Just In
- 1 hr ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 1 hr ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 1 hr ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- 2 hrs ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
Don't Miss!
- Movies "ಸದಾ ನನ್ನ ಹಿಂಭಾಗವನ್ನೇ ಸದಾ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗೊಂಡ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 500 ಪೆಗಾಸಸ್ ಬೈಕ್..
ಜನಪ್ರಿಯ ರಾಯಲ್ ಎನ್ಫೀಲ್ಡ್ ಸಂಸ್ಥೆಯು ಇದುವರೆಗೂ ಹಲವಾರು ಬಗೆಯ ಬೈಕ್ ಆವೃತ್ತಿಗಳನ್ನು ಪರಿಚಯಿಸಿದ್ದು, ಇದೀಗ ವಿನೂತನ ಮಾದರಿಯ ಲಿಮಿಟೆಡ್ ಎಡಿಷನ್ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 500 ಪೆಗಾನನ್ ಬೈಕ್ ಅನ್ನು ಬಿಡುಗಡೆ ಮಾಡಿದೆ.
ಜನಪ್ರಿಯ ರಾಯಲ್ ಎನ್ಫೀಲ್ಡ್ ಸಂಸ್ಥೆಯು ಇದುವರೆಗೂ ಹಲವಾರು ಬಗೆಯ ಬೈಕ್ ಆವೃತ್ತಿಗಳನ್ನು ಪರಿಚಯಿಸಿದ್ದು, ಇದೀಗ ವಿನೂತನ ಮಾದರಿಯ ಲಿಮಿಟೆಡ್ ಎಡಿಷನ್ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 500 ಪೆಗಾನನ್ ಬೈಕ್ ಅನ್ನು ಬಿಡುಗಡೆ ಮಾಡಿದೆ. ಹೊಸದಾಗಿ ಬಿಡುಗಡೆಗೊಂಡ ಲಿಮಿಟೆಡ್ ಎಡಿಷನ್ ರಾಯಲ್ ಎನ್ಫೀಲ್ಡ್ ಕ್ಲಾಸಿಕ್ 500 ಪೆಗಾನನ್ ಬೈಕ್ ಆನ್ ರೋಡ್ (ಮಹಾರಾಷ್ಟ್ರ) ರೂ 2.49 ಲಕ್ಷಕ್ಕೆ ನಿಗದಿಪಡಿಸಲಾಗಿದೆ.
2ನೇ ಮಹಾಯುದ್ಧದ ಸಂದರ್ಭದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿದ್ದ ಬ್ರಿಟಿಷ್ ಪ್ಯಾರಾಟೂರ್ಪ್ಗಳಾದ ಫ್ಲೈಯಿಂಗ್ ಫ್ಲಿಯಾ ಪ್ರೇರಣೆಯ ಕ್ಲಾಸಿಕ್ 500 ಪೆಗಾಸಸ್ ಆವೃತ್ತಿಯನ್ನು ಹೊರತರಲು ನಿರ್ಧರಿಸಿದ್ದು, ಇದು ಆರ್ಇ ಸಂಸ್ಥೆಯ ಮತ್ತೊಂದು ಜನಪ್ರಿಯ ಡಬ್ಲ್ಯುಡಿ 125 ವಿನ್ಯಾಸಗಳನ್ನು ಆಧರಿಸಿ ಹೊಸ ಬೈಕ್ ಅನ್ನು ಅಭಿವೃದ್ಧಿ ಮಾಡಿದೆ.
ಸೇನೆಗಳಲ್ಲಿ ಹೆಚ್ಚಾಗಿ ಬಳಕೆಯಾಗಿದ್ದ ಫ್ಲೈಯಿಂಗ್ ಫ್ಲಿಯಾ ಖ್ಯಾತಿಯ 2 ಸ್ಟೋಕ್ ಡಬ್ಲ್ಯುಡಿ 125 ಬೈಕ್ ಮಾದರಿಯಲ್ಲೇ ಕ್ಲಾಸಿಕ್ 500 ಪೆಗಾಸಸ್ ಬೈಕ್ಗಳನ್ನು ಹೊರತರಲು ನಿರ್ಧರಿಸಿರುವ ರಾಯಲ್ ಎನ್ಫೀಲ್ಡ್ ಸಂಸ್ಥೆಯು, ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಒಟ್ಟು 1 ಸಾವಿರ ಹೊಸ ಬೈಕ್ಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ.
ಲಿಮೆಟೆಡ್ ಎಡಿಷನ್ ಆಗಿರುವ ಹಿನ್ನೆಲೆ ಕೇವಲ 1 ಸಾವಿರ ಕ್ಲಾಸಿಕ್ 500 ಪೆಗಾಸಸ್ ಬೈಕ್ಗಳನ್ನು ಉತ್ಪಾದನೆ ಮಾಡಲು ನಿರ್ಧರಿಸಿರುವ ರಾಯಲ್ ಎನ್ಫೀಲ್ಡ್ ಸಂಸ್ಥೆಯು, ಭಾರತೀಯ ಮಾರುಕಟ್ಟೆಯಲ್ಲಿ 250 ಬೈಕ್ಗಳನ್ನು ಹಾಗೂ ಯುಕೆ ಮಾರುಕಟ್ಟೆಯಲ್ಲಿ 750 ಬೈಕ್ಗಳನ್ನು ಮಾರಾಟ ಮಾಡುವ ಯೋಜನೆ ಹೊಂದಿದೆ.
ಹೊಸ ಬೈಕ್ ವಿನ್ಯಾಸಗಳನ್ನು 2 ಸ್ಟೋಕ್ ಡಬ್ಲ್ಯುಡಿ 125 ಬೈಕ್ ಮಾದರಿಯಲ್ಲೇ ಅಭಿವೃದ್ದಿ ಮಾಡಲಾಗಿದ್ದು, ಮಿಲಟರಿ ವರ್ಷನ್ ಮಾದರಿಯಲ್ಲಿ ವಿವಿಧ ನಮೂನೆಯ ಸೌಲಭ್ಯಗಳನ್ನು ಹೊಂದಿರುವುದೇ ಈ ಬೈಕಿನ ಮತ್ತೊಂದು ವಿಶೇಷವಾಗಿದೆ.
ಎಂಜಿನ್ ಸಾಮರ್ಥ್ಯ
ಕ್ಲಾಸಿಕ್ 500 ಪೆಗಾಸಸ್ ಬೈಕ್ಗಳು 499ಸಿಸಿ ಏರ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ನೊಂದಿಗೆ 27.2-ಬಿಎಚ್ಪಿ ಮತ್ತು 41.3-ಎನ್ಎಂ ಟಾರ್ಕ್ ಉತ್ಪಾದನಾ ಗುಣ ಹೊಂದಿದೆ.
ಆದ್ರೆ ಭಾರತದಲ್ಲಿ ಮಾರಾಟವಾಗುವ ಕ್ಲಾಸಿಕ್ 500 ಪೆಗಾಸಸ್ ಆವೃತ್ತಿಗಳು ಕೇವಲ ಬ್ರೌನ್ ಬಣ್ಣಗಳಲ್ಲಿ ಮಾತ್ರ ಲಭ್ಯವಿರಲಿದ್ದು, ಸ್ಪೋಕ್ ವೀಲ್ಹ್, ಡ್ಯುಯಲ್ ಡಿಸ್ಕ್ ಬ್ರೇಕ್ ವ್ಯವಸ್ಥೆಯೊಂದಿಗೆ 194 ಕೆ.ಜಿ ತೂಕವನ್ನು ಹೊಂದಿರಲಿವೆ.
ಹ್ಯಾಂಡಲ್ ಬಾರ್, ಹೆಡ್ಲೈಟ್, ಎಕ್ಸಾಸ್ಟ್ ಮಫ್ಲರ್, ಲೆದರ್ ಸ್ಟ್ಯಾಪ್, ಕ್ಯಾನವಾಸ್ ಪ್ಯಾನಿಯರ್ಸ್ ಮತ್ತು ಫ್ಯೂಲ್ ಟ್ಯಾಂಕ್ ಮೇಲೆ ಪೆಗಾಸಸ್ ಲೊಗೊ ಬೈಕಿನ ಅಂದವನ್ನು ಹೆಚ್ಚಿಸಲಿದ್ದು, ಆಯಿವ್ ಡ್ರ್ಯಾಬ್ ಗ್ರಿನ್, ಸರ್ವಿಸ್ ಬ್ರೌನ್ ಬಣ್ಣಗಳಲ್ಲಿ ಲಭ್ಯವಿರಲಿವೆ.