ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

Written By:

ಭಾರತದಲ್ಲಿ ಬಿಡುಗಡೆಯಾಗಲಿರುವ ಸ್ಕೂಟರ್ ಮಾದರಿಗಳಲ್ಲಿ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್ ಕೂಡಾ ಹೆಚ್ಚಿನ ನೀರಿಕ್ಷೆ ಹುಟ್ಟುಹಾಕಿದ್ದು, ಏಪ್ರಿಲ್‌ ಮೊದಲ ವಾರವೇ ಬರ್ಗಮನ್ ಸ್ಟ್ರೀಟ್ ಸ್ಕೂಟರ್ ಬಿಡುಗಡೆ ಮಾಡುವ ಬಗ್ಗೆ ಸುಜುಕಿ ಸಂಸ್ಥೆಯು ಸುಳಿವು ನೀಡಿದೆ.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ದೇಶಿಯ ಮಾರುಕಟ್ಟೆಯಲ್ಲಿ ಪ್ರಿಮಿಯಂ ಸ್ಕೂಟರ್ ಮಾದರಿಗಳಿಗೆ ವಿಶೇಷ ಬೇಡಿಕೆ ಸೃಷ್ಠಿಯಾಗುತ್ತಿದೆ. ಇದೇ ಕಾರಣಕ್ಕೆ ಹೊಸ ಯೋಜನೆ ಒಂದನ್ನು ರೂಪಿಸಿರುವ ಸುಜುಕಿ ಇಂಡಿಯಾ ಮೋಟರ್ ಸೈಕಲ್ ವಿಭಾಗವು ವಿನೂತನ ಶೈಲಿಯ ಬರ್ಗಮನ್ ಸ್ಪ್ರೀಟ್ ಸ್ಕೂಟರ್ ಪರಿಚಯಿಸಲು ಮುಂದಾಗಿದೆ.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ಈ ಬಗ್ಗೆ 2018ರ ಆಟೋ ಎಕ್ಸ್ ಪೋ ಹೊಸ ಸ್ಕೂಟರ್ ಬಗೆಗೆ ಎಕ್ಸ್‌ಕ್ಲೂ‌ಸಿವ್ ಮಾಹಿತಿ ಬಹಿರಂಗಗೊಳಿಸಿರುವ ಸುಜುಕಿ ಸಂಸ್ಥೆಯು ಹೊಸ ಸ್ಕೂಟರ್ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿನ 125 ಸಿಸಿ ಇತರೆ ಸ್ಕೂಟರ್ ಮಾದರಿಗಳಿಗೆ ತೀವ್ರ ಪ್ರತಿಸ್ಪರ್ಧಿಯಾಗುವ ಮುನ್ಸೂಚಣೆ ನೀಡಿತ್ತು.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ಈ ಹಿಂದೆ 150 ಸಿಸಿ ಸಾಮರ್ಥ್ಯದ ಇನ್‌ಟ್ರುಡರ್ 150 ಕ್ರೂಸರ್ ಬೈಕ್ ಪರಿಚಯಿಸಿದ್ದ ಸುಜುಕಿ ಮೋಟಾರ್ ಸೈಕಲ್ ವಿಭಾಗವು ಇದೀಗ ಎಪ್ರಿಲಿಯಾ 125 ಮತ್ತು ವೆಸ್ಪಾ 150 ಮಾದರಿಗಳನ್ನು ಹೋಲುವ ಬರ್ಗಮನ್ ಸ್ಟ್ರೀಟ್ ಎನ್ನುವ ಹೊಸ ನಮೂನೆಯ ಪ್ರಿಮಿಯಂ ಸ್ಕೂಟರ್ ಅನ್ನು ಸಿದ್ದಪಡಿಸಿದೆ.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ಆದರೆ ಭಾರತದಲ್ಲಿ ಬಿಡುಗಡೆಗಾಗಿ ಸಿದ್ಧಗೊಳಿಸಲಾಗಿರುವ ಬರ್ಗಮನ್ ಸ್ಟ್ರೀಟ್ ಸ್ಕೂಟರ್‌ಗಳು ಕೇವಲ 125ಸಿಸಿ ಆವೃತ್ತಿಗಳು ಮಾತ್ರ ಲಭ್ಯವಾಗಲಿದ್ದು, ಪ್ರಸ್ತುತ ಆಕ್ಸೆಸ್ 125ಗಿಂತಲೂ ಹೆಚ್ಚಿನ ಗುಣಮಟ್ಟದ ವೈಶಿಷ್ಟ್ಯತೆಗಳನ್ನು ಪಡೆದುಕೊಳ್ಳಲಿದೆ.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ಪೂರ್ಣ ಪ್ರಮಾಣದ ಡಿಜಿಟಲ್ ಇನ್‌ಸ್ಟ್ರುಮೆಂಟ್, ಟೆಲಿ ಸ್ಕೊಪಿಕ್ ಫೋರ್ಕ್, ಮುಂಭಾಗದ ಚಕ್ರದಲ್ಲಿ ಡಿಸ್ಕ್ ಬ್ರೇಕ್, ಮಲ್ಟಿ ಫಂಕ್ಷನ್ ಕೀ ಸ್ಲಾಟ್, ದೊಡ್ಡದಾದ ರೈಡರ್ ಸೀಟ್, 12ವಿ ಚಾರ್ಜಿಂಗ್ ಪಾಯಿಂಟ್, ಟ್ಯೂಬ್ ಟೈರ್ಸ್ ಮತ್ತು ಎಲ್‌ಇಡಿ ಟೈಲ್ ಲ್ಯಾಂಪ್ ಹೊಂದಿರಲಿದೆ.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ಹೀಗಾಗಿ ಸುಜುಕಿ ಪರಿಚಯಿಸುತ್ತಿರುವ ಬರ್ಗಮನ್ ಸ್ಟ್ರೀಟ್ ಹೊಸ ಸ್ಕೂಟರ್‌ಗಳು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಠಿಸುವ ತವಕದಲ್ಲಿದ್ದು, ಹೊಸ ಸ್ಕೂಟರ್ ಬೆಲೆಗಳು ಕೂಡಾ ಇತರೆ ಸ್ಕೂಟರ್‌ಗಳಿಗೆ ಟಕ್ಕರ್ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ಎಂಜಿನ್ ವೈಶಿಷ್ಟ್ಯತೆ

