2020ರ ಜನವರಿಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಪಕ್ಕಾ..!

ಬಜಾಜ್ ಆಟೋ ಸಂಸ್ಥೆಯ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಸದ್ಯ ಅನಾವರಣಗೊಂಡಿದ್ದು, 2020ರ ಆರಂಭದಲ್ಲಿ ಬಿಡುಗಡೆ ಮಾಡುವುದಾಗಿ ಹೇಳಲಾಗಿತ್ತು. ಇದೀಗ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯ ಕುರಿತು ಮಾಹಿತಿ ಹಂಚಿಕೊಂಡಿರುವ ಬಜಾಜ್ ಸಂಸ್ಥೆಯು ಜನವರಿ ತಿಂಗಳ ಕೊನೆಯಲ್ಲಿ ಹೊಸ ಸ್ಕೂಟರ್ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದೆ ಎಂದಿದೆ.

2020ರ ಜನವರಿಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಪಕ್ಕಾ..!

ಗ್ರಾಹಕರ ಬೇಡಿಕೆಯೆಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಅತ್ಯುತ್ತಮ ಬ್ಯಾಟರಿ ಸೌಲಭ್ಯ ಹೊಂದಲಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯು ಬಜಾಜ್ ಬೈಕ್ ಮಾರಾಟ ಮಳಿಗೆಗಳಲ್ಲಿ ಮಾತ್ರವಲ್ಲದೇ ತನ್ನ ಸಹಭಾಗಿತ್ವ ಸಂಸ್ಥೆಯಾದ ಕೆಟಿಎಂ ಬೈಕ್ ಮಾರಾಟ ಮಳಿಗೆಗಳಲ್ಲೂ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಅವಕಾಶ ನೀಡಲಿದೆ. ಇದರಿಂದ ಗ್ರಾಹಕರ ಸೇವೆಗಳಿಗೆ ಇದು ಮತ್ತಷ್ಟು ಸಹಕಾರಿಯಾಗಲಿದ್ದು, ಮಾರುಕಟ್ಟೆಯಲ್ಲಿ ಜನಪ್ರಿಯವಾಗುತ್ತಿರುವ ಅಥೆರ್ ಸ್ಕೂಟರ್ ಮಾರಾಟಕ್ಕೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

2020ರ ಜನವರಿಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಪಕ್ಕಾ..!

ಇನ್ನು ಅನಾವರಣಗೊಳಿಸಲಾಗಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗಳ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಕೆಲವು ಸುದ್ದಿ ಮೂಲಗಳ ಪ್ರಕಾರ ಹೊಸ ಸ್ಕೂಟರ್ ಬೆಲೆಯು ಆನ್‌ರೋಡ್ ಪ್ರಕಾರ ರೂ.1.05 ಲಕ್ಷದಿಂದ ರೂ.1.15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ತುಸು ದುಬಾರಿಯಾಗಿರಲಿದೆ ಎನ್ನಲಾಗಿದೆ.

2020ರ ಜನವರಿಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಪಕ್ಕಾ..!

ಹೊಸ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡುವುದಕ್ಕೂ ಮುನ್ನ ಮಾರುಕಟ್ಟೆ ಅಧ್ಯಯನ ನಡೆಲಿಸಲಿರುವ ಬಜಾಜ್ ಸಂಸ್ಥೆಯು ಬೆಂಗಳೂರಿನ ಪ್ರೊ ಬೈಕಿಂಗ್ ನೆಟ್‌ವರ್ಕ್ ಮೂಲಕ ಗ್ರಾಹಕರ ಸಲಹೆಗಳನ್ನು ತಿಳಿದುಕೊಂಡು ಬಿಡುಗಡೆ ವೇಳೆಗೆ ಮತ್ತಷ್ಟು ಬದಲಾವಣೆ ಮಾಡುವ ಸುಳಿವು ನೀಡಿದ್ದು, ಇದರಿಂದಾಗಿ ಅನಾವರಣಗೊಳಿಸಲಾದ ಸ್ಕೂಟರ್ ವೈಶಿಷ್ಟ್ಯತೆಗಳಲ್ಲಿ ಬಿಡುಗಡೆ ವೇಳೆಗೆ ಕೆಲವು ಬದಲಾವಣೆಗಳಾಗುವ ಸಾಧ್ಯತೆಗಳಿವೆ.

2020ರ ಜನವರಿಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಪಕ್ಕಾ..!

