ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

By Praveen Sannamani

ಸಂಚಾರಿ ನಿಯಮಗಳನ್ನ ಉಲ್ಲಂಘಿಸುವವರ ವಿರುದ್ಧ ಬೆಂಗಳೂರು ಟ್ರಾಫಿಕ್ ಪೊಲೀಸರು ಈಗಾಗಲೇ ಸಾವಿರಾರು ಪ್ರಕರಣ ದಾಖಲಿಸಿ ಕಠಿಣಕ್ರಮ ಕೈಗೊಳ್ಳುತ್ತಿದ್ದರೂ ಕಾನೂನು ಬಾಹಿರವಾಗಿ ಮಾಡಿಫೈ ಮಾಡುವವರ ಸಂಖ್ಯೆ ಮಾತ್ರ ಕಡಿಮೆ ಆಗುತ್ತಿಲ್ಲ. ಹೀಗಾಗಿ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿ ಬೈಕ್ ಎಕ್ಸಾಸ್ಟ್ ಮಾಡಿಫೈ ಮಾಡಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ಟ್ರಾಫಿಕ್ ಪೊಲೀಸರು ಮಾಡಿಫೈ ಪ್ರಿಯರಿಗೆ ಶಾಕ್ ನೀಡುತ್ತಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ಇತ್ತೀಚೆಗೆ ನಗರ ಪ್ರದೇಶಗಳಲ್ಲಿನ ಯುವ ಬೈಕ್ ಸವಾರರು ಬೈಕ್ ಮಾಡಿಫೈ ಮೇಲೆ ಹೆಚ್ಚಿನ ವ್ಯಾಮೋಹ ಹೊಂದುತ್ತಿದ್ದು, ಇದು ಸಾರ್ವಜನಿಕ ಜೀವನಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಇದರಿಂದಾಗಿ ಕಾನೂನು ಬಾಹಿರ ಬೈಕ್ ಮಾಡಿಫೈಗಳ ಮೇಲೆ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿರುವುದು ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ನಿಮಗೆಲ್ಲಾ ಗೊತ್ತಿರುವ ಹಾಗೆ ಈ ಹಿಂದೆ ಹಳ್ಳಿಗಳ ಕಡೆಗೆಲ್ಲಾ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಬಂದ್ರೆ ಸಾಕು 1 ಕಿ.ಮಿ ದೂರವಿರುವಾಗಲೇ ಬೈಕ್ ಬರುತ್ತಿದೆ ಎಂಬುದು ಗೊತ್ತಾಗುತ್ತಿತ್ತು. ಆದ್ರೆ ಕಾಲ ಬದಲಾದಂತೆ ಬೈಕ್‌ಗಳ ಶಬ್ದ ಮಾಲಿನ್ಯಕ್ಕೆ ಬ್ರೇಕ್ ಹಾಕಲಾಗುತ್ತಿದ್ದು, ಎಕ್ಸಾಸ್ಟ್ ವೈಶಿಷ್ಟ್ಯತೆಗಳಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ಆದ್ರೆ ನಗರ ಪ್ರದೇಶಗಳಲ್ಲಿನ ಯುವ ಬೈಕ್ ಸವಾರರು ಬೈಕ್ ಮಾಡಿಫೈಗೆ ಹೆಚ್ಚಿನ ಆಸಕ್ತಿ ತೊರುತ್ತಿದ್ದು, ಸಾವಿರಾರು ರೂಪಾಯಿ ಖರ್ಚು ಮಾಡಿ ಬೈಕ್ ಮೂಲವನ್ನೆ ಬದಲಿಸುವುದು ಸಾಕಷ್ಟು ಟ್ರೆಂಡ್ ಆಗುತ್ತಿದೆ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ಇದರಿಂದ ಬೈಕ್ ಸವಾರನಿಗೆ ಹೆಚ್ಚಿನ ಅನುಕೂಲಕತೆಗಳಿದ್ದರು ಅದು ಸಾರ್ವಜನಿಕ ಜೀವನದಲ್ಲಿ ಹೆಚ್ಚೆಚ್ಚು ಸಮಸ್ಯೆಗಳನ್ನು ಉದ್ಭವವಾಗುವಂತೆ ಮಾಡುತ್ತಿದೆ. ಜೊತೆಗೆ ಬೈಕ್‌ಗಳ ಎಕ್ಸಾಸ್ಟ್ ಬದಲಾವಣೆಯಿಂದಾಗಿ ಹೆಚ್ಚಿನ ಶಬ್ದ ಮಾಲಿನ್ಯಕ್ಕೆ ಎಡೆಮಾಡುಕೊಡುತ್ತಿದೆ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ಹೀಗಾಗಿ ಸಾರ್ವಜನಿಕರು ಮಾಡಿಫೈ ಬೈಕ್ ಸವಾರರ ಜೊತೆ ಹಲವು ಸಂದರ್ಭಗಳಲ್ಲಿ ವಾಗ್ವಾದಕ್ಕೆ ಕಾರಣವಾಗುತ್ತಿದ್ದು, ಮಾಡಿಫೈ ಬೈಕ್ ಸವಾರರ ವಿರುದ್ಧ ಪ್ರಕರಣಗಳನ್ನು ಕೂಡಾ ದಾಖಲಿಸುತ್ತಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಮಾಡಿಫೈ ಬೈಕ್ ಸವಾರರಿಂದ ಆಗುತ್ತಿರುವ ಕಿರಿಕಿರಿ ಅಷ್ಟಿಲ್ಲ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ಸಾರ್ವಜನಿಕರು ನೀಡಿರುವ ದೂರಗಳ ಅನ್ವಯ ವಿಶೇಷ ಕಾರ್ಯಾಚರಣೆಗೆ ಇಳಿದಿರುವ ಬೆಂಗಳೂರು ಟ್ರಾಫಿಕ್ ಪೊಲೀಸರು ರಾಯಲ್ ಎನ್‌ಫೀಲ್ಡ್ ಸವಾರರಿಗೆ ಶಾಕ್ ನೀಡುತ್ತಿದ್ದಾರೆ. ಎಕ್ಸಾಸ್ಟ್ ಬದಲಿಸಿರುವ ಬೈಕ್‌ಗಳ ಸೈಲೆನ್ಸರ್‌ಗಳನ್ನು ಸ್ಪಾಟ್‌ನಲ್ಲೇ ಕಿತ್ತು ಹಾಕುತ್ತಿರುವ ಪೊಲೀಸರು ಭಾರೀ ಮೊತ್ತದ ದಂಡವನ್ನು ಕೂಡಾ ವಿಧಿಸುತ್ತಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ಜೊತೆಗೆ ಪ್ರಮುಖ ರಸ್ತೆಗಳಲ್ಲಿ ತಪಾಸಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಪೊಲೀಸರು ಸ್ಥಳದಲ್ಲೇ ಮಾಡಿಫೈ ಬೈಕ್‌ನ ಎಕ್ಸಾಸ್ಟ್‌ಗಳನ್ನ ಕಿತ್ತುಹಾಕುವುದಲ್ಲದೇ ಬೈಕ್ ಸೀಸ್ ಮಾಡುತ್ತಿದ್ದು, ಈಗಾಗಲೇ ಇಂತದ್ದೆ ನೂರಾರು ಪ್ರಕರಣಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ಈ ಮೂಲಕ ಎಕ್ಸಾಸ್ಟ್ ಬದಲಿಸಿರುವ ರಾಯಲ್ ಎನ್‌ಫೀಲ್ಡ್ ಮತ್ತು ಇತರೆ ಮಾಡಿಫೈ ಬೈಕ್ ಸವಾರರಿಂದ ಸಾವಿರಾರು ರೂಪಾಯಿ ದಂಡ ವಸೂಲಿ ಕೂಡಾ ಮಾಡಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ವಿಶೇಷ ಕಾರ್ಯಾಚರಣೆ ನಡೆಸಲು ಟ್ರಾಫಿಕ್ ಪೊಲೀಸರು ಸಜ್ಜುಗೊಂಡಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ಒಂದು ವೇಳೆ ನೀವು ಕೂಡಾ ರಾಯಲ್ ಬೈಕ್ ಅಥವಾ ಇತರೆ ಸೂಪರ್ ಬೈಕ್‌ಗಳನ್ನು ಹೊಂದಿದ್ದರೆ ಕಾನೂನು ಬಾಹಿರ ಬೈಕ್ ಮಾಡಿಫೈ ಮಾಡಿಸುವ ಮತ್ತೊಮ್ಮೆ ಯೋಚಿಸಿ. ಇಲ್ಲವಾದ್ರೆ ಭಾರೀ ಪ್ರಮಾಣದ ದಂಡ ಬೀಳುವುದಲ್ಲದೇ ಬೈಕ್ ಕೂಡಾ ಸೀಸ್ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ.

