Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಮಾರುಕಟ್ಟೆ ವಿಸ್ತರಣೆಗೆ ಅಥೆರ್ ಹೊಸ ಪ್ಲ್ಯಾನ್
ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಈ ಹಿನ್ನೆಲೆ ಆಟೋ ಉತ್ಪಾದನಾ ಸಂಸ್ಥೆಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿವೆ. ಇದಕ್ಕಾಗಿ ಚಾರ್ಜಿಂಗ್ ಸ್ಟೆಷನ್ ನಿರ್ಮಾಣ ಕಾರ್ಯ ಜೋರಾಗಿದ್ದು, ಅಥೆರ್ ಎನರ್ಜಿ ಕೂಡಾ ಈ ನಿಟ್ಟಿನಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳನ್ನು ನಿರ್ಮಾಣಗೊಳಿಸಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಿಡುಗಡೆಗಾಗಿ ವಿಳಂಬ ಮಾಡುತ್ತಿವೆ. ಹೀಗಾಗಿ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಮೂಲಕ ಎಲೆಕ್ಟ್ರಿಕ್ ವಾಹನಗಳ ಮತ್ತು ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಸಬ್ಸಡಿ ಘೋಷಣೆ ಮಾಡಿದ್ದು, ಈ ಹಿನ್ನೆಲೆ ಅಥೆರ್ ಎನರ್ಜಿ ಸಂಸ್ಥೆಯು ಬೃಹತ್ ಯೋಜನೆಯೊಂದನ್ನು ಕೈಗೊಳ್ಳುತ್ತಿದೆ.

ಕಳೆದ ವರ್ಷವಷ್ಟೇ ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿರುವ ಬೆಂಗಳೂರಿನ ಅಥೆರ್ ಎನರ್ಜಿ ಸಂಸ್ಥೆಯು ಅತಿ ಕಡಿಮೆ ಬೆಲೆಯಲ್ಲಿ 340 ಮತ್ತು 450 ಎನ್ನುವ ಎರಡು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿತ್ತು.

ಆದ್ರೆ ಬೆಂಗಳೂರು ಹೊರತು ಪಡಿಸಿ ಅಥೆರ್ ಸಂಸ್ಥೆಗೆ ತನ್ನ ಮಾರಾಟ ಜಾಲವನ್ನು ದೇಶದ ವಿವಿಧ ನಗರಗಳಿಗೆ ವಿಸ್ತರಿಸಲು ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆ ಅಡಿಯಾಗುತ್ತಿದ್ದು, ಇದರಿಂದ ಕೇಂದ್ರ ಸರ್ಕಾರದ ಫೇಮ್ 2 ಯೋಜನೆ ಅಡಿ ಬೃಹತ್ ಯೋಜನೆ ರೂಪಿಸಿದೆ.

ಅಥೆರ್ ಸಂಸ್ಥೆಯು ವರ್ಷಾಂತ್ಯಕ್ಕೆ 200 ಚಾರ್ಜಿಂಗ್ ಸ್ಪೆಷನ್‌ಗಳನ್ನು ದೇಶದ ವಿವಿಧಡೆ ತೆರೆಯಲು ನಿರ್ಧರಿಸಿದ್ದು, ಹಾಗೆಯೇ 2022ರ ವೇಳೆಗೆ ಬರೋಬ್ಬರಿ 6,500 ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಗುರಿ ಹೊಂದಿದೆ. ಇದಕ್ಕಾಗಿ ರೂ.130 ಕೋಟಿ ಮೀಸಲಿಟ್ಟಿರುವ ಅಥೆರ್ ಎನರ್ಜಿ ಸಂಸ್ಥೆಯು ಕೇಂದ್ರ ಸರ್ಕಾರದಿಂದ ಭಾರೀ ಪ್ರಮಾಣದ ಸಬ್ಸಡಿ ಪಡೆದುಕೊಳ್ಳಲಿದೆ.

