ಬಿಡುಗಡೆಗೆ ಸಜ್ಜುಗೊಂಡ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ಹೀಗಿದೆ ನೋಡಿ...
ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಸದ್ಯ ಹೊಸ ಬೈಕ್‌ಗಳ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಈ ಮಧ್ಯೆ ಹೊಸ ಬೈಕ್‌ಗಳ ಎಂಜಿನ್ ಕಾರ್ಯಕ್ಷಮತೆ ಕುರಿತು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.
Recommended Video

ದೇಶಿಯ ಮಾರುಕಟ್ಟೆಗಾಗಿ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಮೋಟರ್ ಸೈಕಲ್‌ಗಳನ್ನು ಅಭಿವೃದ್ಧಿಗೊಳಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಸದ್ಯ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಈ ಮಧ್ಯೆ ಹೊಸ ಬೈಕ್‌ಗಳ ಎಂಜಿನ್ ಕಾರ್ಯಕ್ಷಮತೆ ಕುರಿತು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಮೋಟರ್ ಸೈಕಲ್‌ಗಳನ್ನು ಈ ಹಿಂದೆ 2017ರ ರೈಡರ್ ಮೆನಿಯಾ ಕಾರ್ಯಕ್ರಮದಲ್ಲಿ ಪ್ರದರ್ಶನಗೊಳಿಸಿದ್ದ ರಾಯಲ್ ಎನ್‌ಫೀಲ್ಡ್ ಇದೀಗ ತನ್ನ ನೆಚ್ಚಿನ ಗ್ರಾಹಕರಿಗಾಗಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತಿರುವುದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಇದಲ್ಲದೇ 2017ರ ರೈಡರ್ ಮೆನಿಯಾ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದ್ದ ರಾಯಲ್ ಎನ್‌ಫೀಲ್ಡ್ ಹೊಸ ಮೋಟಾರ್ ಸೈಕಲ್‌ಗಳು ಕ್ರೋಮ್ ಬಣ್ಣದ ಯೋಜನೆಗಳನ್ನು ಹೊಂದಿದ್ದು, ರೆಟ್ರೊ ಕ್ಲಾಸಿಕ್ ಯುಗದ ಬೈಕುಗಳನ್ನು ನೆನಪಿಸುತ್ತವೆ.

ಚೆನ್ನೈ ಹೊರವಲಯದಲ್ಲಿ ಹೊಸ ಬೈಕ್‌ಗಳನ್ನು ಸ್ಪಾಟ್ ಟೆಸ್ಟಿಂಗ್ ನಡೆಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಮುಂಬರುವ ಮಾರ್ಚ್ ಆರಂಭದಲ್ಲಿ ಮಾರುಕಟ್ಟೆಗೆ ಪರಿಚಯಿಸುವ ಇರಾದೆಯಲ್ಲಿದ್ದು, ಈಗಾಗಲೇ ಆಸಕ್ತ ಗ್ರಾಹಕರಿಂದ ಮುಂಗಡ ಪಡೆದು ಬುಕ್ಕಿಂಗ್ ಕೂಡಾ ಪಡೆಯಲಾಗುತ್ತಿದೆ.

ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಮಧ್ಯಮ ಗಾತ್ರದ ಎಂಜಿನ್ ಹೊಂದಿರುವ ಮೋಟಾರ್‌ಸೈಕಲ್ ಬಿಡುಗಡೆಗೊಳಿಸುವ ಯೋಜನೆ ಹೊಂದಿದ್ದು, ಮಧ್ಯಮ ವರ್ಗದ ಗ್ರಾಹಕರು ಕೂಡಾ ಖರೀದಿ ಮಾಡಬಹುದಾದ ಬೆಲೆ ಪಡೆಯುವ ಸಾಧ್ಯತೆಗಳಿವೆ.
Trending On DriveSpark Kannada:
ರೀ ಸೇಲ್ ಮೌಲ್ಯವಿಲ್ಲದ ಈ ಕಾರುಗಳನ್ನು ಖರೀದಿ ಮಾಡುವ ಮುನ್ನ 10 ಬಾರಿ ಯೋಚಿಸಿ...
ಟರ್ಬನ್ ಬಣ್ಣಕ್ಕೆ ತಕ್ಕಂತೆ ಬದಲಾಗುತ್ತೆ ಈ ಉದ್ಯಮಿಯ ರೋಲ್ಸ್ ರಾಯ್ಸ್ ಕಾರುಗಳ ಗಮ್ಮತ್ತು...
ಹೀರೋ 'ಗೇಮ್ ಚೇಂಜರ್' ಎಕ್ಸ್ಎಫ್3ಆರ್ ಬೈಕಿನ ವಿಶೇಷತೆ ಏನು?

