ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

ಬಜಾಜ್ ಆಟೋ ಸಂಸ್ಥೆಯು ತನ್ನ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು 2020ರ ಆರಂಭದಲ್ಲಿ ಬಿಡುಗಡೆಗೊಳಿಸಲಿದೆ. ಚೇತಕ್ ಸ್ಕೂಟರ್ ಬಿಡುಗಡೆಗೊಳಿಸುವ ಮೊದಲು ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

ಭಾರತದಲ್ಲಿ ಚೇತಕ್ ಸ್ಕೂಟರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್‍‍ಲೇನ್ ಬಹಿರಂಗಪಡಿಸಿದೆ. ಬಜಾಜ್ ಕಂಪನಿಯು ಇತ್ತೀಚೆಗೆ ತನ್ನ ಚೇತಕ್ ಎಲೆಕ್ಟ್ರಿಕ್ ಯಾತ್ರಾ ಅಭಿಯಾನವನ್ನು ನಡೆಸಿತ್ತು. ಭಾರತದ ಸಾಮನ್ಯ ರಸ್ತೆಗಳಲ್ಲಿ ಸ್ಕೂಟರ್‍‍ನ ಸಾಮರ್ಥ್ಯ ಮತ್ತು ವಿಶ್ಬಾಸಾರ್ಹತೆಯನ್ನು ಸಾಬೀತುಪಡಿಸುವ ಸಲುವಾಗಿ 10 ನಗರಗಳಲ್ಲಿ 3,500 ಕಿ.ಮೀ ಸವಾರಿ ಮಾಡಿದ್ದರು.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಹೊಂದಿದೆ. ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 85ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 95 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಹೊಂದಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

ಸ್ಕೂಟರ್‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಹಾರ್ನ್ ಮತ್ತು ಇಂಡಿಕೇಟರ್ ಸ್ವಿಚ್‍, ಎಲ್ಇಡಿ ಇಂಡಿಕೇಟರ್, ದೊಡ್ಡದಾದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಇದರೊಂದಿಗೆ ಮೊಬಿಲಿಟಿ ಸಾಫ್ಟ್ ವೇರ್, ಸೆಕ್ಯುರಿಟಿ ವೈಶಿಷ್ಟ್ಯಗಳನ್ನು ಹೊಂದಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

ರಾಜಸ್ಥಾನದ ಮೇವಾರದ 13ನೇ ರಾಜ ಮಹಾರಾಣಾ ಪ್ರತಾಪ್ ಹಲ್ದಿಘಾಟ್ ಯುದ್ದದಲ್ಲಿ ಚೇತಕ್ ಅನ್ನೋ ಹೆಸರಿನ ಕುದುರೆಯನ್ನು ಬಳಸಿದ್ದರು. ಈ ಯುದ್ದದಲ್ಲಿ ಮಹಾರಾಣಾ ನೆಚ್ಚಿನ ಕುದುರೆ ಚೇತಕ್ ಸಾವನ್ನಪ್ಪಿತ್ತು. ರಾಜಸ್ಥಾನ ಬಲಿಚಾ ಗ್ರಾಮದಲ್ಲಿ ಈ ಕುದುರೆಯ ಸ್ಮಾರಕವನ್ನು ನಿರ್ಮಿಸಿದ್ದಾರೆ. ಇದೇ ಐತಿಹಾಸಿಕ ಕುದುರೆಯ ಹೆಸರನ್ನು ಬಜಾಜ್‍ನ ಸ್ಕೂಟರ್‍‍ಗೆ ಇಡಲಾಗಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

ಬಜಾಜ್ ಆಟೋ ಕಂಪನಿಯು 1972 ರಲ್ಲಿ ಚೇತಕ್ ಸ್ಕೂಟರ್‍ ಅನ್ನು ಮೊದಲ ಬಾರಿಗೆ ಬಿಡುಗಡೆಗೊಳಿಸಿತ್ತು ಮತ್ತು ಇದು ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿತು. ಇದರ ಮೂಲ ವಿನ್ಯಾಸವು ವೆಸ್ಪಾ ಸ್ಟ್ರೀಂಟ್ ಸ್ಕೂಟರ್ ಮಾದರಿಯಲ್ಲಿದೆ. ಒಳಾಂಗಣ(ಇಂಟಿರಿಯರ್) ವಿನ್ಯಾಸದಲ್ಲಿ ಬದಲಾವಣೆ ಮಾಡಲಾಗಿದೆ. ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ ಲುಕ್ ಅನ್ನು ಹೊಂದಿದೆ.

