ಬಿಡುಗಡೆಗೊಂಡಿರುವ ಕೆಟಿಎಂ ಡ್ಯೂಕ್ 125 ಬೈಕಿನ ಸ್ಪೆಷಲ್ ಹೈಲೈಟ್ಸ್ ಏನು?
ಯುವಸಮುದಾಯವನ್ನೇ ಗುರಿಯಾಗಿಸಿಕೊಂಡು ಇದುವರೆಗೆ ಹಲವು ಮಾದರಿಯ ಪರ್ಫಾಮೆನ್ಸ್ ಬೈಕ್ ಆವೃತ್ತಿಗಳನ್ನು ಹೊರತಂದಿರುವ ಕೆಟಿಎಂ ಸಂಸ್ಥೆಯು ಈ ಬಾರಿ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ತನ್ನ ಬೈಕ್ ಸರಣಿಯಲ್ಲಿ ಅತಿ ಹೆಚ್ಚು ಬೇಡಿಕೆ ಹೊಂದಿರುವ ಡ್ಯೂಕ್ ಆವೃತ್ತಿಯಲ್ಲಿ 125ಸಿಸಿ ಹೊಸ ಬೈಕ್ ಅನ್ನು ಪರಿಚಿಯಿಸಿರುವುದು ಮತ್ತಷ್ಟು ವಿಶೇಷತೆಗೆ ಕಾರಣವಾಗಿದೆ.

ಕೆಟಿಎಂ ಬೈಕ್ ಉತ್ಪಾದನಾ ಸಂಸ್ಥೆಯು ವಿವಿಧ ಮಾದರಿಯ ಬೈಕ್ ಉತ್ಪನ್ನಗಳೊಂದಿಗೆ ಭಾರತದಲ್ಲಿ ಅಷ್ಟೇ ಅಲ್ಲದೇ ವಿದೇಶಿ ಮಾರುಕಟ್ಟೆಗಳಲ್ಲೂ ಜನಪ್ರಿಯತೆ ಸಾಧಿಸಿದ್ದು, ಇದೀಗ ಮತ್ತೊಮ್ಮೆ ಬೈಕ್ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲು ಎಂಟ್ರಿ ಲೆವಲ್ 125 ಡ್ಯೂಕ್ ಬೈಕ್ ಮಾದರಿಯನ್ನ ಅಭಿವೃದ್ಧಿಗೊಳಿಸಲಾಗಿದೆ.

ಡ್ಯೂಕ್ 125 ಬೈಕ್ ಮಾದರಿಗಳು ಈಗಾಗಲೇ ವಿದೇಶಿ ಮಾರುಕಟ್ಟೆಗಳಲ್ಲಿ 'ಬೇಬಿ ಡ್ಯೂಕ್' ಹೆಸರಿನೊಂದಿಗೆ ಸಾಕಷ್ಟು ಜನಪ್ರಿಯತೆ ಸಾಧಿಸಿದ್ದು, ಇದೀಗ ಭಾರತದಲ್ಲೂ ಹೊಸ ಬೈಕ್ ಉತ್ಪನ್ನವನ್ನು ಪರಿಚಯಿಸುವ ಮೂಲಕ ಪರ್ಫಾಮೆನ್ಸ್ ಬೈಕ್ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆಯುವ ತವಕದಲ್ಲಿದೆ.

ಕೆಟಿಎಂ ನಿರ್ಮಾಣದ ದುಬಾರಿ ಬೆಲೆಯ 1290 ಸೂಪರ್ ಡ್ಯೂಕ್ ಬೈಕಿನ ಡಿಸೈನ್ ಪ್ರೇರಿಣೆ ಹೊಂದಿರುವ ಬೇಬಿ ಡ್ಯೂಕ್(ಡ್ಯೂಕ್ 125) ಬೈಕ್ ಮಾದರಿಯನ್ನು ಹೊರತಂದಿರುವುದು ಸ್ಪೋರ್ಟಿ ಪರ್ಫಾಮೆನ್ಸ್ ಬೈಕ್ ಪ್ರಿಯರಿಗೆ ಹಬ್ಬವೇ ಸರಿ.

