ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‍‍ಗಳ ಬುಕ್ಕಿಂಗ್ ಶುರು..

ಬಿಎಂಡಬ್ಲ್ಯು ಮೊಟೊರಾಡ್ ತನ್ನ ಹೊಚ್ಚ ಹೊಸ ಅಡ್ವೆಂಚರ್ ಮಾದರಿಗಳಾದ ಜಿ 310 ಆರ್ ಸ್ಟ್ರೀಟ್ ಫೈಟರ್ ಮತ್ತು ಜಿ 310 ಜಿಎಸ್ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸುತ್ತಿದೆ.

By Rahul Ts

ಬಿಎಂಡಬ್ಲ್ಯು ಮೊಟೊರಾಡ್ ತನ್ನ ಹೊಚ್ಚ ಹೊಸ ಅಡ್ವೆಂಚರ್ ಮಾದರಿಗಳಾದ ಜಿ 310 ಆರ್ ಸ್ಟ್ರೀಟ್ ಫೈಟರ್ ಮತ್ತು ಜಿ 310 ಜಿಎಸ್ ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸುತ್ತಿದ್ದು, ಇದೀಗ ಗ್ರಾಹಕರು ತಮ್ಮ ಹತ್ತಿರದ ಡೀಲರ್‍‍ಗಳ ಬಳಿ ಬುಕ್ಕಿಂಗ್ ಮಾಡಬಹುದಾಗಿದೆ.

ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‍‍ಗಳ ಬುಕ್ಕಿಂಗ್ ಶುರು..

ಫೆಬ್ರುವರಿಯಲ್ಲಿ ನಡೆದ 2018ರ ದೆಹಲಿ ಆಟೋ ಮೇಳದಲ್ಲಿ ಜಿ 310 ಆರ್ ಸ್ಟ್ರೀಟ್ ಫೈಟರ್ ಮತ್ತು ಜಿ 310 ಜಿಎಸ್ ಬೈಕಿನ ಉತ್ಪಾದನಾ ಮಾದರಿಗಳನ್ನು ಅನಾವರಣಗೊಳಿಸಿದ್ದ ಬಿಎಂಡಬ್ಲ್ಯು ಮೊಟೊರಾಡ್ ಸಂಸ್ಥೆಯು ದೇಶದ ಜನಪ್ರಿಯ ಟಿವಿಎಸ್ ಮೋಟಾರ್ಸ್ ಜೊತೆಗೂಡಿ ತನ್ನ ಹೊಸ ಬೈಕ್‌ಗಳನ್ನು ಉತ್ಪಾದನೆ ಮಾಡುತ್ತಿದೆ. ಹೀಗಾಗಿ ಸ್ಥಳೀಯ ಉತ್ಪನ್ನಗಳ ಬಳಕೆ ಮಾಡುವ ಮೂಲಕ ಉತ್ಪಾದನಾ ವೆಚ್ಚವನ್ನು ಪರಿಣಾಮಕಾರಿಯಾಗಿ ತಗ್ಗಿಸಲಾಗಿದ್ದು, ಬೈಕಿನ ಬೆಲೆ ವಿಚಾರದಲ್ಲೂ ಬಿಎಂಡಬ್ಲ್ಯು ಸಂಸ್ಥೆಯು ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದೆ.

ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‍‍ಗಳ ಬುಕ್ಕಿಂಗ್ ಶುರು..

ಮಾಹಿತಿಗಳ ಪ್ರಕಾರ ಬಿಎಂಡಬ್ಲ್ಯು ಸಂಸ್ಥೆಯು ಹೊಸ ಬೈಕ್‌ಗಳನ್ನು ಇದೇ ತಿಂಗಳ ಅಂತ್ಯಕ್ಕೆ ಇಲ್ಲವೇ ಜುಲೈ ಮೊದಲ ವಾರದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದ್ದು, ಭಾರತೀಯ ಮಾರುಕಟ್ಟೆ ಹೊಸ ಬೈಕ್ ಉತ್ಪನ್ನಗಳು ಭಾರೀ ಸದ್ದು ಮಾಡುವ ನೀರಿಕ್ಷೆಯಿದೆ.

ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‍‍ಗಳ ಬುಕ್ಕಿಂಗ್ ಶುರು..

ಇದಲ್ಲದೇ ಚೆನ್ನೈನ ಹೊಸೂರುನಲ್ಲಿರುವ ಟಿವಿಎಸ್ ಮೋಟಾರು ಘಟಕದಲ್ಲಿ ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗಳು ನಿರ್ಮಾಣವಾಗುತ್ತಿದ್ದು, ದೇಶಿಯ ಮಾರುಕಟ್ಟೆಗೆ ಅಷ್ಟೇ ಅಲ್ಲದೇ ಇಲ್ಲಿಂದಲೇ ವಿದೇಶಿ ಮಾರುಕಟ್ಟೆಗೂ ಬೃಹತ್ ಪ್ರಮಾಣದಲ್ಲಿ ಹೊಸ ಬೈಕ್ ಮಾದರಿಗಳನ್ನು ರಫ್ತುಗೊಳಿಸುವ ಯೋಜನೆ ಹೊಂದಿದೆ.

ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‍‍ಗಳ ಬುಕ್ಕಿಂಗ್ ಶುರು..

