಸ್ಕೂಟರ್ ಮಾದರಿಗಳು 20.5-ಎನ್ಎಂ ಟಾರ್ಕ್ ಉತ್ಪಾದಿಸುತ್ತವೆ. ಜೊತೆಗೆ ಗಂಟೆಗೆ 70 ಕಿ.ಮೀ ಟಾಪ್ ಸ್ಪೀಡ್ ಹೊಂದಿರುವ 340 ಸ್ಕೂಟರ್‌ಗಳು ಕೇವಲ 5.1 ಸೇಕೆಂಡುಗಳಲ್ಲಿ 40 ಕಿ.ಮಿ ವೇಗ ಪಡೆದುಕೊಂಡರೇ, 450 ಸ್ಕೂಟರ್‌ಗಳು 3.9 ಸೇಕೆಂಡುಗಳಲ್ಲಿ 40 ಕಿ.ಮಿ ವೇಗದಲ್ಲಿ ಚಲಿಸಬಲ್ಲವು.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಬ್ಯಾಟರಿ ಸಾಮರ್ಥ್ಯ

ಒಂದು ಬಾರಿ ಪೂರ್ಣಪ್ರಮಾಣ ಬ್ಯಾಟರಿ ಚಾರ್ಜ್ ಮಾಡಿದಲ್ಲಿ 340 ಸ್ಕೂಟರ್‌ಗಳು 60 ಕಿ.ಮೀ ಮೈಲೇಜ್ ನೀಡಿದಲ್ಲಿ, 450 ಸ್ಕೂಟರ್ ಮಾದರಿಯು ಪ್ರತಿ ಚಾರ್ಜ್‌ಗೆ 75 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲವು.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಇನ್ನೊಂದು ಪ್ರಮುಖ ವಿಚಾರ ಅಂದ್ರೆ, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಈ ಎಲೆಕ್ಟ್ರಿಕ್ ಸ್ಕೂಟರ್‌ಗಳಲ್ಲಿ ಇನ್‌ಬಿಲ್ಟ್ ರಿವರ್ಸ್ ಅಸಿಸ್ಟ್ ಫಿಚರ್ಸ್ ನೀಡಲಾಗಿದ್ದು, ಹಿಮ್ಮುಖವಾಗಿ ಪ್ರತಿ ಗಂಟೆಗೆ 5 ಕಿ.ಮಿ ವೇಗದಲ್ಲಿ ಚಲಿಸುವ ಗುಣವಿಶೇಷತೆ ಹೊಂದಿದೆ. ಇದು ಪಾರ್ಕಿಂಗ್ ಸ್ಲಾಟ್‌ಗಳಲ್ಲಿ ಸ್ಕೂಟರ್‌ಗಳನ್ನು ಹೊರತೆಗೆಯಲು ಹೆಚ್ಚು ಅನುಕೂಲಕರವಾಗಲಿದೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಬೈಕಿನ ಹೊರ ವೈಶಿಷ್ಟ್ಯತೆಗಳು

