ಆಟೋ ಎಕ್ಸ್ ಪೋ 2018: ಹೀರೋ ಮೊದಲ ಆಫ್ ರೋಡ್ ಬೈಕ್ ಎಕ್ಸ್‌ಪಲ್ಸ್ ಅನಾವರಣ

ದೇಶಿಯ ಮಾರುಕಟ್ಟೆಯ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಹೀರೋ ಮೊಟೊಕಾರ್ಪ್ ತನ್ನ ಮೊದಲ ಅಡ್ವೆಂಚರ್ ಬೈಕ್ ಮಾದರಿ ಎಕ್ಸ್ ಪಲ್ಸ್ ಅನಾವರಣಗೊಳಿಸಿದ್ದು, ಥ್ರಿಲ್ಲಿಂಗ್ ರೈಡ್‌ಗೆ ಇದು ಹೇಳಿ ಮಾಡಿಸಿದ ಬೈಕ್ ಆವೃತ್ತಿಯಾಗಿದೆ.

ಹೀರೋ ಎಕ್ಸ್ ಪಲ್ಸ್ ಫುಲ್ ಎಲ್ಇಡಿ ಹೆಡ್ ಲೈಟ್, ಲಗೆಜ್ ರಾಕ್, ಧೀರ್ಘ ಕಾಲದ ಸವಾರಿಗೆ ಅನೂಕಲವಾಗುವಂತಹ ನಾಕಲ್ ಗಾರ್ಡ್ಸ್ ಹೊಂದಿದ್ದು, ವಿಂಡ್ ಶೀಲ್ಡ್ ಅನ್ನು ಬಳಸಲಾಗಿದೆ. ಜೊತೆಗೆ ಎಕ್ಸ್‌ಪಲ್ಸ್ ಸೆಗ್ಮೆಂಟ್ ನಲ್ಲಿ ಮೊದಲ ಬಾರಿಗೆ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸಿಸ್ಟಮ್ ಪಡೆದ ಮೊದಲ ಬೈಕ್ ಇದಾಗಿದೆ.

ಆಟೋ ಎಕ್ಸ್ ಪೋ 2018: ಹೀರೋ ಮೊದಲ ಆಫ್ ರೋಡ್ ಬೈಕ್ ಎಕ್ಸ್‌ಪಲ್ಸ್ ಅನಾವರಣ

ಹೀರೋ ಎಕ್ಸ್ ಪಲ್ಸ್ ಬೈಕಿನಲ್ಲಿ ಹೆಚ್ಚಿನ ಸಾಮರ್ಥ್ಯ ಮತ್ತು ಚುರುಕುತನವನ್ನು ನೀಡುವ ಹೆಚ್ಚಿನ ಟೆನ್ಸೈಲ್ ಡೈಮೆಂಡ್ ಫ್ರೇಮ್ ಅನ್ನು ಆಧರಿಸಿದ್ದು, ಈ ಬೈಕಿನ ಎಂಜಿನ್ ಮತ್ತು ಇಂಧನ ಕಾರ್ಯಕ್ಷಮತೆ ಕಾಪಾಡಲು ಅಲ್ಯುಮಿನಿಯಂ ಸ್ಕಿಡ್ ಪ್ಲೇಟ್ ಅನ್ನು ಕೂಡ ಬಳಸಲಾಗಿದೆ. ಇದು ಆಫ್ ಸ್ವೆಫ್ಟ್ ಎಕ್ಸಾಸ್ಟ್ ವಾಟರ್ ವೇಡಿಂಗ್ ಸಾಮರ್ಥ್ಯವನ್ನು ತಗ್ಗಿಸಲು ಸಹಕಾರಿಯಾಗಲಿದೆ.

ಆಟೋ ಎಕ್ಸ್ ಪೋ 2018: ಹೀರೋ ಮೊದಲ ಆಫ್ ರೋಡ್ ಬೈಕ್ ಎಕ್ಸ್‌ಪಲ್ಸ್ ಅನಾವರಣ

ಎಕ್ಸ್ ಪಲ್ಸ್ ಎಂಜಿನ್ ಸಾಮರ್ಥ್ಯ

ಹೊಸ ಬೈಕಿನಲ್ಲಿ 200-ಸಿಸಿ ಏರ್ ಕೂಲ್ಡ್, ಫ್ಯುಯಲ್ ಇಂಜೆಕ್ಟೆಡ್ ಎಂಜಿನ್ ಒದಗಿಸಲಾಗಿದ್ದು, 5-ಸ್ಪೀಡ್ ಗೇರ್ ಬಾಕ್ಸ್ ಸೇರಿಸಲಾಗಿದೆ. ಇದು 18.1-ಬಿಹೆಚ್ ಪಿ ಮತ್ತು 17.2-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಒಟ್ಟಾರೆ ಈ ಬೈಕಿನ ಡಿಸೈನ್ ಸರಳವಾಗಿದ್ದು, ಧೀರ್ಘ ಪ್ರಮಾಣದ ಸಸ್ಪೆಷನ್ ಸೆಟಪ್ ಅನ್ನು ಪಡೆದಿದೆ.

