ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಅಥೆರ್ ಎನರ್ಜಿ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಸ್ಕೂಟರ್ ಉತ್ಪನ್ನಗಳ ಬೆಲೆಯಲ್ಲಿ ತುಸು ಬದಲಾವಣೆ ತಂದಿದ್ದು, ಈ ಹಿಂದಿನ ಬೆಲೆಗಳಿಂತ ಅಥೆರ್ ಎಸ್340 ಮತ್ತು ಎಸ್450 ಸ್ಕೂಟರ್‌ಗಳ ಬೆಲೆಯು ರೂ.4 ಸಾವಿರದಷ್ಟು ದುಬಾರಿಯಾಗಿರಲಿವೆ. ಮಾಹಿತಿಗಳ ಪ್ರಕಾರ, ಮೇ 1ರಿಂದಲೇ ಹೊಸ ದರಗಳು ಅನ್ವಯವಾಗಲಿದ್ದು, ಅಥೆರ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬೇಡಿಕೆಯಲ್ಲಿ ಭಾರೀ ಬೆಳವಣಿಗೆ ಕಂಡುಬಂದಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಬೆಂಗಳೂರು ಮೂಲದ ಅಥೆರ್ ಎನರ್ಜಿ ಸಂಸ್ಥೆಯು ಕಳೆದ ವರ್ಷಷ್ಟೇ ತನ್ನ ಬಹುನೀರಿಕ್ಷಿತ ಎರಡು ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿದ್ದು, ಕೈಗೆಟುಕುವ ಬೆಲೆ ಮತ್ತು ಉತ್ತಮ ಮೈಲೇಜ್‌ನಿಂದಾಗಿ ಅತಿಹೆಚ್ಚು ಜನಪ್ರಿಯತೆ ಪಡೆಯುತ್ತಿವೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ಮುಂದಿನ ಕೆಲವೇ ದಿನಗಳಲ್ಲಿ ದೇಶದ ವಿವಿಧ ನಗರಗಳಲ್ಲಿ ತಮ್ಮ ಮಾರುಕಟ್ಟೆ ವಿಸ್ತರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಸದ್ಯ ಬೆಂಗಳೂರಿನಲ್ಲಿ ಮಾತ್ರ ತನ್ನ ಮಾರಾಟ ಜಾಲವನ್ನು ಹೊಂದಿರುವ ಅಥೆರ್ ಸಂಸ್ಥೆಯು ಇದೇ ಮೊದಲ ಬಾರಿಗೆ ದೇಶಾದ್ಯಂತ ತನ್ನ ಮಾರಾಟ ಮಳಿಗೆಗಳನ್ನು ತೆರೆಯಲು ನಿರ್ಧರಿಸಿದ್ದು, ಹೀಗಾಗಿ ತನ್ನ ಜನಪ್ರಿಯ ಎಸ್340 ಮತ್ತು ಎಸ್450 ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯನ್ನು ಪರಿಸ್ಕರಣೆ ಮಾಡಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಹೊಸ ಬೆಲೆಗಳ ಪ್ರಕಾರ, ಈ ಹಿಂದೆ ರೂ.1. 09 ಲಕ್ಷಕ್ಕೆ ಲಭ್ಯವಿದ್ದ ಎಸ್340 ಸ್ಕೂಟರ್ ಮಾದರಿಯು ಸದ್ಯ ರೂ.3,480 ಬೆಲೆ ಹೆಚ್ಚಳದೊಂದಿಗೆ ರೂ.1.13 ಲಕ್ಷ ಹೊಸ ಬೆಲೆ ಪಡೆದುಕೊಂಡಿದ್ದು, ಹೈ ಎಂಡ್ ಮಾದರಿಯಾದ ಎಸ್450 ಸ್ಕೂಟರ್ ಮಾದರಿಯು ಸಹ ರೂ.3480 ಬೆಲೆ ಹೆಚ್ಚಳದೊಂದಿಗೆ ರೂ. 1.24 ಲಕ್ಷದಿಂದ ರೂ.1.28 ಲಕ್ಷಕ್ಕೆ ಬೆಲೆ ಏರಿಕೆಯಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಇನ್ನು ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಈ ಹಿನ್ನೆಲೆ ಆಟೋ ಉತ್ಪಾದನಾ ಸಂಸ್ಥೆಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿವೆ. ಇದಕ್ಕಾಗಿ ಚಾರ್ಜಿಂಗ್ ಸ್ಟೆಷನ್ ನಿರ್ಮಾಣ ಕಾರ್ಯ ಜೋರಾಗಿದ್ದು, ಅಥೆರ್ ಎನರ್ಜಿ ಕೂಡಾ ಈ ನಿಟ್ಟಿನಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳನ್ನು ನಿರ್ಮಾಣಗೊಳಿಸಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಿಡುಗಡೆಗಾಗಿ ವಿಳಂಬ ಮಾಡುತ್ತಿದ್ದು, ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಮೂಲಕ ಎಲೆಕ್ಟ್ರಿಕ್ ವಾಹನಗಳ ಮತ್ತು ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಸಬ್ಸಡಿ ಘೋಷಣೆ ಮಾಡಿರುವುದನ್ನು ಅಥೆರ್ ಸಂಸ್ಥೆಯು ಸಮರ್ಥವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಅಥೆರ್ ಸಂಸ್ಥೆಯು ವರ್ಷಾಂತ್ಯಕ್ಕೆ 200 ಚಾರ್ಜಿಂಗ್ ಸ್ಪೆಷನ್‌ಗಳನ್ನು ದೇಶದ ವಿವಿಧಡೆ ತೆರೆಯಲು ನಿರ್ಧರಿಸಿದ್ದು, ಹಾಗೆಯೇ 2022ರ ವೇಳೆಗೆ ಬರೋಬ್ಬರಿ 6,500 ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಗುರಿ ಹೊಂದಿದೆ. ಇದಕ್ಕಾಗಿ ರೂ.130 ಕೋಟಿ ಮೀಸಲಿಟ್ಟಿರುವ ಅಥೆರ್ ಎನರ್ಜಿ ಸಂಸ್ಥೆಯು ಕೇಂದ್ರ ಸರ್ಕಾರದಿಂದ ಭಾರೀ ಪ್ರಮಾಣದ ಸಬ್ಸಡಿ ಪಡೆದುಕೊಳ್ಳಲಿದೆ.

MOST READ: ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳ ಅವಧಿಗೆ ಅನ್ವಯಸುವಂತೆ ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಇದಕ್ಕಾಗಿ ಬರೋಬ್ಬರಿ 10 ಸಾವಿರ ಕೋಟಿ ವ್ಯಯ ಮಾಡುತ್ತಿದೆ. ಇದರಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ನಿರ್ಮಾಣ ಮಾಡುವ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಅಷ್ಟೇ ಅಲ್ಲದೇ ಎಲೆಕ್ಟಿಕ್ ಕಾರು ಖರೀದಿಸುವ ಗ್ರಾಹಕರಿಗೂ ಕೂಡಾ ಸಬ್ಸಡಿ ದೊರೆಯಲಿದೆ.

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಹೀಗಾಗಿ ಆಟೋ ಉದ್ಯಮದಲ್ಲಿ ಸದ್ಯ ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದ ಮೇಲೆ ಸಾಕಷ್ಟು ಒತ್ತು ನೀಡುತ್ತಿರುವ ವಾಹನ ಉತ್ಪಾದಕರು ಮುಂದಿನ 2020 ರ ಆರಂಭದಲ್ಲಿ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದ್ದು, ಇದಕ್ಕೆ ಪೂರಕವಾಗಿ ನಗರಪ್ರದೇಶಗಳಲ್ಲಿ ಪ್ರತಿ 3 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲು ಕೇಂದ್ರ ಸರ್ಕಾರವು ಬೃಹತ್ ಯೋಜನೆ ರೂಪಿಸಿದೆ.

MOST READ: ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ- ಸೇನೆಗೆ ಶೀಘ್ರದಲ್ಲೇ ಬಾಂಬ್ ನಿರೋಧಕ ವಾಹನಗಳು..!

ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೆಚ್ಚಿದ ಬೇಡಿಕೆ- ಬೆಲೆ ಹೆಚ್ಚಳ ಮಾಡಿದ ಅಥೆರ್‌..!

ಇದಕ್ಕಾಗಿ ಸಬ್ಸಡಿಯನ್ನು ಘೋಷಣೆ ಮಾಡಲಾಗಿದ್ದು, ನಗರಪ್ರದೇಶಗಳಲ್ಲಿ ಪ್ರತಿ 3 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಟೆಷನ್ ತಲೆ ಎತ್ತಲಿದ್ದರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 25 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಪೆಷನ್‌ಗಳು ಕಾರ್ಯನಿರ್ವಹಿಸಲಿವೆ.

Most Read Articles

Kannada
English summary
Ather electric scooter prices increased. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X