ಬೆಂಗಳೂರು ಟ್ರಾಫಿಕ್ ಪೊಲೀಸರ ಭರ್ಜರಿ ಕಾರ್ಯಚರಣೆ- ಬೆಚ್ಚಿದ ಆರ್‌ಇ ಮಾಡಿಫೈ ಪ್ರಿಯರು..!

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಅಪ್ರಾಪ್ತರ ಕೈಗೆ ಬೈಕ್ ಕೊಟ್ಟಿದ್ದಕ್ಕೆ ಜೈಲು ಪಾಲಾದ 26 ಪೋಷಕರು

ರಾಯಲ್ ಎನ್‌ಫೀಲ್ಡ್ ಖರೀದಿ ಮಾಡೋದಕ್ಕೆ ಗ್ರಾಹಕರು ಯಾಕೆ ಹಿಂದೇಟು ಹಾಕ್ತಾರೆ ಗೊತ್ತಾ?

ಕೋಟಿ ಕೋಟಿ ಮೌಲ್ಯದ ಐಷಾರಾಮಿ ಕಾರುಗಳು ಕ್ಷಣಮಾತ್ರದಲ್ಲೇ ಪುಡಿ ಪುಡಿ.!

ಡೀಸೆಲ್ ಕಾರು ಖರೀದಿಯ ಅನುಕೂಲತೆ ಮತ್ತು ಅನಾನುಕೂಲತೆ ಏನು?

ಆಕಾಶ್ ಅಂಬಾನಿಗೆ ಗರ್ಲ್ ಫ್ರೆಂಡ್ ಕೊಡಿಸಿದ ಐಷಾರಾಮಿ ಕಾರಿನ ಬೆಲೆ ಎಷ್ಟು ಗೊತ್ತಾ?

More from DriveSpark

Article Published On: Saturday, August 11, 2018, 13:42 [IST]
English summary
Bangalore Traffic Police SEIZE & destroy aftermarket Royal Enfield silencers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+