ಆಟೋ ಎಕ್ಸ್ ಪೋ 2018: ಹೀರೋ ಮೊದಲ ಆಫ್ ರೋಡ್ ಬೈಕ್ ಎಕ್ಸ್‌ಪಲ್ಸ್ ಅನಾವರಣ

ಹೀರೋ ಎಕ್ಸ್ ಪಲ್ಸ್ ಬೈಕಿನ ಸಸ್ಪೆಷನ್ ಡ್ಯೂಟಿಗೆ 190-ಎಮ್ಎಮ್ ಪ್ರಮಾಣ ಟೆಲಿಸ್ಕೋಪಿಕ್ ಫ್ರಂಟ್ ಫೋರ್ಕ್ಸ್ ಮತ್ತು 170-ಎಂಎಂ ಪ್ರಮಾಣದ ಹತ್ತು ಹಂತದ ಹೊಂದಾಣಿಕೆಯ ಗ್ಯಾಸ್-ಚಾರ್ಜ್ಡ್ ಮೋನೋಶಾಕ್ ಸಸ್ಪೆಷನ್ ಜೋಡಣೆ ಹೊಂದಿದೆ.

ಆಟೋ ಎಕ್ಸ್ ಪೋ 2018: ಹೀರೋ ಮೊದಲ ಆಫ್ ರೋಡ್ ಬೈಕ್ ಎಕ್ಸ್‌ಪಲ್ಸ್ ಅನಾವರಣ

ಇದಲ್ಲದೇ ಈ ಬೈಕಿನ ಮುಂಭಾಗದಲ್ಲಿ 21 ಇಂಚಿನ ಚಕ್ರಗಳನ್ನು ಒದಗಿಸಲಾಗಿದ್ದು, ಮುಂಭಾಗದ 18 ಇಂಚಿನ ಚಕ್ರಗಳನ್ನು ಹೊಂದಿದೆ. ಜೊತೆಗೆ ಆಪ್ ರೋಡಿಂಗ್‌ಗೆ ಸಹಕಾರಿಯಾಗಲು 220 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ನೀಡುತ್ತದೆ.

ಆಟೋ ಎಕ್ಸ್ ಪೋ 2018: ಹೀರೋ ಮೊದಲ ಆಫ್ ರೋಡ್ ಬೈಕ್ ಎಕ್ಸ್‌ಪಲ್ಸ್ ಅನಾವರಣ

ಹೀರೊ ಎಕ್ಸ್ ಪಲ್ಸ್ ಮೋಟಾರ್ ಸೈಕಲನ್ನು 2018 ಕೊನೆಯಲ್ಲಿ ಅಥವಾ 2019ರ ಆರಂಭದಲ್ಲಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದ್ದು, ಬೈಕಿನ ಬೆಲೆಯನ್ನು 1.20 ಲಕ್ಷದಿಂದ 1.30 ಲಕ್ಷದ ವರೆಗೆ ನಿಗದಿ ಮಾಡಲಿದ್ದಾರೆ.

ಆಟೋ ಎಕ್ಸ್ ಪೋ 2018: ಹೀರೋ ಮೊದಲ ಆಫ್ ರೋಡ್ ಬೈಕ್ ಎಕ್ಸ್‌ಪಲ್ಸ್ ಅನಾವರಣ

ಇನ್ನು ಎಕ್ಸ್ ಪಲ್ಸ್ ಬೈಕ್ ಮಾದರಿಗಳು ಥ್ರಿಲ್ಲಿಂಗ್ ರೈಡಿಂಗ್ ಅನುಭವಕ್ಕೆ ಹೇಳಿ ಮಾಡಿಸಿದ ಬೈಕ್ ಇದಾಗಿದ್ದು, ದುಬಾರಿಯ ಬೆಲೆಯ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಆವೃತ್ತಿಗಳಿಗೆ ತೀವ್ರ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
English summary
Hero XPulse Unveiled - Expected Launch Date, Price, Specifications & Images.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X