ಬೆಂಗಳೂರಿನ ಈ ಡೀಲರ್ಸ್‌ಗಳಲ್ಲಿ ನೀವು ಜಾವಾ ಬೈಕ್‌ಗಳಿಗಾಗಿ ಬುಕ್ ಮಾಡಬಹುದು.!
ಭಾರತದಲ್ಲಿ ಬಿಡುಗಡೆಗೂ ಮುನ್ನವೇ ಬೈಕ್ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಜಾವಾ ಹೊಚ್ಚ ಹೊಸ ಬೈಕ್‌ಗಳನ್ನು ಮಹೀಂದ್ರಾ ಅಂಡ್ ಮಹೀಂದ್ರಾ ಸಂಸ್ಥೆಯು 15 ದಿನಗಳ ಹಿಂದಷ್ಟೇ ಬಿಡುಗಡೆಗೊಳಿಸಿದ್ದು, ಹೊಸ ಬೈಕ್ ಖರೀದಿಗಾಗಿ ಸಾವಿರಾರು ಗ್ರಾಹಕರು ತುದಿಗಾಲಿನ ಮೇಲೆ ನಿಂತಿದ್ದಾರೆ ಅಂದ್ರೆ ತಪ್ಪಾಗುದಿಲ್ಲ.

ಜಾವಾ ಬೈಕ್‌ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಸಂಸ್ಥೆಯು ಯಶಸ್ವಿಯಾಗಿದೆ.

ಮಹೀಂದ್ರಾ ಸಂಸ್ಥೆಯು ಸದ್ಯ ಮೂರು ಬೈಕ್‌ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ, ಜಾವಾ 42 ಬೈಕ್‌ಗಳನ್ನ ಬಿಡುಗಡೆ ಮಾಡಿದಲ್ಲಿ ಇದರಲ್ಲಿ ಜಾವಾ ಪೆರಾಕ್ ಎನ್ನುವ ಮಾದರಿಯನ್ನು ಕೇವಲ ಅನಾವರಣಗೊಳಿಸಿ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಹೊಸ ಬೈಕ್‌ಗಳ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಜಾವಾ ಮಾದರಿಗೆ ರೂ. 1.64 ಲಕ್ಷ, ಜಾವಾ 42 ಮಾದರಿಗೆ ರೂ. 1.55 ಲಕ್ಷ ಮತ್ತು ಅನಾವರಣ ಮಾಡಲಾದ ಜಾವಾ ಪೆರಾಕ್ ಬೈಕಿಗೆ ರೂ. 1.89 ಲಕ್ಷ ಬೆಲೆ ನಿಗದಿಪಡಿಸಲಾಗಿದೆ

ಜಾವಾ ಸಂಸ್ಥೆಯು ಗತಕಾಲದ ವೈಭವವನ್ನು ಕಾಪಾಡಲು ತನ್ನ ನೂತನ ಬೈಕುಗಳ ವಿನ್ಯಾಸದಲ್ಲಿ ಸುಧಾರಿತ ಮಾದರಿಯ ಬೈಕಿನ ಸ್ಪೀಡೋ ಮೀಟರ್, ಡ್ಯೂಮ್ ನ ಕ್ಲಾಸಿಕ್ ಲುಕ್ ಅನ್ನು ಹಾಗೇ ಉಳಿಸಿ, ಹೊಸದಾಗಿ ಟೂಲ್ ಬಾಕ್ಸ್ ಅನ್ನು ಸೇರಿಸುವ ಮೂಲಕ ಬೈಕಿನ ಅಂದವನ್ನು ಹೆಚ್ಚುವಂತೆ ಮಾಡಿದೆ. ಅಲ್ಲದೇ ಈ ಮೂರು ಬೈಕುಗಳು ಬಿಎಸ್6 ಮಾದರಿಯನ್ನು ಒಳಗೊಂಡಿದೆ.

