Just In
- 32 min ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 2 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 2 hrs ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 3 hrs ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
Don't Miss!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- News Lok Sabha Election: ಕರ್ನಾಟಕದ ಈ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್ಫೀಲ್ಡ್ ಥಂಡರ್ಬರ್ಡ್
ಜನಪ್ರಿಯ ಬೈಕ್ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಹೊಸ ತಲೆಮಾರಿನ ಥಂಡರ್ಬರ್ಡ್ ಬೈಕ್ ಅನ್ನು ಸ್ಪಾಟ್ ಟೆಸ್ಟ್ ಮಾಡಿದೆ. ಸ್ಪಾಟ್ ಟೆಸ್ಟ್ ನಲ್ಲಿ ಹೊಸ ರಾಯಲ್ ಎನ್ಫೀಲ್ಡ್ ಥಂಡರ್ಬರ್ಡ್ನ ಹಲವು ಮಾಹಿತಿಗಳು ಬಹಿರಂಗವಾಗಿವೆ.
ಹೊಸ ತಲೆಮಾರಿನ ಥಂಡರ್ಬರ್ಡ್ ಬೈಕ್ ಅನ್ನು ಸ್ಪಾಟ್ ಟೆಸ್ಟ್ ಮಾಡಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ.2020ರ ರಾಯಲ್ ಎನ್ಫೀಲ್ಡ್ ಹೊಸದಾಗಿ ನವೀಕರಿಸಲಾಗಿದ್ದು, ಇದೀಗ ಹೊಸ ಲುಕ್ ಅನ್ನು ಹೊಂದಿದೆ. ಹೊಸ ಬೈಕಿನ ಮುಂಭಾಗದಲ್ಲಿ ಚಿಕ್ಕದಾದ ರೌಂಡ್ ಹೆಡ್ಲ್ಯಾಂಪ್ ಅನ್ನು ಹೊಂದಿದ್ದು, ಇದು ಕ್ಲಾಸಿ ಸಿಂಗಲ್ ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಹೊಸ ಥಂಡರ್ಬರ್ಡ್ ಬೈಕ್ ಹೊಸ ಇಂಧನ ಟ್ಯಾಂಕ್, ಹೊಸ ಸೈಡ್ ಪ್ಯಾನೆಲ್ಗಳು ಮತ್ತು ಸ್ಪ್ಲೀಟ್ ಸೀಟಗಳ ಸೆಟ್ಅಪ್ ಅನ್ನು ಹೊಂದಿದೆ.
ಹಿಂಭಾಗದಲ್ಲಿ ಸ್ಪ್ಲಿಟ್ ಗ್ರ್ಯಾಬ್ ರೈಲ್ ಮತ್ತು ರೌಂಡ್ ಟೇಲ್ ಲ್ಯಾಂಪ್ ಅನ್ನು ಅಳವಡಿಸಲಾಗಿದೆ. ಹೊಸ ರಾಯಲ್ ಎನ್ಫೀಲ್ಡ್ ಥಂಡರ್ಬರ್ಡ್ ಹೊಸ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಹೊಸ ಎಂಜಿನ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಸಾರವಾಗಿರಲಿದೆ. ಪ್ರಸ್ತುತ ಥಂಡರ್ಬರ್ಡ್ ಬೈಕಿನಲ್ಲಿರುವ 350 ಸಿಸಿ ಎಂಜಿನ್ ಅನ್ನು ಬದಲಾಯಿಸಿ 500 ಸಿಸಿ ಎಂಜಿನ್ ಅಳವಡಿಸಲಾಗುತ್ತದೆ.
