Just In
- 7 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 8 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 9 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 10 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- Movies Srirasthu Shubhamasthu ; ಶಾರ್ವರಿ ಹಿನ್ನೆಲೆ ಹೇಳಿದ ಮಹೇಶ : ಅತ್ತೆಯನ್ನು ಅನಾಥೆ ಎಂದ ದೀಪಿಕಾ..!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನ ಮೊದಲ ಜಾವಾ ಡೀಲರ್ಸ್ಗೆ ಸಿಕ್ತು ಭರ್ಜರಿ ಚಾಲನೆ
ಬಿಡುಗಡೆಗೂ ಮುನ್ನವೇ ಬೈಕ್ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಜಾವಾ ಹೊಚ್ಚ ಹೊಸ ಬೈಕ್ಗಳನ್ನು ಮಹೀಂದ್ರಾ ಅಂಡ್ ಮಹೀಂದ್ರಾ ಸಂಸ್ಥೆಯು ಕಳೆದ ತಿಂಗಳ ಹಿಂದಷ್ಟೇ ಬಿಡುಗಡೆಗೊಳಿಸಿದ್ದು, ಹೊಸ ಬೈಕ್ ಖರೀದಿಗಾಗಿ ಸಾವಿರಾರು ಗ್ರಾಹಕರು ತುದಿಗಾಲಿನ ಮೇಲೆ ನಿಂತಿದ್ದಾರೆ ಅಂದ್ರೆ ತಪ್ಪಾಗುವುದಿಲ್ಲ.
ಜಾವಾ ಬೈಕ್ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಸಂಸ್ಥೆಯು ಯಶಸ್ವಿಯಾಗಿದೆ.
ಹೀಗಾಗಿ ಹೊಸ ಬೈಕ್ ಖರೀದಿಗಾಗಿ ಈಗಾಗಲೇ ಸಾವಿರಾರು ಗ್ರಾಹಕರು ಮುಂಗಡ ಪಾವತಿಸಿ ಬೈಕ್ ಪಡೆಯಲು ಕಾಯುತ್ತಿದ್ದು, ಬೆಂಗಳೂರಿನಲ್ಲಿ ಜಾವಾ ತನ್ನ ಮೊದಲ ಬೈಕ್ ಮಳಿಗೆಗೆ ಚಾಲನೆ ನೀಡಿದ್ದಲ್ಲದೇ ಮುಂದಿನ ಒಂದು ವಾರದೊಳಗೆ ದೇಶಾದ್ಯಂತ 20ಕ್ಕೂ ಹೆಚ್ಚು ಹೊಸ ಡೀಲರ್ಸ್ಗೆ ಚಾಲನೆ ನೀಡುವ ಸುಳಿವು ನೀಡಿದೆ.
ಸದ್ಯಕ್ಕೆ ಜಾವಾ ಸಂಸ್ಥೆಯು ಬೈಕ್ ಖರೀದಿಗಾಗಿ ರೂ.5 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಮಾತ್ರ ಸ್ವಿಕರಿಸಲಾಗುತ್ತಿದ್ದು, ಜನವರಿ ಆರಂಭದಲ್ಲಿ ಹೊಸ ಬೈಕ್ ವಿತರಣೆ ಮಾಡುವುದಾಗಿ ಹೇಳಿಕೊಂಡಿತ್ತು. ಅದರಂತೆ ದೇಶದ ವಿವಿಧ ನಗರಗಳಲ್ಲಿ 65ಕ್ಕೂ ಹೆಚ್ಚು ಬೈಕ್ ಡೀಲರ್ಸ್ಗಳು ತೆರೆಯಲಾಗುತ್ತಿದ್ದು, ಬೆಂಗಳೂರಿನಲ್ಲೂ ಕೂಡಾ ಇದೀಗ ಮೂರು ಕಡೆ ಜಾವಾ ಖರೀದಿಗೆ ಲಭ್ಯವಿರಲಿವೆ.
ಬೆಂಗಳೂರಿನಲ್ಲಿ ಎಲ್ಲೆಲ್ಲಿ ಖರೀದಿಗೆ ಲಭ್ಯ..!