ಅನಾವರಣಗೊಳಿಸಲಾಗಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಯಮಹಾ ಫ್ಯಾಸಿನೊ ಸ್ಟೈಲ್ ಹೊಂದಿದ್ದರು ಫ್ಯಾಸಿನೊಗಿಂತಲೂ ವಿಭಿನ್ನ ತಾಂತ್ರಿಕ ಅಂಶಗಳನ್ನು ಪಡೆದಿರುವ ಹೊಸ ಸ್ಕೂಟರ್ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿದೆ.

ಹೊಸ ಸ್ಕೂಟರ್‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ಮೆಟಲ್ ಬಾಡಿ ಪ್ಯಾನೆಲ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಕೀ ಲೆಸ್ ಸ್ಟಾರ್ಟ್, ಪ್ರೀಮಿಯಂ ಟಿಪಿಎಫ್ ಯುನಿಟ್‌ನಂತಹ ಹಲವು ಸುಧಾರಿತ ಸೌಲಭ್ಯಗಳನ್ನು ನೀಡಿದ್ದು, ಹೊಸ ಸ್ಕೂಟರ್‌ನಲ್ಲಿರುವ ಬ್ಯಾಟರಿ ಸೌಲಭ್ಯ ಕೂಡಾ ಗಮನಸೆಳೆಯಲಿದೆ.

2020ರ ಜನವರಿಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಪಕ್ಕಾ..!

ಬ್ಯಾಟರಿ ಸಾಮರ್ಥ್ಯ ಮತ್ತು ಮೈಲೇಜ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಜಾಜ್ ಸಂಸ್ಥೆಯು 4kW ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ ಐಪಿ67 ಪ್ರೇರಣೆಯ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಬಳಕೆ ಮಾಡಿದ್ದು, ಪೂರ್ಣ ಪ್ರಮಾಣದ ಚಾರ್ಜಿಂಗ್ ಮಾಡಲು ಕನಿಷ್ಠ 5 ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳಲಿದೆ.

2020ರ ಜನವರಿಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಪಕ್ಕಾ..!

ಹಾಗೆಯೇ ಹೊಸ ಸ್ಕೂಟರ್‌ನಲ್ಲಿ ಗ್ರಾಹಕರ ಬೇಡಿಕೆಯೆಂತೆ ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ನೀಡಿರುವ ಬಜಾಜ್, ಇಕೋ‌ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಗರಿಷ್ಠ ಮೈಲೇಜ್ ಒದಗಿಸಿದೆ.

2020ರ ಜನವರಿಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಪಕ್ಕಾ..!

ಆದರೆ ಹೊಸ ಸ್ಕೂಟರ್‌ನಲ್ಲಿ ಸದ್ಯಕ್ಕೆ ಇನ್ ಬಿಲ್ಟ್ ಚಾರ್ಜರ್ ಸೌಲಭ್ಯವನ್ನು ಮಾತ್ರವೇ ನೀಡುತ್ತಿರುವ ಬಜಾಜ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸಿಸ್ಟಂ ನೀಡುವ ಸುಳಿವು ನೀಡಿದೆ.

2020ರ ಜನವರಿಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಪಕ್ಕಾ..!

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮತ್ತೊಂದು ವಿಶೇಷ ಅಂದ್ರೆ, ಹೊಸ ಸ್ಕೂಟರ್‌ನಲ್ಲಿ ಕೀ ಲೆಸ್ ಸ್ಟಾರ್ಟ್ ಸೌಲಭ್ಯ ನೀಡಿರುವ ಬಜಾಜ್ ಸಂಸ್ಥೆಯು ಸ್ಕೂಟರ್ ನಿರ್ವಹಣೆಗಾಗಿ ಪ್ರತ್ಯೇತ ಆ್ಯಪ್ ನೀಡಲಿದ್ದು, ಆ್ಯಪ್ ಮೂಲಕ ಹೊಸ ಸ್ಕೂಟರ್‌ನ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ನಿರ್ವಹಣೆ ಮಾಡಬಹುದಾಗಿದೆ. ಜೊತೆಗೆ ಹೊಸ ಸ್ಕೂಟರ್‌ನಲ್ಲಿ ಗರಿಷ್ಠ ಸುರಕ್ಷಾ ಭದ್ರತೆಗಳು ಕೂಡಾ ಇರಲಿದ್ದು, ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳಿರಲಿವೆ.

Most Read Articles

Kannada
English summary
Bajaj will officially start the sale of their new Chetak electric scooter from January 2020. Read in Kannada.
Story first published: Monday, October 28, 2019, 18:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X