ಮೇ 30ಕ್ಕೆ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್

ಜನಪ್ರಿಯ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಇದುವರೆಗೂ ಹಲವಾರು ಬಗೆಯ ಬೈಕ್ ಆವೃತ್ತಿಗಳನ್ನು ಪರಿಚಯಿಸಿದ್ದು, ಇದೀಗ ವಿನೂತನ ಮಾದರಿಯ ಲಿಮಿಟೆಡ್ ಎಡಿಷನ್ ಬೈಕ್ ಒಂದನ್ನು ಬಿಡುಗಡೆ ಮಾಡುತ್ತಿರುವುದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

By Praveen Sannamani

2ನೇ ಮಹಾಯುದ್ಧದ ಸಂದರ್ಭದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿದ್ದ ಬ್ರಿಟಿಷ್ ಪ್ಯಾರಾಟೂರ್ಪ್‌ಗಳಾದ ಫ್ಲೈಯಿಂಗ್ ಫ್ಲಿಯಾ ಪ್ರೇರಣೆಯ ಕ್ಲಾಸಿಕ್ 500 ಪೆಗಾಸಸ್ ಆವೃತ್ತಿಯನ್ನು ಹೊರತರಲು ನಿರ್ಧರಿಸಿದ್ದು, ಇದು ಆರ್‌ಇ ಸಂಸ್ಥೆಯ ಮತ್ತೊಂದು ಜನಪ್ರಿಯ ಡಬ್ಲ್ಯುಡಿ 125 ವಿನ್ಯಾಸಗಳನ್ನು ಆಧರಿಸಿ ಹೊಸ ಬೈಕ್ ಅನ್ನು ಅಭಿವೃದ್ಧಿ ಮಾಡಿದೆ.

ಮೇ 30ಕ್ಕೆ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್

ಸೇನೆಗಳಲ್ಲಿ ಹೆಚ್ಚಾಗಿ ಬಳಕೆಯಾಗಿದ್ದ ಫ್ಲೈಯಿಂಗ್ ಫ್ಲಿಯಾ ಖ್ಯಾತಿಯ 2 ಸ್ಟೋಕ್ ಡಬ್ಲ್ಯುಡಿ 125 ಬೈಕ್ ಮಾದರಿಯಲ್ಲೇ ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳನ್ನು ಹೊರತರಲು ನಿರ್ಧರಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು, ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಒಟ್ಟು 1 ಸಾವಿರ ಹೊಸ ಬೈಕ್‌ಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ.

ಮೇ 30ಕ್ಕೆ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್

ಲಿಮೆಟೆಡ್ ಎಡಿಷನ್ ಆಗಿರುವ ಹಿನ್ನೆಲೆ ಕೇವಲ 1 ಸಾವಿರ ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳನ್ನು ಉತ್ಪಾದನೆ ಮಾಡಲು ನಿರ್ಧರಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು, ಭಾರತೀಯ ಮಾರುಕಟ್ಟೆಯಲ್ಲಿ 250 ಬೈಕ್‌ಗಳನ್ನು ಹಾಗೂ ಯುಕೆ ಮಾರುಕಟ್ಟೆಯಲ್ಲಿ 750 ಬೈಕ್‌ಗಳನ್ನು ಮಾರಾಟ ಮಾಡುವ ಯೋಜನೆ ಹೊಂದಿದೆ.

ಮೇ 30ಕ್ಕೆ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್

ಹೊಸ ಬೈಕ್ ಬೆಲೆ(ಎಕ್ಸ್‌ಶೋರಂ ಪ್ರಕಾರ)

ಯುಕೆ ಮಾರಾಟವಾಗಲಿರುವ ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳ ಬೆಲೆಯನ್ನು ಭಾರತೀಯ ಬೆಲೆಗಳಲ್ಲಿ 4.50 ಲಕ್ಷಕ್ಕೆ ಮಾರಾಟ ಮಾಡುವ ಸಾಧ್ಯತೆಗಳಿದ್ದು, ಇದು ಭಾರತದಲ್ಲಿ ಎಕ್ಸ್‌ಶೋರಂ ಪ್ರಕಾರ ರೂ. 2 ಲಕ್ಷ ಬೆಲೆ ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.

