ಇದೇ ತಿಂಗಳು 15ರಂದು ಅನಾವರಣಗೊಳ್ಳಲಿರುವ ಹೊಸ ಜಾವಾ ಬೈಕ್ ಹೀಗಿರಲಿವೆಯೆಂತೆ..!
ಜಾವಾ ಬೈಕ್ ಕುರಿತಾಗಿ ದಿನಕ್ಕೊಂದು ಹೊಸ ಹೊಸ ತಾಂತ್ರಿಕ ಅಂಶಗಳ ಕುರಿತಾದ ಮಾಹಿತಿಗಳನ್ನು ಲಭ್ಯವಾಗುತ್ತಿದ್ದು, ಈ ಬಾರಿ ಡ್ರೈವ್‌ಸ್ಪಾರ್ಕ್ ತಂಡಕ್ಕೆ ಹೊಸ ಜಾವಾ ಬೈಕ್‌ಗಳ ವಿನ್ಯಾಸಗಳ ಕುರಿತಾದ ಕೆಲವು ರೇಖಾಚಿತ್ರಗಳು ಲಭ್ಯವಾಗಿರುವುದು ಮೂಲ ಜಾವಾ ಬೈಕಿನ ರೆಟ್ರೋ ಸ್ಟೈಲ್ ನೆನಪಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಭಾರತದಲ್ಲಿ ಜಾವಾ ಸಂಸ್ಥೆಯು ಗ್ರಾಹಕರ ಬೇಡಿಕೆ ಅನುಗುಣವಾಗಿ ವಿವಿಧ ಮಾದರಿಯ ಒಟ್ಟು ನಾಲ್ಕು ಬೈಕ್‌ಗಳನ್ನು ಬಿಡುಗಡೆಗೊಳಿಸಲು ಸಿದ್ದಗೊಂಡಿದ್ದು, ಲಭ್ಯವಾಗಿರುವ ಕೆಲವು ರೇಖಾಚಿತ್ರಗಳ ಪ್ರಕಾರ ಹೊಸ ಜಾವಾ ಬೈಕ್‌ಗಳಲ್ಲಿ ಸ್ಕ್ರಾಂಬ್ಲರ್ ವಿನ್ಯಾಸದ ಆವೃತ್ತಿಗಳು ಸಹ ಇದ್ದಿರುವುದು ಗ್ರಾಹಕರ ಆಯ್ಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ. ಇದು ಸಾಮಾನ್ಯ ಬೈಕ್‌ಗಳಿಂತ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳನ್ನು ಹೊಂದಿರಲಿದ್ದು, ಆಪ್ ರೋಡ್ ಬೈಕ್ ಪ್ರಿಯರ ಹಾಟ್ ಫೆವರಿಟ್ ಆಗಲಿದೆ ಎನ್ನುವುದು ಬೈಕ್ ಉತ್ಪಾದಕರ ಲೆಕ್ಕಾಚಾರ.

ಸದ್ಯ ಮಹೀಂದ್ರಾ ಪಾಲುದಾರಿಕೆಯಲ್ಲಿ ಜಾವಾ ಬೈಕ್‌ಗಳು ಭಾರತದಲ್ಲಿ ಮರು ಬಿಡುಗಡೆಯಾಗುತ್ತಿದ್ದು, ಈ ಹಿಂದೆ ಡ್ರೈವ್‌ಸ್ಪಾರ್ಕ್ ತಂಡಕ್ಕೆ ಸಿಕ್ಕಿರುವ ಸ್ಪಾಟ್ ಟೆಸ್ಟಿಂಗ್ ಬೈಕ್ ಮಾದರಿಗೂ ಮತ್ತು ಇದೀಗ ಲಭ್ಯವಾಗಿರುವ ರೇಖಾಚಿತ್ರ ಮಾದರಿಗಳು ಒಂದೇ ರೀತಿಯ ವಿನ್ಯಾಸ ಹೊಂದಿರುವುದು ಸ್ಪಷ್ಟವಾಗಿದೆ.

ಹೀಗಾಗಿ ಇಷ್ಟು ದಿನಗಳ ಕಾಲ ಹೊಸ ಜಾವಾ ಬೈಕ್ ಮೊದಲಿನ ಗತ್ತು ಪಡೆದುಕೊಂಡಿರುತ್ತೊ ಇಲ್ಲವೋ ಅನ್ನುವ ಗೊಂದಲ ಜಾವಾ ಪ್ರಿಯರಲ್ಲಿತ್ತು. ಆದ್ರೆ ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡಿರುವ ಹೊಸ ಜಾವಾ ಬೈಕ್‌ಗಳು ಆರ್‌ಇ ಬೈಕ್‌ಗಳನ್ನೇ ಟಾರ್ಗೆಟ್ ಮಾಡಿರುವುದನ್ನು ನೀವಿಲ್ಲಿ ಗಮನಿಸಬಹುದು.

