ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಕಳೆದ ತಿಂಗಳು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಹಿರಂಗಪಡಿಸಿದ್ದ ಬಜಾಜ್ ಸಂಸ್ಥೆಯು ಇದೀಗ ಮತ್ತೊಂದು ಸುತ್ತಿನ ಉತ್ಪಾದನಾ ಆವೃತ್ತಿಯ ಅನಾವರಣಕ್ಕೆ ಸಜ್ಜಾಗುತ್ತಿದ್ದು, ಇದೇ ತಿಂಗಳು 14ಕ್ಕೆ ಹೊಸ ಸ್ಕೂಟರ್ ಕುರಿತಾದ ಮತ್ತಷ್ಟು ತಾಂತ್ರಿಕ ಸೌಲಭ್ಯಗಳ ಮಾಹಿತಿ ಲಭ್ಯವಾಗಲಿದೆ.

ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬಜಾಜ್ ಆಟೋ ಸಂಸ್ಥೆಯು 2020ರ ಜನವರಿ ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಯೋಜನೆ ರೂಪಿಸಿದ್ದು, 14ಕ್ಕೆ ಆಯೋಜನೆ ಮಾಡಲಾಗಿರುವ ಅನಾವರಣ ಕಾರ್ಯಕ್ರಮದಲ್ಲಿಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಅಧಿಕೃತವಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸುವ ಸಾಧ್ಯತೆಗಳಿವೆ. ಗ್ರಾಹಕರ ಬೇಡಿಕೆಯೆಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದ್ದು, ಪ್ರೀಮಿಯಂ ಫೀಚರ್ಸ್ ಮತ್ತು ಉತ್ತಮ ಮೈಲೇಜ್‌ನಿಂದಾಗಿ ತುಸು ದುಬಾರಿಯಾಗಿರಲಿದೆ ಎನ್ನಲಾಗಿದೆ.

ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಸದ್ಯಕ್ಕೆ ಬಹಿರಂಗಗೊಳಿಸಲಾಗಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗಳ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಕೆಲವು ಸುದ್ದಿ ಮೂಲಗಳ ಪ್ರಕಾರ ರೂ.1.05 ಲಕ್ಷದಿಂದ ರೂ.1.15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೂ ಮುನ್ನ ಬೆಂಗಳೂರಿನ ಪ್ರೊ ಬೈಕಿಂಗ್ ನೆಟ್‌ವರ್ಕ್ ಮೂಲಕ ಗ್ರಾಹಕರ ಸಲಹೆಗಳನ್ನು ತಿಳಿದುಕೊಳ್ಳಲು ಮುಂದಾಗಿರುವ ಬಜಾಜ್ ಸಂಸ್ಥೆಯು ಬಿಡುಗಡೆ ವೇಳೆಗೆ ಕೆಲವು ಫೀಚರ್ಸ್‌ಗಳನ್ನು ಬದಲಾವಣೆ ಮಾಡುವ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸ್ಕೂಟರ್ ಫೀಚರ್ಸ್‌ಗಳನ್ನು ಜೋಡಣೆ ಮಾಡಲಿದೆ.

ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಅನಾವರಣಗೊಳಿಸಲಾಗಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಯಮಹಾ ಫ್ಯಾಸಿನೊ ಸ್ಟೈಲ್ ಹೊಂದಿದ್ದರು ಫ್ಯಾಸಿನೊಗಿಂತಲೂ ವಿಭಿನ್ನ ತಾಂತ್ರಿಕ ಅಂಶಗಳನ್ನು ಪಡೆದಿರುವ ಹೊಸ ಸ್ಕೂಟರ್ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿದೆ.

ಹೊಸ ಸ್ಕೂಟರ್‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ಮೆಟಲ್ ಬಾಡಿ ಪ್ಯಾನೆಲ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಕೀ ಲೆಸ್ ಸ್ಟಾರ್ಟ್, ಪ್ರೀಮಿಯಂ ಟಿಪಿಎಫ್ ಯುನಿಟ್‌ನಂತಹ ಹಲವು ಸುಧಾರಿತ ಸೌಲಭ್ಯಗಳನ್ನು ನೀಡಿದ್ದು, ಹೊಸ ಸ್ಕೂಟರ್‌ನಲ್ಲಿರುವ ಬ್ಯಾಟರಿ ಸೌಲಭ್ಯ ಕೂಡಾ ಗಮನಸೆಳೆಯಲಿದೆ.

ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಬ್ಯಾಟರಿ ಸಾಮರ್ಥ್ಯ ಮತ್ತು ಮೈಲೇಜ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಜಾಜ್ ಸಂಸ್ಥೆಯು 4kW ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ ಐಪಿ67 ಪ್ರೇರಣೆಯ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಬಳಕೆ ಮಾಡಿದ್ದು, ಪೂರ್ಣ ಪ್ರಮಾಣದ ಚಾರ್ಜಿಂಗ್ ಮಾಡಲು ಕನಿಷ್ಠ 5 ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳಲಿದೆ.

ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಹಾಗೆಯೇ ಹೊಸ ಸ್ಕೂಟರ್‌ನಲ್ಲಿ ಗ್ರಾಹಕರ ಬೇಡಿಕೆಯೆಂತೆ ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ನೀಡಿರುವ ಬಜಾಜ್, ಇಕೋ‌ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಗರಿಷ್ಠ ಮೈಲೇಜ್ ಒದಗಿಸಿದೆ.

ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಆದರೆ ಹೊಸ ಸ್ಕೂಟರ್‌ನಲ್ಲಿ ಸದ್ಯಕ್ಕೆ ಇನ್ ಬಿಲ್ಟ್ ಚಾರ್ಜರ್ ಸೌಲಭ್ಯವನ್ನು ಮಾತ್ರವೇ ನೀಡುತ್ತಿರುವ ಬಜಾಜ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸಿಸ್ಟಂ ನೀಡುವ ಸುಳಿವು ನೀಡಿದೆ.

ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮತ್ತೊಂದು ವಿಶೇಷ ಅಂದ್ರೆ, ಹೊಸ ಸ್ಕೂಟರ್‌ನಲ್ಲಿ ಕೀ ಲೆಸ್ ಸ್ಟಾರ್ಟ್ ಸೌಲಭ್ಯ ನೀಡಿರುವ ಬಜಾಜ್ ಸಂಸ್ಥೆಯು ಸ್ಕೂಟರ್ ನಿರ್ವಹಣೆಗಾಗಿ ಪ್ರತ್ಯೇತ ಆ್ಯಪ್ ನೀಡಲಿದ್ದು, ಆ್ಯಪ್ ಮೂಲಕ ಹೊಸ ಸ್ಕೂಟರ್‌ನ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ನಿರ್ವಹಣೆ ಮಾಡಬಹುದಾಗಿದೆ. ಜೊತೆಗೆ ಹೊಸ ಸ್ಕೂಟರ್‌ನಲ್ಲಿ ಗರಿಷ್ಠ ಸುರಕ್ಷಾ ಭದ್ರತೆಗಳು ಕೂಡಾ ಇರಲಿದ್ದು, ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳಿರಲಿವೆ.

More from DriveSpark

Article Published On: Tuesday, November 12, 2019, 11:04 [IST]
English summary
Bajaj Chetak Electric Scooter to be showcased in Pune on November 14. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+