ಮೇ 30ಕ್ಕೆ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್

ಹೊಸ ಬೈಕ್ ವಿನ್ಯಾಸಗಳನ್ನು 2 ಸ್ಟೋಕ್ ಡಬ್ಲ್ಯುಡಿ 125 ಬೈಕ್ ಮಾದರಿಯಲ್ಲೇ ಅಭಿವೃದ್ದಿ ಮಾಡಲಾಗಿದ್ದು, ಮಿಲಟರಿ ವರ್ಷನ್ ಮಾದರಿಯಲ್ಲಿ ವಿವಿಧ ನಮೂನೆಯ ಸೌಲಭ್ಯಗಳನ್ನು ಹೊಂದಿರುವುದೇ ಈ ಬೈಕಿನ ಮತ್ತೊಂದು ವಿಶೇಷವಾಗಿದೆ.

ಮೇ 30ಕ್ಕೆ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್

ಹ್ಯಾಂಡಲ್ ಬಾರ್, ಹೆಡ್‌ಲೈಟ್, ಎಕ್ಸಾಸ್ಟ್ ಮಫ್ಲರ್, ಲೆದರ್ ಸ್ಟ್ಯಾಪ್, ಕ್ಯಾನವಾಸ್ ಪ್ಯಾನಿಯರ್ಸ್ ಮತ್ತು ಫ್ಯೂಲ್ ಟ್ಯಾಂಕ್ ಮೇಲೆ ಪೆಗಾಸಸ್ ಲೊಗೊ ಬೈಕಿನ ಅಂದವನ್ನು ಹೆಚ್ಚಿಸಲಿದ್ದು, ಆಯಿವ್ ಡ್ರ್ಯಾಬ್ ಗ್ರಿನ್, ಸರ್ವಿಸ್ ಬ್ರೌನ್ ಬಣ್ಣಗಳಲ್ಲಿ ಲಭ್ಯವಿರಲಿವೆ.

ಮೇ 30ಕ್ಕೆ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್

ಆದ್ರೆ ಭಾರತದಲ್ಲಿ ಮಾರಾಟವಾಗುವ ಕ್ಲಾಸಿಕ್ 500 ಪೆಗಾಸಸ್ ಆವೃತ್ತಿಗಳು ಕೇವಲ ಬ್ರೌನ್ ಬಣ್ಣಗಳಲ್ಲಿ ಮಾತ್ರ ಲಭ್ಯವಿರಲಿದ್ದು, ಸ್ಪೋಕ್ ವೀಲ್ಹ್, ಡ್ಯುಯಲ್ ಡಿಸ್ಕ್ ಬ್ರೇಕ್ ವ್ಯವಸ್ಥೆಯೊಂದಿಗೆ 194 ಕೆ.ಜಿ ತೂಕವನ್ನು ಹೊಂದಿರಲಿವೆ.

ಮೇ 30ಕ್ಕೆ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್

ಎಂಜಿನ್ ಸಾಮರ್ಥ್ಯ

ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳು 499ಸಿಸಿ ಏರ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 27.2-ಬಿಎಚ್‌ಪಿ ಮತ್ತು 41.3-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದೆ.

ಮೇ 30ಕ್ಕೆ ಬಿಡುಗಡೆಯಾಗಲಿದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್

ಡ್ರೈವ್ ಸ್ಪಾರ್ಕ್ ಅಭಿಪ್ರಾಯ

ಇದುವರೆಗೆ ಹಲವು ಬೈಕ್ ಮಾದರಿಗಳನ್ನು ಪರಿಚಯಿಸಿ ಯಶಸ್ವಿಯಾಗಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ತನ್ನ ಸಾಂಪ್ರದಾಯಿಕ ವೈಶಿಷ್ಟ್ಯತೆಗಳೊಂದಿಗೆ ಹೊಸತನ ತರಲು ಯತ್ನಿಸುತ್ತಿದ್ದು, ಇದೀಗ ಫ್ಲೈಯಿಂಗ್ ಫ್ಲಿಯಾ ಖ್ಯಾತಿಯ 2 ಸ್ಟೋಕ್ ಡಬ್ಲ್ಯುಡಿ 125 ಬೈಕ್ ಮಾದರಿಯಲ್ಲೇ ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳನ್ನು ಇದೇ ತಿಂಗಳು 30ರಂದು ಖರೀದಿಗೆ ಲಭ್ಯವಾಗಲಿವೆ.

Most Read Articles

Kannada
Read more on royal enfield
English summary
Royal Enfield Classic 500 Pegasus India Launch Date Revealed; Price, Specs, Features, Colours & More.
Story first published: Thursday, May 24, 2018, 13:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X