ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್‌ಗೆ ತಳಮಳ ಶುರು..!

ಭಾರತದಲ್ಲಿ ಬಿಡುಗಡೆಗೂ ಮುನ್ನವೇ ಬೈಕ್ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಜಾವಾ ಹೊಚ್ಚ ಹೊಸ ಬೈಕ್‌ಗಳನ್ನು ಮಹೀಂದ್ರಾ ಅಂಡ್ ಮಹೀಂದ್ರಾ ಸಂಸ್ಥೆಯು ನಿನ್ನೆಯಷ್ಟೇ ಬಿಡುಗಡೆಗೊಳಿಸಿದ್ದು, ಹೊಸ ಬೈಕ್‌ಗಳು ಹಳೆಯ ಜಾವಾ ಮೋಟರ್​‌ಸೈಕಲ್​ನ ಹೊಸ ರೂಪದಂತಿವೆ ಎಂದ್ರೆ ತಪ್ಪಾಗುವುದಿಲ್ಲ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಜಾವಾ ಬೈಕ್‌ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಸಂಸ್ಥೆಯು ಯಶಸ್ವಿಯಾಗಿದೆ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಮಹೀಂದ್ರಾ ಸಂಸ್ಥೆಯು ಸದ್ಯ ಮೂರು ಬೈಕ್‌ಗಳನ್ನು ಹೊರತಂದಿದ್ದು, ಇದರಲ್ಲಿ ಜಾವಾ, ಜಾವಾ 42 ಬೈಕ್‌ಗಳನ್ನ ಬಿಡುಗಡೆ ಮಾಡಿದಲ್ಲಿ ಇದರಲ್ಲಿ ಜಾವಾ ಪೆರಾಕ್ ಎನ್ನುವ ಮಾದರಿಯನ್ನು ಕೇವಲ ಅನಾವರಣಗೊಳಿಸಿ ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಹೊಸ ಬೈಕ್‌ಗಳ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಜಾವಾ ಮಾದರಿಗೆ ರೂ. 1.64 ಲಕ್ಷ, ಜಾವಾ 42 ಮಾದರಿಗೆ ರೂ. 1.55 ಲಕ್ಷ ಮತ್ತು ಅನಾವರಣ ಮಾಡಲಾದ ಜಾವಾ ಪೆರಾಕ್ ಬೈಕಿಗೆ ರೂ. 1.89 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಜಾವಾ ಸಂಸ್ಥೆಯು ಗತಕಾಲದ ವೈಭವವನ್ನು ಕಾಪಾಡಲು ತನ್ನ ನೂತನ ಬೈಕುಗಳ ವಿನ್ಯಾಸದಲ್ಲಿ ಸುಧಾರಿತ ಮಾದರಿಯ ಬೈಕಿನ ಸ್ಪೀಡೋ ಮೀಟರ್, ಡ್ಯೂಮ್ ನ ಕ್ಲಾಸಿಕ್ ಲುಕ್ ಅನ್ನು ಹಾಗೇ ಉಳಿಸಿ, ಹೊಸದಾಗಿ ಟೂಲ್ ಬಾಕ್ಸ್ ಅನ್ನು ಸೇರಿಸುವ ಮೂಲಕ ಬೈಕಿನ ಅಂದವನ್ನು ಹೆಚ್ಚುವಂತೆ ಮಾಡಿದೆ. ಅಲ್ಲದೇ ಈ ಮೂರು ಬೈಕುಗಳು ಬಿಎಸ್6 ಮಾದರಿಯನ್ನು ಒಳಗೊಂಡಿದೆ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಜಾವಾ ಹಾಗೂ ಜಾವಾ 42 ಬೈಕ್‍ಗಳು ಮಧ್ಯಪ್ರದೇಶದಲ್ಲಿರುವ ಪಿಥಮ್‍ಪುರ್ ಮಹೀಂದ್ರಾ ಘಟಕದಲ್ಲಿ ಸಿದ್ದಗೊಳ್ಳುತ್ತಿದ್ದು, 2019ರ ಆರಂಭದಲ್ಲಿ ಬೈಕುಗಳು ಟೆಸ್ಟ್ ರೈಡ್‍ಗೆ ಸಿಗಲಿವೆ. ಜೊತೆಗೆ ಜಾವಾ ಪೆರಾಕ್ ಬೈಕ್ 2019ರ ಮಧ್ಯದಲ್ಲಿ ಗ್ರಾಹಕರಿಗೆ ತಲುಪಲಿದೆ ಎಂದು ಹೇಳಲಾಗುತ್ತಿದೆ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ರಾಯಲ್ ಎನ್‌‌ಫೀಲ್ಡ್‌ಗೆ ತಳಮಳ..!

