ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಬಜಾಜ್ ಸಂಸ್ಥೆಯು ತನ್ನ ಜನಪ್ರಿಯ ಚೇತಕ್ ಬ್ರಾಂಡ್‌ ಹೆಸರನ್ನು ಅನ್ನು ಬರೋಬ್ಬರಿ 14 ವರ್ಷಗಳ ಬಳಿಕ ಮತ್ತೆ ಬಳಕೆ ಮಾಡಲು ಮುಂದಾಗಿದ್ದು, ಈ ಬಾರಿ ವಿನೂತನ ತಂತ್ರಜ್ಞಾನದೊಂದಿಗೆ ಭವಿಷ್ಯದ ವಾಹನ ಮಾದರಿಯಾದ ಎಲೆಕ್ಟ್ರಿಕ್ ಸ್ಕೂಟರ್‌ನತ್ತ ಮಹತ್ವದ ಹೆಜ್ಜೆಯಿರಿಸಿದೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

2020ರ ವೇಳೆಗೆ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ತಮ್ಮ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳನ್ನು ಮಾರಾಟ ಮಾಡಲು ಸಿದ್ದತೆ ನಡೆಸುತ್ತಿದ್ದು, ಬಜಾಜ್ ಕೂಡಾ ಮಾರುಕಟ್ಟೆಯಲ್ಲಿನ ಬದಲಾವಣೆಗೆ ಅನುಗುಣವಾಗಿ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾದರಿಯನ್ನು ಬಿಡುಗಡೆಯಾಗಿ ಸಿದ್ದಗೊಳಿಸಿದೆ. ಸದ್ಯ ಬಜಾಜ್ ಸಂಸ್ಥೆಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕೇವಲ ಅನಾವರಣಗೊಳಿಸಿದ್ದು, 2020ರ ಜನವರಿಯಿಂದ ಮಾರಾಟಕ್ಕೆ ಲಭ್ಯವಿರಲಿದೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

80ರ ದಶಕದಲ್ಲಿ ಭಾರೀ ಜನಪ್ರಿಯತೆಯೊಂದಿಗೆ ಸ್ಕೂಟರ್ ಪ್ರಿಯರ ನೆಚ್ಚಿನ ಮಾದರಿಯಾಗಿ ಹೊರಹೊಮ್ಮಿದ್ದ ಚೇತಕ್ ಸ್ಕೂಟರ್ ವಿನ್ಯಾಸವನ್ನೇ ಹೋಲುವ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಮೊತ್ತೆಮ್ಮೆ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಚೇತಕ್ ಇ-ಸ್ಕೂಟರ್ ಮಾದರಿಯು ಕಳೆದು ತಿಂಗಳು 25ರಿಂದಲೇ ಪುಣೆ ಬಳಿಯಿರುವ ಚಾಕನ್ ಬೈಕ್ ಉತ್ಪಾದನಾ ಘಟಕದಲ್ಲಿ ಅಧಿಕೃತವಾಗಿ ಉತ್ಪಾದನೆಯಾಗುತ್ತಿದ್ದು, ಸದ್ಯದಲ್ಲೇ ಹೊಸ ಸ್ಕೂಟರ್‌ಗಳು ನಮ್ಮ ಬೆಂಗಳೂರಿನಲ್ಲೂ ಸಂಚರಿಸಲಿವೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಹೊಸ ಸ್ಕೂಟರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡುವುದಕ್ಕೂ ಮುನ್ನ ಮಾರುಕಟ್ಟೆ ಅಧ್ಯಯನ ನಡೆಲಿಸಲಿರುವ ಬಜಾಜ್ ಸಂಸ್ಥೆಯು ಬೆಂಗಳೂರಿನ ಪ್ರೊ ಬೈಕಿಂಗ್ ನೆಟ್‌ವರ್ಕ್ ಮೂಲಕ ಗ್ರಾಹಕರ ಸಲಹೆಗಳನ್ನು ತಿಳಿದುಕೊಂಡು ಬಿಡುಗಡೆಗೆ ವೇಳೆಗೆ ಮತ್ತಷ್ಟು ಬದಲಾವಣೆ ಮಾಡುವ ಸುಳಿವು ನೀಡಿದೆ. ಹೀಗಾಗಿ ಇದೀಗ ಅನಾವರಣಗೊಳಿಸಲಾದ ಸ್ಕೂಟರ್ ವೈಶಿಷ್ಟ್ಯತೆಗಳು ಬಿಡುಗಡೆ ವೇಳೆಗೆ ಕೆಲವು ಬದಲಾವಣೆಗಳಾಗುವ ಸಾಧ್ಯತೆಗಳಿವೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಇನ್ನು ಅನಾವರಣಗೊಳಿಸಲಾದ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸವು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಯಮಹಾ ಫ್ಯಾಸಿನೊ ಸ್ಟೈಲ್ ಹೊಂದಿದ್ದರು ಫ್ಯಾಸಿನೊಗಿಂತಲೂ ವಿಭಿನ್ನ ತಾಂತ್ರಿಕ ಅಂಶಗಳನ್ನು ಪಡೆದಿರುವ ಹೊಸ ಸ್ಕೂಟರ್ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಹೊಂದಿದೆ. ಹೊಸ ಸ್ಕೂಟರ್‌ನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್, ಶಾರ್ಪ್ ಡಿಸೈನ್, ಮೆಟಲ್ ಬಾಡಿ ಪ್ಯಾನೆಲ್, ರೆಟ್ರೋ ಸ್ಟೈಲ್ ಬಾಡಿ ಡಿಸೈನ್, ಕೀ ಲೆಸ್ ಸ್ಟಾರ್ಟ್, ಪ್ರೀಮಿಯಂ ಟಿಪಿಎಫ್ ಯುನಿಟ್‌ನಂತಹ ಹಲವು ಸುಧಾರಿತ ಸೌಲಭ್ಯಗಳನ್ನು ನೀಡಿದ್ದು, ಹೊಸ ಸ್ಕೂಟರ್‌ನಲ್ಲಿರುವ ಬ್ಯಾಟರಿ ಸೌಲಭ್ಯ ಕೂಡಾ ಗಮನಸೆಳೆಯಲಿದೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಬ್ಯಾಟರಿ ಸಾಮರ್ಥ್ಯ ಮತ್ತು ಮೈಲೇಜ್