ಇದಕ್ಕೆ ಕಾರಣ ರೈಡರ್ ಮೆನಿಯಾ ಕಾರ್ಯಕ್ರಮದಲ್ಲಿ ಹೊಸ ಬೈಕ್‌ಗಳನ್ನು ಅನಾವರಣಗೊಳಿಸಿ ಮಾತನಾಡಿದ್ದ ರಾಯಲ್ ಎನ್‌ಫೀಲ್ಡ್ ಸಿಇಒ ಸಿಡ್ ಲಾಲ್ ಅವರು "ಜಗತ್ತಿನಾದ್ಯಂತ ಇರುವಂತಹ ಹೊರಸೂಸುವಿಕೆಯ ಮಾನದಂಡಗಳ ಗುಣಮಟ್ಟ ಮತ್ತು ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬೈಕುಗಳನ್ನು ಅಭಿವೃದ್ಧಿಪಡಿಸಲಾಗಿದೆ" ಎಂದಿದ್ದರು.

ಹೀಗಾಗಿ ರಾಯಲ್ ಎನ್‌ಫೀಲ್ಡ್ ಅನಾವರಣಗೊಳಿಸಲಿರುವ ಹೊಸ ಬೈಕ್‌ಗಳು 650 ಸಿಸಿ ಪ್ಯಾರಲಲ್ ಏರ್/ ಆಯಿಲ್ ಎಂಜಿನ್ ಆಯ್ಕೆ ಪಡೆಯಲಿವೆ. ಈ ಎಂಜಿನ್, 46.3 ಬಿಎಚ್‌ಪಿ ಮತ್ತು 52 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು 6-ಸ್ಪೀಡ್ ಗೇರ್‌ಬಾಕ್ಸ್ ಸಂಯೋಜಿತವಾಗಿದೆ.
image source:rushlane

ಈ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಅವಳಿ ಮೋಟರ್ ಸೈಕಲ್‌ಗಳು ಸಾಕಷ್ಟು ಭರವಸೆ ಹುಟ್ಟುಹಾಕಿದ್ದು, ಭವಿಷ್ಯದಲ್ಲಿ ಹೊಸ ಬೈಕ್‍ಗಳು ಗ್ರಾಹಕರನ್ನು ಯಾವ ರೀತಿ ಸೆಳೆಯುತ್ತವೆ ಎಂಬುವುದನ್ನು ಕಾಯ್ದು ನೋಡಬೇಕಿದೆ.
Trending On DriveSpark Kannada:
2018ರ ಮಾರುತಿ ಸುಜುಕಿ ಸ್ವಿಫ್ಟ್ ಕುರಿತು ತಿಳಿದುಕೊಳ್ಳಬೇಕಾದ 5 ಪ್ರಮುಖ ವಿಚಾರಗಳಿವು..
ವೇಗದ ಚಾಲನೆಯಲ್ಲಿದ್ದಾಗ ಪಂಚರ್- ಮೂರು ಬಾರಿ ಪಲ್ಟಿ ಹೊಡೆದ ಟಾಟಾ ನೆಕ್ಸಾನ್
Trending DriveSpark YouTube Videos
Subscribe To DriveSpark Kannada YouTube Channel - Click Here


Click it and Unblock the Notifications








