ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ರಾಯಲ್ ಎನ್‍ಫೀಲ್ಡ್ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಬಹುನಿರೀಕ್ಷಿತ 650 ಟ್ವಿನ್ ಬೈಕ್‍ಗಳನ್ನು ಪರಿಚಯಿಸಲು ಸಿದ್ದಗೊಳ್ಳುತ್ತಿದ್ದು, ಇದೇ ತಿಂಗಳು ನವೆಂಬರ್ ಅಂತ್ಯಕ್ಕೆ ಬಿಡುಗಡೆಗೊಳ್ಳಲಿರುವ ಕಾಂಟಿನೆಂಟಲ್ ಜಿಟಿ 650 ಮತ್ತು ಇಂಟರ್‍‍ಸೆಪ್ಟರ್ 650 ಬೈಕ್‍ ಖರೀದಿಗಾಗಿ ಈಗಾಗಲೇ ರೂ.5 ಸಾವಿರ ಮುಂಗಡದೊಂದಿಗೆ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಶುರುವಾಗಿದೆ.

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಹೊಸ ಬೈಕ್ ಬಿಡುಗಡೆಗೂ ಮುನ್ನ ಎಂಜಿನ್ ಕಾರ್ಯಕ್ಷಮತೆಯ ಪರೀಕ್ಷೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಹೊಸ ಬೈಕ್‌ಗಳು ಡ್ಯುಯಲ್ ಟೋನ್ ಬಣ್ಣದೊಂದಿಗೆ ಪ್ರೀಮಿಯಂ ಟಚ್ ಪಡೆದಿರುವುದು ಖಚಿತವಾಗಿದೆ.

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಇನ್ನು ಯುಎಸ್ಎನಲ್ಲಿ ಕಳೆದ ತಿಂಗಳ ಹಿಂದಷ್ಟೇ ರಾಯಲ್ ಎನ್‍ಫೀಲ್ಡ್ ಹೊಸ ಇಂಟರ್‍‍ಸೆಪ್ಟರ್ 650 ಹಾಗೂ ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳು ಬಿಡುಗಡೆಗೊಂಡಿದ್ದು, ಕ್ರಮವಾಗಿ ರೂ. 4.21 ಲಕ್ಷ ಮತ್ತು ರೂ. 6.36 ಲಕ್ಷ ಆರಂಭಿಕ ಬೆಲೆಯನ್ನು ಪಡೆದುಕೊಂಡಿದೆ.

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಆರ್‌ಇ ಸಂಸ್ಥೆಯು ಎರಡೂ ಬೈಕ್‍‍ಗಳಲ್ಲೂ ಸ್ಟ್ಯಾಂಡರ್ಡ್, ಕಸ್ಟಮ್ ಮತ್ತು ಕ್ರೂಸ್ ಎಂಬ ಮೂರ ವೇರಿಯಂಟ್‍‍ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಇಂಟರ್‍‍ಸೆಪ್ಟರ್ 650 ಹಾಗೂ ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳಲ್ಲಿ ಕೆಲವು ಸೌಲಭ್ಯಗಳು ಕಡಿತವಾಗುವ ಸಾಧ್ಯತೆಗಳಿವೆ.

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಯಾಕೆಂದ್ರೆ, ವಿದೇಶಿ ಮಾರುಕಟ್ಟೆಗಳಲ್ಲಿ ಕೆಲವು ಪ್ರೀಮಿಯಂ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕಾದ ಅನಿವಾರ್ಯತೆಗಳಿದ್ದು, ಇದು ಬೈಕ್ ಬೆಲೆಗಳು ದುಬಾರಿಯಾಗಿರಲು ಪ್ರಮುಖ ಕಾರಣವಾಗಿದೆ. ಆದ್ರೆ ಭಾರತದಲ್ಲಿ ಬಿಡುಗಡೆಯಾಗುವ ಹೊಸ ಬೈಕ್‌ಗಳಲ್ಲಿ ಕೆಲವು ಸೌಲಭ್ಯಗಳನ್ನು ಕಡಿತಗೊಳಿಸಿ ಬೆಲೆಯನ್ನು ಕಡಿತಗೊಳಿಸಲಿದೆ.

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಹೀಗಾಗಿ ಹೊಸ ಇಂಟರ್‍‍ಸೆಪ್ಟರ್ 650 ಹಾಗೂ ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳ ಬೆಲೆಯು ಭಾರತದಲ್ಲಿ ಆರಂಭಿಕವಾಗಿ ಆನ್‌ರೋಡ್ ಬೆಲೆಗಳ ಪ್ರಕಾರ ರೂ. 4 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.5.80 ಲಕ್ಷಕ್ಕೆಇರಬಹುದೆಂದು ಅಂದಾಜಿಸಲಾಗಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿವೆ.

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಇದಲ್ಲದೇ 2017ರ ರೈಡರ್ ಮೆನಿಯಾ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದ್ದ ರಾಯಲ್ ಎನ್‌ಫೀಲ್ಡ್ ಹೊಸ ಮೋಟಾರ್ ಸೈಕಲ್‌ಗಳು ಕ್ರೋಮ್ ಬಣ್ಣದ ಯೋಜನೆಗಳನ್ನು ಹೊಂದಿದ್ದು, ರೆಟ್ರೊ ಕ್ಲಾಸಿಕ್ ಯುಗದ ಬೈಕುಗಳನ್ನು ನೆನಪಿಸುತ್ತವೆ.

