Just In
Don't Miss!
- News
ನ್ಯೂಜರ್ಸಿಯಲ್ಲಿ ಮತ್ತೆ ಗುಂಡಿನ ಸದ್ದು: 6 ಮಂದಿ ಸಾವು
- Technology
ಮುಂದಿನ ಐಫೋನ್ಗಳಲ್ಲಿ ಚಾರ್ಜಿಂಗ್ ಪೋರ್ಟ್ ಇರೋದೆ ಇಲ್ಲ..!
- Lifestyle
ಬುಧವಾರದ ದಿನ ಭವಿಷ್ಯ 11-12-2019
- Sports
ಆಟದ ಮಧ್ಯೆ ಮಗುವಿಗೆ ಹಾಲುಣಿಸಿದ ಆಟಗಾರ್ತಿ; ಹೃದಯಗೆದ್ದ ಫೋಟೋ ವೈರಲ್
- Movies
ಡಿಸೆಂಬರ್ 18ಕ್ಕೆ ದುನಿಯಾ ವಿಜಯ್ ತಂಡದಿಂದ ಸರ್ಪ್ರೈಸ್
- Finance
ಶೈಕ್ಷಣಿಕ ಸಾಲ ಮನ್ನಾ ಆಗುತ್ತಾ? ಏನಂತಾರೆ FM ನಿರ್ಮಲಾ ಸೀತಾರಾಮನ್
- Education
ಎಸ್ಎಸ್ಎಲ್ಸಿ ಪಾಸ್...ಚಾಲಕ ವೃತ್ತಿ ಅಂದ್ರೆ ನಂಗಿಷ್ಟ… ಹಾಗಿದ್ರೆ ಈ ಸಾರಿಗೆ ಸಂಸ್ಥೆ ನೇಮಕಾತಿಗೆ ಅರ್ಜಿ ಹಾಕ
- Travel
ಬೀಚ್ಗೆ ಹೋಗುವ ಮುನ್ನ ಈ ಸಂಗತಿಗಳು ನೆನಪಿನಲ್ಲಿರಲಿ
ನ.14ಕ್ಕೆ ಅನಾವರಣಗೊಳ್ಳಲಿದೆ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್
ಕಳೆದ ತಿಂಗಳು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಹಿರಂಗಪಡಿಸಿದ್ದ ಬಜಾಜ್ ಸಂಸ್ಥೆಯು ಇದೀಗ ಮತ್ತೊಂದು ಸುತ್ತಿನ ಉತ್ಪಾದನಾ ಆವೃತ್ತಿಯ ಅನಾವರಣಕ್ಕೆ ಸಜ್ಜಾಗುತ್ತಿದ್ದು, ಇದೇ ತಿಂಗಳು 14ಕ್ಕೆ ಹೊಸ ಸ್ಕೂಟರ್ ಕುರಿತಾದ ಮತ್ತಷ್ಟು ತಾಂತ್ರಿಕ ಸೌಲಭ್ಯಗಳ ಮಾಹಿತಿ ಲಭ್ಯವಾಗಲಿದೆ.

ಬಜಾಜ್ ಆಟೋ ಸಂಸ್ಥೆಯು 2020ರ ಜನವರಿ ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಯೋಜನೆ ರೂಪಿಸಿದ್ದು, 14ಕ್ಕೆ ಆಯೋಜನೆ ಮಾಡಲಾಗಿರುವ ಅನಾವರಣ ಕಾರ್ಯಕ್ರಮದಲ್ಲಿಯೇ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಅಧಿಕೃತವಾಗಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸುವ ಸಾಧ್ಯತೆಗಳಿವೆ. ಗ್ರಾಹಕರ ಬೇಡಿಕೆಯೆಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದ್ದು, ಪ್ರೀಮಿಯಂ ಫೀಚರ್ಸ್ ಮತ್ತು ಉತ್ತಮ ಮೈಲೇಜ್ನಿಂದಾಗಿ ತುಸು ದುಬಾರಿಯಾಗಿರಲಿದೆ ಎನ್ನಲಾಗಿದೆ.

ಸದ್ಯಕ್ಕೆ ಬಹಿರಂಗಗೊಳಿಸಲಾಗಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗಳ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಕೆಲವು ಸುದ್ದಿ ಮೂಲಗಳ ಪ್ರಕಾರ ರೂ.1.05 ಲಕ್ಷದಿಂದ ರೂ.1.15 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೂ ಮುನ್ನ ಬೆಂಗಳೂರಿನ ಪ್ರೊ ಬೈಕಿಂಗ್ ನೆಟ್ವರ್ಕ್ ಮೂಲಕ ಗ್ರಾಹಕರ ಸಲಹೆಗಳನ್ನು ತಿಳಿದುಕೊಳ್ಳಲು ಮುಂದಾಗಿರುವ ಬಜಾಜ್ ಸಂಸ್ಥೆಯು ಬಿಡುಗಡೆ ವೇಳೆಗೆ ಕೆಲವು ಫೀಚರ್ಸ್ಗಳನ್ನು ಬದಲಾವಣೆ ಮಾಡುವ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸ್ಕೂಟರ್ ಫೀಚರ್ಸ್ಗಳನ್ನು ಜೋಡಣೆ ಮಾಡಲಿದೆ.