ಸದ್ಯ ಮಾರುಕಟ್ಟೆಯಲ್ಲಿರುವ ಡ್ಯೂಕ್ 200 ಬೈಕಿನಂತೆಯೇ ಬಹುತೇಕ ಹೋಲಿಕೆಯನ್ನೇ ಹೊಂದಿರುವ ಹೊಸ ಡ್ಯೂಕ್ 125 ಬೈಕ್ ಮಾದರಿಯು, ಎಂಜಿನ್ ವಿಭಾಗದ ರಕ್ಷಣೆಗಾಗಿ ಅಲ್ಯುಮಿನಿಯಂ ಸ್ವಿಂಗ್ ಆರ್ಮ್ ಸೌಲಭ್ಯವನ್ನು ಪಡೆದುಕೊಂಡಿದೆ.

ಎಂಜಿನ್ ಮತ್ತು ಟಾಪ್ ಸ್ಪೀಡ್
125 ಡ್ಯೂಕ್ ಬೈಕ್ ಮಾದರಿಯು 124.7-ಸಿಸಿ ಲಿಕ್ವಿಡ್ ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿರಲಿದ್ದು, 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 14.3-ಬಿಎಚ್‌ಪಿ ಮತ್ತು 12-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಪಡೆದುಕೊಂಡಿದೆ.

ಈ ಮೂಲಕ 3.5 ಸೇಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮಿ ವೇಗ ಪಡೆದುಕೊಳ್ಳುವ ಗುಣಹೊಂದಿರುವ ಡ್ಯೂಕ್ 125 ಬೈಕ್ ಮಾದರಿಯು, ಗಂಟೆಗೆ 125ಕಿ.ಮಿ ಟಾಪ್ ಸ್ಪೀಡ್‌ನೊಂದಿಗೆ ಉತ್ತಮ ಪರ್ಫಾಮೆನ್ಸ್ ನೀಡಬಲ್ಲದು. ಹಾಗೆಯೇ 10.5-ಲೀಟರ್ ಫ್ಯೂಲ್ ಟ್ಯಾಂಕ್ ಜೋಡಣೆ ಹೊಂದಿರುವ ಡ್ಯೂಕ್ 125 ಬೈಕ್ ಪ್ರತಿ ಲೀಟರ್‌ಗೆ 35 ಕಿ.ಮಿ ಇಂಧನ ದಕ್ಷತೆ ಹೊಂದಿರಲಿದೆ.

ಬೈಕಿನ ವೈಶಿಷ್ಟ್ಯತೆ
ಟಿಪಿಎಫ್ ಇನ್ಟ್ರಮೆಂಟ್ ಕ್ಲಸ್ಟರ್‌ನೊಂದಿಗೆ 148 ಕೆಜಿ ತೂಕ ಹೊಂದಿರುವ ಡ್ಯೂಕ್ 125 ಬೈಕ್ ಮಾದರಿಯಲ್ಲಿ 818ಎಂಎಂ ಎತ್ತರದ ಆಸನ ಸೌಲಭ್ಯ ಹೊಂದಿದ್ದು, ಹಿಂಬದಿಯ ಸವಾರರ ಆಸನ ಇದ್ದರೂ ಸಹ ಅಷ್ಟಾಗಿ ಸ್ಥಳಾವಕಾಶ ನೀಡಿಲ್ಲ. ಹೀಗಾಗಿ ಡ್ಯೂಕ್ 125 ಬೈಕ್ ಮಾದರಿಯ ಸಿಂಗಲ್ ರೈಡ್‌ಗೆ ಮಾತ್ರ ಉತ್ತಮವಾಗಿರಲಿದೆ.