ಹೊಸೂರು ಪ್ಲ್ಯಾಂಟ್‌ನಿಂದ ಬೆಂಗಳೂರಿನ ಪ್ರಮುಖ ಡೀಲರ್ಸ್ ಯಾರ್ಡ್‌ಗಳಲ್ಲಿ ಹೊಸ ಬೈಕ್‌ಗಳನ್ನು ಸ್ಟಾಕ್ ಮಾಡಲಾಗುತ್ತಿದ್ದು, ಈ ವೇಳೆ ಸಾರ್ವಜನಿಕ ಕಾಣಿಸಿಕೊಂಡ ಹೊಸ ಬೈಕ್‌ಗಳು ಗ್ರಾಹಕರ ಆಕರ್ಷಣೆ ಕಾರಣವಾಗಿವೆ.

ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‍‍ಗಳ ಬುಕ್ಕಿಂಗ್ ಶುರು..

ಬಿಎಂಡಬ್ಲ್ಯು ಶಕ್ತಿಶಾಲಿ ಆರ್ 1200 ಜಿಎಸ್ ಬೈಕ್ ನಿಂದ ಪ್ರೇರಣೆ ಪಡೆದುಕೊಂಡಿರುವ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‌ಗಳು ಆಫ್ ರೋಡ್ ಸ್ನೇಹಿ ಚಕ್ರಗಳನ್ನು ಪಡೆದುಕೊಂಡಿದೆ. ಜೊತೆಗೆ ನೂತನ ಬೈಕ್‌ಗಳು ಬೆಲೆಯನ್ನು ಎರಡೂವರಿ ಲಕ್ಷದಿಂದ ಮೂರು ಲಕ್ಷದೊಳಗೆ ಬಿಡುಗಡೆಯಾಗುವುದಾಗಿ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ.

ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‍‍ಗಳ ಬುಕ್ಕಿಂಗ್ ಶುರು..

ಇನ್ನು ಜಿ 310 ಜಿಎಸ್ ಬೈಕ್ ಮಾದರಿಯೂ ಅಡ್ವೆಂಚರ್ ವಿಭಾಗದಲ್ಲಿ ಅಭಿವೃದ್ದಿಗೊಂಡಿದ್ದು, 313 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಎಂಜಿನ್ ಪಡೆದುಕೊಂಡಿದೆ. ಈ ಮೂಲಕ 34 ಬಿಎಚ್‌ಪಿ ಮತ್ತು 28 ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿ ಹೊಂದಿದ್ದು, ಇದರ ಜೊತೆಗೆ ಅತ್ಯುತ್ತಮ ಹೊರ ವಿನ್ಯಾಸಗಳನ್ನು ತನ್ನದಾಗಿಸಿಕೊಂಡಿದೆ.

ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‍‍ಗಳ ಬುಕ್ಕಿಂಗ್ ಶುರು..

ಜೊತೆಗೆ ಜಿ 310 ಜಿಎಸ್ ಬೈಕ್ ಮಾದರಿಯು ಶಾರ್ಪ್ ಹೆಡ್‌ಲ್ಯಾಂಪ್, ಮಸ್ಕ್ಯೂಲರ್ ಫ್ಯೂಲ್ ಟ್ಯಾಂಕ್ ಮತ್ತು ಡ್ಯುಯಲ್ ಸ್ಪೋರ್ಟ್ ಟೈರ್‌ನೊಂದಿಗೆ ಗಮನಸೆಳೆಯುತ್ತಿದ್ದು, ಲಗ್ಗೇಜ್ ಕ್ಯಾರಿಯರ್, ಟಾಪ್ ಬಾಕ್ಸ್, ಸೆಂಟರ್ ಸ್ಟ್ಯಾಂಡ್, ಎಲ್ ಇಡಿ ಇಂಡಿಕೇಟರ್, ಹೀಟಡ್ ಗ್ರಿಪ್, ಟ್ಯಾಂಕ್ ಬ್ಯಾಗ್, ಜಿಪಿಎಸ್ ಸಪೋರ್ಟ್, ಜಿಪಿಎಸ್ ನೇವಿಗೇಟರ್ ಮತ್ತು ಆಫ್ ರೋಡ್ ಚಾಲನೆಗಳನ್ನು ಗಿಟ್ಟಿಸಿಕೊಳ್ಳಲಿದೆ.

ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕ್‍‍ಗಳ ಬುಕ್ಕಿಂಗ್ ಶುರು..

ಸುರಕ್ಷತೆಗೂ ಹೆಚ್ಚಿನ ಆದ್ಯತೆ ಕೊಡಲಾಗಿದ್ದು, ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ(ಎಬಿಎಸ್) ಸ್ಟ್ಯಾಂಡರ್ಡ್ ಆಗಿ ದೊರಕಲಿದೆ. ಅಂದ ಹಾಗೆ, ನೂತನ ಜಿ310 ಜಿಎಸ್ ಬೈಕ್‌ಗಳು 2075 ಎಂಎಂ ಉದ್ದ, 880 ಎಂಎಂ ಅಗಲ 1230 ಎಂಎಂ ಎತ್ತರ ಮತ್ತು 1420 ಎಂಎಂ ಚಕ್ರಾಂತರವನ್ನು ಪಡೆದಿರುತ್ತದೆ. ಇನ್ನು 169.5 ಕೆ.ಜಿ ತೂಕವನ್ನು ಹೊಂದಿದೆ.

Most Read Articles

Kannada
Read more on bmw off road
English summary
BMW G 310 R and G 310 GS Bookings Open.
Story first published: Thursday, June 7, 2018, 9:48 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X