ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಮತ್ತು ಖರೀದಿಸುವ ಗ್ರಾಹಕರಿಗೂ ಕೂಡಾ ವಿವಿಧ ಹೊಸ ಯೋಜನೆಗಳನ್ನು ಘೋಷಿಸಿದೆ. ಇದರಲ್ಲಿ ಪ್ರಮುಖವಾಗಿ ಜಿಎಸ್‌ಟಿ ದರ ಇಳಿಕೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ವರದಾನವಾಗಿದ್ದು, ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಿದೆ.

ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮಾರಾಟದ ಮೇಲೆ ಹೆಚ್ಚಿನ ಮಟ್ಟದ ಸೆಸ್ ಸೇರಿದಂತೆ ದುಬಾರಿ ನೋಂದಣಿ ಶುಲ್ಕ ವಿಧಿಸುತ್ತಿರುವ ಕೇಂದ್ರ ಸರ್ಕಾರವು ಅದಕ್ಕೆ ಪರ್ಯಾಯವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಕ್ರಮಕೈಗೊಳ್ಳುತ್ತಿದೆ. ಈ ಹಿಂದೆ ಫೇಮ್ ಯೋಜನೆಯ ಮೂಲಕ ಸಬ್ಸಡಿ ಯೋಜನೆಯನ್ನು ಘೋಷಿಸಿದ್ದ ಕೇಂದ್ರವು ಈ ಬಾರಿ ಜಿಎಸ್‌ಟಿ ಪ್ರಮಾಣದಲ್ಲಿ ಭಾರೀ ಕಡಿತ ಮಾಡಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಎಲೆಕ್ಟ್ರಿಕ್ ವಾಹನಗಳ ಮೇಲೆ ಈ ಹಿಂದೆ ವಿಧಿಸಲಾಗುತ್ತಿದ್ದ ಜಿಎಸ್‌ಟಿ ಪ್ರಮಾಣವನ್ನು ನೀತಿ ಆಯೋಗದ ಶಿಫಾರಸ್ಸು ಮೇರೆಗೆ ಶೇ.12ರಿಂದ ಶೇ.5ಕ್ಕೆ ಇಳಿಕೆ ಮಾಡಲಾಗಿದ್ದು, ಇದು ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ ಸಂಸ್ಥೆಗಳ ಜೊತೆಗೆ ಎಲೆಕ್ಟ್ರಕ್ ವಾಹನ ಖರೀದಿದಾರರಿಗೂ ಸಾಕಷ್ಟು ಸಹಕಾರಿಯಾಗಲಿದೆ.

ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಕೇಂದ್ರ ಸರ್ಕಾರದ ಹೊಸ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವ ಜಿಎಸ್‌ಟಿ ದರ ಕಡಿತ ಯೋಜನೆಯನ್ನು ಅಧಿಕೃತವಾಗಿ ಜಾರಿಗೊಳಿಸುವ ಸಂಬಂಧ ಇಂದು ಮಹತ್ವದ ಸಭೆ ನಡೆಸಿದ್ದ ಜಿಎಸ್‌ಟಿ ಕೌನ್ಸಿಲ್ ಮಂಡಳಿಯು, ಹೊಸ ಜಿಎಸ್‌ಟಿ ದರಗಳನ್ನು ಅಗಸ್ಟ್ 1ರಿಂದಲೇ ಅನ್ವಯವಾಗುವಂತೆ ಆದೇಶ ನೀಡಿದೆ.

ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಹೀಗಾಗಿ ಅಥೆರ್ ಸ್ಕೂಟರ್‌ಗಳ ಬೆಲೆಯಲ್ಲಿ ಇಳಿಕೆ ಮಾಡಿ ಹೊಸ ದರಗಳನ್ನು ಪ್ರಕಟಿಸಲಾಗಿದ್ದು, ಈ ಹಿಂದೆ ಇದ್ದ ರೂ. 1.13 ಲಕ್ಷ( ಎಸ್ 340) ಮತ್ತು 1.24 ಲಕ್ಷ( ಎಸ್ 450) ಸ್ಕೂಟರ್‌ಗಳ ಬೆಲೆಯು ಜಿಎಸ್‌ಟಿ ಬದಲಾವಣೆ ನಂತರ ರೂ.1.02 ಲಕ್ಷ(ಎಸ್ 340) ಮತ್ತು ರೂ.1.12 ಲಕ್ಷ(ಎಸ್ 450) ಬೆಲೆ ಪಡೆದುಕೊಂಡಿವೆ. ಇದರೊಂದಿಗೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲಿನ ಸೆಸ್ ಏರಿಕೆ ಕೂಡಾ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ.

ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಹೊಸ ಆದೇಶದಿಂದಾಗಿ ಅಗಸ್ಟ್ 1ರಿಂದಲೇ ಎಲೆಕ್ಟ್ರಿಕ್ ವಾಹನಗಳ ಬೆಲೆಯಲ್ಲಿ ಸಾಕಷ್ಟು ಇಳಿಕೆಯಾಗಲಿದ್ದು, ಎಲೆಕ್ಟ್ರಿಕ್ ವಾಹನ ಉತ್ಪಾದನಾ ಸಂಸ್ಥೆಗಳು ಇದಕ್ಕೆ ಹರ್ಷ ವ್ಯಕ್ತಪಡಿಸಿವೆ. ಯಾಕೆಂದ್ರೆ ಹೊಸ ಯೋಜನೆಯಿಂದಾಗಿ ಎಲೆಕ್ಟ್ರಿಕ್ ವಾಹನ ಬೆಲೆ ಕಡಿಮೆಯಾಗಿ ಮಾರಾಟ ಪ್ರಮಾಣವು ಹೆಚ್ಚಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮೇಲೆ ಗ್ರಿನ್ ಸೆಸ್ ಹೆಚ್ಚಾಗುವುದರಿಂದ ಎಲೆಕ್ಟ್ರಿಕ್ ವಾಹನಗಳಿಗೂ ಇದು ಪೂರಕವಾಗಿದೆ.

ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಇವಿ ಖರೀದಿ ಮೇಲೆ ತೆರಿಗೆ ವಿನಾಯ್ತಿ..!

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ತೆರಿಗೆ ವಿನಾಯ್ತಿ ಸಹ ನೀಡಿದ್ದು, ಬರೋಬ್ಬರಿ 1.5 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಈ ಹಿಂದಿನ ಫೇಮ್ 2 ಯೋಜನೆ ಅಡಿಯಲ್ಲಿ ಘೋಷಣೆ ಮಾಡಲಾಗಿರುವ ಸಬ್ಸಡಿ ಯೋಜನೆಯನ್ನು ಸಹ ಮುಂದುವರಿಸಲಾಗಿದೆ.

ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಈ ಹಿಂದೆ 2018ರಲ್ಲಿ ಘೋಷಣೆ ಮಾಡಲಾಗಿರುವ ಫೇಮ್ 2 ಯೋಜನೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಮತ್ತು ಬೆಳವಣಿಗಾಗಿ ರೂ. 10 ಸಾವಿರ ಕೋಟಿ ಮೀಸಲು ಇರಿಸಲಾಗಿದ್ದು, 2018-19, 2019-20 ಮತ್ತು 2020-21ರ ಆರ್ಥಿಕ ವರ್ಷದ ಅವಧಿಗಾಗಿ ಈ ಮೀಸಲು ಹಣವನ್ನು ಖರ್ಚು ಮಾಡಲು ನಿರ್ಧರಿಸಲಾಗಿದೆ.

ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಫೇಮ್ 2 ಯೋಜನೆ ಅಡಿ ಸಬ್ಸಡಿ ಸೇರಿದಂತೆ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಹೆಚ್ಚಿನ ಮಟ್ಟದಲ್ಲಿ ಹಣ ವಿನಿಯೋಗ ಮಾಡಲಾಗುತ್ತಿದ್ದು, ಇದೀಗ ಜಿಟಿಎಸ್ ತಗ್ಗಿಸಿರುವುದು ಇವಿ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಇದು ಮತ್ತಷ್ಟು ಸಹಕಾರಿಯಾಗಿಲಿದೆ.

ಜಿಎಸ್‌ಟಿ ದರದಲ್ಲಿ ಇಳಿಕೆ- ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೆಲೆ ಮತ್ತಷ್ಟು ಅಗ್ಗ

ಈ ಮೂಲಕ 2030ರ ವೇಳೆಗೆ ಶೇ.100 ರಷ್ಟು ವಾಹನಗಳನ್ನು ರಸ್ತೆಗಿಳಿಸಬೇಕೆಂಬ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹೊಸ ಬಜೆಟ್ ಪೂರಕವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗಳಲ್ಲಿ ರೂ.8 ಸಾವಿರದಿಂದ ರೂ.12 ಸಾವಿರ ಮತ್ತು ಎಲೆಕ್ಟ್ರಿಕ್ ಕಾರುಗಳ ಬೆಲೆಯು ರೂ.15 ಲಕ್ಷ ಇದ್ದಲ್ಲಿ ರೂ.1.20 ಲಕ್ಷದಿಂದ ರೂ.1.50 ಲಕ್ಷ ಬೆಲೆ ಇಳಿಕೆಯಾಗಲಿದೆ.

Most Read Articles

Kannada
English summary
Ather Energy Reduces Prices Of Its Electric Scooters In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X