ಟೈರ್ ಮತ್ತು ಬ್ರೇಕಿಂಗ್ ಸೌಲಭ್ಯ
ಡ್ಯೂಕ್ 125 ಬೈಕಿನಲ್ಲಿ ಬ್ರೇಕಿಂಗ್ ಸೌಲಭ್ಯಗಳು ಮುಖ್ಯ ಆಕರ್ಷಣೆಯಾಗಿದ್ದು, 43 ಎಂಎಂ ಅಪ್ ಸೈಡ್ ಡೌನ್ ಫೋರ್ಕ್ ಮತ್ತು ಹೋಂದಾಣಿಕೆ ಮಾಡಬಲ್ಲ ಮೊನೋಶಾರ್ಕ್ ಸೌಲಭ್ಯದೊಂದಿಗೆ 300ಎಂಎಂ ಫ್ರಂಟ್ ಡಿಸ್ಕ್ ಮತ್ತು 230ಎಂಎಂ ಡಿಸ್ಕ್ ಬ್ರೇಕ್ ಪಡೆದಿದೆ.
MOST READ: ನಿಯಂತ್ರಣ ತಪ್ಪಿ ಭೀಕರ ಅಪಘಾತ- ನೆಕ್ಸಾನ್ ಕಾರಿನಲ್ಲಿದ್ದವರು ಸೇಫ್ ಆಗಿದ್ದು ಹೇಗೆ?

ಬೈಕಿನ ಬೆಲೆ(ಎಕ್ಸ್‌ಶೋರೂಂ ಪ್ರಕಾರ)
ದೆಹಲಿ ಎಕ್ಸ್‌ಶೋರೂಂ ಪ್ರಕಾರ ಡ್ಯೂಕ್ 125 ಮಾದರಿಯು 1.18 ಲಕ್ಷ ಬೆಲೆ ಪಡೆದಿದ್ದು, ಕಡಿಮೆ ಸಾಮರ್ಥ್ಯದ ಎಂಜಿನ್ ಹೊಂದಿದ್ದರು ಪರ್ಫಾಮೆನ್ಸ್ ವಿಚಾರದಲ್ಲಿ ಗಮನಸೆಳೆಯುವ ಬೈಕಿನ ಬೆಲೆಗಳು ಸ್ಪರ್ಧಾತ್ಮಕವಾಗಿವೆ ಎನ್ನಬಹುದು.

ಪ್ರತಿಸ್ಪರ್ಧಿಗಳು
ಎಂಟ್ರಿ ಲೆವಲ್ ಪರ್ಫಾಮೆನ್ಸ್ ಬೈಕ್ ಮಾದರಿಗಳಾದ ಯಮಹಾ ಆರ್15 ವಿ3.0, ಟಿವಿಎಸ್ ಅಪಾಚೆ ಆರ್‌ಟಿಆರ್ 160 4ವಿ ಮತ್ತು ಬಜಾಜ್ ಪಲ್ಸರ್ ಎನ್ಎಸ್160 ಬೈಕ್‌ಗಳಿಗೆ ಸರಿಸಮನಾಗಿ ಪರ್ಫಾಮೆನ್ಸ್ ತೊರುವ ಡ್ಯೂಕ್ 125 ಹಲವು ವಿಶೇಷತೆಗಳಿಗೆ ಕಾರಣವಾಗಿದೆ.
MOST READ: ಹೈವೆನಲ್ಲಿ ದರೋಡೆ ಮಾಡುತ್ತಿದ್ದ ಖದೀಮರಿಗೆ ಡಿಸಿಪಿ ಅಣ್ಣಾಮಲೈ ಮಾಸ್ಟರ್ ಸ್ಟ್ರೋಕ್..!

ಬೈಕ್ ಬುಕ್ಕಿಂಗ್ ಪ್ರಕ್ರಿಯೆ
ಕೆಟಿಎಂ ಸಂಸ್ಥೆಯು ಹೊಸ ಡ್ಯೂಕ್ 125 ಬೈಕ್ ಬಿಡುಗಡೆಗೂ ಒಂದು ವಾರದ ಮುನ್ನವೇ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ರೂ.1 ಸಾವಿರ ಮುಂಗಡ ನೀಡಿ ಬುಕ್ಕಿಂಗ್ ಮಾಡಬಹುದಾಗಿದೆ. ಇನ್ನು ಹೊಸ ಬೈಕ್‌ಗಳು ಈಗ ಬಿಡುಗಡೆಯಾಗಿದ್ದರೂ ಸಹ ಡಿ.15 ನಂತರವೇ ಬೈಕ್ ವಿತರಣೆಗೆ ಚಾಲನೆ ಸಿಗಲಿದೆ ಎನ್ನಲಾಗಿದೆ.


Click it and Unblock the Notifications