ಹೊಸ ಎಂಜಿನ್ ಅನ್ನು ರಾಯಲ್ ಎನ್ಫೀಲ್ಡ್ ಇಂಟರ್ಸೆಪ್ಟರ್ ಮತ್ತು ಕಾಂಟಿನೆಂಟಲ್ ಜಿಟಿ 650 ಸಿಸಿ ಮಾದರಿಯ ಎಂಜಿನ್ ಅನ್ನು ಹೊಸ ಥಂಡರ್ಬರ್ಡ್ನಲ್ಲಿ ಅಳವಡಿಸುವ ಸಾಧ್ಯತೆಗಳಿವೆ. ಇದರಿಂದ ಕಂಪನಿಯ ಯುಸಿಇ ಎಂಜಿನ್ಗಿಂತ ಪವರ್ಫುಲ್ ಆಗಿರಲಿದೆ. ಈ ಎಂಜಿನ್ ಕಡಿಮೆ ಮಾಲಿನ್ಯ ಮತ್ತು ಆಪ್ಟಿಮೈಡ್ ಪವರ್ ವಿತರಣೆಗೆ ಫ್ಯೂಯಲ್ ಇಂಜೆಕ್ಷನ್ ಅನ್ನು ಹೊಂದಿರುತ್ತದೆ.
ಹೊಸ 2020ರ ರಾಯಲ್ ಎನ್ಫೀಲ್ಡ್ ಥಂಡರ್ಬರ್ಡ್ ಹೊಸ ಡಬಲ್ ಕ್ರ್ಯಾಡಲ್ ಚಾಸಿಸ್ ಅನ್ನು ಹೊಂದಿದೆ. ಇದು ಟಿಲಿಸ್ಕೋಪಿಕ್ ಫೋರ್ಕ್ಸ್ ಅಪ್ ಫ್ರಂಟ್ ಮತ್ತು ಹಿಂಭಾಗದಲ್ಲಿ ಡ್ಯುಯಲ್ ಶಾಕ್ ಅಬ್ಸಾರ್ಬರ್ ಸಸ್ಪೆಂಕ್ಷನ್ ಅನ್ನು ಹೊಂದಿದೆ.
ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬೈಕಿನಲ್ಲಿ ಮುಂಭಾಗದ ಡಿಸ್ಕ್ ರೋಟರ್ ಅನ್ನು ಎಡಭಾಗದ ಹ್ಯಾಂಡಲ್ಬಾರ್ನಲ್ಲಿ ಅಳವಡಿಸಲಾಗಿದೆ. ಹೊಸ ಬೈಕಿನಲ್ಲಿ ಟಯರ್ ಅನ್ನು ಬಲಭಾಗದ ಯುನಿಟ್ನಲ್ಲಿ ಅಳವಡಿಸಲಾಗಿದೆ. ಹಿಂಭಾಗದಲ್ಲಿ ಬ್ರೇಕಿಂಗ್ ಸಿಸ್ಟಂಗಳನ್ನು ಸಣ್ಣ ಡಿಸ್ಕ್ ರೋಟರ್ಗಳನ್ನು ಅಳವಡಿಸಲಾಗಿದೆ.
MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!
ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಹೊಸ ತಲೆಮಾರಿನ ಥಂಡರ್ಬರ್ಡ್ ಬೈಕಿನಲ್ಲಿ ನವೀಕರಿಸಲಾದ ಪುಟ್ಪೆಗ್ಗಳು ಮತ್ತು ನವೀಕರಿಸಿದ ಹ್ಯಾಂಡಲ್ಬಾರ್ಗಳು ಹೆಚ್ಚು ಆರಾಮದಾಯಕ ರೈಡ್ಗೆ ಸಹಕಾರಿಯಾಗಲಿವೆ. 2020ರ ಹೊಸ ರಾಯಲ್ ಎನ್ಫೀಲ್ಡ್ ಥಂಡರ್ಬರ್ಡ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!
ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ರಾಯಲ್ ಎನ್ಫೀಲ್ಡ್ ಥಂಡರ್ಬರ್ಡ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.64 ಲಕ್ಷಗಳಾಗಿದೆ. ಥಂಡರ್ಬರ್ಡ್ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಹೀಂದ್ರಾ ಮೊಜೊ 300 ಎಬಿಎಸ್, ಬಜಾಜ್ ಡೊಮಿನಾರ್ 400 ಮತ್ತು ಇಂಪೀರಿಯಲ್ 400 ಬೈಕುಗಳಿಗೆ ಪೈಪೋಟಿ ನೀಡಲಿದೆ.