ನಗರದ ಮೂರು ಕಡೆಗಳಲ್ಲಿ ಜಾವಾ ಹೊಸ ಡೀಲರ್ಸ್ಗಳು ಲಭ್ಯವಿರಲಿದ್ದು, ರಾಜಾಜಿನಗರದ ಡಾ.ರಾಜಕುಮಾರ್ ರಸ್ತೆಯಲ್ಲಿರುವ ಸ್ಕಂದ್ ಮೋಟಾರ್ಸ್ ಡೀಲರ್ಸ್ಗೆ ಇಂದು ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.
ಹೊಸ ಬೈಕ್ ಪ್ರದರ್ಶನಕ್ಕೆ ಸಾಕಷ್ಟು ಸ್ಥಳಾವಕಾಶವನ್ನು ಹೊಂದಿರುವ ಸ್ಕಂದ್ ಮೋಟಾರ್ಸ್, ಗ್ರಾಹಕರ ಆಕರ್ಷಣೆಗಾಗಿ ಈ ಹಿಂದಿನ ಜನಪ್ರಿಯ ಜಾವಾ ಬೈಕ್ ಮಾದರಿಯನ್ನು ಪ್ರದರ್ಶನ ಮಾಡಿರುವುದು ಮೋಟಾರ್ಸೈಕಲ್ ಪ್ರಿಯರ ಗಮನಸೆಳೆಯುತ್ತಿದೆ.
ಇನ್ನುಳಿದ ಎರಡು ಜಾವಾ ಡೀಲರ್ಸ್ಗಳು ಬಸವನಗುಡಿಯ ನೆಟ್ಟಕಲ್ಲಪ್ಪ ಸರ್ಕಲ್ ಬಳಿ ಹಾಗೂ ಇಂದಿರಾನಗರದ ಚಿನ್ಮಯ ಮಿಷನ್ ಹಾಸ್ಪಿಟಲ್ ರಸ್ತೆಯಲ್ಲಿ ತೆರಲಾಗುತ್ತಿದ್ದು, ಮುಂದಿನ ಒಂದು ವಾರದೊಳಗಾಗಿ ಈ ಎರಡು ಶೋರೂಂಗಳಿಗೂ ಸಹ ಚಾಲನೆ ಸಿಗುವುದು ಬಹುತೇಕ ಖಚಿತವಾಗಿದೆ.
ಹಾಗೆಯೇ ಜನವರಿ ಆರಂಭದಲ್ಲಿ ಜಿಲ್ಲಾವಾರುವ ಜಾವಾ ಡೀಲರ್ಸ್ ಪಟ್ಟಿ ಬಿಡುಗಡೆ ಮಾಡಲಿರುವ ಮಹೀಂದ್ರಾ ಸಂಸ್ಥೆಯು ರಾಯಲ್ ಎನ್ಫೀಲ್ಡ್ಗೆ ತೀವ್ರವಾಗಿ ಪೈಪೋಟಿ ನೀಡುವ ಗುರಿಹೊಂದಿದ್ದು, ಹೊಸ ಬೈಕ್ ವಿನ್ಯಾಸಗಳು ಮತ್ತು ಕೈಗೆಟುಕುವ ಬೆಲೆ ಪಟ್ಟಿಯಿಂದಾಗಿ ಜಾವಾ ಖರೀದಿ ಮೌಲ್ಯವನ್ನು ಹೆಚ್ಚಿಸಿವೆ.
ಮಹೀಂದ್ರಾ ಸಂಸ್ಥೆಯು ಸದ್ಯಕ್ಕೆ ಮೂರು ಹೊಸ ಬೈಕ್ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ, ಜಾವಾ 42 ಬೈಕ್ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಜಾವಾ ಪೆರಾಕ್ ಎನ್ನುವ ಮಾದರಿಯನ್ನು ಕೇವಲ ಅನಾವರಣಗೊಳಿಸಿ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.
ಹೊಸ ಬೈಕ್ಗಳ ಬೆಲೆಯನ್ನು ದೆಹಲಿ ಎಕ್ಸ್ಶೋರೂಂ ಪ್ರಕಾರ ಜಾವಾ ಮಾದರಿಗೆ ರೂ. 1.64 ಲಕ್ಷ, ಜಾವಾ 42 ಮಾದರಿಗೆ ರೂ. 1.55 ಲಕ್ಷ ಮತ್ತು ಅನಾವರಣ ಮಾಡಲಾದ ಜಾವಾ ಪೆರಾಕ್ ಬೈಕಿಗೆ ರೂ. 1.89 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.