ಜಾಗತಿಕವಾಗಿ ಬೈಕ್ ಮಾರಾಟದಲ್ಲಿ ತನ್ನದೇ ಜನಪ್ರಿಯತೆ ಹೊಂದಿರುವ ಬಿಎಸ್ಎ ಮೋಟಾರ್ ಸೈಕಲ್ ಸಂಸ್ಥೆಯು ಭಾರತದಲ್ಲಿ ಮಹೀಂದ್ರಾ ಕೈಜೋಡಿಸುವ ಮೂಲಕ ಕ್ಲಾಸಿಕ್ ಬೈಕ್ ಉತ್ಪಾದನೆಗೆ ಹೊಸ ಯೋಜನೆ ರೂಪಿಸಿದ್ದು, ಈ ಹಿನ್ನೆಲೆಯಲ್ಲಿ ಬಿಎಸ್ಎ ಸಂಸ್ಥೆಯ ಪಾಲುದಾರ ಸಂಸ್ಥೆಯಾದ ಜಾವಾ ಬೈಕ್‌ಗಳಿಗೆ ಮರುಜೀವ ತುಂಬುವ ಜವಾಬ್ದಾರಿ ಇದೀಗ ಮಹೀಂದ್ರಾ ಮೇಲಿದೆ.

ಭಾರತದಲ್ಲಿ 80ರ ದಶಕದಲ್ಲಿ ತನ್ನದೆ ಆದ ಜನಪ್ರಿಯತೆ ಸಾಧಿಸಿ ಕ್ಲಾಸಿಕ್ ಬೈಕ್ ಪ್ರಿಯರ ಕ್ರೇಜ್‌ಗೆ ಕಾರಣವಾಗಿದ್ದ ಜಾವಾ ಸಂಸ್ಥೆಯು ತದನಂತರದ ದಿನಗಳಲ್ಲಿ ಭಾರೀ ನಷ್ಟ ಅನುಭವಿಸುವ ಮೂಲಕ ಮಾರುಕಟ್ಟೆಯಿಂದಲೇ ನಿರ್ಗಮಿಸಿತ್ತು.

ಆ ಬಳಿಕ ಬಿಎಸ್ಎ ಮೋಟಾರ್ ಸೈಕಲ್ ಸಂಸ್ಥೆಯ ಪಾಲಾಗಿದ್ದ ಜಾವಾ ಸಂಸ್ಥೆಯು ವಿವಿಧ ಮಾದರಿಯ ಬೈಕ್‌ಗಳನ್ನು ನಿರ್ಮಿಸಿದ್ದರೂ ಯಾವುದೇ ಸಂಚಲನ ಮೂಡಿಸಲಿಲ್ಲ. ಇದಾದ ನಂತರ 2016ರಲ್ಲಿ ಬಿಎಸ್ಎ ಸಂಸ್ಥೆಯಲ್ಲಿ ಮಹೀಂದ್ರಾ ಸಂಸ್ಥೆಯು ಪಾಲು ಹೊಂದುವ ಮೂಲಕ ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತು.

ತದನಂತರ ಭಾರತದಲ್ಲಿ ವಿವಿಧ ರೀತಿಯ ಮಾರುಕಟ್ಟೆಯ ಅಧ್ಯಯನ ನಡೆಸಿದ ಮಹೀಂದ್ರಾ ಸಂಸ್ಥೆಯು ಜಾವಾ ಬೈಕ್ ವಿನ್ಯಾಸ ಮತ್ತು ಎಂಜಿನ್ ವಿಭಾಗದಲ್ಲಿ ಭಾರೀ ಸುಧಾರಣೆ ತರುವ ಮೂಲಕ ಇದೀಗ ಹೊಸ ಬೈಕ್‌ಗಳನ್ನು ಸಿದ್ದಗೊಳಿಸಿದ್ದು, ಈ ಮಧ್ಯೆ ಮೊದಲ ಬಾರಿಗೆ ಹೊಸ ಬೈಕ್ ಕಾರ್ಯಕ್ಷಮತೆ ಕುರಿತಾಗಿ ರೋಡ್ ಟೆಸ್ಟ್ ನಡೆಸುತ್ತಿದೆ.

ಈ ಹಿಂದಿನ ಜಾವಾ ಬೈಕ್ ವಿನ್ಯಾಸಗಳಲ್ಲೇ ಕೆಲವು ಅತ್ಯಾಧುನಿಕ ಡಿಸೈನ್ ಶೈಲಿಯನ್ನು ನೀಡಿರುವ ಮಹೀಂದ್ರಾ ಸಂಸ್ಥೆಯು ಮೂಲ ಬೈಕ್‌ಗಳ ವಿನ್ಯಾಸಕ್ಕೆ ಯಾವುದೇ ಧಕ್ಕೆ ಬರದಂತೆ ಹೊಸ ಫೀಚರ್ಸ್ ನೀಡಿದ್ದು, ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ಇದು ಭಾರೀ ಪೈಪೋಟಿ ನೀಡಲಿದೆ.

