ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಹೂಡಿಕೆ ಮಾಡಿದ ಅಥೆರ್

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಈ ಹಿನ್ನೆಲೆ ಆಟೋ ಉತ್ಪಾದನಾ ಸಂಸ್ಥೆಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗಾಗಿ ಸಜ್ಜುಗೊಳ್ಳುತ್ತಿವೆ. ಇದಕ್ಕಾಗಿ ಚಾರ್ಜಿಂಗ್ ಸ್ಟೆಷನ್ ನಿರ್ಮಾಣ ಕಾರ್ಯ ಜೋರಾಗಿದ್ದು, ಅಥೆರ್ ಎನರ್ಜಿ ಕೂಡಾ ಈ ನಿಟ್ಟಿನಲ್ಲಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಹೂಡಿಕೆ ಮಾಡಿದ ಅಥೆರ್

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳನ್ನು ನಿರ್ಮಾಣಗೊಳಿಸಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಿಡುಗಡೆಗಾಗಿ ವಿಳಂಬ ಮಾಡುತ್ತಿವೆ. ಹೀಗಾಗಿ ಕೇಂದ್ರ ಸರ್ಕಾರವು ಫೇಮ್ 2 ಯೋಜನೆ ಮೂಲಕ ಎಲೆಕ್ಟ್ರಿಕ್ ವಾಹನಗಳ ಮತ್ತು ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದ ಸಬ್ಸಡಿ ಘೋಷಣೆ ಮಾಡಿದ್ದು, ಈ ಹಿನ್ನೆಲೆ ಅಥೆರ್ ಎನರ್ಜಿ ಸಂಸ್ಥೆಯು ಬೃಹತ್ ಯೋಜನೆಯೊಂದನ್ನು ಕೈಗೊಳ್ಳುತ್ತಿದೆ.

ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಹೂಡಿಕೆ ಮಾಡಿದ ಅಥೆರ್

ಕಳೆದ ವರ್ಷವಷ್ಟೇ ತನ್ನ ಬಹುನೀರಿಕ್ಷಿತ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿರುವ ಬೆಂಗಳೂರಿನ ಅಥೆರ್ ಎನರ್ಜಿ ಸಂಸ್ಥೆಯು ಅತಿ ಕಡಿಮೆ ಬೆಲೆಯಲ್ಲಿ 340 ಮತ್ತು 450 ಎನ್ನುವ ಎರಡು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆಗೊಳಿಸಿತ್ತು.

ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಹೂಡಿಕೆ ಮಾಡಿದ ಅಥೆರ್

ಆದ್ರೆ ಬೆಂಗಳೂರು ಹೊರತು ಪಡಿಸಿ ಅಥೆರ್ ಸಂಸ್ಥೆಗೆ ತನ್ನ ಮಾರಾಟ ಜಾಲವನ್ನು ದೇಶದ ವಿವಿಧ ನಗರಗಳಿಗೆ ವಿಸ್ತರಿಸಲು ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆ ಅಡಿಯಾಗುತ್ತಿದ್ದು, ಇದರಿಂದ ಕೇಂದ್ರ ಸರ್ಕಾರದ ಫೇಮ್ 2 ಯೋಜನೆ ಅಡಿ ಬೃಹತ್ ಯೋಜನೆ ರೂಪಿಸಿದೆ.

ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಹೂಡಿಕೆ ಮಾಡಿದ ಅಥೆರ್

ಅಥೆರ್ ಸಂಸ್ಥೆಯು ವರ್ಷಾಂತ್ಯಕ್ಕೆ 200 ಚಾರ್ಜಿಂಗ್ ಸ್ಪೆಷನ್‌ಗಳನ್ನು ದೇಶದ ವಿವಿಧಡೆ ತೆರೆಯಲು ನಿರ್ಧರಿಸಿದ್ದು, ಹಾಗೆಯೇ 2022ರ ವೇಳೆಗೆ ಬರೋಬ್ಬರಿ 6,500 ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣ ಗುರಿ ಹೊಂದಿದೆ. ಇದಕ್ಕಾಗಿ ರೂ.130 ಕೋಟಿ ಮೀಸಲಿಟ್ಟಿರುವ ಅಥೆರ್ ಎನರ್ಜಿ ಸಂಸ್ಥೆಯು ಕೇಂದ್ರ ಸರ್ಕಾರದಿಂದ ಭಾರೀ ಪ್ರಮಾಣದ ಸಬ್ಸಡಿ ಪಡೆದುಕೊಳ್ಳಲಿದೆ.

ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಹೂಡಿಕೆ ಮಾಡಿದ ಅಥೆರ್

ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳ ಅವಧಿಗೆ ಅನ್ವಯಸುವಂತೆ ಫೇಮ್ 2 ಯೋಜನೆಯನ್ನು ಜಾರಿಗೊಳಿಸಿದ್ದು, ಇದಕ್ಕಾಗಿ ಬರೋಬ್ಬರಿ 10 ಸಾವಿರ ಕೋಟಿ ವ್ಯಯ ಮಾಡುತ್ತಿದೆ. ಇದರಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ನಿರ್ಮಾಣ ಮಾಡುವ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಅಷ್ಟೇ ಅಲ್ಲದೇ ಎಲೆಕ್ಟಿಕ್ ಕಾರು ಖರೀದಿಸುವ ಗ್ರಾಹಕರಿಗೂ ಕೂಡಾ ಸಬ್ಸಡಿ ದೊರೆಯಲಿದೆ.

MOST READ: ರಾಂಗ್ ಸೈಡ್‌ನಲ್ಲಿ ಬಂದ ಕಾರು ಚಾಲಕನಿಗೆ ಬೆವರಿಳಿಸಿದ ಬೈಕ್ ರೈಡರ್..!

ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಹೂಡಿಕೆ ಮಾಡಿದ ಅಥೆರ್

ಹೀಗಾಗಿ ಆಟೋ ಉದ್ಯಮದಲ್ಲಿ ಸದ್ಯ ಎಲೆಕ್ಟ್ರಿಕ್ ವಾಹನಗಳ ನಿರ್ಮಾಣದ ಮೇಲೆ ಸಾಕಷ್ಟು ಒತ್ತು ನೀಡುತ್ತಿರುವ ವಾಹನ ಉತ್ಪಾದಕರು ಮುಂದಿನ 2020 ರ ಆರಂಭದಲ್ಲಿ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದ್ದು, ಇದಕ್ಕೆ ಪೂರಕವಾಗಿ ನಗರಪ್ರದೇಶಗಳಲ್ಲಿ ಪ್ರತಿ 3 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಟೆಷನ್‌ಗಳನ್ನು ತೆರೆಯಲು ಕೇಂದ್ರ ಸರ್ಕಾರವು ಬೃಹತ್ ಯೋಜನೆ ರೂಪಿಸಿದೆ.

ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಹೂಡಿಕೆ ಮಾಡಿದ ಅಥೆರ್

ಇದಕ್ಕಾಗಿ ಸಬ್ಸಡಿಯನ್ನು ಘೋಷಣೆ ಮಾಡಲಾಗಿದ್ದು, ನಗರಪ್ರದೇಶಗಳಲ್ಲಿ ಪ್ರತಿ 3 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಟೆಷನ್ ತಲೆ ಎತ್ತಲಿದ್ದರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 25 ಕಿ.ಮಿಗೆ ಒಂದರಂತೆ ಚಾರ್ಜಿಂಗ್ ಸ್ಪೆಷನ್‌ಗಳು ಕಾರ್ಯನಿರ್ವಹಿಸಲಿವೆ.

MOST READ: ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಜೀಪ್ ರೆನೆಗೆಡ್ ಕಂಪ್ಯಾಕ್ಟ್ ಎಸ್‌ಯುವಿ

ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ರೂ.130 ಕೋಟಿ ಹೂಡಿಕೆ ಮಾಡಿದ ಅಥೆರ್

ಒಟ್ಟಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ಅವಲಂಬನೆ ತಗ್ಗಿಸುವುದರ ಜೊತೆಗೆ ಮಾಲಿನ್ಯವನ್ನು ತಗ್ಗಿಸುವ ನಿಟ್ಟಿನಲ್ಲಿ ಇದು ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯು ಮಹತ್ವದ ಬದಲಾವಣೆಗೆ ಕಾರಣವಾಗುತ್ತಿದ್ದು, ಹೊಸ ಯೋಜನೆಯನ್ನು ಸಮರ್ಥವಾಗಿ ಬಳಸಿಕೊಳ್ಳಲು ಮುಂದಾಗಿರುವ ಅಥೆರ್ ಸಂಸ್ಥೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸುವ ತವಕದಲ್ಲಿದೆ.

Source:Bikedekho

Most Read Articles

Kannada
English summary
Ather To Set Up 200 Charging Points By The End Of 2019. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X