ಈ ಮೂಲಕ ದೇಶದ ಪ್ರಮುಖ ಪ್ರಮುಖ ನಗರಗಳಲ್ಲಿ ತನ್ನ ಸ್ಕೂಟರ್ ಮಾರಾಟ ಜಾಲವನ್ನು ವಿಸ್ತರಿಸಲು ಯೋಜಿಸಿರುವ ಅಥೆರ್ ಸಂಸ್ಥೆಯು ಮುಂಬರುವ ಜೂನ್ ಅವಧಿಯಲ್ಲಿ ಚೆನ್ನೈನಲ್ಲಿ ಮೊದಲ ಬಾರಿಗೆ ಸ್ಕೂಟರ್ ಮಾರಾಟಕ್ಕೆ ಚಾಲನೆ ನೀಡಲು ಸಿದ್ದವಾಗಿದ್ದು, ಅಗತ್ಯ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯುತ್ತಿದೆ.

ಇನ್ನು ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳ ಅವಧಿಗೆ ಅನ್ವಯಸುವಂತೆ ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಇದಕ್ಕಾಗಿ ಬರೋಬ್ಬರಿ 10 ಸಾವಿರ ಕೋಟಿ ವ್ಯಯ ಮಾಡುತ್ತಿದೆ. ಇದರಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ನಿರ್ಮಾಣ ಮಾಡುವ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಅಷ್ಟೇ ಅಲ್ಲದೇ ಎಲೆಕ್ಟಿಕ್ ಕಾರು ಖರೀದಿಸುವ ಗ್ರಾಹಕರಿಗೂ ಕೂಡಾ ಸಬ್ಸಡಿ ದೊರೆಯಲಿದೆ.
MOST READ: ಜಾವಾ ಬೈಕ್ ಸಂಸ್ಥೆಯ ವಿರುದ್ದ ಸಿಡಿದೆದ್ದ ಗ್ರಾಹಕರು

ಹೀಗಾಗಿ ಆಟೋ ಉದ್ಯಮದಲ್ಲಿ ಸದ್ಯ ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದ ಮೇಲೆ ಸಾಕಷ್ಟು ಒತ್ತು ನೀಡುತ್ತಿರುವ ವಾಹನ ಉತ್ಪಾದಕರು ಮುಂದಿನ 2020 ರ ಆರಂಭದಲ್ಲಿ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದ್ದು, ಇದಕ್ಕೆ ಪೂರಕವಾಗಿ ನಗರಪ್ರದೇಶಗಳಲ್ಲಿ ಪ್ರತಿ 3 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲು ಕೇಂದ್ರ ಸರ್ಕಾರವು ಬೃಹತ್ ಯೋಜನೆ ರೂಪಿಸಿದೆ.

ಇದಕ್ಕಾಗಿ ಸಬ್ಸಡಿಯನ್ನು ಘೋಷಣೆ ಮಾಡಲಾಗಿದ್ದು, ನಗರಪ್ರದೇಶಗಳಲ್ಲಿ ಪ್ರತಿ 3 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಟೆಷನ್ ತಲೆ ಎತ್ತಲಿದ್ದರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 25 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಪೆಷನ್‌ಗಳು ಕಾರ್ಯನಿರ್ವಹಿಸಲಿವೆ.
MOST READ: ಕೆಸರಿನಲ್ಲಿ ಸಿಲುಕಿದದ್ದ 9 ಟನ್ ತೂಕದ ಟ್ರಕ್ ಅನ್ನು ಸಲೀಸಾಗಿ ಎಳೆದ ಫೋರ್ಸ್ ಗೂರ್ಖಾ

ಒಟ್ಟಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ಅವಲಂಬನೆ ತಗ್ಗಿಸುವುದರ ಜೊತೆಗೆ ಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಇದು ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯು ಮಹತ್ವದ ಬದಲಾವಣೆಗೆ ಕಾರಣವಾಗುತ್ತಿದ್ದು, ಹೊಸ ಯೋಜನೆಯನ್ನು ಸಮರ್ಥವಾಗಿ ಬಳಸಿಕೊಳ್ಳಲು ಮುಂದಾಗಿರುವ ಅಥೆರ್ ಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ತವಕದಲ್ಲಿದೆ.