ಮೇಲೆ ಹೇಳಿದಂತೆ ಆಕ್ಸೆಸ್ 125 ಸ್ಕೂಟರ್‌ಗೆ ಸಮನಾಗಿರುವ ಬರ್ಗಮನ್ ಸ್ಟ್ರೀಟ್ ಸ್ಕೂಟರ್‌ಗಳು 124ಸಿಸಿ ಎಂಜಿನ್ ಮೂಲಕ 8.6 ಬಿಎಚ್‌ಪಿ ಮತ್ತು 10.2 ಎನ್ಎಂ ಟಾರ್ಕ್ ಉತ್ಪಾದಿಸಬಲ್ಲ ಗುಣಹೊಂದಿದ್ದು, ಸಿವಿಟಿ ಗೇರ್‌ಬಾಕ್ಸ್ ಹೊಂದಿರಲಿವೆ.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ಇದರ ಜೊತೆಗೆ 12 ಇಂಚಿನ ಅಲಾಯ್ ಚಕ್ರಗಳನ್ನು ಹೊಂದಿರುವ ಹೊಸ ಸುಜುಕಿ ಸ್ಕೂಟರ್‌ಗಳು ಭಾರತೀಯ ರಸ್ತೆಗಳಿಗೆ ಅನುಗುಣವಾಗಿ ರಚಿಸಲಾಗಿದ್ದು, ಡಿಸ್ಕ್ ಬ್ರೇಕ್ ಹಾಗೂ ಎಬಿಎಸ್ ಆಯ್ಕೆ ಕೂಡಾ ದೊರೆಯಲಿದೆ.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ಬೆಲೆ (ಅಂದಾಜು)

ಬರ್ಗಮನ್ ಸ್ಟ್ರೀಟ್ ಸ್ಕೂಟರ್‌ಗಳ ಬೆಲೆಯು ರೂ.65 ಸಾವಿರದಿಂದ ರೂ.70 ಸಾವಿರ ಇರಬಹುದೆಂದು ಅಂದಾಜಿಸಲಾಗಿದ್ದು, ಬಿಡುಗಡೆ ನಂತರವಷ್ಟೇ ನಿಖರ ಮಾಹಿತಿ ದೊರೆಯಲಿದೆ.

ಏಪ್ರಿಲ್‌ನಲ್ಲೇ ಬಿಡುಗಡೆಯಾಗಲಿದೆಯಂತೆ ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್

ಇತರೆ ಸ್ಕೂಟರ್‌ಗಳಿಂತ ಹೇಗೆ ಭಿನ್ನ?

ಹೌದು.. ಈಗಾಗಲೇ ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ನಮೂನೆಯ 125 ಸಿಸಿ ಸಾಮರ್ಥ್ಯದ ಸ್ಕೂಟರ್ ಮಾದರಿಗಳಿದ್ದು, ಬರ್ಗಮನ್ ಸ್ಟ್ರೀಟ್ ಇತರೆ ಮಾದರಿಗಳಿಂತ ಸಾಕಷ್ಟು ವಿಭಿನ್ನವಾಗಿದೆ. ಇದಕ್ಕೆ ಕಾರಣ ಈ ಹಿಂದೆ ಬಿಡುಗಡೆಯಾಗಿದ್ದ ಇನ್‌ಟ್ರುಡರ್ 150 ಮಾದರಿಯಲ್ಲೇ ಕ್ರೂಸರ್ ವೈಶಿಷ್ಟ್ಯತೆಯನ್ನು ಸಹ ಪಡೆದುಕೊಂಡಿದೆ.

Read more on suzuki motorcycle scooter
English summary
Suzuki Burgman Street Scooter India Launch On 2018 April.
Story first published: Wednesday, March 7, 2018, 14:06 [IST]
X

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more