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

ಹೊಸ ಇ-ಚೇತಕ್ ಬಿಡುಗಡೆಯಾದ ನಂತರವೂ ಬಜಾಜ್ ಆಟೋ ತನ್ನ ಬೈಕ್‍‍ಗಳತ್ತ ಗಮನ ಹರಿಸುವ ನಿರೀಕ್ಷಿಯಿದೆ. ಕಂಪನಿಯ ಸರಣಿಯಲ್ಲಿರುವ ಬೈಕುಗಳು ಹೆಚ್ಚು ಮಾರಾಟವಾಗುತ್ತಿವೆ.

MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

2000ದ ಆರಂಭದಲ್ಲಿ ಬಜಾಜ್ ಚೇತಕ್ ತನ್ನ ಮಾರುಕಟ್ಟೆ ಪಾಲನ್ನು ಕಳೆದುಕೊಳ್ಳಲು ಆರಂಭಿಸಿತು. 2005ರಲ್ಲಿ ಬಜಾಜ್ ಚೇತಕ್ ಉತ್ಪಾದನೆಯು ಸಂಪೂರ್ಣವಾಗಿ ಸ್ಥಗಿತವಾಯ್ತು. 2006ರಲ್ಲಿ ತಮ್ಮ ಬಳಿಯಿದ್ದ ಕೊನೆಯ ಸ್ಕೂಟರ್‍‍ಗಳನ್ನು ಮಾರಾಟ ಮಾಡಿದರು.

MOST READ: ಕಾರು ಖರೀದಿದಾರರ ನೆಚ್ಚಿನ ಬಣ್ಣ ಯಾವುದು ಗೊತ್ತಾ?

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದ್ದು, ಬಜಾಜ್ ಸಂಸ್ಥೆಯು 50 ಸಾವಿರ ಕಿ.ಮೀ ಅಥವಾ 3 ವರ್ಷಗಳ ವಾರಂಟಿ ನೀಡಲಿದೆ. ಜೊತೆಗೆ ಪ್ರತಿ 15 ಸಾವಿರ ಕಿ.ಮೀ ಗೆ ಕಡ್ಡಾಯವಾಗಿ ಸರ್ವೀಸ್ ಒದಗಿಸಲಿದ್ದು, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನ ಸೌಲಭ್ಯಗಳನ್ನು ಅಪ್‌ಡೇಟ್ ಮಾಡಲಿದೆ.

MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಬಿಡುಗಡೆಗೆ ಮುನ್ನ ಸ್ಪಾಟ್ ಟೆಸ್ಟ್‌ನಲ್ಲಿ ಕಂಡುಬಂದ ಬಜಾಜ್ ಚೇತಕ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳನ್ನು ಹೊಂದಿದೆ. ಬಜಾಜ್ ಚೇತಕ್ ಭಾರತೀಯರ ಮೆಚ್ಚಿನ ಸಾರಥಿಯಾಗಿತ್ತು. 80ರ ದಶಕದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನು ಮೂಡಿಸಿದ ಸ್ಕೂಟರ್ ಆಗಿದೆ. ಇದೀಗ ದೇಶಿಯ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸಂಚಲನವನ್ನು ಮೂಡಿಸಲು ಚೇತಕ್ ಮುಂದಿನ ವರ್ಷ ಬಿಡುಗಡೆಯಾಗಲಿದೆ.

Article Published On: Friday, December 20, 2019, 11:42 [IST]
English summary
Spy Pics: Bajaj Chetak Electric Scooter Spotted Testing Ahead Of January Launch - Read in Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+