ಜಾವಾ ಹಾಗೂ ಜಾವಾ 42 ಬೈಕ್‍ಗಳು ಮಧ್ಯಪ್ರದೇಶದಲ್ಲಿರುವ ಪಿಥಮ್‍ಪುರ್ ಮಹೀಂದ್ರಾ ಘಟಕದಲ್ಲಿ ಸಿದ್ದಗೊಳ್ಳುತ್ತಿದ್ದು, 2019ರ ಆರಂಭದಲ್ಲಿ ಬೈಕುಗಳು ಟೆಸ್ಟ್ ರೈಡ್‍ಗೆ ಸಿಗಲಿವೆ. ಜೊತೆಗೆ ಜಾವಾ ಪೆರಾಕ್ ಬೈಕ್ 2019ರ ಮಧ್ಯದಲ್ಲಿ ಗ್ರಾಹಕರಿಗೆ ತಲುಪಲಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಖರೀದಿಗೆ ಲಭ್ಯ..!
ಹೊಸ ಜಾವಾ ಬೈಕ್‌ಗಳ ಖರೀದಿಗಾಗಿ ಆಸಕ್ತ ಗ್ರಾಹಕರು ಬಸವನಗುಡಿ, ಇನ್ಫ್ಯಾಂಟ್ರಿ ರೋಡ್ ಮತ್ತು ರಾಜಾಜಿನಗರದಲ್ಲಿರುವ ಜಾವಾ ಡೀಲರ್ಸ್‌ಗಳಲ್ಲಿ ಅಷ್ಟೇ ಅಲ್ಲದೇ ಮಹೀಂದ್ರಾ ಡೀಲರ್ಸ್‌ಗಳಲ್ಲೂ ಕೂಡಾ ರೂ.5 ಸಾವಿರ ಮುಂಗಡದೊಂದಿಗೆ ಹೊಸ ಬೈಕ್ ಬುಕ್ಕಿಂಗ್ ಮಾಡಬಹುದಾಗಿದೆ.

ಜೊತೆಗೆ ಜಾವಾ ಮೋಟಾರ್ ಸೈಕಲ್ ಅಧಿಕೃತ ವೆಬ್‌ಸೈಟ್‌ನಲ್ಲೂ ಬುಕ್ ಮಾಡಬಹುದಾಗಿದ್ದು, ಬೈಕಿನ ವೆರಿಯೆಂಟ್, ಬಣ್ಣ ಮತ್ತು ನಿಮಗೆ ಬೇಕಿರುವ ಕೆಲವು ತಾಂತ್ರಿಕ ಮಾರ್ಪಾಡುಗಳೊಂದಿಗೆ ರೂ.5 ಸಾವಿರ ಮುಂಗಡ ಪಾವತಿ ಬೈಕ್ ಕಾಯ್ದಿರಿಸಬಹುದು.

ರಾಯಲ್ ಎನ್‌ಫೀಲ್ಡ್‌ಗೆ ತಳಮಳ..!
ಜಾವಾ ಬಿಡುಗಡೆಗೊಳಿಸಿದ ಜಾವಾ ಮತ್ತು ಜಾವಾ 42 ಬೈಕ್‍ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ರಾಯಲ್ ಎನ್‍ಫೀಲ್ಡ್ 350 ಕ್ಲಾಸಿಕ್ ಬೈಕ್‍ಗಳೊಂದಿಗೆ ನೇರವಾಗಿ ಪ್ರತಿಸ್ಪರ್ಧಿಯಾಗಿವೆ ಎನ್ನಬಹುದು.
MOST READ: ಬಿಡುಗಡೆಯಾಗಲಿರುವ ಹೊಸ ಆರ್‌ಎಕ್ಸ್100 ಬೈಕ್ ಹೇಗಿರಲಿವೆ ಗೊತ್ತಾ?

ಮಾರುಕಟ್ಟೆಗೆ ಲಗ್ಗೆಯಿಟ್ಟ ಜಾವಾ ಮತ್ತು ಜಾವಾ 42 ಬೈಕ್‍ಗಳು ರೆಟ್ರೋ ವಿನ್ಯಾಸವನ್ನು ಪಡೆದುಕೊಂಡಿದ್ದು, ಈ ಹಿಂದೆ ಮಾರಾಟಗೊಳ್ಳುತ್ತಿದ್ದ ಬೈಕ್‍ಗಳಂತೆಯೇ ಕಾಣಲಿದೆ. ಆದರೆ ಈ ಬಾರಿ ಈ ಬೈಕ್‍ಗಳಲ್ಲಿ ಬಳಸಲಾದ ಎಂಜಿನ್ ಹೈಲೈಟ್ ಎಂದು ಹೇಳಲಾಗಿದೆ.

ಎಂಜಿನ್ ಸಾಮರ್ಥ್ಯ
ಜಾವಾ ಮತ್ತು ಜಾವಾ 42 ಬೈಕ್‌ಗಳು 293ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 27ಬಿಹೆಚ್‍ಪಿ ಮತ್ತು 28ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಮತ್ತೊಂದು ಕಡೆ ಬಾಬರ್ ವಿನ್ಯಾಸದ ಜಾವಾ ಪೆರಾಕ್ ಬೈಕ್ 334ಸಿಸಿ ಎಂಜಿನ್ ಅನ್ನು ಪಡೆದುಕೊಳ್ಳಲಿದೆ.

