ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

By Praveen Sannamani

ದೇಶಿಯ ಮಾರುಕಟ್ಟೆಗಾಗಿ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಮೋಟರ್ ಸೈಕಲ್‌ಗಳನ್ನು ಅಭಿವೃದ್ಧಿಗೊಳಿಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಸದ್ಯ ಬಿಡುಗಡೆಗಾಗಿ ಎದುರು ನೋಡುತ್ತಿದ್ದು, ಹೊಸ ಬೈಕ್‌ಗಳನ್ನು ಮುಂಬರುವ ಜುಲೈ ಅಂತ್ಯಕ್ಕೆ ಇಲ್ಲವೇ ಆಗಸ್ಟ್ ಮೊದಲ ವಾರದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಸುಳಿವು ನೀಡಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ಈ ಮಧ್ಯೆ ಚೆನ್ನೈ ಹೊರ ವಲಯದಲ್ಲಿ ಸ್ಪಾಟ್ ಟೆಸ್ಟಿಂಗ್ ನಡೆಸುವಾಗ ರಾಯಲ್ ಎನ್‌ಫೀಲ್ಡ್ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಹೊಸ ಬೈಕ್‌ಗಳು ಡ್ಯುಯಲ್ ಟೋನ್ ಬಣ್ಣದೊಂದಿಗೆ ಪ್ರಿಮಿಯಂ ಟಚ್ ಪಡೆದಿರುವುದು ಖಚಿತವಾಗಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ರೆಡ್ ಆ್ಯಂಡ್ ವೈಟ್ ಡ್ಯುಯಲ್ ಟೋನ್ ಬಣ್ಣಗಳಲ್ಲಿ ಅಭಿವೃದ್ಧಿಯಾಗಿರುವ ಇಂಟರ್‌ಸೆಪ್ಟರ್ 650 ಮತ್ತು ಸ್ಟೋರ್ಟಿ ಬ್ಲ್ಯಾಕ್ ಬಣ್ಣದಲ್ಲಿ ಸಿದ್ದವಾಗಿರುವ ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳು ರಾಯಲ್ ಎನ್‌ಫೀಲ್ಡ್ ಬೈಕ್ ಪ್ರಿಯರಲ್ಲಿ ಹೊಸ ನೀರಿಕ್ಷೆ ಹುಟ್ಟುಹಾಕಿವೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ಇದಲ್ಲದೇ 2017ರ ರೈಡರ್ ಮೆನಿಯಾ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದ್ದ ರಾಯಲ್ ಎನ್‌ಫೀಲ್ಡ್ ಹೊಸ ಮೋಟಾರ್ ಸೈಕಲ್‌ಗಳು ಕ್ರೋಮ್ ಬಣ್ಣದ ಯೋಜನೆಗಳನ್ನು ಹೊಂದಿದ್ದು, ರೆಟ್ರೊ ಕ್ಲಾಸಿಕ್ ಯುಗದ ಬೈಕುಗಳನ್ನು ನೆನಪಿಸುತ್ತವೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ಕಳೆದ ಕೆಲದಿನಗಳ ಹಿಂದಷ್ಟೇ ಹೊಸೂರು ಬಳಿಯೂ ಕೂಡಾ ಇಂಟರ್‌ಸೆಪ್ಟರ್ 650 & ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳನ್ನು ಸ್ಪಾಟ್ ಟೆಸ್ಟಿಂಗ್ ನಡೆಸಿರುವ ರಾಯಲ್ ಎನ್‌ಫೀಲ್ಡ್ ಸಂಸ್ಥೆಯು ಮುಂಬರುವ ಜೂನ್ ಆರಂಭದಲ್ಲಿ ಮಾರುಕಟ್ಟೆಗೆ ಪರಿಚಯಿಸುವ ಇರಾದೆಯಲ್ಲಿದೆ. ಜೊತೆಗೆ ಆಸಕ್ತ ಗ್ರಾಹಕರಿಂದ ಈಗಾಗಲೇ ಮುಂಗಡ ಪಡೆದು ಬುಕ್ಕಿಂಗ್ ಕೂಡಾ ಪಡೆಯಲಾಗುತ್ತಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ಇನ್ನು ರಾಯಲ್ ಎನ್‌ಫೀಲ್ಡ್ ಅನಾವರಣಗೊಳಿಸಲಿರುವ ಹೊಸ ಬೈಕ್‌ಗಳು 647 ಸಿಸಿ ಪ್ಯಾರಲಲ್ ಏರ್/ ಆಯಿಲ್ ಎಂಜಿನ್ ಆಯ್ಕೆ ಪಡೆಯಲಿವೆ. ಸ್ಟ್ಯಾಂಡರ್ಡ್ ಸ್ಲಿಪ್ಪರ್ ಕ್ಲಚ್‌ನೊಂದಿಗೆ 47 ಬಿಎಚ್‌ಪಿ ಮತ್ತು 52 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು 6-ಸ್ಪೀಡ್ ಗೇರ್‌ಬಾಕ್ಸ್ ಸಂಯೋಜಿತವಾಗಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ಹೀಗಾಗಿ ಹೊಸ ಬೈಕ್‌ಗಳಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಮುಂಭಾಗದಲ್ಲಿ ಟೆಲಿಸ್ಕೊಫಿಕ್ ಫೋರ್ಕ್ ಅಪ್, ಹಿಂಭಾಗದಲ್ಲಿ ಗ್ಯಾಸ್ ಚಾರ್ಜ್ಡ್ ಶಾಕ್ ಅಬ್ಜರ್ಸ್, ಎಬಿಎಸ್, ಎರಡು ಬದಿಯ ಚಕ್ರಗಳಲ್ಲೂ ಡಿಸ್ಕ್ ಬ್ರೇಕ್ ಒದಗಿಸಲಾಗಿದೆ. ಈ ಮೂಲಕ ಗಂಟೆಗೆ 170ಕಿಮಿ ಟಾಪ್ ಸ್ಪೀಡ್ ಪಡೆದುಕೊಂಡಿವೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ಬೆಲೆ (ಎಕ್ಸ್‌ಶೋರಂ ಪ್ರಕಾರ)