ಜಾವಾ ಬಿಡುಗಡೆಗೊಳಿಸಿದ ಜಾವಾ ಮತ್ತು ಜಾವಾ 42 ಬೈಕ್‍ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ರಾಯಲ್ ಎನ್‍ಫೀಲ್ಡ್ 350 ಕ್ಲಾಸಿಕ್ ಬೈಕ್‍ಗಳೊಂದಿಗೆ ನೇರವಾಗಿ ಪ್ರತಿಸ್ಪರ್ಧಿಯಾಗಿವೆ ಎನ್ನಬಹುದು.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಮಾರುಕಟ್ಟೆಗೆ ಲಗ್ಗೆಯಿಟ್ಟ ಜಾವಾ ಮತ್ತು ಜಾವಾ 42 ಬೈಕ್‍ಗಳು ರೆಟ್ರೋ ವಿನ್ಯಾಸವನ್ನು ಪಡೆದುಕೊಂಡಿದ್ದು, ಈ ಹಿಂದೆ ಮಾರಾಟಗೊಳ್ಳುತ್ತಿದ್ದ ಬೈಕ್‍ಗಳಂತೆಯೇ ಕಾಣಲಿದೆ. ಆದರೆ ಈ ಬಾರಿ ಈ ಬೈಕ್‍ಗಳಲ್ಲಿ ಬಳಸಲಾದ ಎಂಜಿನ್ ಹೈಲೈಟ್ ಎಂದು ಹೇಳಲಾಗಿದೆ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಎಂಜಿನ್ ಸಾಮರ್ಥ್ಯ

ಜಾವಾ ಮತ್ತು ಜಾವಾ 42 ಬೈಕ್‌ಗಳು 293ಸಿಸಿ ಲಿಕ್ವಿಡ್-ಕೂಲ್ಡ್, ಸಿಂಗಲ್ ಸಿಲಿಂಡರ್ ಎಂಜಿನ್ ಸಹಾಯದಿಂದ 27ಬಿಹೆಚ್‍ಪಿ ಮತ್ತು 28ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಮತ್ತೊಂದು ಕಡೆ ಬಾಬರ್ ವಿನ್ಯಾಸದ ಜಾವಾ ಪೆರಾಕ್ ಬೈಕ್ 334ಸಿಸಿ ಎಂಜಿನ್ ಅನ್ನು ಪಡೆದುಕೊಳ್ಳಲಿದೆ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಲಭ್ಯವಿರುವ ಬಣ್ಣಗಳು

ಜಾವಾ ಬಿಡುಗಡೆಗೊಳಿಸಿದ ಈ ಎರಡು ಬೈಕ್‍ಗಳು ಆಕರ್ಷಕ ಬಣ್ಣದಲ್ಲಿ ಖರೀದಿಗೆ ಲಭ್ಯವಿದೆ. ಜಾವಾ ಬೈಕ್ - ಜಾವಾ ಬ್ಲಾಕ್, ಜಾವಾ ಮರೂನ್ ಮತ್ತು ಜಾವಾ ಗ್ರೇ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಇನ್ನು ಜಾವಾ 42 ಬೈಕ್ ಹಾಲಿಸ್ ಟೀಲ್, ಗ್ಲಾಕ್ಟಿಕ್ ಗ್ರೀನ್, ಸ್ಟಾರ್‍‍ಲೈಟ್ ಬ್ಲೂ, ಲುಮೊಸ್ ಲೈಮ್, ನೆಬ್ಯುಲಾ ಬ್ಲೂ ಮತ್ತು ಕೊಮೆಟ್ ರೆಡ್ ಎಂಬ ಆರು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

MOST READ: ಬಿಡುಗಡೆಗೊಂಡ ಆರ್‍ಇ 650 ಟ್ವಿನ್ ಬೈಕ್‍ಗಳು - ಬೆಲೆ ಕೇಳಿದ್ರೆ ಈಗಲೇ ಬುಕ್ ಮಾಡ್ತಿರಾ..!

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಸದ್ಯಕ್ಕೆ ಖರೀದಿಗೆ ಲಭ್ಯವಿಲ್ಲ..!