ಲಭ್ಯವಿರುವ ಬಣ್ಣಗಳು
ಜಾವಾ ಬಿಡುಗಡೆಗೊಳಿಸಿದ ಈ ಎರಡು ಬೈಕ್‍ಗಳು ಆಕರ್ಷಕ ಬಣ್ಣದಲ್ಲಿ ಖರೀದಿಗೆ ಲಭ್ಯವಿದೆ. ಜಾವಾ ಬೈಕ್ - ಜಾವಾ ಬ್ಲಾಕ್, ಜಾವಾ ಮರೂನ್ ಮತ್ತು ಜಾವಾ ಗ್ರೇ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ.

ಹಾಗೆಯೇ ಜಾವಾ 42 ಬೈಕ್ ಮಾದರಿಯು ಹಾಲಿಸ್ ಟೀಲ್, ಗ್ಲಾಕ್ಟಿಕ್ ಗ್ರೀನ್, ಸ್ಟಾರ್‍ಲೈಟ್ ಬ್ಲೂ, ಲುಮೊಸ್ ಲೈಮ್, ನೆಬ್ಯುಲಾ ಬ್ಲೂ ಮತ್ತು ಕೊಮೆಟ್ ರೆಡ್ ಎಂಬ ಆರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
MOST READ: ನಿಯಂತ್ರಣ ತಪ್ಪಿ ಭೀಕರ ಅಪಘಾತ- ನೆಕ್ಸಾನ್ ಕಾರಿನಲ್ಲಿದ್ದವರು ಸೇಫ್ ಆಗಿದ್ದು ಹೇಗೆ?

ಇನ್ನು ಭಾರತದಲ್ಲಿ 80ರ ದಶಕದಲ್ಲಿ ತನ್ನದೆ ಆದ ಜನಪ್ರಿಯತೆ ಸಾಧಿಸಿ ಕ್ಲಾಸಿಕ್ ಬೈಕ್ ಪ್ರಿಯರ ಕ್ರೇಜ್‌ಗೆ ಕಾರಣವಾಗಿದ್ದ ಜಾವಾ ಸಂಸ್ಥೆಯು ತದನಂತರದ ದಿನಗಳಲ್ಲಿ ಭಾರೀ ನಷ್ಟ ಅನುಭವಿಸುವ ಮೂಲಕ ಮಾರುಕಟ್ಟೆಯಿಂದಲೇ ನಿರ್ಗಮಿಸಿತ್ತು.

ಆ ಬಳಿಕ ಬಿಎಸ್ಎ ಮೋಟಾರ್ ಸೈಕಲ್ ಸಂಸ್ಥೆಯ ಪಾಲಾಗಿದ್ದ ಜಾವಾ ಸಂಸ್ಥೆಯು ವಿವಿಧ ಮಾದರಿಯ ಬೈಕ್‌ಗಳನ್ನು ನಿರ್ಮಿಸಿದ್ದರೂ ಯಾವುದೇ ಸಂಚಲನ ಮೂಡಿಸಲಿಲ್ಲ. ಇದಾದ ನಂತರ 2016ರಲ್ಲಿ ಬಿಎಸ್ಎ ಸಂಸ್ಥೆಯಲ್ಲಿ ಮಹೀಂದ್ರಾ ಸಂಸ್ಥೆಯು ಪಾಲು ಹೊಂದುವ ಮೂಲಕ ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಹೀಗಾಗಿಯೇ ಭಾರತೀಯ ಗ್ರಾಹಕರ ಅಭಿರುಚಿಗಳನ್ನು ಅರಿತು ಜಾವಾ ಬೈಕ್‌ಗಳಲ್ಲಿ ಹೊಸ ಬದಲಾವಣೆ ತಂದಿರುವ ಮಹೀಂದ್ರಾ ಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಜಾವಾ ಬೈಕ್‌ಗಳನ್ನು ಹೊರತರುವ ಇರಾದೆಯಲ್ಲಿದ್ದು, ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಏಕಸ್ವಾಮ್ಯ ಹೊಂದಿರುವ ರಾಯಲ್ ಎನ್‌ಫೀಲ್ಡ್‌ಗೆ ಭಾರೀ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.


Click it and Unblock the Notifications








