ಎರಡನೆಯ ಬಾರಿ ಬೆಲೆ ಏರಿಕೆ ಕಂಡ ಹೊಸ ಬಜಾಜ್ ಡಾಮಿನಾರ್ 400 ಬೈಕ್
ಬಜಾಜ್ ಆಟೋ ಸಂಸ್ಥೆಯು ಇದೇ ವರ್ಷದ ಏಪ್ರಿಲ್‍ನಲ್ಲಿ ತಮ್ಮ ಜನಪ್ರೀಯ ಡಾಮಿನಾರ್ 400 ಬೈಕಿಗೆ ಹಲವಾರು ಬದಲಾವಣೆಗಳನ್ನು ಮಾಡಿ ಮತ್ತೆ ಮಾರುಕಟ್ಟೆಯಲ್ಲಿ ಬಿದುಗಡೆ ಮಾಡಲಾಗುತ್ತು. ಬಿಡುಗಡೆ ಮಾಡಿದ ಸಮದಲ್ಲಿ ಬಜಾಜ್ ಸಂಸ್ಥೆಯು ಡಾಮಿನರ್ 400 ಬೈಕಿನ ಬೆಲೆಯನ್ನು ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 1.73 ಲಕ್ಷಕ್ಕೆ ನಿಗದಿ ಮಾಡಲಾಗಿದ್ದು, ಇದೀಗ ಈ ಬೈಕಿನ ಬೆಲೆಯನ್ನು ಏರಿಸಲಾಗಿದೆ.

ಬಿಡುಗಡೆಗೊಂಡ ನಾಲ್ಕು ತಿಂಗಳಿನಲ್ಲಿ ಬಜಾಜ್ ಡಾಮಿನಾರ್ 400 ಬೈಕ್ ಇದು ಎರಡನೆಯ ಬಾರಿ ಬೆಲೆ ಏರಿಕೆಯನ್ನು ಕಂಡಿದ್ದು, ಮೊದಲ ಬೆಲೆ ಏರಿಕೆಯ ನಂತರ ರೂ. 1.74 ಲಕ್ಷದ ಬೆಲೆಯನ್ನು ಪಡೆದುಕೊಂಡಿದ್ದು, ಈಗ ಹೊಸದಾಗಿ ಎರಡನೆಯ ಬಾರಿಗೆ ಬೆಲೆ ಏರಿಕೆಯ ನಂತರ ರೂ. 1.8 ಲಕ್ಷದ ಬೆಲೆಯನ್ನು ಮಾರಾಟವಾಗುತ್ತಿದೆ. ಈ ಬೈಕ್ ಈಗಾಗಲೇ ಎರಡು ಬಣ್ಣಗಳ ಖರೀದಿಗೆ ಲಭ್ಯವಿದ್ದು, ಮೊಂದಿನ ಕೆಲವೇ ದಿನಗಳಲ್ಲಿ ಮತ್ತೊಂದು ಆಕರ್ಷಕ ಬಣ್ಣದಲ್ಲಿ ಬಿಡುಗಡೆಯಾಗಲಿದೆ.

ಹೊಸದಾಗಿ ಮಾರುಕಟ್ಟೆಗೆ ಲಗ್ಗೆಯಿಟ್ಟ ಬಜಾಜ್ ಡಾಮಿನಾರ್ 400 ಬೈಕ್‍ಗಳು ವಿನ್ಯಾಸದಲ್ಲಿ ಯಾವುದೇ ಬದಲಾವಣೆಯನ್ನು ಪಡೆಸಿಲ್ಲವಾಗಿದ್ದು, ಈ ಬಾರಿ ಹೊಸ ವೈಷ್ಟ್ಯತೆಗಳು ಮತ್ತು ತಾಂತ್ರಿಕತೆಯಲ್ಲಿ ಬದಲಾವಣೆಯನ್ನು ಪಡೆದುಕೊಂಡಿದೆ. ಈ ಕುರಿತಾದ ಮಾಹಿತಿಯನ್ನು ತಿಳಿಯಲು ಮುಂದಕ್ಕೆ ಓದಿರಿ...

ಹೊಸ ಫೀಚರ್ಸ್
ಪ್ರಸ್ತುತ ಇರುವ ಬೈಕಿನಲ್ಲಿ ನೀಡಲಾದ ಸ್ಕ್ರೀನ್ ಅನ್ನು ಪಡೆದಿರಲಿದ್ದು, ಹೊಸದಾಗಿ ಸೈಡ್ ಸ್ಟಾಂಡ್ ವಾರ್ನಿಂಗ್ ಇಂಡಿಕೇಟರ್ ಅನ್ನು ಪಡೆದುಕೊಳ್ಳಲಿದೆ. ಇಷ್ಟೆ ಅಲ್ಲದೆ ಈ ಬೈಕಿನಲ್ಲಿ ಸೆಕೆಂಡರಿ ಡಿಸ್ಪ್ಲೇ ಕೂಡಾ ಬಳಸಲಾಗಿದ್ದು, ಇದು ಫ್ಯುಯಲ್ ಟ್ಯಾಂಕ್‍ನ ಮೇಲೆ ಕಾಣಿಸಿಕೊಳ್ಳುತ್ತೆ. ಇದರಲ್ಲಿ ಗೇರ್ ಪೊಸಿಷನ್, ಟ್ರಿಪ್ ಮೀಟರ್ ಮತ್ತು ಟೈಮ್ ತೋರಿಸುತ್ತದೆ.