ಹೊಸ ಬೈಕ್‌ಗಳ ಎಂಜಿನ್ ವೈಶಿಷ್ಟ್ಯ
ಸಿಕ್ಕಿರುವ ಮಾಹಿತಿಗಳ ಪ್ರಕಾರ ಹೊಸ ಜಾವಾ ಬೈಕ್‌ಗಳು ಬಿಎಸ್- 6 ವೈಶಿಷ್ಟ್ಯತೆಯುಳ್ಳ 300ಸಿಸಿ ಮತ್ತು 350ಸಿಸಿ ಸಿಂಗಲ್ ಸಿಲಿಂಡರ್ (ಡ್ಯುಯಲ್ ಹೆಡ್ ಕ್ಯಾಮ್) ಎಂಜಿನ್ ಜೋಡಣೆ ಮಾಡಲಿದೆ ಎನ್ನಲಾಗಿದೆ.
MOST READ: ಯಮಹಾ ಆರ್15 ಪ್ರತಿಸ್ಪರ್ಧಿ ಕೆಟಿಎಂ 125 ಡ್ಯೂಕ್ ಖರೀದಿಗಾಗಿ ಬುಕ್ಕಿಂಗ್ ಆರಂಭ- ಬೆಲೆ ಎಷ್ಟು ಗೊತ್ತಾ?

ಇದರೊಂದಿಗೆ ಮಾರ್ಡನ್ ರೆಟ್ರೋ ಲುಕ್ ಪಡೆದುಕೊಳ್ಳಲಿರುವ ಜಾವಾ ಬೈಕ್‌ಗಳಲ್ಲಿ ಸುರಕ್ಷತೆಗಾಗಿ ಸಿಂಗಲ್ ಚಾನೆಲ್ ಎಬಿಎಸ್, ಎರಡು ಬದಿ ಚಕ್ರಗಳಲ್ಲೂ ಡಿಸ್ಕ್ ಬ್ರೇಕ್ ಸೇರಿದಂತೆ ಹೆಚ್ಚಿನ ಮಟ್ಟದ ಸುರಕ್ಷಾ ಅಂಶಗಳನ್ನು ನೀಡಲಾಗಿದ್ದು, ಇವು 300ಸಿಸಿ ಬೈಕ್ ವಿಭಾಗದಲ್ಲೇ ವಿಶೇಷ ಎನ್ನಿಸುವ ಮೂಲಕ ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯಲಿವೆ.

ಬೈಕ್ ಬೆಲೆಗಳು(ಅಂದಾಜು)
ನವೆಂಬರ್ 15ರಂದು ಮಹೀಂದ್ರಾ ಸಂಸ್ಥೆಯು ಅನಾವರಣಗೊಳಿಸಲಿರುವ ಹೊಸ ಜಾವಾ ಬೈಕ್‌ಗಳು ಎಕ್ಸ್‌ಶೋರೂಂ ಪ್ರಕಾರ ರೂ. 1.60 ಲಕ್ಷದಿಂದ ರೂ. 1.80 ಲಕ್ಷಕ್ಕೆ ಲಭ್ಯವಾಗಲಿದ್ದು, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಜಾವಾ ಬೈಕ್‌ಗಳ ಖರೀದಿಗಾಗಿ ಈಗಾಗಲೇ ಕೆಲವು ಬೈಕ್ ಡೀಲರ್ಸ್‌ಗಳು ರೂ.1 ಸಾವಿರ ಮುಂಗಡದೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದಾರೆ.
MOST READ: ಭಾರತದಲ್ಲಿ ಓಮ್ನಿ ಮಾರಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ ಮಾರುತಿ..!

ಒಟ್ಟಿನಲ್ಲಿ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಖರೀದಿದಾರರಿಗೆ ಪರ್ಯಾಯ ಆಯ್ಕೆಯಾಗಿ ಮಾರುಕಟ್ಟೆಗೆ ಲಗ್ಗೆಯಿಡಲಿರುವ ಜಾವಾ ಬೈಕ್‌ಗಳು ಬೆಲೆ ಮತ್ತು ನೀಡುವ ಸೌಲಭ್ಯಗಳ ಆಧಾರದ ಮೇಲೆ ಭವಿಷ್ಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿವೆ ಎನ್ನಬಹುದು.
Rendering Source: IAB


Click it and Unblock the Notifications