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಎಂಜಿನ್ ಸಾಮರ್ಥ್ಯ

ರಾಯಲ್ ಎನ್‍‍ಫೀಲ್ಡ್ ಇಂಟರ್‍‍ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‍‍ಗಳು 648ಸಿಸಿ ಆಯಿಲ್ ಕೂಲ್ಡ್, ಪ್ಯಾರಾಲಲ್-ಟ್ವಿನ್ ಎಂಜಿನ್ ಸಹಾಯದಿಂದ 47-ಬಿಹೆಚ್‍‍ಪಿ ಮತ್ತು 52ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಹೊಸ ಎಂಜಿನ್ ಅನ್ನು 6ಸ್ಪೀಡ್ ಗೇರ್‍‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ.

MOST READ: ಬಿಡುಗಡೆಗೆ ಸಿದ್ಧಗೊಂಡಿರುವ ಜಾವಾ ಬೈಕ್‍ಗಳ ಬೆಲೆ ಮತ್ತು ಬುಕ್ಕಿಂಗ್ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.!

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಟ್ವಿನ್ ಬೈಕ್‍‍ಗಳ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಗ್ಯಾಸ್-ಚಾರ್ಜ್ಡ್ ಶಾಕ್ ಅಬ್ಸಾರ್ಬರ್‍‍ಗಳನ್ನು ಒದಗಿಸಲಾಗಿದ್ದು, ಬೈಕ್ ಸವಾರರ ಸುರಕ್ಷತೆಗಾಗಿ ಈ ಬೈಕ್‍‍ಗಳ ಮುಂಭಾಗದಲ್ಲಿ 320-ಎಂಎಂ ಡಿಸ್ಕ್ ಬ್ರೇಕ್ ಹಾಗೂ ಹಿಂಭಾಗದಲ್ಲಿ 240-ಎಂಎಂ ಡಿಸ್ಕ್ ಬ್ರೇಕ್‍‍ಗಳನ್ನು ನೀಡಲಾಗಿದೆ. ಇಷ್ಟೆ ಅಲ್ಲದೆ ಡ್ಯುಯಲ್ ಚಾನೆಲ್ ಎಬಿಎಸ್ ಮತ್ತು 18 ಇಂಚಿನ ಅಲ್ಯುಮಿನಿಯಂ ಸ್ಪೋಕ್ ವೀಲ್‍‍ಗಳನ್ನು ಕೂಡಾ ನೀಡಲಾಗುತ್ತಿದೆ.

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಈ ಮೂಲಕ ಪ್ರೀಮಿಯಂ ಬೈಕ್ ಸವಾರರ ಬೇಡಿಕೆಗಳಿಗೆ ಅನುಗುಣವಾಗಿ ಹೊಸ ಉತ್ಪನ್ನಗಳು ಸಿದ್ದಗೊಳಿಸಲಾಗಿದ್ದು, ಮಾಹಿತಿಗಳ ಪ್ರಕಾರ ಹೊಸ ಬೈಕ್‌ಗಳ ಮೇಲೆ 40 ಸಾವಿರ ಕಿಲೋ ಮೀಟರ್ ತನಕ ಉಚಿತವಾಗಿ ರೋಡ್ ಸೈಡ್ ಅಸಿಸ್ಟ್ ಸೌಲಭ್ಯ ದೊರೆಯಲಿದೆ ಎನ್ನಲಾಗಿದೆ.

MOST READ: ಮಗ ನೀಡಿದ ದುಬಾರಿ ಗಿಫ್ಟ್ ಕಂಡು ಭಾವುಕರಾದ ತಾಯಿ..!

ಬಿಡುಗಡೆಗೂ ಮುನ್ನವೇ ರಾಯಲ್ ಎನ್‌ಫೀಲ್ಡ್ ಹೊಸ ಬೈಕ್ ಬೆಲೆ ಮಾಹಿತಿ ಸೋರಿಕೆ..!

ಡ್ರೈವ್‍‍ಸ್ಪಾರ್ಕ್ ಅಭಿಪ್ರಾಯ

ರಾಯಲ್ ಎನ್‍‍ಫೀಲ್ಡ್ ಸಂಸ್ಥೆಯು ಈಗಾಗಲೇ ವಿವಿಧ ಮಾದರಿಯ ಬೈಕ್ ಉತ್ಪನ್ನಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಸದ್ದು ಮಾಡಿದ್ದು, ಇದೀಗ ಪ್ರೀಮಿಯಂ ಫೀಚರ್ಸ್ ಹೊಂದಿರುವ ಟ್ವಿನ್ ಬೈಕ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸುತ್ತಿದೆ. ಹೀಗಾಗಿ ಬೆಲೆಯಲ್ಲಿ ದುಬಾರಿ ಎನ್ನಿಸಲಿರುವ ಈ ಬೈಕ್‌ಗಳು ದೇಶಿಯ ಗ್ರಾಹಕರು ಯಾವ ರೀತಿ ಸೆಳೆಯಲಿವೆ ಎನ್ನುವುದೇ ಆಟೋ ಉದ್ಯಮದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

Most Read Articles

Kannada
English summary
Royal Enfield 650cc Models India-Price Revealed: Interceptor 650 To Cost Rs 4 Lakh On-Road.
Story first published: Friday, November 9, 2018, 10:48 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X