ಕೇಂದ್ರ ಸರ್ಕಾರದ ಆದೇಶದಂತೆ 2020ರ ಏಪ್ರಿಲ್ 1ರ ನಂತರ ಬಿಡುಗಡೆಯಾಗಲಿರುವ ಎಲ್ಲಾ ವಾಹನಗಳು ಬಿಎಸ್-VI ಎಂಜಿನ್ ಅನ್ನು ಹೊಂದಿರಬೇಕಾಗಿದ್ದು, ಈ ನಿಟ್ಟಿನಲ್ಲಿ ಈ ಬಾರಿ ಬಿಡಗಡೆಯಾಲಗಿರುವ ಡಾಮಿನಾರ್ ಬೈಕಿನಲ್ಲಿ ಬಿಎಸ್-VI ಎಂಜಿನ್ ಅಳವಡಿಕೆಯು ಬಹುಮುಖ್ಯ ಬದಲಾವಣೆ ಎಂದೇ ಹೇಳಬಹುದು.

ಎಂಜಿನ್ ಸಾಮರ್ಥ್ಯ
ಹೊಸ ಬಜಾಜ್ ಡಾಮಿನಾರ್ 400 ಬೈಕ್ 373ಸಿಸಿ ಸಿಂಗಲ್ ಸಿಲೆಂಡರ್, ಲಿಕ್ವಿಡ್ ಕೂಲ್ಡ್ ಎಂಜಿನ್ ಸಹಾಯದಿಂದ 40 ಬಿಹೆಚ್‍ಪಿ ಮತ್ತು 34ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ತಿಯನ್ನು ಪಡೆದುಕೊಂಡಿದ್ದು, ಎಂಜಿನ್ ಅನ್ನು 6 ಸ್ಪೀಡ್ ಗೇರ್‍ಬಾಕ್ಸ್ ನೊಂದಿಗೆ ಜೋಡಿಸಲಾಗಿದೆ. ಅಂದರೆ ಹಿಂದಿನ ಮಾದರಿಯ ಬೈಕಿಗೆ ಹೋಲಿಸಿದರೆ 6 ಬಿಹೆಚ್‍ಪಿ ಹೆಚ್ಚಿನದಾಗಿ ಹೊಸ ಬೈಕ್ ಪಡೆದಿದೆ.

ಅಷ್ಟೆ ಅಲ್ಲದೇ ಈ ಬಾರಿಯ ಬಜಾಜ್ ಡಾಮಿನಾರ್ 400 ಬೈಕಿನಲ್ಲಿ ಪ್ರೀಮಿಯಂ ಸೌಲಭ್ಯಗಳನ್ನು ಸಹ ನೀಡಲಾಗಿದ್ದು, ಹೊಸ ಎಕ್ಸಾಸ್ಟ್ ಸಿಸ್ಟಂ ಅನ್ನು ನೀಡಲಾಗಿದೆ. ಈ ಬಾರಿ ಈ ಬೈಕಿನಲ್ಲಿ ಡ್ಯುಯಲ್ ಎಕ್ಸಾಸ್ಟ್ ಪೋರ್ಟ್ಸ್, ಮುಂಭಾಗದಲ್ಲಿ ಅಪ್‍ಸೈಡ್ ಫ್ರಂಟ್ ಫೋರ್ಕ್ಸ್ ಅನ್ನು ಒದಗಿಸಲಾಗಿದೆ. ಜೊತೆಗೆ ಈ ಹೊಸ ಎಕ್ಸಾಸ್ಟ್ ಹೆಚ್ಚು ಸದ್ದನ್ನು ಕೂಡ ಹೊರಹಾಕುತ್ತಂತೆ.

ಪ್ರಯಾಣಿಕರ ಸುರಕ್ಷತೆಗಾಗಿ ಈ ಬಾರಿ ಹೊಸ ಡಾಮಿನಾರ್ 400 ಬೈಕಿನಲ್ಲಿ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಿದ್ದು, ಮುಂಭಾಗದಲ್ಲಿ 320ಎಂಎಂ ಮತ್ತು ಹಿಂಭಾಗದಲ್ಲಿ 220ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದೆ.

ಬಜಾಜ್ ಸಂಸ್ಥೆಯಲ್ಲಿನ ಜನಪ್ರಿಯ ಡಾಮಿನಾರ್ ಬೈಕ್ ಈ ಬಾರಿ ಹಲವಾರು ಬದಲಾವಣೆಗಳನ್ನು ಪಡೆದು ಇದೀಗ ಬಿಡುಗಡೆಗೊಂಡಿದ್ದು, ಈಗಾಗಲೆ ಮಾರುಕಟ್ಟೆಯಲ್ಲಿರುವ ಕೆಟಿಎಂ ಡ್ಯೂಕ್ 390, ಹೋಂಡಾ ಸಿಬಿ300ಆರ್ ಮತ್ತು ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್‍ಗಳಿಗೆ ಪೈಪೋಟಿ ನೀಡಲಿದೆ.


Click it and Unblock the Notifications