ಅಥೆರ್ 340 ಮತ್ತು 450 ಸ್ಕೂಟರ್‌ಗಳಲ್ಲಿ 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿದ್ದು, ನ್ಯಾವಿಗೆಷನ್, ಸ್ಮಾರ್ಟ್ ಫೋನ್ ಮೂಲಕ ನಿಯಂತ್ರಣ ಮಾಡಬಹುದಾದ ಪಾರ್ಕಿಂಗ್ ಅಸಿಸ್ಟ್, ಚಾರ್ಜಿಂಗ್ ಪಾಯಿಂಟ್ ಟ್ರ್ಯಾಕರ್ ಸೌಲಭ್ಯ ಸಹ ಇದರಲ್ಲಿದೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಈ ಹೊಸ ಸ್ಕೂಟರ್‌ಗಳನ್ನು ಖರೀದಿಸುವ ಗ್ರಾಹಕರಿಗೆ ಕೆಲವು ವಿಶೇಷ ಸೌಲಭ್ಯಗಳು ಸಹ ದೊರೆಯಿದ್ದು, ಮನೆ ಅಂಗಳದಲ್ಲಿ ಉಚಿತವಾಗಿ ಚಾರ್ಜಿಂಗ್ ಪಾಯಿಂಟ್ ಮತ್ತು ಸ್ಮಾರ್ಟ್ ಕನೆಕ್ಟಿವಿಟಿ ಮೂಲಕವೇ ಸ್ಕೂಟರಿನಲ್ಲಿ ಕಂಡುಬರುವ ತಾಂತ್ರಿಕ ಸಮಸ್ಯೆಗಳನ್ನು ತಿಳಿದುಕೊಂಡು ಸಮಸ್ಯೆ ಬಗೆಹರಿಸಲಾಗುತ್ತದೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಇದಲ್ಲದೇ ಅಥೆರ್ 340 ಮತ್ತು 450 ಖರೀದಿ ಮಾಡುವ ಗ್ರಾಹಕರಿಗೆ ಅನುಕೂಲಕರವಾಗುವಂತೆ ಬೆಂಗಳೂರಿನ 30 ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲಾಗಿದ್ದು, ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಒಂದು ಗಂಟೆ ಕಾಲ ಚಾರ್ಜಿಂಗ್ ಮಾಡಿದಲ್ಲಿ ಕನಿಷ್ಠ 50 ಕಿ.ಮೀ ಮೈಲೇಜ್ ದೊರೆಯಲಿದೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಇನ್ನು ಅಥೆರ್ ಎನರ್ಜಿ ಸಂಸ್ಥೆಯು ಸಂಸ್ಥೆಯು ಬಿಡುಗಡೆ ಮಾಡಿರುವ ಹೊಸ ಸ್ಕೂಟರ್‌ಗಳು ಸದ್ಯ ಬೆಂಗಳೂರಿನಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಮುಂದಿನ ಎರಡು ತಿಂಗಳ ಅವಧಿಯಲ್ಲಿ ದೇಶದ ಪ್ರಮುಖ ನಗರಗಳಲ್ಲಿಯೂ ಸಹ ಹೊಸ ಬೈಕ್‌ಗಳು ಖರೀದಿಗೆ ಲಭ್ಯವಿರಲಿವೆ ಎಂದು ಅಥೆರ್ ಎನರ್ಜಿ ಸಂಸ್ಥೆ ಮಾಹಿತಿ ನೀಡಿದೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಪರಿಸರಕ್ಕೆ ಪೂರಕವಾಗಿ ಇವಿ ವಾಹನಗಳಿಗೆ ಉತ್ತಮ ಮಾರುಕಟ್ಟೆಯಿದ್ದು, ಈ ಹಿನ್ನೆಲೆ ಅಥೆರ್ ಎನರ್ಜಿ ಸಂಸ್ಥೆ ಬಿಡುಗಡೆ ಮಾಡಿರುವ ಈ ಹೊಸ ಸ್ಕೂಟರ್‌ಗಳು ಅತ್ಯುತ್ತಮ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿವೆ. ಹೀಗಾಗಿ ಗ್ರಾಹಕರ ಸ್ನೇಹಿಯಾಗಿರುವ ಅಥೆರ್ 340 ಮತ್ತು 450 ಎಲೆಕ್ಟ್ರಿಕ್ ಸ್ಕೂಟರ್‌ಗಳು ಖರೀದಿಗೆ ಉತ್ತಮವಾಗಿದ್ದು, ಸ್ಕೂಟರ್ ಖರೀದಿಸುವ ಗ್ರಾಹಕರಿಗೆ ಹೆಚ್ಚಿನ ಸೌಲಭ್ಯ ಒದಗಿಸುತ್ತಿರುವ ಅಥೆರ್ ಎನರ್ಜಿ ಸಂಸ್ಥೆಯ ಹೊಸ ಟ್ರೆಂಡ್ ಸೃಷ್ಠಿಸುವ ತವಕದಲ್ಲಿದೆ.

ಬಹುನೀರಿಕ್ಷಿತ ಅಥೆರ್ 340 ಮತ್ತು 450 ಸ್ಮಾರ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಿಡುಗಡೆ

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಅಪ್ರಾಪ್ತರ ಕೈಗೆ ಬೈಕ್ ಕೊಟ್ಟಿದ್ದಕ್ಕೆ ಜೈಲು ಪಾಲಾದ 26 ಪೋಷಕರು

ಮುಂದಿನ ಆರು ತಿಂಗಳ ಅವಧಿಯಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಬೆಸ್ಟ್ ಬೈಕ್‌ಗಳಿವು....

ಹೋಂಡಾ ಬಹುನೀರಿಕ್ಷಿತ ಆಕ್ಟಿವಾ 5ಜಿ ಸ್ಕೂಟರ್ ಭರ್ಜರಿ ಬಿಡುಗಡೆ

ಇನೋವಾ ಕ್ರಿಸ್ಟಾ ಹಿಂದಿಕ್ಕಲು ಬರಲಿದೆ 11 ಸೀಟರ್ ಕಿಯಾ ಗ್ರ್ಯಾಂಡ್ ಕಾರ್ನಿವಾಲ್

ಹೆಲ್ಮೆಟ್ ಹಾಕದ ಬೈಕ್ ಸವಾರನ ಮೇಲೆ ಶೂ ಎಸೆದ ಟ್ರಾಫಿಕ್ ಪೊಲೀಸ್....

Most Read Articles

Kannada
English summary
Ather 340 & 450 Electric Scooters Launched In India; Prices Start At Rs 1.09 Lakh.
Story first published: Tuesday, June 5, 2018, 15:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X