ಅನಾವರಣಗೊಳಿಸಲಾಗಿರುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಯಮಹಾ ಫ್ಯಾಸಿನೊ ಸ್ಟೈಲ್ ಹೊಂದಿದ್ದರು ಫ್ಯಾಸಿನೊಗಿಂತಲೂ ವಿಭಿನ್ನ ತಾಂತ್ರಿಕ ಅಂಶಗಳನ್ನು ಪಡೆದಿರುವ ಹೊಸ ಸ್ಕೂಟರ್ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿದೆ.
ಹೊಸ ಸ್ಕೂಟರ್ನಲ್ಲಿ ರೌಂಡ್ ಹೆಡ್ಲ್ಯಾಂಪ್, ಎಲ್ಇಡಿ ಡಿಆರ್ಎಲ್, ಶಾರ್ಪ್ ಡಿಸೈನ್, ಮೆಟಲ್ ಬಾಡಿ ಪ್ಯಾನೆಲ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಕೀ ಲೆಸ್ ಸ್ಟಾರ್ಟ್, ಪ್ರೀಮಿಯಂ ಟಿಪಿಎಫ್ ಯುನಿಟ್ನಂತಹ ಹಲವು ಸುಧಾರಿತ ಸೌಲಭ್ಯಗಳನ್ನು ನೀಡಿದ್ದು, ಹೊಸ ಸ್ಕೂಟರ್ನಲ್ಲಿರುವ ಬ್ಯಾಟರಿ ಸೌಲಭ್ಯ ಕೂಡಾ ಗಮನಸೆಳೆಯಲಿದೆ.

ಬ್ಯಾಟರಿ ಸಾಮರ್ಥ್ಯ ಮತ್ತು ಮೈಲೇಜ್
ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಬಜಾಜ್ ಸಂಸ್ಥೆಯು 4kW ಎಲೆಕ್ಟ್ರಿಕ್ ಮೋಟಾರ್ನೊಂದಿಗೆ ಐಪಿ67 ಪ್ರೇರಣೆಯ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಬಳಕೆ ಮಾಡಿದ್ದು, ಪೂರ್ಣ ಪ್ರಮಾಣದ ಚಾರ್ಜಿಂಗ್ ಮಾಡಲು ಕನಿಷ್ಠ 5 ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳಲಿದೆ.

ಹಾಗೆಯೇ ಹೊಸ ಸ್ಕೂಟರ್ನಲ್ಲಿ ಗ್ರಾಹಕರ ಬೇಡಿಕೆಯೆಂತೆ ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್ಗಳನ್ನು ನೀಡಿರುವ ಬಜಾಜ್, ಇಕೋನಲ್ಲಿ ಪ್ರತಿ ಚಾರ್ಜ್ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್ನಲ್ಲಿ ಪ್ರತಿ ಚಾರ್ಜ್ಗೆ 85 ಕಿ.ಮೀ ಗರಿಷ್ಠ ಮೈಲೇಜ್ ಒದಗಿಸಿದೆ.

ಆದರೆ ಹೊಸ ಸ್ಕೂಟರ್ನಲ್ಲಿ ಸದ್ಯಕ್ಕೆ ಇನ್ ಬಿಲ್ಟ್ ಚಾರ್ಜರ್ ಸೌಲಭ್ಯವನ್ನು ಮಾತ್ರವೇ ನೀಡುತ್ತಿರುವ ಬಜಾಜ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸಿಸ್ಟಂ ನೀಡುವ ಸುಳಿವು ನೀಡಿದೆ.

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮತ್ತೊಂದು ವಿಶೇಷ ಅಂದ್ರೆ, ಹೊಸ ಸ್ಕೂಟರ್ನಲ್ಲಿ ಕೀ ಲೆಸ್ ಸ್ಟಾರ್ಟ್ ಸೌಲಭ್ಯ ನೀಡಿರುವ ಬಜಾಜ್ ಸಂಸ್ಥೆಯು ಸ್ಕೂಟರ್ ನಿರ್ವಹಣೆಗಾಗಿ ಪ್ರತ್ಯೇತ ಆ್ಯಪ್ ನೀಡಲಿದ್ದು, ಆ್ಯಪ್ ಮೂಲಕ ಹೊಸ ಸ್ಕೂಟರ್ನ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ನಿರ್ವಹಣೆ ಮಾಡಬಹುದಾಗಿದೆ. ಜೊತೆಗೆ ಹೊಸ ಸ್ಕೂಟರ್ನಲ್ಲಿ ಗರಿಷ್ಠ ಸುರಕ್ಷಾ ಭದ್ರತೆಗಳು ಕೂಡಾ ಇರಲಿದ್ದು, ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳಿರಲಿವೆ.