ಟ್ರಾಫಿಕ್ ಪೊಲೀಸ್ ಮಾಡಿದ ಅವಾಂತರಕ್ಕೆ ಗರ್ಭಿಣಿ ಸ್ಥಳದಲ್ಲೇ ಸಾವು

Written By:

ಕಾನೂನು ಪ್ರಕಾರ ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ದಂಡ ವಿಧಿಸುವುದು ವಾಡಿಕೆ. ಆದ್ರೆ ಇಲ್ಲೊಬ್ಬ ಟ್ರಾಫಿಕ್ ಪೊಲೀಸ್ ಮಾಡಿದ ಅವಾಂತರದಿಂದಾಗಿ ಬೈಕ್ ಮೇಲಿದ್ದ ಗರ್ಭಿಣಿ ಮಹಿಳೆಯೊಬ್ಬರ ಪ್ರಾಣವೇ ಬಲಿಯಾದ ಘಟನೆ ನಡೆದಿದೆ.

ಟ್ರಾಫಿಕ್ ಪೊಲೀಸ್ ಮಾಡಿದ ಅವಾಂತರಕ್ಕೆ ಗರ್ಭಿಣಿ ಸ್ಥಳದಲ್ಲೇ ಸಾವು

ಬೈಕ್ ಸವಾರನೊಬ್ಬ ಹೆಲ್ಮೆಟ್ ಧರಿಸದ್ದಕ್ಕೆ ಟ್ರಾಫಿಕ್ ಇನ್ಸ್ ಪೆಕ್ಟರ್ ಒಬ್ಬರು ಬೈಕ್ ಗೆ ಒದ್ದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಗರ್ಭಿಣಿ ಮಹಿಳೆ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ.

ಟ್ರಾಫಿಕ್ ಪೊಲೀಸ್ ಮಾಡಿದ ಅವಾಂತರಕ್ಕೆ ಗರ್ಭಿಣಿ ಸ್ಥಳದಲ್ಲೇ ಸಾವು

ತಿರುಚ್ಚಿ-ತಂಜಾವೂರು ರಾಷ್ಟ್ರೀಯ ಹೆದ್ದಾರಿ ಥುವಕುಡಿಯ ಗಣೇಶ ಸರ್ಕಲ್‌ ಬಳಿ ಈ ಘಟನೆ ನಡೆದಿದ್ದು, ಟ್ರಾಫಿಕ್ ಪೊಲೀಸರ ತನಿಖೆ ವೇಳೆ ಬೈಕ್ ಸವಾರ ಸೂಲಪೇಟೆ ಮೂಲದ ರಾಜ ಆತನ ಪತ್ನಿ ಉಷಾ ಬೈಕ್ ಮೇಲೆ ಹೋಗುತ್ತಿದ್ದರು. ಈ ವೇಳೆ ಬೈಕನ್ನು ಪೊಲೀಸರು ನಿಲ್ಲಿಸುವ ಪ್ರಯತ್ನ ಮಾಡಿದಾಗ, ರಾಜ ನಿಲ್ಲಿಸದೆ ತಪ್ಪಿಸಿಕೊಳ್ಳಲು ಯತ್ನಸಿದ್ದಾನೆ.

ಟ್ರಾಫಿಕ್ ಪೊಲೀಸ್ ಮಾಡಿದ ಅವಾಂತರಕ್ಕೆ ಗರ್ಭಿಣಿ ಸ್ಥಳದಲ್ಲೇ ಸಾವು

ಇದರಿಂದ ಆಕ್ರೋಶಗೊಂಡ ಪೊಲೀಸರು ರಾಜ ಇರುವ ಬೈಕ್ ಅನ್ನು ಚೇಸ್ ಮಾಡಿ ಹಿಡಿದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ್ದಕ್ಕಾಗಿ ಟ್ರಾಫಿಕ್ ಇನ್ಸ್ ಪೆಕ್ಟರ್ ಬೈಕ್‌ಗೆ ಬಲವಾಗಿ ಒದ್ದಿದ್ದಾನೆ.

ಟ್ರಾಫಿಕ್ ಪೊಲೀಸ್ ಮಾಡಿದ ಅವಾಂತರಕ್ಕೆ ಗರ್ಭಿಣಿ ಸ್ಥಳದಲ್ಲೇ ಸಾವು

ಈ ವೇಳೆ ಇನ್ಸ್‌ಪೆಕ್ಟರ್ ಕಾಲು ಬಲವಾಗಿ ಗರ್ಭಿಣಿಯ ಹೊಟ್ಟೆಗೆ ತಗುಲಿದ್ದು, ಇಬ್ಬರೂ ಬೈಕ್‌ನಿಂದ ಉರುಳಿಬಿದ್ದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಉಷಾ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಡ ರಾಜ ಗಂಭೀರವಾಗಿ ಗಾಯಗೊಂಡಿದ್ದಾನೆ.

ಟ್ರಾಫಿಕ್ ಪೊಲೀಸ್ ಮಾಡಿದ ಅವಾಂತರಕ್ಕೆ ಗರ್ಭಿಣಿ ಸ್ಥಳದಲ್ಲೇ ಸಾವು

ಘಟನೆಯಿಂದಾಗಿ ರೊಚ್ಚಿಗೆದ್ದ ಮೃತರ ಕುಟುಂಬಸ್ಥರು ಪೊಲೀಸರ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಪೊಲೀಸರ ಕ್ರಮವನ್ನು ವಿರೋಧಿಸಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ಕೂಡಾ ನಡೆಸಿದ್ದಾರೆ.

ಟ್ರಾಫಿಕ್ ಪೊಲೀಸ್ ಮಾಡಿದ ಅವಾಂತರಕ್ಕೆ ಗರ್ಭಿಣಿ ಸ್ಥಳದಲ್ಲೇ ಸಾವು

ಪ್ರತಿಭಟನೆ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಕಾರಣ ಘಟನಾ ಸ್ಥಳಕ್ಕೆ ಆಗಮಿಸಿದ ಡಿಎಸ್‌ಪಿ ಮೇಲೂ ಚಪ್ಪಲಿ ಎಸೆಯಲಾಗಿದ್ದು, ಪೊಲೀಸರ ಈ ವರ್ತನೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಟ್ರಾಫಿಕ್ ಪೊಲೀಸ್ ಮಾಡಿದ ಅವಾಂತರಕ್ಕೆ ಗರ್ಭಿಣಿ ಸ್ಥಳದಲ್ಲೇ ಸಾವು

ಇನ್ನು ಘಟನೆಗೆ ಕಾರಣವಾದ ಟ್ರಾಫಿಕ್ ಪೊಲೀಸ್ ಕಾಮರಾಜ್ ವಿರುದ್ಧ ಪ್ರಕರಣ ಕೂಡಾ ದಾಖಲಾಗಿದ್ದು, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹಿರಿಯ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

Read more on traffic rules police
English summary
Traffic Cop's Ego Killed Pregnant Woman.

Latest Photos

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark