ಕ್ಲಾಸಿಕ್ 500 ಪೆಗಾಸಸ್ ಬೈಕ್ ಖರೀದಿಗೆ ಆರ್‌ಇ ಕಡೆಯಿಂದ ಮತ್ತೊಂದು ಅವಕಾಶ
ಕಳೆದ ಮೇ 31ರಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಗೊಂಡಿದ್ದ ರಾಯಲ್ ಎನ್‌ಫೀಲ್ಡ್ ಲಿಮಿಟೆಡ್ ಎಡಿಷನ್ ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳು ಇದೀಗ ಖರೀದಿಗಾಗಿ ಲಭ್ಯವಾಗಿವೆ.
ಕಳೆದ ಮೇ 31ರಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಗೊಂಡಿದ್ದ ರಾಯಲ್ ಎನ್‌ಫೀಲ್ಡ್ ಲಿಮಿಟೆಡ್ ಎಡಿಷನ್ ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳು ಇದೀಗ ಖರೀದಿಗಾಗಿ ಲಭ್ಯವಾಗಿದ್ದು, ನಾಳೆಯಿಂದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೊಸ ಬೈಕ್ ಖರೀದಿಗಾಗಿ ಬುಕ್ಕಿಂಗ್ ಮಾಡುವ ಅವಕಾಶ ನೀಡಿದೆ.

15 ದಿನಗಳ ಹಿಂದಷ್ಟೇ ಹೊಸ ಬೈಕ್ ಖರೀದಿಗಾಗಿ ಗ್ರಾಹಕರು ಮುಗಿಬಿದ್ದ ಹಿನ್ನೆಲೆಯಲ್ಲಿ ಆರ್‌ಇ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಕೂಡಾ ಕ್ರ್ಯಾಶ್ ಆಗಿರುವ ಪ್ರಸಂಗ ನಡೆದಿತ್ತು. ಇದೇ ಕಾರಣಕ್ಕಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಮುಂದೂಡಿದ್ದ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಜುಲೈ 25ರಿಂದ ಮತ್ತೆ ಹೊಸ ಬೈಕ್ ಖರೀದಿಗಾಗಿ ಬುಕ್ಕಿಂಗ್ ಸೌಲಭ್ಯವನ್ನು ಆರಂಭ ಮಾಡುವುದಾಗಿ ಅಧಿಕೃತ ಮಾಹಿತಿ ನೀಡಿದೆ.

ಕ್ಲಾಸಿಕ್ 500 ಪೆಗಾನನ್ ಬೈಕ್‌ಗಳು ಲಿಮಿಟೆಡ್ ಎಡಿಷನ್ ಮಾದರಿಯಾಗಿದ್ದು, ಮಹಾರಾಷ್ಟ್ರ ಆನ್ ರೋಡ್ ಬೆಲೆಗಳ ಪ್ರಕಾರ ಹೊಸ ಬೈಕಿನ ಬೆಲೆಯನ್ನು ರೂ 2.49 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಕ್ಲಾಸಿಕ್ 500 ಪೆಗಾಸಸ್ ಬೈಕ್ ಲಿಮಿಟೆಡ್ ಎಡಿಷನ್ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯ ಬೈಕ್‌ಗಳು ಮಾತ್ರ ಮಾರಾಟಕ್ಕಿದ್ದು, ಇದರಿಂದಾಗಿಯೇ ವಿನೂತನ ಬೈಕ್ ಖರೀದಿಗೆ ಸಾವಿರಾರು ಗ್ರಾಹಕರು ಮುಗಿಬಿದ್ದಿದ್ದಾರೆ.

ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಏಕ ಕಾಲಕ್ಕೆ ಬಿಡುಗಡೆ ಮಾಡಿದ್ದು, ಒಟ್ಟು 1 ಸಾವಿರ ಬೈಕ್‍ಗಳನ್ನು ಮಾತ್ರ ಮಾರಾಟ ಮಾಡಲು ನಿರ್ಧರಿಸಿದೆ.

ಇದರಲ್ಲಿ ಭಾರತೀಯ ಮಾರುಕಟ್ಟೆಗಾಗಿ 250 ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳನ್ನು ಮಾತ್ರವೇ ಮಾರಾಟಕ್ಕಿದ್ದು, ಜುಲೈ 10ರಂದು ಹೊಸ ಬೈಕ್ ಖರೀದಿಗಾಗಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿತ್ತು.

ರಾಯಲ್ ಎನ್‌ಫೀಲ್ಡ್ ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ ಸೈಟ್ ಸಂಪೂರ್ಣ ನಿಷ್ಕೀಯಗೊಂಡಿದಲ್ಲದೇ, ಯಾವೊಬ್ಬ ಗ್ರಾಹಕನಿಗೂ ಕ್ಲಾಸಿಕ್ 500 ಪೆಗಾಸಸ್ ಬೈಕ್ ಬುಕ್ ಮಾಡಲು ಸಾಧ್ಯವೇ ಆಗಲಿಲ್ಲ.

ಹೀಗಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಮುಂದಕ್ಕೆ ಹಾಕಿದ್ದ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಇದೀಗ ಮತ್ತೊಮ್ಮೆ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಕೆಲವು ತಾಂತ್ರಿಕ ಅಂಶಗಳನ್ನು ಬದಲಾಣೆ ಮಾಡುವ ಮೂಲಕ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಲಿದೆ.

ಭಾರತದಲ್ಲಿ ಕೇವಲ 250 ಬೈಕ್‌ಗಳು ಮಾತ್ರವೇ ಖರೀದಿಗೆ ಲಭ್ಯವಿರುವ ಹಿನ್ನೆಲೆಯಲ್ಲಿ ಖರೀದಿಗೆ ಮುಗಿಬಿದ್ದಿರುವ ಗ್ರಾಹಕರು ಹೊಸ ಬೈಕ್ ಖರೀದಿ ಮಾಡಲು ಹರಸಾಹಸ ಮಾಡುತ್ತಿದ್ದು, ನಾಳೆಯಿಂದ ಮತ್ತೊಮ್ಮೆ ಶುರುವಾಗಲಿರುವ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಮತ್ತೆ ಸೈಟ್ ಕ್ರ್ಯಾಶ್ ಆಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

2ನೇ ಮಹಾಯುದ್ಧದ ಸಂದರ್ಭದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿದ್ದ ಬ್ರಿಟಿಷ್ ಪ್ಯಾರಾಟೂರ್ಪ್‌ಗಳಾದ ಫ್ಲೈಯಿಂಗ್ ಫ್ಲಿಯಾ ಪ್ರೇರಣೆಯೊಂದಿಗೆ ಕ್ಲಾಸಿಕ್ 500 ಪೆಗಾಸಸ್ ಆವೃತ್ತಿಯನ್ನು ಹೊರತರಲಾಗಿದ್ದು, ಇದು ಆರ್‌ಇ ಸಂಸ್ಥೆಯ ಮತ್ತೊಂದು ಜನಪ್ರಿಯ ಡಬ್ಲ್ಯುಡಿ 125 ವಿನ್ಯಾಸಗಳ ಆಧಾರದೊಂದಿಗೆ ನಿರ್ಮಾಣವಾಗಿದೆ.

ಹೊಸ ಬೈಕ್ ವಿನ್ಯಾಸಗಳನ್ನು 2 ಸ್ಟೋಕ್ ಡಬ್ಲ್ಯುಡಿ 125 ಬೈಕ್ ಮಾದರಿಯಲ್ಲೇ ಅಭಿವೃದ್ದಿ ಮಾಡಲಾಗಿದ್ದು, ಮಿಲಟರಿ ವರ್ಷನ್ ಮಾದರಿಯಲ್ಲಿ ವಿವಿಧ ನಮೂನೆಯ ಸೌಲಭ್ಯಗಳನ್ನು ಹೊಂದಿರುವುದೇ ಈ ಬೈಕಿನ ಮತ್ತೊಂದು ವಿಶೇಷವಾಗಿದೆ.

ಎಂಜಿನ್ ಸಾಮರ್ಥ್ಯ
ಕ್ಲಾಸಿಕ್ 500 ಪೆಗಾಸಸ್ ಬೈಕ್‌ಗಳು 499ಸಿಸಿ ಏರ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 27.2-ಬಿಎಚ್‌ಪಿ ಮತ್ತು 41.3-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದೆ.

ಆದ್ರೆ ಭಾರತದಲ್ಲಿ ಮಾರಾಟವಾಗುವ ಕ್ಲಾಸಿಕ್ 500 ಪೆಗಾಸಸ್ ಆವೃತ್ತಿಗಳು ಕೇವಲ ಬ್ರೌನ್ ಬಣ್ಣಗಳಲ್ಲಿ ಮಾತ್ರ ಲಭ್ಯವಿರಲಿದ್ದು, ಸ್ಪೋಕ್ ವೀಲ್ಹ್, ಡ್ಯುಯಲ್ ಡಿಸ್ಕ್ ಬ್ರೇಕ್ ವ್ಯವಸ್ಥೆಯೊಂದಿಗೆ 194 ಕೆ.ಜಿ ತೂಕವನ್ನು ಹೊಂದಿರಲಿವೆ.

ಹ್ಯಾಂಡಲ್ ಬಾರ್, ಹೆಡ್‌ಲೈಟ್, ಎಕ್ಸಾಸ್ಟ್ ಮಫ್ಲರ್, ಲೆದರ್ ಸ್ಟ್ಯಾಪ್, ಕ್ಯಾನವಾಸ್ ಪ್ಯಾನಿಯರ್ಸ್ ಮತ್ತು ಫ್ಯೂಲ್ ಟ್ಯಾಂಕ್ ಮೇಲೆ ಪೆಗಾಸಸ್ ಲೊಗೊ ಬೈಕಿನ ಅಂದವನ್ನು ಹೆಚ್ಚಿಸಲಿದ್ದು, ಆಯಿವ್ ಡ್ರ್ಯಾಬ್ ಗ್ರಿನ್, ಸರ್ವಿಸ್ ಬ್ರೌನ್ ಬಣ್ಣಗಳಲ್ಲಿ ಲಭ್ಯವಿರಲಿವೆ.


Click it and Unblock the Notifications