ಕೆಟಿಎಂ 390 ಅಡ್ವೆಂಚರ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವುದು ಕನ್ಫರ್ಮ್

ಕೆಟಿಎಂ ಸಂಸ್ಥೆಯು ಸದ್ಯದಲ್ಲೇ 390 ಅಡ್ವೆಂಚರ್ ಮತ್ತು ಆರ್‌ಸಿ 390 ಅಡ್ವೆಂಚರ್ ಬೈಕ್‌ಗಳನ್ನು ಬಿಡುಗಡೆಗೊಳಿಸುವ ತವಕದಲ್ಲಿದ್ದು, ಇದೀಗ ಹೊಸ ಬೈಕ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡುವ ಕುರಿತು ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದೆ.

By Praveen Sannamani

ಸೂಪರ್ ಬೈಕ್ ಉತ್ಪಾದನೆ ಮತ್ತು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಕೆಟಿಎಂ ಸಂಸ್ಥೆಯು ಸದ್ಯದಲ್ಲೇ 390 ಅಡ್ವೆಂಚರ್ ಮತ್ತು ಆರ್‌ಸಿ 390 ಅಡ್ವೆಂಚರ್ ಬೈಕ್‌ಗಳನ್ನು ಬಿಡುಗಡೆಗೊಳಿಸುವ ತವಕದಲ್ಲಿದ್ದು, ಇದೀಗ ಹೊಸ ಬೈಕ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡುವ ಕುರಿತು ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದೆ.

ಕೆಟಿಎಂ 390 ಅಡ್ವೆಂಚರ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವುದು ಕನ್ಫರ್ಮ್

ಕೆಟಿಎಂ ಸಂಸ್ಥೆಯು ಬಿಡುಗಡೆ ಮಾಡಲು ನಿರ್ಧರಿಸಿರುವ 390 ಅಡ್ವೆಂಚರ್ ಬೈಕ್‌ಗಳು ಕೆಟಿಎಂ ಜನಪ್ರಿಯ 1290 ಸೂಪರ್ ಅಡ್ವೆಂಚರ್ ಹೋಲಿಕೆಯನ್ನೇ ಪಡೆದುಕೊಂಡಿದ್ದು, ಇನ್ನು ಆರ್‌ಸಿ 390 ಬೈಕ್‌ಗಳು ಸದ್ಯ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲಿ ಕೆಲವು ಅಡ್ವೆಂಚರ್ ವೈಶಿಷ್ಟ್ಯತೆಗಳನ್ನು ಹೊತ್ತು ಮಾರುಕಟ್ಟೆ ಪ್ರವೇಶ ಮಾಡುವ ಸಾಧ್ಯತೆಗಳಿವೆ.

ಕೆಟಿಎಂ 390 ಅಡ್ವೆಂಚರ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವುದು ಕನ್ಫರ್ಮ್

ಎಂಜಿನ್ ಸಾಮರ್ಥ್ಯ

ಬಿಡುಗಡೆಗೆ ಸಜ್ಜಾದ ಕೆಟಿಎಂ 390 ಅಡ್ವೆಂಚರ್ ಬೈಕ್‌ಗಳು 373ಸಿಸಿ ಲಿಕ್ವಿಡ್ ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿರಲಿದ್ದು, ಬೆಸ್ಟ್ ಪರ್ಫಾಮೆನ್ಸ್ ಮಾದರಿಯಾಗಿ 44-ಬಿಎಚ್‌ಪಿ ಮತ್ತು 35-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲವು.

ಕೆಟಿಎಂ 390 ಅಡ್ವೆಂಚರ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವುದು ಕನ್ಫರ್ಮ್

ಜೊತೆಗೆ 6-ಸ್ಪೀಡ್ ಗೇರ್‌ಬಾಕ್ಸ್ ಅಳವಡಿಕೆ ಹೊಂದಿರುವ ಕೆಟಿಎಂ 390 ಅಡ್ವೆಂಚರ್ ಬೈಕ್‌ ಮಾದರಿಯು, ಸುಧಾರಿತ ವಿನ್ಯಾಸಗಳಾದ ಟಿಪಿಎಫ್ ಇನ್ಟ್ರುಮೆಂಟ್ ಡಿಸ್‌ಪ್ಲೇ, ಲಾಂಗ್ ಟ್ರಾವೆಲ್ ಫ್ರಂಟ್ ಮತ್ತು ರಿಯರ್ ಸಸ್ಷೆನ್ ಜೋಡಣೆ ಹೊಂದಿರಲಿವೆ.