ಹೌದು, ಜಾವಾ ಸಂಸ್ಥೆಯು ಬಿಡುಗಡೆಗೊಳಿಸಿದ ಜಾವಾ ಮತ್ತು ಜಾವಾ 42 ಬೈಕ್‍ಗಳನ್ನು ಖರೀದಿಸಲು ಇಚ್ಛಿಸುವ ಗ್ರಾಹಕರು ಇನ್ನು ಕೆಲದಿನಗಳ ಕಾಲ ಕಾಯಬೇಕಾಗುತ್ತೆ. ಸದ್ಯಕ್ಕೆ ನಿಮ್ಮ ಸಮೀಪದಲ್ಲಿರುವ ಮಹೀಂದ್ರಾ ಡೀಲರ್‍‍ಗಳ ಹತ್ತಿರ ರೂ.5000 ಹಣವನ್ನು ಮುಂಗಡವಾಗಿ ಪಾವತಿಸಿ ಪ್ರೀ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದ್ದು, ಜನವರಿ ಆರಂಭದಿಂದ ಬೈಕ್ ವಿತರಣೆ ಆರಂಭವಾಗಲಿದೆ.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಇನ್ನ ಭಾರತದಲ್ಲಿ 80ರ ದಶಕದಲ್ಲಿ ತನ್ನದೆ ಆದ ಜನಪ್ರಿಯತೆ ಸಾಧಿಸಿ ಕ್ಲಾಸಿಕ್ ಬೈಕ್ ಪ್ರಿಯರ ಕ್ರೇಜ್‌ಗೆ ಕಾರಣವಾಗಿದ್ದ ಜಾವಾ ಸಂಸ್ಥೆಯು ತದನಂತರದ ದಿನಗಳಲ್ಲಿ ಭಾರೀ ನಷ್ಟ ಅನುಭವಿಸುವ ಮೂಲಕ ಮಾರುಕಟ್ಟೆಯಿಂದಲೇ ನಿರ್ಗಮಿಸಿತ್ತು.

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಆ ಬಳಿಕ ಬಿಎಸ್ಎ ಮೋಟಾರ್ ಸೈಕಲ್ ಸಂಸ್ಥೆಯ ಪಾಲಾಗಿದ್ದ ಜಾವಾ ಸಂಸ್ಥೆಯು ವಿವಿಧ ಮಾದರಿಯ ಬೈಕ್‌ಗಳನ್ನು ನಿರ್ಮಿಸಿದ್ದರೂ ಯಾವುದೇ ಸಂಚಲನ ಮೂಡಿಸಲಿಲ್ಲ. ಇದಾದ ನಂತರ 2016ರಲ್ಲಿ ಬಿಎಸ್ಎ ಸಂಸ್ಥೆಯಲ್ಲಿ ಮಹೀಂದ್ರಾ ಸಂಸ್ಥೆಯು ಪಾಲು ಹೊಂದುವ ಮೂಲಕ ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

MOST READ: ಭಾರತದಲ್ಲಿ ರೂ. 10 ಲಕ್ಷದೊಳಗೆ ಖರೀದಿ ಮಾಡಬಹುದಾದ ಉತ್ತಮ ಸುರಕ್ಷೆಯುಳ್ಳ ಕಾರುಗಳಿವು..!

ರಸ್ತೆಗಿಳಿದ ಹೊಸ ಜಾವಾ ಬೈಕ್‌ಗಳು- ರಾಯಲ್ ಎನ್‌ಫೀಲ್ಡ್ ತಳಮಳ ಶುರು..!

ಹೀಗಾಗಿಯೇ ಭಾರತೀಯ ಗ್ರಾಹಕರ ಅಭಿರುಚಿಗಳನ್ನು ಅರಿತು ಜಾವಾ ಬೈಕ್‌ಗಳಲ್ಲಿ ಹೊಸ ಬದಲಾವಣೆ ತಂದಿರುವ ಮಹೀಂದ್ರಾ ಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಜಾವಾ ಬೈಕ್‌ಗಳನ್ನು ಹೊರತರುವ ಇರಾದೆಯಲ್ಲಿದ್ದು, ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಏಕಸ್ವಾಮ್ಯ ಹೊಂದಿರುವ ರಾಯಲ್ ಎನ್‌ಫೀಲ್ಡ್‌ಗೆ ಭಾರೀ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Most Read Articles

ಬಿಡುಗಡೆಗೊಂಡ ಹೊಸ ಜಾವಾ ಬೈಕ್‌ಗಳ ಫೋಟೋ ಗ್ಯಾಲರಿ..!

Kannada
English summary
New Jawa Review (First Look): Everything To Know About The Classic Jawa Reincarnation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X