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಜಾಜ್ ಸಂಸ್ಥೆಯು 4kW ಎಲೆಕ್ಟ್ರಿಕ್ ಮೋಟಾರ್‌ನೊಂದಿಗೆ ಐಪಿ67 ಪ್ರೇರಣೆಯ ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಬಳಕೆ ಮಾಡಿದ್ದು, ಪೂರ್ಣ ಪ್ರಮಾಣದ ಚಾರ್ಜಿಂಗ್ ಮಾಡಲು ಕನಿಷ್ಠ 5 ಗಂಟೆಗಳ ಕಾಲಾವಕಾಶ ತೆಗೆದುಕೊಳ್ಳಲಿದೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಹಾಗೆಯೇ ಹೊಸ ಸ್ಕೂಟರ್‌ನಲ್ಲಿ ಗ್ರಾಹಕರ ಬೇಡಿಕೆಯೆಂತೆ ಇಕೋ ಮತ್ತು ಸ್ಪೋರ್ಟ್ ರೈಡಿಂಗ್ ಮೋಡ್‌ಗಳನ್ನು ನೀಡಿರುವ ಬಜಾಜ್, ಇಕೋ‌ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಗರಿಷ್ಠ ಮೈಲೇಜ್ ಒದಗಿಸಿದೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಆದರೆ ಹೊಸ ಸ್ಕೂಟರ್‌ನಲ್ಲಿ ಸದ್ಯಕ್ಕೆ ಇನ್ ಬಿಲ್ಟ್ ಚಾರ್ಜರ್ ಸೌಲಭ್ಯವನ್ನು ಮಾತ್ರವೇ ನೀಡುತ್ತಿರುವ ಬಜಾಜ್ ಸಂಸ್ಥೆಯು ಮುಂಬರುವ ದಿನಗಳಲ್ಲಿ ಅತಿ ಕಡಿಮೆ ಅವಧಿಯಲ್ಲಿ ಚಾರ್ಜ್ ಮಾಡಬಹುದಾದ ಡಿಸಿ ಫಾಸ್ಟ್ ಚಾರ್ಜಿಂಗ್ ಸಿಸ್ಟಂ ನೀಡುವ ಸುಳಿವು ನೀಡಿದೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮತ್ತೊಂದು ವಿಶೇಷ ಅಂದ್ರೆ, ಹೊಸ ಸ್ಕೂಟರ್‌ನಲ್ಲಿ ಕೀ ಲೆಸ್ ಸ್ಟಾರ್ಟ್ ಸೌಲಭ್ಯ ನೀಡಿರುವ ಬಜಾಜ್ ಸಂಸ್ಥೆಯು ಸ್ಕೂಟರ್ ನಿರ್ವಹಣೆಗಾಗಿ ಪ್ರತ್ಯೇತ ಆ್ಯಪ್ ನೀಡಲಿದ್ದು, ಆ್ಯಪ್ ಮೂಲಕ ಹೊಸ ಸ್ಕೂಟರ್‌ನ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ನಿರ್ವಹಣೆ ಮಾಡಬಹುದಾಗಿದೆ. ಜೊತೆಗೆ ಹೊಸ ಸ್ಕೂಟರ್‌ನಲ್ಲಿ ಗರಿಷ್ಠ ಸುರಕ್ಷಾ ಭದ್ರತೆಗಳು ಕೂಡಾ ಇರಲಿದ್ದು, ಡಿಸ್ಕ್ ಬ್ರೇಕ್, ಜೀಯೊ ಫೆನ್ಸಿಂಗ್, ವೆಹಿಕಲ್ ಟ್ರಾಕಿಂಗ್ ಸೌಲಭ್ಯಗಳಿರಲಿವೆ.

ಬಜಾಜ್ ಬಹುನೀರಿಕ್ಷಿತ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನಾವರಣ

ಇನ್ನು ಹೊಸ ಸ್ಕೂಟರ್ ಬೆಲೆ ಕುರಿತಾಗಿ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಳ್ಳದ ಬಜಾಜ್ ಎಂಡಿ ರಾಜೀವ್ ಬಜಾಜ್ ಅವರು ಸ್ಪರ್ಧಾತ್ಮಕ ಬೆಲೆಗಳಲ್ಲಿ ಹೊಸ ಸ್ಕೂಟರ್ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದು, ಚೇತಕ್ ಬ್ರಾಂಡ್ ನೆಮ್ ಮೂಲಕ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಭಾರೀ ಬದಲಾವಣೆಗೆ ಯೋಜನೆ ರೂಪಿಸಿದ್ದಾರೆ.

Most Read Articles

Kannada
Read more on ಬಜಾಜ್ bajaj
English summary
Bajaj Auto has unveiled of its first electric scooter, Chetak in India. It will be launched early next year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X