ಕೆಟಿಎಂ 390 ಅಡ್ವೆಂಚರ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವುದು ಕನ್ಫರ್ಮ್

ಇವುಗಳಲ್ಲದೇ ಬೈಕಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್ ತಂತ್ರಜ್ಞಾನದೊಂದಿಗೆ ಡ್ಯುಯಲ್ ಡಿಸ್ಕ್ ಬ್ರೇಕ್, ಸ್ಲಿಪ್ಪರ್ ಕ್ಲಚ್, ರೈಡ್ ಬೈ ವೈರ್ ಟೆಕ್ನಾಲಜಿ ಮತ್ತು ಪರ್ಫಾಮೆನ್ಸ್‌ಗೆ ಸಹಕಾರಿಯಾಗಬಲ್ಲ ಡ್ಯುಯಲ್-ಸ್ಪೋಟ್ ಟೈರ್ ಮಾದರಿಗಳನ್ನು ಬಳಕೆ ಮಾಡಲಾಗಿದೆ.

ಕೆಟಿಎಂ 390 ಅಡ್ವೆಂಚರ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವುದು ಕನ್ಫರ್ಮ್

ಬಿಡುಗಡೆಯ ಅವಧಿ ಮತ್ತು ಬೆಲೆಗಳು (ಅಂದಾಜು)

2019ರ ಆರಂಭದಲ್ಲಿ 390 ಅಡ್ವೆಂಚರ್ ಬೈಕ್‌ಗಳನ್ನು ಬಿಡುಗಡೆಗೊಳಿಸಲು ಯೋಜಿಸಿರುವ ಕೆಟಿಎಂ ಸಂಸ್ಥೆಯು ಹೊಸ ಬೈಕಿನ ಬೆಲೆಯನ್ನು ಎಕ್ಸ್‌ಶೋರಂ ಪ್ರಕಾರ ರೂ. 2.70 ಲಕ್ಷದಿಂದ ರೂ. 3 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಕೆಟಿಎಂ 390 ಅಡ್ವೆಂಚರ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವುದು ಕನ್ಫರ್ಮ್

ಪ್ರತಿಸ್ಪರ್ಧಿಗಳು

ಕೆಟಿಎಂ 390 ಅಡ್ವೆಂಚರ್ ಬೈಕ್‌ಗಳು ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಗೊಂಡಿದ್ದೆ ಆದಲ್ಲಿ ಮಾರುಕಟ್ಟೆಯಲ್ಲಿರುವ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಮತ್ತು ಬಿಡುಗಡೆಗಾಗಿ ಸಜ್ಜಾದ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್‌ಗಳಿಗೆ ತೀವ್ರ ಪೈಪೋಟಿ ನೀಡಲಿದೆ.

ಕೆಟಿಎಂ 390 ಅಡ್ವೆಂಚರ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವುದು ಕನ್ಫರ್ಮ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಭಾರತೀಯ ಮಾರುಕಟ್ಟೆಯಲ್ಲಿ ಅಡ್ವೆಂಚರ್ ಆವೃತ್ತಿಗಳಿಗೆ ವಿಶೇಷ ಬೇಡಿಕೆಯಿದ್ದು, ಈ ಹಿನ್ನೆಲೆಯಲ್ಲಿ ಕೆಟಿಎಂ ಸಂಸ್ಥೆಯು ತನ್ನ ಬಹುನೀರಿಕ್ಷಿತ 390 ಅಡ್ವೆಂಚರ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ. ನಿಗದಿತ ಅವಧಿಯಲ್ಲಿ ಬಿಡುಗಡೆಗೊಂಡಲ್ಲಿ ಹೊಸ ಬೈಕ್‌ಗಳು ಮಾರುಕಟ್ಟೆ ಸಂಚಲನ ಸೃಷ್ಠಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಬೈಕ್‌ಗಳಲ್ಲಿ ಡ್ರಮ್ ಬ್ರೇಕ್‍‍ಗಳಿಗಿಂತ ಡಿಸ್ಕ್ ಬ್ರೇಕ್‍ ಏಕೆ ಉತ್ತಮ ಗೊತ್ತಾ..?

ಐಷಾರಾಮಿ ಕಾರುಗಳನ್ನೆ ಟ್ರ್ಯಾಕ್ಟರ್‍‍ಗಳನ್ನಾಗಿ ಪರಿವರ್ತಿಸಿದ ರೈತರು..!!

ಕೈಗೆಟುಕುವ ಬೆಲೆಗಳಲ್ಲಿ ಖರೀದಿಸಬಹುದಾದ ಬೆಸ್ಟ್ ಎಸ್‌ಯುವಿ ಕಾರುಗಳಿವು..

ರೋಲ್ಸ್‌ ರಾಯ್ಸ್‌ ಕಲಿನಿಯನ್ ಎಸ್‌ಯುವಿ ಕಾರಿಗಾಗಿ ಭಾರತದಿಂದ ಮೊದಲ ಬುಕ್ಕಿಂಗ್..

ಹೈವೇಯಲ್ಲಿ ಡ್ರೈವಿಂಗ್ ಮಾಡಲು 11 ಬಹುಮೂಲ್ಯ ಟಿಪ್ಸ್ ಫಾಲೋ ಮಾಡಿ..

Article Published On: Thursday, June 14, 2018, 20:18 [IST]
English summary
KTM 390 Adventure India Launch Details Confirmed: Specifications, Images & More.
Read more on ktm ಕೆಟಿಎಂ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+