MOST READ: ರಾಜ್ಯ ಸರ್ಕಾರದಿಂದ ಹೊಸ ಕಾನೂನು- ವಾಹನಗಳ ಖರೀದಿ ಇನ್ಮುಂದೆ ಅಷ್ಟು ಸುಲಭವಲ್ಲ..!
ಮಾರುಕಟ್ಟೆಗೆ ಲಗ್ಗೆಯಿಟ್ಟ ಜಾವಾ ಮತ್ತು ಜಾವಾ 42 ಬೈಕ್ಗಳು ರೆಟ್ರೋ ವಿನ್ಯಾಸವನ್ನು ಪಡೆದುಕೊಂಡಿದ್ದು, ಈ ಹಿಂದೆ ಮಾರಾಟಗೊಳ್ಳುತ್ತಿದ್ದ ಬೈಕ್ಗಳಂತೆಯೇ ಕಾಣುತ್ತಿದ್ದರೂ ಸಹ ಹೊಸ ಎಂಜಿನ್ ಮತ್ತು ಸುರಕ್ಷಾ ಸೌಲಭ್ಯಗಳು ಪ್ರಮುಖ ಆಕರ್ಷಣೆಯಾಗಿವೆ.
ಜಾವಾ ಸಂಸ್ಥೆಯು ತನ್ನ ಗತಕಾಲದ ವೈಭವವನ್ನು ಕಾಪಾಡಲು ನೂತನ ಬೈಕುಗಳ ವಿನ್ಯಾಸದಲ್ಲಿ ಸುಧಾರಿತ ಮಾದರಿಯ ಬೈಕಿನ ಸ್ಪೀಡೋ ಮೀಟರ್, ಡ್ಯೂಮ್ ನ ಕ್ಲಾಸಿಕ್ ಲುಕ್ ಅನ್ನು ಹಾಗೇ ಉಳಿಸಿ, ಹೊಸದಾಗಿ ಟೂಲ್ ಬಾಕ್ಸ್ ಅನ್ನು ಸೇರಿಸುವ ಮೂಲಕ ಬೈಕಿನ ಅಂದವನ್ನು ಹೆಚ್ಚುವಂತೆ ಮಾಡಿದೆ. ಅಲ್ಲದೇ ಈ ಮೂರು ಬೈಕುಗಳು ಬಿಎಸ್6 ಮಾದರಿಯನ್ನು ಒಳಗೊಂಡಿವೆ.
ಎಂಜಿನ್ ಸಾಮರ್ಥ್ಯ
ಜಾವಾ ಮತ್ತು ಜಾವಾ 42 ಬೈಕ್ಗಳು 293ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 27ಬಿಹೆಚ್ಪಿ ಮತ್ತು 28ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಮತ್ತೊಂದು ಕಡೆ ಬಾಬರ್ ವಿನ್ಯಾಸದ ಜಾವಾ ಪೆರಾಕ್ ಬೈಕ್ 334ಸಿಸಿ ಎಂಜಿನ್ ಅನ್ನು ಪಡೆದುಕೊಳ್ಳಲಿದೆ.
MOST READ: ಪೆಟ್ರೋಲ್ ಬಂಕ್ಗಳಲ್ಲಿ ಹೇಗೆ ನಡೆಯುತ್ತೆ ನೋಡಿ ಹಗಲು ದರೋಡೆ..!
ರಾಯಲ್ ಎನ್ಫೀಲ್ಡ್ಗೆ ತಳಮಳ..!
ಆಕರ್ಷಕ ಬೆಲೆಗಳು ಮತ್ತು ತಾಂತ್ರಿಕವಾಗಿ ಬಲಿಷ್ಠವಾಗಿರುವ ಜಾವಾ ಬೈಕ್ಗಳು ರಾಯಲ್ ಎನ್ಫೀಲ್ಡ್ ಸಂಸ್ಥೆಯನ್ನೇ ಗುರಿಯಾಗಿಸಿ ಹೊಸ ಉತ್ಪನ್ನಗಳನ್ನು ಅಭಿವೃದ್ಧಿಗೊಳಿಸುತ್ತಿದ್ದು, ಜಾವಾ ಮತ್ತು ಜಾವಾ 42 ಬೈಕ್ಗಳು ಕ್ಲಾಸಿಕ್ 350 ಬೈಕ್ಗಳಿಗೆ ಹೆಚ್ಚಿನ ಪೈಪೋಟಿ ನೀಡುತ್ತಿವೆ.
ಇದಕ್ಕೆ ಉದಾಹರಣೆ ಅಂದ್ರೆ, ಅಕ್ಟೋಬರ್ ಅವಧಿಯಲ್ಲಿನ ಬೈಕ್ ಮಾರಾಟಕ್ಕೂ ಮತ್ತೆ ನವೆಂಬರ್ ಅವಧಿಯಲ್ಲಿನ ಬೈಕ್ ಮಾರಾಟಕ್ಕೂ ಶೇ.10 ರಷ್ಟು ನಷ್ಟ ಅನುಭವಿಸಿರುವ ರಾಯಲ್ ಎನ್ಫೀಲ್ಡ್ ಸಂಸ್ಥೆಯು, ಜಾವಾ ಅಬ್ಬರದ ಮುಂದೆ ಕಂಗಾಲಾಗಿ ಹೋಗಿದೆ.
ಇದು ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿದ್ದು, ರಾಯಲ್ ಎನ್ಫೀಲ್ಡ್ ಬೈಕ್ ಮಾರಾಟಕ್ಕೆ ಶೇ.100ರಷ್ಟು ಪೈಪೋಟಿ ನೀಡಬೇಕು ಎನ್ನುವ ಜಾವಾ ಗುರಿಗೆ ಮೊದಲ ಜಯ ಸಿಕ್ಕಿದೆ. ಹೀಗಾಗಿ ಜನವರಿಯಿಂದ ರಸ್ತೆಗಿಳಿಯಲಿರುವ ಜಾವಾ ಬೈಕ್ಗಳು ಮತ್ತಷ್ಟು ಹವಾ ಸೃಷ್ಠಿಸುವುದರಲ್ಲಿ ಎರಡು ಮಾತಿಲ್ಲ.
ಜೊತೆಗೆ ರಾಯಲ್ ಎನ್ಫೀಲ್ಡ್ ಖರೀದಿಸುವ ಗ್ರಾಹಕರನ್ನ ತನ್ನತ್ತ ಸೆಳೆಯುವ ಉದ್ದೇಶ ಮತ್ತೊಂದು ಯೋಜನೆ ಆರಂಭಿಸಿರುವ ಜಾವಾ ಸಂಸ್ಥೆಯು, ದೇಶದ ವಿವಿಧ ನಗರಗಳಲ್ಲಿ ನೆಲೆಗೊಂಡಿರುವ ರಾಯಲ್ ಎನ್ಫೀಲ್ಡ್ ಶೋರೂಂಗಳ ಎದುರಲ್ಲೇ ಹೊಸ ಜಾವಾ ಬೈಕ್ ಡೀಲರ್ಸ್ ತೆರೆಯುವುದಾಗಿ ಹೇಳಿಕೊಂಡಿರುವುದು ಮಾರಾಟದಲ್ಲಿ ಮತ್ತಷ್ಟು ಜಿದ್ದಾಜಿದ್ದಿಗೆ ಕಾರಣವಾಗಿದೆ.
ಒಟ್ಟಿನಲ್ಲಿ ಭಾರತೀಯ ಗ್ರಾಹಕರ ಅಭಿರುಚಿಗಳನ್ನು ಅರಿತು ಜಾವಾ ಬೈಕ್ಗಳಲ್ಲಿ ಹೊಸ ಬದಲಾವಣೆ ತಂದಿರುವ ಮಹೀಂದ್ರಾ ಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಜಾವಾ ಬೈಕ್ಗಳನ್ನು ಹೊರತರುವ ಇರಾದೆಯಲ್ಲಿದ್ದು, ಮುಂದಿನ ದಿನಗಳಲ್ಲಿ ಯಾವ ಮಟ್ಟಿಗೆ ಬೇಡಿಕೆ ಗಿಟ್ಟಿಸಿಕೊಳ್ಳಲಿವೆ ಎನ್ನವುದನ್ನು ಕಾಯ್ದುನೋಡಬೇಕಿದೆ.