ಬಿಡುಗಡೆಗೂ ಮುನ್ನವೇ ಭಾರೀ ನೀರಿಕ್ಷೆ ಹುಟ್ಟುಹಾಕಿರುವ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650 ಬೈಕ್‌ಗಳು ಎಕ್ಸ್‌ಶೋರಂ ಪ್ರಕಾರ ರೂ.3 ಲಕ್ಷದಿಂದ ರೂ.3.25 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ಒಟ್ಟಿನಲ್ಲಿ ಬಿಡುಗಡೆಗೂ ಮುನ್ನವೇ ದೇಶಿಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ನಿರ್ಮಾಣದ ಅವಳಿ ಮೋಟಾರ್ ಸೈಕಲ್‌ಗಳು ಸಾಕಷ್ಟು ಭರವಸೆ ಹುಟ್ಟುಹಾಕಿದ್ದು, ಭವಿಷ್ಯದಲ್ಲಿ ಹೊಸ ಬೈಕ್‍‌ಗಳು ಗ್ರಾಹಕರನ್ನು ಯಾವ ರೀತಿ ಸೆಳೆಯುತ್ತವೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Source:cartoq

ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಆರ್‌ಇ ಇಂಟರ್‌ಸೆಪ್ಟರ್ 650 ಮತ್ತು ಕಾಂಟಿನೆಂಟಲ್ ಜಿಟಿ 650

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

01.ಇದು ಆರ್‌ಇ ಬುಲೆಟ್‌ ಅಲ್ಲಾ ಕಣ್ರೀ 100ಸಿಸಿ ರಾಯಲ್ ಇಂಡಿಯನ್ ಬೈಕ್...

02.ರಾಯಲ್ ಎನ್‌ಫೀಲ್ಡ್ ಬೈಕ್‌ಗಳನ್ನು ಖರೀದಿ ಮಾಡೋದು ಲಾಭಕ್ಕಿಂತ ನಷ್ಟವೇ ಹೆಚ್ಚಂತೆ? ಇದು ನೀಜವೇ?

03. ಮಾರಾಟಕ್ಕಿರುವ 132 ಕೋಟಿ ಮೌಲ್ಯದ ಈ ನಂಬರ್ ಪ್ಲೇಟ್‌ ವಿಶೇಷತೆ ಏನು?

04. ಅಪ್ರಾಪ್ತರ ಕೈಗೆ ಬೈಕ್ ಕೊಟ್ಟಿದ್ದಕ್ಕೆ ಜೈಲು ಪಾಲಾದ 26 ಪೋಷಕರು

05. ವಿಡಿಯೋ- ಟೊಯೊಟಾ ಇನೋವಾ ಗುದ್ದಿದ ರಭಸಕ್ಕೆ 30 ಅಡಿ ದೂರ ಹೋಗಿ ಬಿದ್ದ ಯುವಕ...

Most Read Articles

Kannada
Read more on royal enfield
English summary
Royal Enfield Interceptor and Continental GT 650 spied before launch.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X